ಕ್ರೀಡೆ
ಧೋನಿ ‘ನ್ಯೂ ಹೇರ್ ಸ್ಟೈಲ್’!
ಸುದ್ದಿದಿನಡೆಸ್ಕ್: ಚೆನ್ನೈ ಸೂಪರ್ ಕಿಂಗ್ಸ್ ನಾಯಕಎಂ.ಎಸ್.ಧೋನಿ, ವಿನೂತನ ಕೇಶ ವಿನ್ಯಾಸದೊಂದಿಗೆಕಾಣಿಸಿಕೊಂಡಿದ್ದಾರೆ. ವಿಭಿನ್ನ ಸ್ಟೈಲ್’ಗಳಿಗೆ ಭಾರತದಮಾಜಿ ನಾಯಕ ಹೆಸರು ವಾಸಿಯಾಗಿದ್ದಾರೆ.
ತಾರಾ ಕೇಶ ವಿನ್ಯಾಸಗಾರ್ತಿ ಹಾಗೂ ಧೋನಿಯ ಆಪ್ತಸ್ನೇಹಿತೆ ಸಪ್ನಾ ಭವ್ನಾನಿ, ಈ ಹೊಸ ಹೇರ್ಸ್ಟೈಲ್’ನಹೆಸರು ‘ವೈಕಿಂಗ್’ ಎಂದು ಟ್ವೀಟರ್ನಲ್ಲಿಬಹಿರಂಗಪಡಿಸಿದ್ದಾರೆ. ಸಿಎಸ್ಕೆ ನಾಯಕನ ನೂತನವಿನ್ಯಾಸ ಸಾಮಾಜಿಕ ತಾಣಗಳಲ್ಲಿ ವೈರಲ್ ಆಗಿದೆ.
2 ವರ್ಷಗಳ ಬಳಿಕ ಐಪಿಎಲ್’ಗೆ ಕಮ್’ಬ್ಯಾಕ್ಮಾಡಿರುವ ಚೆನ್ನೈ ಸೂಪರ್’ಕಿಂಗ್ಸ್ ಅದ್ಭುತ ಪ್ರದರ್ಶನತೋರುತ್ತಿದ್ದು, 5 ಪಂದ್ಯಗಳಲ್ಲಿ 4 ನಾಲ್ಕು ಗೆಲುವಿನೊಂದಿಗೆಅಗ್ರಸ್ಥಾನದಲ್ಲಿದೆ.
It’s not a Mohawk. It’s called the Viking! And like one, he will lead. #dhoni @msdhoni #WhistlePodu #roar @madOwothair pic.twitter.com/wgNsqJdkaP
— Sapna Moti Bhavnani (@sapnabhavnani) April 21, 2018


ಕ್ರೀಡೆ
ದಾವಣಗೆರೆ | ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿ ರಾಘವೇಂದ್ರ ಎನ್ ಬಿ ದೇಹದಾರ್ಢ್ಯ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದು ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ

ಸುದ್ದಿದಿನ,ದಾವಣಗೆರೆ:ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ದಾವಣಗೆರೆ ವಿಶ್ವವಿದ್ಯಾಲಯದ ಮಟ್ಟದ ದೇಹದಾರ್ಢ್ಯ ಸ್ಪರ್ಧೆಯಲ್ಲಿ 90ಕೆಜಿ ವಿಭಾಗದಲ್ಲಿ ರಾಘವೇಂದ್ರ ಚಿನ್ನದ ಪದಕ ಗೆಲ್ಲುವ ಮೂಲಕ ರಾಷ್ಟ್ರೀಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ..
