ದಿನದ ಸುದ್ದಿ
ಅ.24 ರಿಂದ ಬಿ.ಆರ್.ಟಿ.ಎಸ್. ಬಸ್ ಸೇವೆ ಧಾರವಾಡದ ವರೆಗೆ ವಿಸ್ತರಣೆ
ಸುದ್ದಿದಿನ,ಧಾರವಾಡ : ಅಕ್ಟೊಬರ್ 2 ರಂದು ಹುಬ್ಬಳ್ಳಿಯಲ್ಲಿ ಪ್ರಾಯೋಗಿಕವಾಗಿ ಆರಂಭವಾಗಿರುವ ಬಿ.ಆರ್.ಟಿ.ಎಸ್ ಬಸ್ ಸಂಚಾರವನ್ನು ಬರುವ 24 ರಿಂದ ಧಾರವಾಡದವರೆಗೆ ವಿಸ್ತರಿಸಲಾಗುವುದು ಎಂದು ಧಾರವಾಡ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ದರ್ಪಣ ಜೈನ್ ಅವರು ತಿಳಿಸಿದರು.
ಅವರು ಇತ್ತೀಚೆಗೆ ಧಾರವಾಡ ನಗರದ ಮಿತ್ರ ಸಮಾಜ ಆವರಣದಲ್ಲಿರುವ ಬಿ.ಆರ್.ಟಿ.ಎಸ್ ಬಸ್ ನಿಲ್ದಾಣದಲ್ಲಿ ಕಾಮಗಾರಿ ಪರಿಶೀಲನೆ ನಂತರ ಸುದ್ಧಿಗಾರರನ್ನು ಉದ್ದೇಶಿಸಿ, ಮಾತನಾಡಿ, ಬಿ.ಆರ್.ಟಿ.ಎಸ್ ಯೋಜನೆಯಡಿ ಕೈಗೊಂಡ ಕಾಮಗಾರಿಗಳು ಬಹುತೇಕ ಪೂರ್ಣಗೊಂಡಿವೆ. ಹುಬ್ಬಳ್ಳಿಯ ಬಿ.ಎಸ್.ಎನ್.ಎಲ್.ಬಸ್ ನಿಲ್ದಾಣದಿಂದ ಈಗ ನಿತ್ಯ ಐದು ಬಿಆರ್‌ಟಿಎಸ್ ಬಸ್‌ಗಳು ಉಣಕಲ್‌ವರೆಗೆ ಸಂಚರಿಸುತ್ತಿವೆ. ಅಕ್ಟೊಬರ್ 10 ರಿಂದ ರಾಯಾಪೂರ ವರೆಗೆ ಮತ್ತು ನಂತರದ ದಿನಗಳಲ್ಲಿ ಧಾರವಾಡದ ಟೊಲ್‌ನಾಕಾವರೆಗೆ ಬಸ್ ಸಂಚಾರವನ್ನು ಆರಂಭಿಸಲಾಗುವುದು ಅಕ್ಟೊಬರ್ 24 ರಿಂದ ಪ್ರಾಯೋಗಿಕವಾಗಿ ಹುಬ್ಬಳ್ಳಿ ಧಾರವಾಡ ಅವಳಿನಗರದಲ್ಲಿ ಬಿಆರ್‌ಟಿಎಸ್ ಬಸ್‌ಗಳು ಸಂಚರಿಸಲಿವೆ ಎಂದರು.
