Connect with us

ದಿನದ ಸುದ್ದಿ

ನಿಘಂಟು ತಜ್ಞ ಫ್ರೊ.ಜಿ.ವೆಂಕಟಸುಬ್ಬಯ್ಯ ನಿಧನ

Published

on

ಸುದ್ದಿದಿನ, ಬೆಂಗಳೂರು : ನಾಡಿನ ಖ್ಯಾತ ಸಂಶೋದಕ, ನಿಘಂಟು ತಜ್ಞ ಫ್ರೊ.ಜಿ.ವೆಂಕಟಸುಬ್ಬಯ್ಯ ಅವರು ಸೋಮವಾರ ರಾತ್ರಿ 1.15 ರ ವೇಳೆಗೆ ತಮ್ಮ ವಯೋ ಸಹಜ ಕಾರಣಗಳಿಂದ 108 ನೇ ವಯಸ್ಸಿನಲ್ಲಿ ನಿಧನರಾದರು.

ನಾಡೋಜ ಪ್ರೊ. ಜಿ. ವೆಂಕಟಸುಬ್ಬಯ್ಯ ಅವರು ಖ್ಯಾತ ವಿದ್ವಾಂಸರು ಹಾಗೂ ಜನಪ್ರಿಯ ಪ್ರಾಧ್ಯಾಪಕರು. ಪ್ರೊ. ಜಿ. ವೆಂಕಟಸುಬ್ಬಯ್ಯ ಅವರು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಸುವರ್ಣ ಪದಕದೊಡನೆ ಎಂ.ಎ. ಪದವಿ, ನಂತರ ಬಿ.ಟಿ. ಪದವಿ ಗಳಿಕೆ. ಮಹಾರಾಜ ಕಾಲೇಜಿನಲ್ಲಿ ಉಪನ್ಯಾಸಕರಾಗಿ ವೃತ್ತಿಯನ್ನು ಆರಂಭಿಸಿ, ನಂತರ ಬೆಂಗಳೂರಿನ ವಿಜಯಾ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿ, ಪ್ರಿನ್ಸಿಪಾಲರಾಗಿ, ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ್ದರು.

ಕನ್ನಡ ಸಾಹಿತ್ಯ ಪರಿಷತ್ತಿನ ಕನ್ನಡ-ಕನ್ನಡ ನಿಘಂಟುವಿನ ಪ್ರಧಾನ ಸಂಪಾದಕರಾಗಿ ಸೇವೆ ಸಲ್ಲಿಕೆ. ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ, ಕನ್ನಡ ಸಾಹಿತ್ಯ ಪರಿಷತ್ತಿಗೆ ಅಖಿಲ ಕರ್ನಾಟಕ ವ್ಯಾಪ್ತಿಯನ್ನು ತಂದುಕೊಟ್ಟ ಹಿರಿಮೆ ಶ್ರೀಯುತರದು.

ನಡೆದಾಡುವ ನಿಘಂಟು, ಶಬ್ಧ ಬ್ರಹ್ಮ ಎಂದು ಜನಜನಿತರಾಗಿರುವ ಶ್ರೀಯುತರು ಸಾಹಿತ್ಯ ವಿಮರ್ಶೆ, ಸಂಶೋಧನೆ, ಅನುವಾದ, ನಿಘಂಟು ರಚನೆ ಕ್ಷೇತ್ರಗಳಲ್ಲಿ ಅಪಾರ ಸೇವೆ ಸಲ್ಲಿಕೆ. 50ಪುಸ್ತಕಗಳನ್ನು, 14 ನಿಘಂಟುಗಳನ್ನು ಪ್ರಕಟಗೊಳಿಸಿರುವುದಲ್ಲದೆ ‘ಇಗೋ ಕನ್ನಡ’ ಎಂಬ ಅಂಕಣದಿಂದ ನಾಡಿನಲ್ಲಿ ಮನೆಮಾತಾಗಿದ್ದಾರೆ.

ನಿಘಂಟು ಪರಿವಾರ, ಅಕ್ರೂರ ಚರಿತ್ರೆ (ಸಂಪಾದನೆ), ಇಗೋ ಕನ್ನಡ (ಸಾಮಾಜಿಕ ನಿಘಂಟು), ಗತಿ ಪ್ರಜ್ಞೆ, ಕನ್ನಡವನ್ನು ಉಳಿಸಿ ಬೆಳೆಸಿದವರು, ಅನುಕಲ್ಪನೆ, ಕರ್ಣ ಕರ್ಣಾಮೃತ ಮುಂತಾದವು ಪ್ರಮುಖ ಕೃತಿಗಳು. ಹಲವಾರು ಶಿಕ್ಷಕ ತರಬೇತಿ ಕಾಲೇಜುಗಳಲ್ಲಿ ಆಹ್ವಾನಿತ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿರುವ ಶ್ರೀಯುತರ ಪಾಂಡಿತ್ಯಕ್ಕೆ ಸಂದ ಪ್ರಶಸ್ತಿ ಪುರಸ್ಕಾರಗಳು ಹಲವಾರು.

