ದಿನದ ಸುದ್ದಿ

ಧಾರವಾಡ | ಮೂರು ಕೋವಿಡ್ ಪಾಸಿಟಿವ್ ಪ್ರಕರಣಗಳ ಪತ್ತೆ

Published

on

ಸುದ್ದಿದಿನ,ಧಾರವಾಡ : ಧಾರವಾಡದ ಜಿಲ್ಲೆಯಲ್ಲಿ ಸೋಮವಾರ ಮೂರು ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ ಎಂದು ಜಿಲ್ಲಾಧಿಕಾರಿಗಳಾದ ದೀಪಾ ಚೋಳನ್ ತಿಳಿಸಿದ್ದಾರೆ.

ಪಿ-2156 (33 ವರ್ಷ, ಮಹಿಳೆ),
ಪಿ-2157 ( 17 ವರ್ಷ , ಬಾಲಕ)
ಪಿ- 2158 ( 2 ವರ್ಷ 5 ತಿಂಗಳು, ಗಂಡು ಮಗು)

ಈ ಮೂರು ವ್ಯಕ್ತಿಗಳು ಮಹಾರಾಷ್ಟ್ರ ರಾಜ್ಯದಿಂದ ಹಿಂದಿರುಗಿರುವ ಪಿ- 1942, ಪಿ-1943,ಪಿ- 1944 ಹಾಗೂ ಪಿ- 1945 ಅವರೊಂದಿಗೆ ಸಂಪರ್ಕದ ಹಿನ್ನೆಲೆ ಹೊಂದಿದ್ದಾರೆ. ಇವರು ಜಿಲ್ಲೆಗೆ ಬಂದ ಕೂಡಲೇ ಗಂಟಲು ದ್ರವ ಪರೀಕ್ಷೆಗೊಳಪಡಿಸಿ, ಸಾಂಸ್ಥಿಕ ಕ್ವಾರಂಟೈನ್ ನಲ್ಲಿ ಇರಿಸಲಾಗಿತ್ತು.

ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ 42 ಕ್ಕೆ ಏರಿಕೆಯಾಗಿದೆ. ಈಗಾಗಲೇ 10 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ . ಉಳಿದವರು ಹುಬ್ಬಳ್ಳಿಯ ಕಿಮ್ಸ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version