ಪ್ರಯಾಣಿಕರ ಅನುಕೂಲಕ್ಕಾಗಿ ಬಿಆರ್‌ಟಿಎಸ್ ಬಸ್ ನಿಲ್ದಾಣಗಳ ಹತ್ತಿರ ಅಗತ್ಯವಿರುವಲ್ಲಿ ವಾಹನ ನಿಲುಗಡೆಗೆ ವ್ಯವಸ್ಥೆ ಕಲ್ಪಿಸಲಾಗಿದೆ. ಮತ್ತೆ ಸಮೀಕ್ಷೆ ಮಾಡಿದ್ದು, ಇನ್ನು ಬೇಕಿರುವ ಸ್ಥಳಗಳಲ್ಲಿ ಪಾರ್ಕಿಂಗ್ ಕಲ್ಪಿಸಲು ಯೋಜನೆ ರೂಪಿಸಲಾಗುತ್ತಿದೆ. ಅವಳಿ ನಗರದಲ್ಲಿ ಸಂಚರಿಸುತ್ತಿರುವ ಬೇಂದ್ರೆ ಖಾಸಗಿ ಬಸ್ ಸೇವೆಯ ಪರಿಮಿಟ್ ಅವಧಿ ಜೂನ್ 2019ಕ್ಕೆ ಮುಗಿಯಲಿದೆ. ಅವಳಿ ನಗರದ ನಾಗರಿಕರೂ ಸೇರಿದಂತೆ ನಗರಕ್ಕೆ ಆಗಮಿಸುವ ಬೇರೆ ಊರುಗಳ ಪ್ರಯಾಣಿಕರಿಗೆ ಉತ್ತಮ ಸೇವೆಯನ್ನು ನೀಡಲು ಬಿಆರ್‌ಟಿಎಸ್ ಬದ್ಧವಾಗಿರುವುದರಿಂದ ಖಾಸಗಿ ಬಸ್ ಸೇವೆಯನ್ನು ಪರಿಮಿಟ್ ಅವಧಿ ಮುಗಿದ ನಂತರ ನವೀಕರಣ ಮಾಡದಂತೆ ಸರ್ಕಾರಕ್ಕೆ ಕೋರಲಾಗಿದೆ ಎಂದು ಅವರು ತಿಳಿಸಿದರು.
ಬಿಆರ್‌ಟಿಎಸ್ ಬಸ್ ಸೇವೆಯೊಂದಿಗೆ ನಗರ ಸಾರಿಗೆಯನ್ನು ಸಮನ್ವಯಗೊಳಿಸಿ ನಗರದ ತುಂಬಾ ಸಂಚರಿಸಲು ಪ್ರಯಾಣಿಕರಿಗೆ ಅನುಕೂಲವಾಗುವಂತೆ ಒಂದೇ ಟಿಕೆಟ್ ಅನ್ವಯವಾಗುವಂತೆ ಸ್ಮಾರ್ಟ ಕಾರ್ಡ್ ನೀಡಲು ಯೋಚಿಸಲಾಗಿದೆ. ಇದು ರಾಜ್ಯದಲ್ಲಿಯೇ ಪ್ರಥಮ ಪ್ರಯೋಗವಾಗಲಿದೆ. ಪ್ರಾಯೋಗಿಕ ಬಿಆರ್‌ಟಿಎಸ್ ಸಂಚಾರ ಸೇವೆಗೆ ಅವಳಿನಗರದ ನಾಗರಿಕರಿಂದ ಉತ್ತಮ ಸ್ಪಂದನೆ ದೊರಕಿದೆ. ಸ್ವಚ್ಚತೆ, ಶಿಸ್ತು ಮತ್ತು ಸಂಯಮದಿಂದ ಸಾರ್ವಜನಿಕರು ಬಿಆರ್‌ಟಿಎಸ್ ಸೇವೆಗೆ ಉತ್ತಮ ಪ್ರತಿಕ್ರಿಯೆ ನೀಡಿದ್ದಾರೆ. ಅವಳಿನಗರದ ನಾಗರಿಕರ ಮತ್ತು ನಿತ್ಯ ಪ್ರಯಾಣಿಸುವ ಪ್ರಯಾಣಿಕರ ಸಹಕಾದಿಂದ ಬಿಆರ್‌ಟಿಎಸ್ ಬಸ್ ಸೇವೆ ರಾಷ್ಟ್ರಕ್ಕೆ ಮಾದರಿಯಾಗಲಿದೆ. ಈ ಉತ್ತಮ ಸಂಚಾರ ವ್ಯವಸ್ಥೆಯಿಂದ ಅಭಿವೃದ್ಧಿಗೆ ಇನ್ನಷ್ಟು ಅವಕಾಶವಾಗಲಿದೆ ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ದರ್ಪಣ ಜೈನ್ ತಿಳಿಸಿದರು.