ಅವುಗಳಲ್ಲಿ ವಿದ್ಯಾಲಂಕಾರ ಪ್ರಶಸ್ತಿ, ರಾಜ್ಯೋತ್ಸವ ಪ್ರಶಸ್ತಿ, ಶಂಬಾ ಪ್ರಶಸ್ತಿ, ಸೇಡಿಯಾಪು ಪ್ರಶಸ್ತಿ, ಕಾಯಕ ಪ್ರಶಸ್ತಿ, ಪತ್ರಿಕಾ ಅಕಾಡೆಮಿ ವಿಶೇಷ ಪ್ರಶಸ್ತಿ, ಮಾಸ್ತಿ ಪ್ರಶಸ್ತಿ, ಹಂಪಿ ವಿಶ್ವವಿದ್ಯಾನಿಲಯದ ನಾಡೋಜ ಪ್ರಶಸ್ತಿ, ಅಂತರಾಷ್ಟ್ರೀಯ ನಿಘಂಟು ಸಮ್ಮೇಳನಗಳಿಗೆ ಆಹ್ವಾನ ಮುಂತಾದವು ಮುಖ್ಯವಾದವು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ದಾವಣಗೆರೆ | 18 ನೇ ವಾರ್ಡ್ ನಲ್ಲಿ ಕೈ ಅಭ್ಯರ್ಥಿ ಸಮರ್ಥ ಶಾಮನೂರು ಪ್ರಚಾರ

Published

on

ಸುದ್ದಿದಿನ,ದಾವಣಗೆರೆ:ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಹಿನ್ನಲೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಸಮರ್ಥ್ ಶಾಮನೂರು ಅವರು ಮಂಗಳವಾರ 18 ನೇ ವಾರ್ಡ್ ವ್ಯಾಪ್ತಿಯಲ್ಲಿ ಅಬ್ಬರ ಪ್ರಚಾರ ನಡೆಸಿದರು.

ನಗರದ ಬಾರ್ ಲೈನ್ ದರ್ಗಕ್ಕೆ ತೆರಳಿ ಚಾದರ ಅರ್ಪಿಸಿದ ಸಮರ್ಥ ಶಾಮನೂರು ಅವರಿಗೆ ಮುಸ್ಲಿಂ ಸಮಾಜದ ಬಾಂಧವರು ಆತ್ಮೀಯವಾಗಿ ಸನ್ಮಾನಿಸಿದರು. ಬಳಿಕ ಅಲ್ಲಿಂದ ಪ್ರಚಾರವನ್ನು ಆರಂಭಿಸಿದ ಅವರು ಎಂ.ಬಿ ಕೇರಿ, ಮಟನ್ ಮಾರ್ಕೇಟ್, ಗಡಿಯಾರ ಕಂಬ, ಸ್ವಾಗೇರ್ ಪೇಟೆ, ಹೊಂಡದ ರಸ್ತೆ, ಕಾಯಿಪೇಟೆಯ ಮನೆ ಮನೆಗೆ ತೆರಳಿ ಮತಯಾಚಿಸಿದರು.

ಕಾಂಗ್ರೆಸ್ ಪಕ್ಷದ ಮುಖಂಡರಾದ ನರಸಿಂಹಪ್ಪ, ರವಿಕುಮಾರ್, ಕಾಶಿನಾಥ್ ಅವರ ಮನೆಗೆ ಅಭ್ಯರ್ಥಿ ಸಮರ್ಥ ಶಾಮನುರು ಅವರು ಭೇಟಿ ನೀಡಿದಾಕ್ಷಣ ಕುಟುಂಬಸ್ಥರು ದಿವಂಗತರಾದ ಡಾ.ಶಾಮನೂರು ಶಿವಶಂಕರಪ್ಪ ಅವರನ್ನು ನೆನೆದು ಭಾವುಕರಾದರು. ಶಾಮನೂರು ಸಮರ್ಥ ಅವರಿಗೆ ದಕ್ಷಿಣ ಕ್ಷೇತ್ರದಲ್ಲಿ ಪ್ರಚಂಡ ಬಹುಮತವನ್ನು ನೀಡಿ ಗೆಲ್ಲಿಸುತ್ತೇವೆ ಎಂದು ಮತದಾರರು ಅಭಿಪ್ರಾಯ ವ್ಯಕ್ತಪಡಿಸಿದರು.