ದಾವಣಗೆರೆ ನಗರದ ಜಿಎಫ್ ಜಿಸಿ ಕಾಲೇಜಿನಲ್ಲಿ ದಾವಣಗೆರೆ ವಿಶ್ವವಿದ್ಯಾಲಯ ಹಾಗೂ ದೈಹಿಕ ಶಿಕ್ಷಣ ನಿರ್ದೇಶಕರ ಸಂಘದಿಂದ ದೇಹದಾರ್ಢ್ಯ ಸ್ಪರ್ಧೆ ಹಾಗೂ ಆಯ್ಕೆ ಗಳು ನಡೆದವು, ಕಾಲೇಜಿನಲ್ಲಿ ಪ್ರಥಮ ಬಿಎ ವ್ಯಾಸಂಗ ಮಾಡುತ್ತಿರುವ ರಾಘವೇಂದ್ರ, ಹಳೇ ಕುಂದುವಾಡದ ಬಸವರಾಜ್, ಲಕ್ಷ್ಮಿದೇವಿ ದಂಪತಿಯ ಪುತ್ರನಾಗಿದ್ದು, ಸ್ಪರ್ಧೆಯಲ್ಲಿ 90ಕೆಜಿ ವಿಭಾಗದಲ್ಲಿ ದೇಹ ಪ್ರದರ್ಶಿಸಿ ಚಿನ್ನದ ಪದಕಕ್ಕೆ ಮುತ್ತಿಟ್ಟಿದ್ದಾನೆ.
ಓದಿನ ಜೊತೆಗೆ ತನ್ನ ತಂದೆಯ ಕಿರಾಣಿ ಅಂಗಡಿಯಲ್ಲಿ ಕೆಲಸ ಮಾಡುತ್ತಾ ತನ್ನ ಕನಸನ್ನು ನನಸು ಮಾಡಿಕೊಳ್ಳಲು ಬಿಡುವಿನ ವೇಳೆಯಲ್ಲಿ ಕೋಚ್ ಮಧು ಪೂಜಾರ್ ಮಾರ್ಗದರ್ಶನದಲ್ಲಿ ದೇಹ ಹುರಿಗೊಳಿಸಿ ಸ್ಪರ್ಧೆಯಲ್ಲಿ ಭಾಗವಹಿಸಿ ಚಿನ್ನದ ಪದಕ ಗಳಿಸಿದ್ದಾನೆ, ಸ್ಪರ್ಧೆಯಲ್ಲಿ ಬೈಸಿಪ್ಸ್, ಲ್ಯಾಟ್ ಸ್ಟ್ರೈಡ್ ಪೋಸ್ ಕೊಟ್ಟು ನೋಡುಗರನ್ನು, ತೀರ್ಪುಗಾರರನ್ನು ಬೆರಗುಗೊಳಿಸಿದ್ದಾನೆ.
ಇನ್ನೂ ರಾಘವೇಂದ್ರನ ದೇಹ ಪ್ರದರ್ಶನ ವೇಳೆ ಶಿಳ್ಳೆ, ಚಪ್ಪಾಳೆ ಕೇಳಿ ಬಂದವು, ರಾಘವೇಂದ್ರ ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾಗಿದ್ದು ಬರುವ ಫೆಬ್ರುವರಿಯಲ್ಲಿ ಮಂಗಳೂರಿನಲ್ಲಿ ಸ್ಪರ್ಧೆ ನಡೆಯಲಿದೆ, ಇನ್ನೂ ಚಿನ್ನದ ಪದಕ ಗಳಿಸಿರುವ ರಾಘವೇಂದ್ರನಿಗೆ ಜಿಎಫ್ ಜಿಸಿ ಕಾಲೇಜು ಆಡಳಿತ ಮಂಡಳಿ, ಮಾರ್ಗದರ್ಶಕರು, ಹಳೇ ಕುಂದುವಾಡ ಗ್ರಾಮಸ್ಥರು ಅಭಿನಂದನೆ ಸಲ್ಲಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಕ್ರೀಡೆ
ಅದ್ವಿತೀಯ 2024ರಲ್ಲಿ ಜಿಎಂಐಟಿ ಕಾಲೇಜಿನ ಸಿಎಸ್ಇ ವಿದ್ಯಾರ್ಥಿಗಳ ಪೋಸ್ಟರ್ ಪ್ರಸ್ತುತಿಯಲ್ಲಿ ತೃತೀಯ ಸ್ಥಾನ

ಸುದ್ದಿದಿನ,ದಾವಣಗೆರೆ:ಜಿಎಂ ತಾಂತ್ರಿಕ ಮಹಾವಿದ್ಯಾಲಯದ ಕಂಪ್ಯೂಟರ್ ಸೈನ್ಸ್ ಅಂಡ್ ಇಂಜಿನಿಯರಿಂಗ್ (ಸಿ.ಎಸ್.ಇ) ವಿಭಾಗದ 5ನೇ ಸೆಮಿಸ್ಟರ್ ‘ಎ’ ವಿಭಾಗದ ವಿದ್ಯಾರ್ಥಿಗಳಾದ ಅಭಿಷೇಕ್ ಯು. ಮತ್ತು ಅಫ್ರಿದ್ ಆರ್.ಕೆ. ಈ ಇಬ್ಬರು ಇತ್ತೀಚಿಗೆ ಹುಬ್ಬಳ್ಳಿಯ ಕೆಎಲ್ಇ ತಾಂತ್ರಿಕ ಸಂಸ್ಥೆಯಲ್ಲಿ ನಡೆದ ಅದ್ವಿತೀಯ 2024ರಲ್ಲಿ ಪೋಸ್ಟರ್ ಪ್ರಸ್ತುತಿಯಲ್ಲಿ ತೃತೀಯ ಸ್ಥಾನವನ್ನು ಗಳಿಸಿದ್ದಾರೆ.
