ದಿನದ ಸುದ್ದಿ
ಏ.1 ರಿಂದ 2026ರ ಡಿಜಿಟಲ್ ಜನಗಣತಿ
ಸುದ್ದಿದಿನ,ದಾವಣಗೆರೆ :2026ರ ಜನಗಣತಿ ಪ್ರಕ್ರಿಯೆ ಏಪ್ರಿಲ್ 1 ರಿಂದ ಆರಂಭವಾಗಲಿದ್ದು, ಈ ಬಾರಿ ಸಂಪೂರ್ಣ ಡಿಜಿಟಲ್ ರೂಪದಲ್ಲಿ ಜನಗಣತಿ ನಡೆಯಲಿದೆ. ಸಾರ್ವಜನಿಕರು ಆನ್ಲೈನ್ ಮೂಲಕ ಸ್ವಯಂ ದೃಢೀಕರಣ ಮಾಡಿಕೊಳ್ಳಲು ಅವಕಾಶವಿದೆ ಎಂದು ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ತಿಳಿಸಿದರು.
ಗುರುವಾರ(ಫೆ.19) ರಂದು ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಅವರು ಮಾತನಾಡಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ | ಕಂದಾಯ ಹಕ್ಕು ಪತ್ರ ಮತ್ತು ಪಾವತಿ ಆಂದೋಲನ
ಸುದ್ದಿದಿನ,ದಾವಣಗೆರೆ:ಜಿಲ್ಲೆಯಲ್ಲಿ 298 ಗ್ರಾಮಗಳನ್ನು ಕಂದಾಯ ಗ್ರಾಮಗಳನ್ನಾಗಿ ಘೋಷಿಸಲಾಗಿದ್ದು, ಈಗಾಗಲೇ 12,000ಕ್ಕೂ ಹೆಚ್ಚು ಹಕ್ಕು ಪತ್ರಗಳನ್ನು ವಿತರಿಸಲಾಗಿದ್ದು, ಬಾಕಿ ಇರುವವರು ತಹಶೀಲ್ದಾರ್ ಕಚೇರಿಗೆ ಅರ್ಜಿ ಸಲ್ಲಿಸಬಹುದು ಎಂದು ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ತಿಳಿಸಿದರು.
ಗುರುವಾರ(ಫೆ.19) ರಂದು ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಅವರು ಮಾತನಾಡಿದರು.
ಅಲ್ಲದೆ, ಮೃತಪಟ್ಟ ರೈತರ ಹೆಸರಿರುವ ಪಹಣಿಗಳನ್ನು ವಾರಸುದಾರರ ಹೆಸರಿಗೆ ಸುಮಾರು 24000 ಪೌತಿ ಖಾತೆಗಳನ್ನು ಬದಲಾಯಿಸಲಾಗಿದ್ದು, ಪೌತಿ ಆಂದೋಲನವನ್ನು ಸಹ ಹಮ್ಮಿಕೊಳ್ಳಲಾಗಿದೆ. ಸರ್ಕಾರಿ ಜಮೀನು ಮಂಜೂರು ಆಗಿ ಪೋಡಿ ಆಗದೇ ಪ್ರತ್ಯೇಕ ಪಹಣಿ ಬರದೇ ಇರುವುದರಿಂದ ಅಂತಹವುಗಳನ್ನು ಗೈರು ವಿಲೇ ಕಡತವನ್ನು ಮಾಡಲಾಗಿದ್ದು, ಸುಮಾರು 4000 ಜನರಿಗೆ ಈ ಗೈರು ವಿಲೇ ಕಡತವನ್ನು ನೀಡಲಾಗಿದೆ. ರಾಜ್ಯದಲ್ಲಿ ನಮ್ಮ ಜಿಲ್ಲೆಯೂ 3ನೇ ಸ್ಥಾನವನ್ನು ಹೊಂದಲಾಗಿದೆ ಎಂದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ತಾಲೂಕುಗಳಲ್ಲಿ ಕನ್ನಡ ಭವನ ನಿರ್ಮಾಣ | ಭದ್ರಾ ನಾಲೆ ನೀರು ನಿರ್ವಹಣೆ
ಸುದ್ದಿದಿನ,ದಾವಣಗೆರೆ:ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ ಕನ್ನಡ ಭವನ ನಿರ್ಮಾಣಕ್ಕಾಗಿ ಸ್ಥಳ ಗುರುತಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ತಿಳಿಸಿದರು.
ಗುರುವಾರ(ಫೆ.19) ರಂದು ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಅವರು ಮಾತನಾಡಿದರು.
ನಾಲೆಯ ಕೊನೆಯ ಭಾಗದ ರೈತರಿಗೆ ನೀರು ತಲುಪಿಸಲು ನಾಲೆಯುದ್ದಕ್ಕೂ 144 ಸೆಕ್ಷನ್ ಜಾರಿಗೊಳಿಸಲಾಗಿದ್ದು, ಅನಧಿಕೃತವಾಗಿ ನೀರು ಎತ್ತುವವರ ಮೋಟಾರ್ಗಳನ್ನು ವಶಪಡಿಸಿಕೊಳ್ಳಲಾಗುವುದು.