ಸ್ಥಳೀಯ ಮುಖಂಡರಾದ ಚಂದ್ರ ಶೇಖರ್, ಸೋಗಿ ಶಾಂತಕುಮಾರ್, ಪ್ರವೀಣ್ ರಾವ್, ಬಕ್ಕೇಶ್, ಪರಮೇಶ್, ಜಯರಾಜ್, ಹನುಮಂತ್, ರಾಘವೇಂದ್ರ, ಭೀಮಣ್ಣ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ | ಕರ್ನಾಟಕ ಜಾಹೀರಾತು ನೀತಿಗೆ ಸಂಪಾದಕರ ವಿರೋಧ ; ಸಿಎಂಗೆ ಮನವಿ

Published

on

ನೀತಿಯನ್ನು ಪರಿಶೀಲಿಸುವ ಭರವಸೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಸುದ್ದಿದಿನ,ದಾವಣಗೆರೆ: ಕರ್ನಾಟಕ ಜಾಹೀರಾತು ನೀತಿ-2026 ರಲ್ಲಿ ಪತ್ರಿಕೆಗಳಿಗೆ ಮಾರಕವಾದ ನಿಯಮಗಳನ್ನು ಕೈಬಿಡುವಂತೆ ಕೋರಿ ಕರ್ನಾಟಕ ಕಾರ್ಯನಿರತ ದಿನಪತ್ರಿಕೆಗಳ ಸಂಪಾದಕರ ಸಂಘ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ, ದಾವಣಗೆರೆ ಜಿಲ್ಲಾ ವರದಿಗಾರರ ಕೂಟದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಸೋಮವಾರ ಮಧ್ಯಾಹ್ನ ನಗರದ ಎಂ.ಬಿ.ಎ ಗ್ರೌಂಡ್ ಹೆಲಿಪ್ಯಾಡ್ ನಲ್ಲಿ ಮನವಿ ಸಲ್ಲಿಸಲಾಯಿತು.

ರಾಜ್ಯದಲ್ಲಿ ಜಾರಿಗೆ ತರಲು ಹೊರಟಿರುವ ಕರ್ನಾಟಕ ಜಾಹೀರಾತು ನೀತಿ-2026 ಜಿಲ್ಲಾ‌ ಮಟ್ಟದ ಮತ್ತು ಪ್ರಾದೇಶಿಕ ಮಟ್ಟದ ಪತ್ರಿಕೆಗಳಿಗೆ ಮಾರಕವಾಗಿದ್ದು,ಇದರಿಂದ ಶತಶತಮಾನಗಳಿಂದ ಸಮಾಜದ ಮತ್ತು ಸರ್ಕಾರದ ಕೊಂಡಿಯಾಗಿ ಸೇವೆ ಮಾಡುತ್ತಿರುವ ಪತ್ರಿಕೆಗಳು ಮುಚ್ಚುತ್ತವೆ‌. ಯಾವುದೇ ಕಾರಣಕ್ಕೂ ಪತ್ರಿಕೆಗಳಿಗೆ ಮಾರಕವಾಗುವ ನಿಯಮಗಳನ್ನು ಅಳವಡಿಸದೇ ಪತ್ರಿಕೆಗಳ ಏಳಿಗೆಗೆ ಪೂರಕವಾದ ಅಂಶಗಳನ್ನು ಸೇರಿಸಿ ಕರ್ನಾಟಕ ಜಾಹೀರಾತು ನೀತಿಯನ್ನು ಜಾರಿಗೆ ತರಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ , ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್ ಅವರಿಗೆ ಮನವರಿಕೆ ಮಾಡಿಕೊಡಲಾಯಿತು.