ಜಿಎಂ ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ. ಎಂ.ಬಿ. ಸಂಜಯ್ ಪಾಂಡೆ, ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥರಾದ ಡಾ. ಬಿ.ಎನ್. ವೀರಪ್ಪ, ಇನ್ಫಾರ್ಮಶನ್ ಸೈನ್ಸ್ ಅಂಡ್ ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥರಾದ ಡಾ. ಎಸ್. ನೀಲಾಂಬಿಕೆ, ವಿದ್ಯಾರ್ಥಿ ವ್ಯವಹಾರಗಳ ವಿಭಾಗದ ಉಪ ನಿರ್ದೇಶಕರಾದ ಎಂ. ಸಂತೋಷ ಕುಮಾರ್, ಜಿಎಂ ವಿಶ್ವವಿದ್ಯಾಲಯದ ಗಣಿತಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಕೆ.ಎಸ್. ಓಂಕಾರಪ್ಪ ಸೇರಿದಂತೆ ಆಡಳಿತ ಮಂಡಳಿ, ವಿಭಾಗದ ಮುಖ್ಯಸ್ಥರು ಮತ್ತು ಸಿಬ್ಬಂದಿಗಳು ಅಭಿನಂದಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಕ್ರೀಡೆ
ತುಮಕೂರಿನಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣಕ್ಕೆ ಭೂಮಿ ಪೂಜೆ ನೆರವೇರಿಸಿದ ಸಿಎಂ ಸಿದ್ದರಾಮಯ್ಯ

ಸುದ್ದಿದಿನ,ತುಮಕೂರು:ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣಕ್ಕಾಗಿ ತುಮಕೂರಿನಲ್ಲಿ ಒಟ್ಟು 50 ಎಕರೆ ಜಾಗವನ್ನು ಕರ್ನಾಟಕ ಕ್ರಿಕೆಟ್ ಸಂಸ್ಥೆಗೆ ನೀಡಲಾಗಿದ್ದು ಇದು ಜಿಲ್ಲೆಯ ಆರ್ಥಿಕ ಬೆಳವಣಿಗೆ ಮತ್ತು ಅಭಿವೃದ್ಧಿಗೆ ಪೂರಕ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ತುಮಕೂರಿನ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣಕ್ಕೆ ಬ್ಯಾಟಿಂಗ್ ಮಾಡುವ ಮೂಲಕ ಚಾಲನೆ ನೀಡಿ ಮಾತನಾಡಿದ ಅವರು ಆದಷ್ಟು ಶೀಘ್ರವೇ ಕ್ರೀಡಾಂಗಣ ನಿರ್ಮಾಣ ಮುಗಿಸಿ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆ ಪೂರೈಸಲಾಗುವುದು ಎಂದು ಹೇಳಿದ್ದಾರೆ. ಮೈಸೂರಿನಲ್ಲೂ ಕ್ರೀಡಾಂಗಣ ನಿರ್ಮಾಣಕ್ಕೆ ಕರ್ನಾಟಕ ಕ್ರಿಕೆಟ್ ಸಂಸ್ಥೆ ಬೇಡಿಕೆ ಮುಂದಿಟ್ಟಿದ್ದು ಮೈಸೂರಿನಲ್ಲೂ ಜಾಗ ನೀಡಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ.