ಪ್ರಿಪೇಯ್ಡ್ ಆಟೋಗಳನ್ನು ಚಾಲ್ತಿಗೊಳಿಸಿದ್ದು, ಇದಕ್ಕೆ ರೂ.38/-ಶುಲ್ಕ ನಿಗದಿಪಡಿಸಲಾಗಿದ್ದು, ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕೆಂದರು.
ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ರಕ್ಷಣಾಧಿಕಾರಿ ಶೇಖರ್ ಹೆಚ್.ಟಿ, ಅಪರ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ್ ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದುರ್ಗಾಂಬಿಕ ಜಾತ್ರೆ ; ಫ್ಲೆಕ್ಸ್ ಹಾವಳಿ ವಿರುದ್ಧ ಕಠಿಣ ಕ್ರಮ
ಸುದ್ದಿದಿನ,ದಾವಣಗೆರೆ:ದುರ್ಗಾಂಬಿಕಾ ಜಾತ್ರೆಯ ಸಂದರ್ಭದಲ್ಲಿ ನಗರದ ಪರಿಸರ ಮಾಲಿನ್ಯಕ್ಕೆ ಧಕ್ಕೆ ತರುವಂತೆ ಅನಧಿಕೃತ ಫ್ಲೆಕ್ಸ್ ಅಳವಡಿಸುವವರ ವಿರುದ್ಧ ‘ಡಿ ಫಿಗರ್ಮೆಂಟ್ ಆಕ್ಟ್’ ಅಡಿಯಲ್ಲಿ ನಿರ್ದಾಕ್ಷಿಣ್ಯವಾಗಿ ಎಫ್ಐಆರ್ ದಾಖಲಿಸಲಾಗುವುದು ಎಂದು ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ತಿಳಿಸಿದ್ದಾರೆ.
ಜೊತೆಗೆ ಪ್ಲಾಸ್ಟಿಕ್ ಫ್ಲೆಕ್ಸ್ ಮುದ್ರಿಸುವ ಪ್ರಿಂರ್ಸ್ಗಳ ಮೇಲೆಯೂ ಕಠಿಣ ಕ್ರಮ ಜರುಗಿಸಲಾಗುವುದು. ಜಾತ್ರೆಯಲ್ಲಿ ಪ್ಲಾಸ್ಟಿಕ್ ಮುಕ್ತ ವಾತಾವರಣ ನಿರ್ಮಿಸಲು ಸಾರ್ವಜನಿಕರು ಸಹಕರಿಸಬೇಕು ಎಂದಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ7 days agoಎಸ್.ಎಸ್.ಎಲ್.ಸಿ ಫಲಿತಾಂಶ ಹೆಚ್ಚಿಸಲು ಕ್ರಮವಹಿಸಿ : ಶಿಕ್ಷಕರಿಗೆ ಡಿಸಿ ಗಂಗಾಧರಸ್ವಾಮಿ ಸೂಚನೆ
-
ದಿನದ ಸುದ್ದಿ7 days agoಉದ್ಯೋಗಿಗಳಿಗೆ ಗೂಗಲ್ ಶಾಕ್..! AI ಕಲಿಯದಿದ್ದರೆ ಉದ್ಯೋಗ ತೊರೆಯಿರಿ
-
ದಿನದ ಸುದ್ದಿ4 days agoಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ : ಆಕ್ಷೇಪಣೆಗಳಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ2 days agoಶ್ರೀ ದುರ್ಗಾಂಬಿಕಾ ದೇವಿ ಜಾತ್ರೆ – ಪ್ರಾಣಿಬಲಿ ಮತ್ತು ಮದ್ಯಪಾನ ನಿಷೇಧ, ಬ್ಯಾನರ್ ಅಳವಡಿಕೆಗೆ ಅನುಮತಿ ಕಡ್ಡಾಯ
-
ದಿನದ ಸುದ್ದಿ4 days agoದುರ್ಗಾಂಬಿಕಾದೇವಿ ಜಾತ್ರೆ ; ಭಕ್ತಾದಿಗಳಿಗೆ ಶೌಚಾಲಯ ವ್ಯವಸ್ಥೆ
-
ದಿನದ ಸುದ್ದಿ3 days agoಯಶಸ್ವಿ ಬೃಹತ್ ಉದ್ಯೋಗ ಮೇಳಕ್ಕೆ ಕ್ರಮವಹಿಸಿ: ಡಿಸಿ ಗಂಗಾಧರ್ ಸ್ವಾಮಿ
-
ದಿನದ ಸುದ್ದಿ16 hours agoಎಸ್.ಎಸ್.ಎಲ್.ಸಿ, ಪಿಯುಸಿ ಫಲಿತಾಂಶ ಸುಧಾರಣೆಗೆ ಕ್ರಮ: ಡಿಸಿ ಜಿ.ಎಂ.ಗಂಗಾಧರಸ್ವಾಮಿ
-
ದಿನದ ಸುದ್ದಿ3 hours agoದುರ್ಗಾಂಬಿಕ ಜಾತ್ರೆ ; ಫ್ಲೆಕ್ಸ್ ಹಾವಳಿ ವಿರುದ್ಧ ಕಠಿಣ ಕ್ರಮ