ಸಂಘಗಳ ಮನವಿ ಸ್ವೀಕರಿಸಿದ ಮುಖ್ಯಮಂತ್ರಿಗಳು ಜಾಹೀರಾತು ನೀತಿ ಪರಿಶೀಲಿಸುವ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಕರ್ನಾಟಕ ಕಾರ್ಯನಿರತ ದಿನಪತ್ರಿಕೆಗಳ ಸಂಪಾದಕರ ಸಂಘದ ರಾಜ್ಯಾಧ್ಯಕ್ಷರಾದ ಎ.ಸಿ.ತಿಪ್ಪೇಸ್ವಾಮಿ, ಜಿಲ್ಲಾ ಘಟಕದ ಅಧ್ಯಕ್ಷರಾದ ಸುರೇಶ್ ಆರ್ ಕುಣೆಬೆಳಕೆರೆ, ಖಜಾಂಜಿ ಶಿವಮೂರ್ತಿ ಟಿ.ಜಿ , ರಾಜ್ಯ ಸಂಘದ ನಾಮನಿರ್ದೇಶನ ಸದಸ್ಯ ಕೆ.ಜೈಮುನಿ ಮತ್ತು
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕದ ಅಧ್ಯಕರಾದ ಇ.ಎಂ.ಮಂಜುನಾಥ್, ಪ್ರಧಾನ ಕಾರ್ಯದರ್ಶಿ ಬದ್ರಿನಾಥ್, ಖಜಾಂಚಿ ಜೆ.ಎಸ್.ವೀರೇಶ್ ಹಾಗೂ ದಾವಣಗೆರೆ ಜಿಲ್ಲಾ ವರದಿಗಾರರ ಕೂಟದ ಅಧ್ಯಕ್ಷರಾದ ನಾಗರಾಜ ಬಡದಾಳ್ , ಹಿರಿಯ ಪತ್ರಕರ್ತರಾದ ಕೆ.ಏಕಾಂತಮ್ಮ, ಬಿ.ಎನ್.ಮಲ್ಲೇಶ್, ಮಲ್ಲಿಕಾರ್ಜುನ ಕಬ್ಬೂರು, ಆರ್.ಎಸ್.ತಿಪ್ಪೇಸ್ವಾಮಿ, ಕೊಟ್ರೇಶ್ ಅಣಬೂರುಮಠ, ನಿಂಗಪ್ಪ, ಗೋವಿಂದ ರಾಜು, ಫಕೃದ್ದೀನ್, ಆರ್.ರವಿ,ಬಿ.ವಾಸುದೇವ, ರಾಘವೇಂದ್ರ ರಾವ್, ವೇದಮೂರ್ತಿ,ನಿಂಗಪ್ಪ, ಪರಶುರಾಮ, ನಂದಕುಮಾರ್ ಮುಂತಾದವರು ಇದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ | ಪೌರಕಾರ್ಮಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ:ಹರಿಹರ ನಗರಸಭೆಯು 04 ಸಂಖ್ಯಾತಿರಿಕ್ತ ಪೌರಕಾರ್ಮಿಕರ ಹುದ್ದೆಗಳನ್ನು ವಿಶೇಷ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

ಪ್ರಸ್ತುತ ಹರಿಹರ ನಗರಸಭೆಯಲ್ಲಿ ಕೆಲಸ ನಿರ್ವಹಿಸುತ್ತಿರುವವರು ಹಾಗೂ ಈ ನಿಯಮ ಜಾರಿಗೆ ಬಂದ ದಿನಾಂಕದಲ್ಲಿಯೂ ಸದರಿ ಹುದ್ದೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಮಾರ್ಚ್ 11 ರಿಂದ ಅರ್ಜಿಗಳನ್ನು ಪಡೆದುಕೊಳ್ಳಬಹುದು.

ಭರ್ತಿ ಮಾಡಿದ ಅರ್ಜಿಗಳನ್ನು ಸಲ್ಲಿಸಲು ಏಪ್ರಿಲ್ 10 ಕಡೆಯ ದಿನಾಂಕವಾಗಿದೆ. ಅಭ್ಯರ್ಥಿಗಳು ಅರ್ಜಿಗಳನ್ನು ಹರಿಹರ ನಗರಸಭೆ ಕಚೇರಿಯಿಂದ ಮಾತ್ರ ಪಡೆದುಕೊಳ್ಳಬೇಕು. ಹುದ್ದೆಗಳ ವರ್ಗೀಕರಣ, ಷರತ್ತುಗಳು, ವಯೋಮಿತಿ ಮತ್ತು ಅಗತ್ಯ ಅರ್ಹತೆಗಳ ಕುರಿತಾದ ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಕಚೇರಿ ಸಮಯದಲ್ಲಿ ಹರಿಹರ ನಗರಸಭೆ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ದಾವಣಗೆರೆಯ ಜಿಲ್ಲಾಧಿಕಾರಿಗಳು ಹಾಗೂ ಆಯ್ಕೆ ಮತ್ತು ನೇರ ನೇಮಕಾತಿ ಪ್ರಾಧಿಕಾರದ ಅಧ್ಯಕ್ಷರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending