ದಿನದ ಸುದ್ದಿ

ಧಾರವಾಡ | ಪ್ರಿಯಾಂಕಾ ಗಾಂಧಿ ನಾಳೆ ರೋಡ್ ಶೋ

Published

on

ಸುದ್ದಿದಿನ ಡೆಸ್ಕ್ : ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಗೆ ಎಲ್ಲಾ ಪ್ರಮುಖ ರಾಜಕೀಯ ಪಕ್ಷಗಳು ತಮ್ಮ ಪ್ರಚಾರ ಕಾರ್ಯ ತೀವ್ರಗೊಳಿಸಿವೆ.

ಪ್ರಧಾನಮಂತ್ರಿ ನರೇಂದ್ರ ಮೋದಿ ನಾಳೆಯಿಂದ ಎರಡು ದಿನಗಳ ಕಾಲ ವಿವಿಧ ಸ್ಥಳಗಳಲ್ಲಿ ರೋಡ್ ಶೋ ಮತ್ತು ರ್‍ಯಾಲಿಗಳನ್ನು ನಡೆಸಲಿದ್ದಾರೆ.

ನಾಳೆ ಬೀದರ್ ಜಿಲ್ಲೆ ಹುಮ್ನಾಬಾದ್, ವಿಜಯಪುರ ಹಾಗೂ ಬೆಳಗಾವಿ ಜಿಲ್ಲೆ ಕುಡಚಿಯಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಲಿರುವ ಪ್ರಧಾನಿ, ಸಂಜೆ ಬೆಂಗಳೂರಿನ ಮಾಗಡಿ ರಸ್ತೆಯ ನೈಸ್ ರಸ್ತೆಯಿಂದ ಸುಮನಹಳ್ಳಿವರೆಗೆ ಸುಮಾರು ನಾಲ್ಕೂವರೆ ಕಿಲೋಮೀಟರ್ ರೋಡ್ ಶೋ ನಡೆಸಲಿದ್ದಾರೆ.

ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಇಂದು ಚಿಕ್ಕಮಗಳೂರು ಜಿಲ್ಲೆಯ ಕಳಸ ಪಟ್ಟಣಕ್ಕೆ ಭೇಟಿ ನೀಡಿ, ಪಕ್ಷದ ಅಭ್ಯರ್ಥಿ ಪರವಾಗಿ ಪ್ರಚಾರ ಕೈಗೊಂಡರು. ಬಳಿಕ ಅವರು ಶಿವಮೊಗ್ಗ ಜಿಲ್ಲೆಯ ಸೊರಬಕ್ಕೆ ತೆರಳಿ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಿದರು. ಕೇಂದ್ರ ಗೃಹ ಸಚಿವ ಹಾಗೂ ಪಕ್ಷದ ಮುಖಂಡ ಅಮಿತ್ ಷಾ ಧಾರವಾಡ ಹಾಗೂ ದಾವಣಗೆರೆಯಲ್ಲಿ ಆಯೋಜಿಸಿದ್ದ ಸಾರ್ವಜನಿಕ ಸಭೆಯಲ್ಲಿ ಪಾಲ್ಗೊಂಡು, ಪಕ್ಷದ ಪರ ಪ್ರಚಾರ ನಡೆಸಿದರು.

ಯಾದಗಿರಿ ಜಿಲ್ಲೆಯ ಶಹಾಪೂರ ಮತಕ್ಷೇತ್ರದಲ್ಲಿ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಿಜೆಪಿ ಅಭ್ಯರ್ಥಿ ಪರ ರೋಡ್ ಶೋ ನಡೆಸಿ, ಪ್ರಚಾರ ನಡೆಸಿದರು.
ಮಾಜಿ ಪ್ರಧಾನಿ ಮತ್ತು ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡ ಇಂದಿನಿಂದ ಮುಂದಿನ ಹನ್ನೊಂದು ದಿನಗಳ 42 ಸ್ಥಳಗಳಲ್ಲಿ ತಮ್ಮ ಪಕ್ಷದ ಪ್ರಚಾರ ಪ್ರಾರಂಬಿಸಿದ್ದಾರೆ.

ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬೆಂಗಳೂರಿನಲ್ಲಿ ರೋಡ್ ಶೋ ನಡೆಸಿ, ಸಾರ್ವಜನಿಕ ಸಭೆಯಲ್ಲಿ ಪಾಲ್ಗೊಂಡರು. ಇದೇ ಸಂದರ್ಭದಲ್ಲಿ ಪಕ್ಷದ ನಾಯಕ ರಾಹುಲ್ ಗಾಂಧಿ ಇಂದು ಕಲಬುರಗಿ ಜಿಲ್ಲೆಯ ಜೆವರ್ಗಿ ಮತ್ತು ವಿಜಯಪುರದಲ್ಲಿ ಪ್ರಚಾರ ನಡೆಸಿದರು.
ರಾಯಚೂರು ಜಿಲ್ಲೆಯ ದೇವದುರ್ಗ ಹಾಗೂ ಲಿಂಗಸೂಗೂರಿನಲ್ಲಿ ಆಯೋಜಿಸಲಾಗಿದ್ದ ಚುನಾವಣಾ ಪ್ರಚಾರ ಸಭೆಯಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಪಕ್ಷದ ಮುಖಂಡ ಸಿದ್ಧರಾಮಯ್ಯ ಪಕ್ಷದ ಅಭ್ಯರ್ಥಿ ಪರ ಮತಯಾಚಿಸಿದರು.

ಪಕ್ಷದ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ನಾಳೆ ಧಾರವಾಡದ ಕುಂದಗೋಳದಲ್ಲಿ ರೋಡ ಶೋ ನಡೆಸಲಿದ್ದು, ನವಲಗುಂದ ಹಾಗೂ ಉತ್ತರಕನ್ನಡ ಜಿಲ್ಲೆಯ ಹಳಿಯಾಳದಲ್ಲಿ ಸಾರ್ವಜನಿಕ ಸಭೆ ನಡೆಸಲಿದ್ದಾರೆ.

209ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿರುವ ಆಮ್ ಆದ್ಮಿ ಪಕ್ಷದ ರಾಜ್ಯಸಭಾ ಸದಸ್ಯ ಸಂಜಯ್ ಸಿಂಗ್ ಪ್ರಚಾರದಲ್ಲಿ ಪಾಲ್ಗೊಂಡರು. ಪಂಜಾಬ್ ಮುಖ್ಯಮಂತ್ರಿ ಮತ್ತು ಎಎಪಿ ನಾಯಕ ಭಗವಂತ್ ಮಾನ್ ಭಾನುವಾರ ಸಾರ್ವಜನಿಕ ಸಭೆ ಮತ್ತು ರ್‍ಯಾಲಿಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version