ಗೃಹ ಸಚಿವ ಡಾ.ಜಿ.ಪರಮೇಶ್ವರ್ ಮಾತನಾಡಿ, ಚೆನ್ನೈ-ಮುಂಬೈ ಇಂಡಸ್ಟ್ರೀಯಲ್ ಕಾರಿಡಾರ್ ಗಾಗಿ ಆರು ಹಂತದಲ್ಲಿ 20 ಸಾವಿರ ಎಕರೆ ಸ್ವಾಧೀನ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ವಸಂತನರಸಾಪುರದಲ್ಲಿ ಏಷ್ಯಾದಲ್ಲಿಯೇ ಅತಿ ದೊಡ್ಡ ಟೌನ್ ಶಿಪ್ ಪ್ರಾರಂಭವಾಗಿದೆ ಎಂದು ತಿಳಿಸಿದ ಅವರು, ಸ್ಥಳೀಯರಿಗೆ ಉದ್ಯೋಗ ನೀಡಬೇಕು ಎಂದು ಕೈಗಾರಿಕೆಗಳಿಗೆ ಮನವಿ ಮಾಡಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ7 days ago
2 ಕೋಟಿ 20 ಲಕ್ಷ ಜನ, ಪಡಿತರ ಚೀಟಿಯ ಪ್ರಯೋಜನ ಪಡೆಯುತ್ತಿಲ್ಲ : ಕೇಂದ್ರ ಸಚಿವ ಪ್ರಲ್ಹಾದ ಜೋಶಿ
-
ದಿನದ ಸುದ್ದಿ5 days ago
ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್ ವಿತರಿಸಿದ ಶಾಸಕ ಕೆ.ಎಸ್.ಬಸವಂತಪ್ಪ
-
ದಿನದ ಸುದ್ದಿ7 days ago
ಅನ್ನಭಾಗ್ಯ ಯೋಜನೆ | ನೇರ ನಗದು ವರ್ಗಾವಣೆ ಬದಲು ಅಕ್ಕಿ ವಿತರಣೆ
-
ದಿನದ ಸುದ್ದಿ2 days ago
ನೆಲಮಂಗಲ ಸಮೀಪದ ದಾಸನಪುರದಲ್ಲಿ 306 ಕೋಟಿ ರೂಪಾಯಿ ವೆಚ್ಚದಲ್ಲಿ ಸುಸಜ್ಜಿತ ಕೃಷಿ ಮಾರುಕಟ್ಟೆ ನಿರ್ಮಾಣ : ಸಚಿವ ಶಿವಾನಂದಪಾಟೀಲ್
-
ದಿನದ ಸುದ್ದಿ5 days ago
ಬೆಂವಿವಿ | ಸಂವಹನ ವಿದ್ಯಾರ್ಥಿಗಳಿಂದ ಹೋಳಿ ಸಂಭ್ರಮ
-
ದಿನದ ಸುದ್ದಿ2 days ago
ಮಾಸಾಶನ ಪಡೆಯುತ್ತಿರುವ ಕಲಾವಿದರು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಲು ಸೂಚನೆ
-
ದಿನದ ಸುದ್ದಿ4 days ago
ಕವಿತೆ | ಮತ್ತಿನ ಕುಣಿಕೆ
-
ದಿನದ ಸುದ್ದಿ2 days ago
ಯುನೆಸ್ಕೋ ವಿಶ್ವ ಪಾರಂಪರಿಕ ತಾಣಗಳ ತಾತ್ಕಾಲಿಕ ಪಟ್ಟಿಗೆ ರಾಜ್ಯದ ಶಿಲಾ ಶಾಸನಗಳು ಸೇರ್ಪಡೆ