Connect with us

ದಿನದ ಸುದ್ದಿ

ಪಂಚಾಯಿತಿ ಗ್ರಂಥಾಲಯಗಳಲ್ಲಿ ಡಿಜಿಟಲೀಕರಣ

Published

on

ಸುದ್ದಿದಿನ,ದಾವಣಗೆರೆ : ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಶಿಕ್ಷಣ ಫೌಂಡೇಷನ್ ಮತ್ತು ಡೆಲ್ ಸಂಸ್ಥೆಯ ಸಹಯೋಗದಲ್ಲಿ ಈ ವರ್ಷ ಜಿಲ್ಲೆಯಲ್ಲಿನ 20 ಗ್ರಾಮ ಪಂಚಾಯಿತಿ ಗ್ರಂಥಾಲಯಗಳನ್ನು ಡಿಜಿಟಲೀಕರಣ ಮಾಡಲಾಗುತ್ತಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಬಿ.ಇಟ್ನಾಳ್ ತಿಳಿಸಿದರು.

ಅವರು ಮಂಗಳವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಶಿಕ್ಷಣ ಫೌಂಡೇಷನ್ ಸಿ.ಇ.ಓ. ಲೆಪ್ಟಿನೆಂಟ್ ಕಮಾಂಡರ್ ಸುನಿಲ್.ಎನ್ ರವರು ಮತ್ತು ಆರೋಗ್ಯ, ಶಿಕ್ಷಣ ಇಲಾಖೆ ಅಧಿಕಾರಿಗಳೊಂದಿಗೆ ನಡೆಸಿದ ಸಭೆಯಲ್ಲಿ ಗ್ರಾಮ ಡಿಜಿ ವಿಕಸನ ಕಾರ್ಯಕ್ರಮದ ಬಗ್ಗೆ ವಿವರಿಸಿದರು.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಶಿಕ್ಷಣ ಫೌಂಡೇಷನ್ ಮತ್ತು ಡೆಲ್ ಸಂಸ್ಥೆಯ ಸಹಯೋಗದಲ್ಲಿ ರಾಜ್ಯದ 6000 ಸಾವಿರ ಗ್ರಾಮ ಪಂಚಾಯಿತಿ ಗ್ರಂಥಾಲಯಗಳಲ್ಲಿ 4000 ಗ್ರಾಮ ಪಂಚಾಯಿತಿ ಗ್ರಂಥಾಲಯಗಳಿಗೆ ಡಿಜಿಟಲೀಕರಣ ಮಾಡುವ ಕಾರ್ಯ ಮುಂದುವರೆದಿದೆ. ಈ ವರ್ಷ ರಾಜ್ಯದ 1000 ಗ್ರಂಥಾಲಯಗಳಿಗೆ ಡಿಜಿಟಲೀಕರಣ ಅಳವಡಿಕೆ ಹಾಗೂ ಗ್ರಾಮ ಡಿಜಿ ವಿಕಸನ ಕಾರ್ಯಕ್ರಮ ಅನುμÁ್ಠನ ಮಾಡಲಾಗುತ್ತಿದೆ ಎಂದು ತಿಳಿಸಿದರು.

ದಾವಣಗೆರೆ ಜಿಲ್ಲೆಯಲ್ಲಿ ಕಳೆದ ವರ್ಷ 61 ಗ್ರಾಮ ಪಂಚಾಯತ್ ಗ್ರಂಥಾಲಯಗಳಿಗೆ ಡಿಜಿಟಲಿಕರಣದ ಮೂಲಕ ಗ್ರಾಮ ಡಿಜಿ ವಿಕಸನ ಕಾರ್ಯಕ್ರಮ ಅನುμÁ್ಠನ ಮಾಡಲಾಗಿದೆ. ಜೊತೆಗೆ ಈ ವರ್ಷ 20 ಗ್ರಾಮ ಪಂಚಾಯತ್ ಗ್ರಂಥಾಲಯಗಳಲ್ಲಿ ಈ ಕಾರ್ಯಕ್ರಮವನ್ನು ಅನುμÁ್ಠನ ಮಾಡುವ ಯೋಜನೆಯನ್ನು ರೂಪಿಸಲಾಗಿದೆ ಎಂದು ತಿಳಿಸಿದರು.

