ದಿನದ ಸುದ್ದಿ

ಧಾರವಾಡ | ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ

Published

on

ಸುದ್ದಿದಿನ,ಧಾರವಾಡ : ಪ್ರತಿ ವರ್ಷ ಮಾರ್ಚ-8 ರಂದು ಮಹಿಳಾ ದಿನಾಚರಣೆ ಅಂಗವಾಗಿ ಜಿಲ್ಲೆಯಲ್ಲಿ ಅರ್ಹ ವ್ಯಕ್ತಿ ಹಾಗೂ ಸಂಸ್ಥೆಗಳಿಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ನೀಡಲಾಗುತ್ತಿದೆ. ಈ ಸಂದರ್ಭದಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಯನ್ನು 5 ವರ್ಷಗಳಿಂದ ಅವಿರತವಾಗಿ ಮಹಿಳೆಯರಿಗಾಗಿ ಸರ್ವತೋಮುಖ ಅಭಿವೃದ್ಧಿಗಾಗಿ ಶ್ರಮಿಸುತ್ತಿರುವ ಅರ್ಹ ಸಂಸ್ಥೆಗಳಿಗೆ ಹಾಗೂ ವ್ಯಕ್ತಿಗಳನ್ನೊಳಗೊಂಡಂತೆ ಕ್ರೀಡೆ, ಕಲೆ, ಸಾಹಿತ್ಯ ಹಾಗೂ ಶಿಕ್ಷಣ ಕ್ಷೇತ್ರದಲ್ಲಿ ಅತ್ಯುತ್ತಮ ಸಾಧನೆ ಮಾಡಿರುವ ಮಹಿಳೆಯರಿಗೆ ಹಾಗೂ ಕ್ಲಿಷ್ಟಕರ ಪರಿಸ್ಥಿತಿಯಲ್ಲಿ ಆತ್ಮಸ್ಥೈರ್ಯ ತೋರಿದ ಮಹಿಳೆಯರಿಗೆ “ವೀರಮಹಿಳೆ” ಪ್ರಶಸ್ತಿ ನೀಡುತ್ತಿದೆ.

ಅರ್ಹ ವ್ಯಕ್ತಿ ಹಾಗೂ ಸಂಸ್ಥೆಯವರು ಬಾಲಭವನ ಕಟ್ಟಡ, ಡಿ.ಸಿ. ಕಂಪೌಂಡ, ಧಾರವಾಡ ದೂರವಾಣಿ ಸಂ:0836-2447850ಇಲ್ಲಿಗೆ ಭೇಟಿ ನೀಡಿ ನಿಗದಿತ ಅರ್ಜಿ ಪಡೆದು ದಿನಾಂಕ:06-02-2019 ರ ಸಂಜೆ 5:30ಗಂಟೆಯ ಒಳಗೆ ಸಲ್ಲಿಸಬಹುದೆಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9986715401

Trending

Exit mobile version