ಈ ಸಂದರ್ಭದಲ್ಲಿ ಎನ್.ಡಬ್ಲು.ಕೆ.ಆರ್.ಟಿ.ಸಿ ಹಾಗೂ ಬಿಆರ್‌ಟಿಎಸ್ ವ್ಯವಸ್ಥಾಪಕ ನಿರ್ದೇಶಕರಾದ ರಾಜೇಂದ್ರ ಚೋಳನ್ ಮತ್ತು ಬಿಆರ್‌ಟಿಎಸ್ ಅಧಿಕಾರಿಗಳು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ
ಉಚಿತ ಲ್ಯಾಪ್ಟಾಪ್ ಪಡೆಯಲು ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ : ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ನೊಂದಾಯಿತ ಕಾರ್ಮಿಕರ ಮಕ್ಕಳು ಪ್ರಸಕ್ತ ಸಾಲಿನಲ್ಲಿ ಪ್ರಥಮ ಹಾಗೂ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್ಗಳನ್ನು ವಿತರಿಸಲು ಅರ್ಜಿ ಆಹ್ವಾನಿಸಲಾಗಿದೆ.
ದಾವಣಗೆರೆ ಉಪ ವಿಭಾಗದ ಕಾರ್ಮಿಕ ಅಧಿಕಾರಿ ಇವರ ವ್ಯಾಪ್ತಿಯಲ್ಲಿ ನೋಂದಣಿಯಾಗಿರುವ ಕಾರ್ಮಿಕರು ಈ ಸೌಲಭ್ಯವನ್ನು ಪಡೆಯಬಹುದು. ಅರ್ಜಿ ನಮೂನೆಯನ್ನು ಸಂಬಂಧಿಸಿದ ಕಾರ್ಮಿಕ ನಿರೀಕ್ಷಕರ ಕಛೇರಿಯಿಂದ ಪಡೆದು ಅಗತ್ಯ ದಾಖಲೆಗಳೊಂದಿಗೆ ಕಾರ್ಮಿಕ ನಿರೀಕ್ಷಕರಿಗೆ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಅಕ್ಟೋಬರ್ 11 ಕೊನೆಯ ದಿನವಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಕಾರ್ಮಿಕ ಅಧಿಕಾರಿಯವರ ಕಚೇರಿ ದೂ ಸಂ:08192-237332 ಸಂಪರ್ಕಿಸಲು ಕಾರ್ಮಿಕ ಅಧಿಕಾರಿ ಇಬ್ರಾಹಿಂ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ನಾಳೆಯಿಂದ ತಮಿಳುನಾಡಿಗೆ ಕಾವೇರಿ ನೀರು ; ಕಾವೇರಿ ನದಿ ನೀರು ಸಮಿತಿ ನಿರ್ದೇಶನ

ಸುದ್ದಿದಿನ ಡೆಸ್ಕ್ : ತಮಿಳುನಾಡಿಗೆ 3 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಕಾವೇರಿ ನದಿ ನೀರು ಸಮಿತಿ ತೀರ್ಪಿನ ಕುರಿತು ಕಾನೂನು ತಜ್ಞರ ಜೊತೆ ಚರ್ಚಿಸಿ, ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರಿನಲ್ಲಿ ನಿನ್ನೆ ಹೇಳಿದ್ದಾರೆ.