ಗ್ರಾಮಾಂತರ ಪ್ರದೇಶದಲ್ಲಿನ ವಿದ್ಯಾರ್ಥಿಗಳಲ್ಲಿ ಡಿಜಿಟಲ್ ಕೌಶಲಗಳನ್ನು ಅಭಿವೃದ್ಧಿಪಡಿಸುವುದು, ಈ ಯೋಜನೆಯ ಉದ್ದೇಶವಾಗಿದೆ. ಇದಕ್ಕೆ ಪೂರಕವಾಗಿ ಲ್ಯಾಪ್‍ಟಾಪ್, ಆಂಡ್ರಾಯ್ಡ್ ಮೊಬೈಲ್. ಮಾನಿಟರ್, ಟಿವಿ, ಇಂಟರ್‍ನೆಟ್ ಸಂಪರ್ಕ ಸೇರಿ ಮೂಲ ತಾಂತ್ರಿಕ ಸೌಲಭ್ಯಗಳನ್ನು ಕಲ್ಪಿಸಲಾಗಿದೆ.

ಶಿಕ್ಷಣ ಫೌಂಡೇಷನ್ ಸಿ.ಇ.ಓ. ಲೆಪ್ಟಿನೆಂಟ್ ಕಮಾಂಡರ್ ಸುನಿಲ್.ಎನ್ ಮಾತನಾಡಿ ಶಿಕ್ಷಣ ಪೀಡಿಯಾ ಆಪ್ ಮೂಲಕ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಪಾಠ, ನೋಟ್ಸ್, ಸಂಬಂಧಿಸಿದ ವಿಡಿಯೋ, ಚಿತ್ರಗಳನ್ನು ಒದಗಿಸಲಾಗಿದೆ. ಪಿಯುಸಿ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕಗಳಿವೆ. ಪ್ರಾಥಮಿಕ ಶಾಲೆಯ ಮಕ್ಕಳಿಗೆ ಸಣ್ಣ ಕಥೆಗಳಿವೆ. ಅಲ್ಲದೇ ಯುವಕರು ಡಿಜಿಟಲ್ ಕೌಶಲಗಳನ್ನು ಬೆಳೆಸಿಕೊಳ್ಳಲು ಬೇಕಾದ ವ್ಯವಸ್ಥೆಯಿದೆ. ವಿದ್ಯಾರ್ಥಿಗಳು ತಮ್ಮ ಸದಸ್ಯತ್ವ ಸಂಖ್ಯೆಯನ್ನು ನಮೂದಿಸುವ ಮೂಲಕ ಈ ಆಪ್‍ನ ಪ್ರಯೋಜನ ಪಡೆಯಬಹುದಾಗಿದೆ. ಜತೆಗೆ ಆನ್‍ಲೈನ್ ಸೇವೆಗಳು, ಅರ್ಜಿ ಸಲ್ಲಿಕೆ, ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಂಬಂಧಿಸಿದ ಮಾಹಿತಿ ಇಲ್ಲಿ ಲಭ್ಯ ಹಾಗೂ ಸ್ವ ಸಹಾಯ ಸಂಘದ ಸದಸ್ಯರುಗಳಿಗೆ ಡಿಜಿಟಲ್ ಸ್ಕಿಲ್ಸ್ ಗೆ ಸಂಬಂಧಿಸಿದ ಮಾಹಿತಿ ಅಧಿವೇಶನವನ್ನು ನಡೆಸಲು ಯೋಜನೆ ರೂಪಿಸಲಾಗಿದೆ. ಜೊತೆಗೆ ಯುವಕರಿಗೆ ಕೃತಕ ಬುದ್ದಿಮತ್ತೆ (ಆರ್ಟಿಫಿಷಿಯಲ್ ಇಂಟೆಲಿಜೆನ್ಸ್) ಕುರಿತು ಈ ವರ್ಷ ಮಾಹಿತಿ ನೀಡುವ ಯೋಜನೆಯನ್ನು ರೂಪಿಸಲಾಗಿದೆ ಎಂದು ತಿಳಿಸಿದರು.

ಶಿಕ್ಷಣ ಫೌಂಡೇಶನ್ ಆಯ್ಕೆಮಾಡಿಕೊಂಡ ಎಲ್ಲಾ ಗ್ರಾಮ ಪಂಚಾಯತ್‍ನ ಗ್ರಂಥಾಲಯಗಳಲ್ಲಿ ಡಿಜಿಟಲ್ ಸ್ಕಿಲ್ಸ್, ಶೈಕ್ಷಣಿಕ ವರ್ಷದ ಪಠ್ಯಪುಸ್ತಕದ ತರಗತಿಗಳು ಹಾಗೂ ಪಠ್ಯಾಂಶಗಳು, ವೃತ್ತಿ ಮಾರ್ಗದರ್ಶನ ವಿಷಯಗಳ ಕುರಿತು ಆನ್‍ಲೈನ್, ಆಫ್‍ಲೈನ್ ತರಬೇತಿಗಳ ಅಧಿವೇಶನಗಳನ್ನು ನಡೆಸುತ್ತಿದೆ. ಈ ತರಬೇತಿ ಅವಧಿಗಳು ಆಫ್‍ಲೈನ್ ಅಪ್ಲಿಕೇಶನ್ ಮೂಲಕ ಲಭ್ಯವಿರುತ್ತವೆ, ಇದನ್ನು ಯುವಕರು ಮತ್ತು ಮಕ್ಕಳು ಯಾವುದೇ ಸ್ಮಾರ್ಟ್ ಪೋನ್‍ನಲ್ಲಿ ನೋಡಬಹುದಾಗಿದೆ. ಫೌಂಡೇಶನ್ ಹೆಚ್ಚುವರಿಯಾಗಿ ಆಂಡ್ರಾಯ್ಡ್ ಆಧಾರಿತ ಸಾಪ್ಟ್‍ವೇರ್ ಅನ್ನು ಅಭಿವೃದ್ಧಿಪಡಿಸುತ್ತಿದೆ, ಇದು ಪ್ರತಿ ಗ್ರಾಮ ಪಂಚಾಯತ್ ಗ್ರಂಥಾಲಯದಲ್ಲಿ ನಡೆಯುತ್ತಿರುವ ಕೆಲಸವನ್ನು ಪ್ರದರ್ಶಿಸಲು ಅನುವು ಮಾಡಿಕೊಡುತ್ತದೆ ಎಂದು ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಷಣ್ಮುಖಪ್ಪ, ಶಿಕ್ಷಣ ಫೌಂಡೇಷನ್ ಸಂಸ್ಥೆಯ ಶಂಭುಲಿಂಗ, ಗುರುಪಾದಪ್ಪ, ಸುರೇಶ್ ನಾಯ್ಕ ಹಾಗೂ ಇನ್ನಿತರರು ಭಾವಹಿಸಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಪ್ರವಾಸೋದ್ಯಮ ಇಲಾಖೆ | ಕೌಶಲ್ಯಾಭಿವೃದ್ಧಿ ತರಬೇತಿಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನಲ್ಲಿ ಪ್ರವಾಸೋದ್ಯಮ ಕ್ಷೇತ್ರದಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮವನ್ನು ಪರಿಶಿಷ್ಟ ಜಾತಿಗೆ ಸೇರಿದ 292 ಹಾಗೂ ಪರಿಶಿಷ್ಟ ಪಂಗಡಕ್ಕೆ ಸೇರಿದ 162 ಅಭ್ಯರ್ಥಿಗಳಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರದ ಅತಿಥ್ಯ ಕ್ಷೇತ್ರದ ಸಂಸ್ಥೆಗಳಾದ ಆಹಾರ ಕರಕುಶಲ ಸಂಸ್ಥೆ ಮೈಸೂರು ( Food Craft Institute ) ಮತ್ತು ಹೋಟೆಲ್ ನಿರ್ವಹಣಾ ಸಂಸ್ಥೆ ಬೆಂಗಳೂರು (Institute Of Hotel Management ) ಇವರ ಸಹಯೋಗದಲ್ಲಿ ವಸತಿ ಸಹಿತ ಕಾರ್ಯಕ್ರಮವನ್ನು ಜಾರಿಗೊಳಿಸಲು ಉದ್ದೇಶಿಸಲಾಗಿದ್ದು, ಈ ಸಂಬಂಧ ಅರ್ಹ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಮಲ್ಟಿ ಕ್ಯೂಸಿನ್ ಕುಕ್ ( Multi Cusine Cook ) ಮತ್ತು ಫುಡ್ ಅಂಡ್ ಬೇವರೇಜ್ ಸರ್ವಿಸ್ ಸ್ಟೇವಾರ್ಡ್ ( Food And Beverage Service Steward ) ನಲ್ಲಿ ತರಬೇತಿ ಪಡೆಯಲು ಇಚ್ಛಿಸುವ ಜಿಲ್ಲೆಯ ಅಭ್ಯರ್ಥಿಗಳು ಮಾ.25 ರಿಂದ ನಗರದ ಉಪವಿಭಾಗಾಧಿಕಾರಿಗಳ ಕಚೇರಿ ಆವರಣದಲ್ಲಿನ ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಅರ್ಜಿ ಪಡೆದು ಭರ್ತಿ ಮಾಡಿ, ಅಗತ್ಯ ದಾಖಲೆಗಳೊಂದಿಗೆ ದ್ವಿ-ಪ್ರತಿಯಲ್ಲಿ ಏಪ್ರಿಲ್ 3 ರೊಳಗೆ ನೇರವಾಗಿ ಇಲಾಖೆಗೆ ಸಲ್ಲಿಸಬೇಕು ಎಂದು ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕಿ ಬಿ.ಕಾವ್ಯ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಜಯಲಕ್ಷ್ಮಿ ಕಾರಂತ್‌ ಅವರಿಗೆ ‘ಯಕ್ಷ ಧ್ರುವ’ ರಾಜ್ಯ ಪ್ರಶಸ್ತಿ ಪ್ರದಾನ

Published

on

ಸುದ್ದಿದಿನ,ದಾವಣಗೆರೆ:ಕಲಾಕುಂಚ ಸಾಂಸ್ಕೃತಿಕ ಸಂಸ್ಥೆಯ ಅಂಗ ಸಂಸ್ಥೆ ಕೇರಳ ಗಡಿನಾಡ ಶಾಖೆಯ ಅಧ್ಯಕ್ಷರೂ, ಹಿರಿಯ ಸಾಹಿತಿ, ಯಕ್ಷಗಾನ ವಿದ್ವಾಂಸರು, ತಾಳಮದ್ದಳೆಯ ಅರ್ಥಧಾರಿಗಳಾದ ಜಯಲಕ್ಷ್ಮಿ ಕಾರಂತ್‌ರವರಿಗೆ ಇತ್ತೀಚಿಗೆ ದಕ್ಷಿಣ ಕನ್ನಡ ಜಿಲ್ಲೆಯ ಸುರತ್ಕಲ್‌ನ ಭಂಟರ ಭವನದಲ್ಲಿ ಮಂಗಳೂರಿನ ಯಕ್ಷ ಧ್ರುವ ಪಟ್ಲ ಪೌಂಡೇಷನ್ ಟ್ರಸ್ಟ್ ಹಮ್ಮಿಕೊಳ್ಳಲಾದ ಮಹಿಳಾ ಘಟಕದ 8ನೇ ವಾರ್ಷಿಕೋತ್ಸವದ ಸಮಾರಂಭದಲ್ಲಿ “ಯಕ್ಷ ಧ್ರುವ” ರಾಜ್ಯ ಮಟ್ಟದ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಯಿತು ಎಂದು ಕಲಾಕುಂಚ ಯಕ್ಷರಂಗದ ಸಂಸ್ಥಾಪಕರಾದ ಸಾಲಿಗ್ರಾಮ ಗಣೇಶ್ ಶೆಣೈ ತಿಳಿಸಿದ್ದಾರೆ.

ಹಿರಿಯ, ಕಿರಿಯ ಮಹಿಳೆಯರಿಗೆ, ಮಕ್ಕಳಿಗೆ ಯಕ್ಷಗಾನ ಮದ್ದಳೆ ತರಬೇತಿ, ಮಹಾಭಾರತ, ರಾಮಾಯಣ ಪರಂಪರೆಯ ಪೌರಾಣಿಕ ಪ್ರಸಂಗಗಳ ರಚನೆ, ನಿವೃತ್ತಿ ಶಿಕ್ಷಕಿಯಾದರೂ ಶೈಕ್ಷಣಿಕ ಕಾಳಜಿಯ ಸ್ವಯಂ ಸೇವೆಯೊಂದಿಗೆ, ಕಲೆ, ಸಾಹಿತ್ಯ, ಸಂಗೀತ, ಭಜನೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗಳನ್ನು ಗುರುತಿಸಿ ಶ್ರೀಮತಿ ಜಯಲಕ್ಷ್ಮಿ ಕಾರಂತ್‌ರನ್ನು ಮಹತ್ವಪೂರ್ಣ ಈ ಪ್ರಶಸ್ತಿಗೆ ಭಾಜನಾಗಿದ್ದು ಕಲಾಕುಂಚ ಯಕ್ಷರಂಗ ಸೇರಿದಂತೆ ವಿವಿಧ ಸಂಘಟನೆಗಳ ಸರ್ವ ಸದಸ್ಯರು, ಪದಾಧಿಕಾರಿಗಳು ಅಭಿಮಾನದಿಂದ ಅಭಿನಂದನೆ ಸಲ್ಲಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂಕಣ

ಕವಿತೆ | ಅಲರ್ಟ್..!

Published

on

  • ಸುನೀತ ಕುಶಾಲನಗರ

ದಿಯ ನೇವರಿಸಿದ ಗಾಳಿ
ಮುದಗೊಳಿಸಿ ಸರಿಯಿತು.
ಜಡಿ ಮಳೆ ಧೋ ಎಂದು
ಸಕಾಲಿಕವಾಗಿ ಸುರಿದು
ಹೊಸ ಹುಟ್ಟು.

ಆದರೇನು?
ಹಿಂಗಾರು, ಮುಂಗಾರು
ಆಗೊಮ್ಮೆ ಈಗೊಮ್ಮೆ
ಪದೇ ಪದೇ ಅದೇ ರಾಗ .

ಸುರಿದು ತುಂತುರು
ಕಾಣಿಸಿ ನಿಂತಿತೆನ್ನುವಾಗ
ಮತ್ತೆ ನಿಲ್ಲದ ಹಠ.

ಮಳೆಗೆ ಈಗ ಮುಟ್ಟು
ನಿಲ್ಲುವ ಸಮಯವೋ?
ಗುಡುಗು,ಮಿಂಚಿನಿಂದ
ಮುಟ್ಟಿನಲ್ಲಿ ಏರುಪೇರೋ ?
ಒಟ್ಟಿನಲ್ಲಿ
ನದಿಯ ಸೋಕಿದ ಗಾಳಿ
ಸಮುದ್ರದೊಳಗೆ ವಿಲೀನ.

ಅಕಾಲಿಕ ಮಳೆ…
ಇಳೆಗೆ ಸೊಂಟ ಬೇನೆ
ನದಿಯ ತಾಕಿದ ಬೆಳದಿಂಗಳು
ಕಿವಿಯಲ್ಲಿ ಉಸುರಿತು

ಹರಿಯುತ್ತಿರುವ ನದಿಯು
ಬೀಸುವ ಗಾಳಿಯು
ತಲೆಯೆತ್ತಿ ನಿಂತ ಬೆಟ್ಟವೂ
ಸ್ಥಾನ ಬದಲಿಸಲು
ಹೊತ್ತು ಬೇಕೆ?
ನಿಲ್ಲದ ಮಳೆಯ ಮುಟ್ಟಿಗೆ
ಸಲ್ಲುವ ಘೋಷಣೆ
ಹೈ ಅಲರ್ಟ್!

ಬದುಕಿನ ಧ್ಯಾನ
ಯೆಲ್ಲೋ, ಆರೆಂಜ್, ರೆಡ್
ಬಣ್ಣಗಳ ಅಲರ್ಟ್ ನಲ್ಲೇ
ಕಳೆದು ಹೋಗುತ್ತಿದೆ.

ಕಾಮನ ಬಿಲ್ಲ ತೋರಿಸಿ
ಸರಿದು ಬಿಡು ಮಳೆಯೇ
ಇಳೆಯ ಉಸಿರು
ಹಸಿರಾಗಲಿ. (ಕವಯಿತ್ರಿ: ಸುನೀತ ಕುಶಾಲನಗರ)

ಕವಯಿತ್ರಿ: ಸುನೀತ ಕುಶಾಲನಗರ

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

Continue Reading

Trending