ತಮಿಳುನಾಡಿಗೆ ನಾಳೆಯಿಂದ (ಸೆಪ್ಟಂಬರ್28) ಅಕ್ಟೋಬರ್ 15ರ ತನಕ ಪ್ರತಿನಿತ್ಯ 3 ಸಾವಿರ ಕ್ಯೂಸೆಕ್ನಂತೆ ನೀರು ಹರಿಸುವಂತೆ, ಕಾವೇರಿ ನದಿ ನೀರು ಸಮಿತಿ ನಿನ್ನೆ ಕರ್ನಾಟಕಕ್ಕೆ ನಿರ್ದೇಶನ ನೀಡಿದೆ. ಕಾವೇರಿ ನದಿ ನೀರು ಸಮಿತಿ ವರ್ಚುವಲ್ ಮೂಲಕ ನಡೆದ ಸಭೆಯಲ್ಲಿ ಈ ನಿರ್ದೇಶನ ನೀಡಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಉತ್ತಮ ಶಿಕ್ಷಕರ ಪ್ರಶಸ್ತಿಗೆ ಸುಮಂಗಳಾ ಮೇಟಿ ಆಯ್ಕೆ

ಸುದ್ದಿದಿನ, ಬಳ್ಳಾರಿ : ಸಿರಿಗೇರಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ (ಬಸವನಪೇಟೆ) ಮುಖ್ಯ ಗುರುಗಳಾದ ಶ್ರೀಮತಿ ಸುಮಂಗಳಾ ಮೇಟಿಯವರು 2023-24 ನೇ ಸಾಲಿನ ಬಳ್ಳಾರಿ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಶಿಕ್ಷಕ ವೃತ್ತಿ ಧರ್ಮ ನೇ ತನ್ನ ಸರ್ವಸ್ವ ಎಂದು ತಿಳಿದುಕೊಂಡಂತಹ ಶ್ರೀಮತಿ ಸುಮಂಗಳಾ ಮೇಟಿಯವರು, ಶಿಕ್ಷಕ ವೃತ್ತಿಯಲ್ಲಿ ಉತ್ತಮ ಕರ್ತವ್ಯ ಹಾಗೂ ಸೇವೆಯನ್ನು ಸಲ್ಲಿಸಿದನ್ನು ಪರಿಗಣಿಸಿ ಈ ಹಿಂದೆಯೇ 2022-23 ನೇ ಸಾಲಿನ ಬಳ್ಳಾರಿ ಜಿಲ್ಲಾ ಮಟ್ಟದ ಸಾವಿತ್ರಿ ಬಾಯಿ ಫುಲೆ ಶಿಕ್ಷಕಿ ಪ್ರಶಸ್ತಿ ಪುರಸ್ಕೃತರಾಗಿದ್ದು, ಇವರ ಶಿಕ್ಷಣ ಕ್ಷೇತ್ರದಲ್ಲಿನ ಅಗಾಧವಾದ ಕರ್ತವ್ಯ ಮತ್ತು ಸೇವೆ ನಿಷ್ಠೆಯನ್ನು ಗುರುತಿಸಿದ ಶಾಲಾ ಶಿಕ್ಷಣ ಇಲಾಖೆ ಬಳ್ಳಾರಿ ವತಿಯಿಂದ 2023-24 ನೇ ಸಾಲಿನ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿಗೆ ಆಯ್ಕೆಯಾಗಿರುವುದಕ್ಕೆ ಇದೇ ಸಂದರ್ಭದಲ್ಲಿ ಗ್ರಾಮಸ್ಥರು, ಸಮಸ್ತ ಶಿಕ್ಷಕರ ವರ್ಗದವರು, ಅತಿಥಿ ಶಿಕ್ಷಕರು, ಹಿತೈಷಿಗಳು, ಹಳೆಯ ವಿದ್ಯಾರ್ಥಿ ಬಳಗ, ಶಿಕ್ಷಣ ಪ್ರೇಮಿಗಳು, ಅಭಿಮಾನಿ ಬಳಗ,
ಮುಂತಾದವರು ಅಭಿನಂದನೆಯನ್ನು ಸಲ್ಲಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ2 days ago
ನಾಳೆಯಿಂದ ತಮಿಳುನಾಡಿಗೆ ಕಾವೇರಿ ನೀರು ; ಕಾವೇರಿ ನದಿ ನೀರು ಸಮಿತಿ ನಿರ್ದೇಶನ
-
ದಿನದ ಸುದ್ದಿ3 days ago
ಬೆಂಗಳೂರು ಬಂದ್ ಹಿನ್ನೆಲೆಯಲ್ಲಿ ನಗರದೆಲ್ಲೆಡೆ ಬಿಗಿ ಬಂದೋಬಸ್ತ್ : ಪೊಲೀಸ್ ಕಮೀಷನರ್ ದಯಾನಂದ್
-
ದಿನದ ಸುದ್ದಿ1 day ago
ಉಚಿತ ಲ್ಯಾಪ್ಟಾಪ್ ಪಡೆಯಲು ಅರ್ಜಿ ಆಹ್ವಾನ
-
ದಿನದ ಸುದ್ದಿ2 days ago
ಉತ್ತಮ ಶಿಕ್ಷಕರ ಪ್ರಶಸ್ತಿಗೆ ಸುಮಂಗಳಾ ಮೇಟಿ ಆಯ್ಕೆ