ದಿನದ ಸುದ್ದಿ
ದಾವಣಗೆರೆ | ಡಿಪ್ಲೋಮಾ ಪ್ರವೇಶಕ್ಕೆ ಆಫ್‍ಲೈನ್ ಮುಖಾಂತರ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ : 2019-20 ನೇ ಸಾಲಿಗೆ ರಾಜ್ಯದ ಸರ್ಕಾರಿ ಮತ್ತು ಅನುದಾನಿತ ಪಾಲಿಟೆಕ್ನಿಕ್‍ಗಳಲ್ಲಿ ಖಾಲಿ ಉಳಿದಿರುವ ಸೀಟುಗಳಿಗೆ ಐ.ಟಿ.ಐ/ದ್ವಿತೀಯ ಪಿಯುಸಿ(ವಿಜ್ಞಾನ ಮತ್ತು ತಾಂತ್ರಿಕ ವಿಷಯಗಳಲ್ಲಿ) ಪಾಸಾದ ಅರ್ಹ ಅಭ್ಯರ್ಥಿಗಳಿಗೆ 03 ನೇ ಸೆಮಿಸ್ಟರ್ 02 ನೇ ವರ್ಷದ ಡಿಪ್ಲೋಮಾ ಪ್ರವೇಶಕ್ಕೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ/ತತ್ಸಮಾನ ಪರೀಕ್ಷೆಯಲ್ಲಿ 35% ಅಂಕಗಳನ್ನು ಪಡೆದಿರಬೇಕು. ಅರ್ಜಿಯನ್ನು www.dte.kar.nic.in ವೆಬ್‍ಸೈಟ್ ಮೂಲಕ ಪಡೆಯಬಹುದಾಗಿದೆ. ಅಭ್ಯರ್ಥಿಗಳು ನಿಗದಿತ ಅರ್ಜಿಯ ಜೊತೆಗೆ ನಿಗದಿಪಡಿಸಿದ ಶುಲ್ಕವನ್ನು ನಗದು ರೂಪದಲ್ಲಿ ಪಾವತಿ ಮಾಡಬೇಕು.
(ಜಿ.ಎಮ್, 3ಬಿ, 2ಬಿ, 2ಎ ಗೆ ರೂ.150/- ಮತ್ತು ಎಸ್.ಸಿ/ಎಸ್.ಟಿ/ಪ್ರ-1 ರೂ.50/-). ಅರ್ಜಿ ಸಲ್ಲಿಸಲು ಜು.30 ಕಡೆಯ ದಿನ. ಅರ್ಹ ಅಭ್ಯರ್ಥಿಗಳ ಮೆರಿಟ್ ಪ್ರಕಟಣೆಯನ್ನು ಜು.31 ರ ಬೆಳಗ್ಗೆ ಪ್ರಕಟಿಸಲಾಗುತ್ತದೆ ಹಾಗೂ ಆ ದಿನ ಮಧಾಹ್ನ 2.30 ಕ್ಕೆ ಆಫ್‍ಲೈನ್ ಕೌನ್ಸಲಿಂಗ್ ಮುಖಾಂತರ ಪ್ರವೇಶ ಪ್ರಕ್ರಿಯೆ ನಡೆಯಲಿದೆ.
ಆಭ್ಯರ್ಥಿಗಳು ಅರ್ಜಿ ಸಲ್ಲಿಸಿದ ಕಾಲೇಜಿನಲ್ಲಿಯೇ ಮೂಲ ದಾಖಲೆಗಳು/ಪ್ರವೇಶ ಶುಲ್ಕದೊಂದಿಗೆ ಸಂದರ್ಶನಕ್ಕೆ ಹಾಜರಾಗಿ ಸೀಟು ಆಯ್ಕೆ ಮಾಡಿಕೊಳ್ಳಬಹುದಾಗಿದೆ ಎಂದು ಡಿ.ಆರ್.ಆರ್. ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸದ್ದಾರೆ.

ದಿನದ ಸುದ್ದಿ
ದೇವದಾಸಿ ಪುನರ್‍ವಸತಿ ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ದೇವದಾಸಿ ಪುನರ್‍ವಸತಿ ಯೋಜನೆಯಡಿ ತಾತ್ಕಾಲಿಕವಾಗಿ ಖಾಲಿ ಇರುವ ಹುದ್ದೆಗೆ ನೇರ ತಾತ್ಕಾಲಿಕ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅಭ್ಯರ್ಥಿಗಳು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಇಲಾಖೆ, 14ನೇ ಮುಖ್ಯ ರಸ್ತೆ, ಕುವೆಂಪು ನಗರ, ಎಮ್.ಸಿ.ಸಿ ‘ಬಿ’ ಬ್ಲಾಕ್, ದಾವಣಗೆರೆ ಇಲ್ಲಿ ಅರ್ಜಿಗಳನ್ನು ಪಡೆದು ಫೆಬ್ರವರಿ 12 ರೊಳಗಾಗಿ ಕಚೇರಿ ಸಲ್ಲಿಸಬೇಕು.
ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ಯೋಜನಾಧಿಕಾರಿಗಳ ಹುದ್ದೆ ಸಂಖ್ಯೆ-1, ನಿವೃತ್ತ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳು, ಎಂಎಸ್‍ಡಬ್ಲ್ಯೂ, ಸಮಾಜಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ, ಮನಃಶಾಸ್ತ್ರದಲ್ಲಿ ಎಂ.ಎಸ್ಸಿ, ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
ಚನ್ನಗಿರಿ ತಾಲ್ಲೂಕು ಯೋಜನಾ ಅನುಷ್ಟಾನಾಧಿಕಾರಿಗಳು ಹುದ್ದೆ ಸಂಖ್ಯೆ-1, ಬಿಎಸ್‍ಡಬ್ಲ್ಯೂ, ಬಿಎ ಇನ್ ಸೋಶಿಯಲಾಜಿ, ಎಂಎಸ್‍ಸಿ ಇನ್ ಸೈಕೋಲಾಜಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು. ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ದಾಖಲಾಧಿಕಾರಿಗಳ ಹುದ್ದೆ ಸಂಖ್ಯೆ-1, ಬಿಕಾಂ ಪದವಿ ಅಥವಾ ತತ್ಸಮಾನ ಪದವಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಕನ್ನಡ ಮತ್ತು ಇಂಗ್ಲೀಷ್ ಟೈಪಿಂಗ್ ಜ್ಞಾನವನ್ನು ಹೊಂದಿರಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08192-222117 ಸಂಪರ್ಕಿಸಬಹುದೆಂದು ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಭರತ ಹುಣ್ಣಿಮೆ ಪ್ರಯುಕ್ತ 25 ಹೆಚ್ಚುವರಿ ವಿಶೇಷ ವಾಹನ
ಸುದ್ದಿದಿನ,ದಾವಣಗೆರೆ : ಜನವರಿ 31 ರಿಂದ ಫೆಬ್ರವರಿ 2 ರವರೆಗೆ ಹರಪನಹಳ್ಳಿ ತಾಲ್ಲೂಕು ಉಚ್ಚಂಗಿದುರ್ಗದಲ್ಲಿ ಜರುಗಲಿರುವ ಭಾರತ ಹುಣ್ಣಿಮೆಗಾಗಿ ರಾಜ್ಯ ರಸ್ತೆ ಸಾರಿಗೆ ನಿಗಮ, ದಾವಣಗೆರೆ ವಿಭಾಗದ ಘಟಕಗಳಿಂದ ರಾಜ್ಯದಾದ್ಯಂತ ಬರುವ ಭಕ್ತಾಧಿಗಳ ಅನುಕೂಲಕ್ಕಾಗಿ 25 ಹೆಚ್ಚುವರಿ ವಿಶೇಷ ವಾಹನ ಕಾರ್ಯಾಚರಣೆ ಮಾಡಲಾಗಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.

ದಿನದ ಸುದ್ದಿ
ಕಾಗದ ರಹಿತ ನೋಂದಣಿ ವ್ಯವಸ್ಥೆಯ ತರಬೇತಿ
ಸುದ್ದಿದಿನ,ದಾವಣಗೆರೆ:ಕಾಗದ ರಹಿತ ನೋಂದಣಿ ವ್ಯವಸ್ಥೆಯನ್ನು ಜಾರಿಗೊಳಿಸಿದ್ದು, ಜಿಲ್ಲಾ ನೋಂದಣಿ ಕಚೇರಿ ವ್ಯಾಪ್ತಿಗೆ ಬರುವ ದಸ್ತಾವೇಜು ಬರಹಗಾರರು, ವಕೀಲರು, ಕರ್ನಾಟಕ ಒನ್, ದಾವಣಗೆರೆ ಒನ್, ಗ್ರಾಮ ಒನ್ ಮತ್ತು ಬಾಪೂಜಿ ಸೇವಾ ಕೇಂದ್ರ ಸಿಬ್ಬಂದಿ ವರ್ಗದವರಿಗೆ ತರಬೇತಿ ಆಯೋಜಿಸಲಾಗಿದೆ.
ತರಬೇತಿಯು ಜ.30 ರಂದು ಹೊನ್ನಾಳಿ ಉಪ ನೋಂದಣಿ ಕಚೇರಿ ಆವರಣ, ಜ.31 ರಂದು ಚನ್ನಗಿರಿ ಉಪ ನೋಂದಣಿ ಕಚೇರಿ ಆವರಣ, ಫೆ.2 ರಂದು ಹರಿಹರ ಉಪ ನೋದಣಿ ಕಚೇರಿ ಆವರಣ, ಫೆ.3 ರಂದು ದಾವಣಗೆರೆ ಉಪ ನೋಂದಣಿ ಕಚೇರಿ, ಫೆ.4 ರಂದು ಜಗಳೂರು ಉಪ ನೋಂದಣಿ ಕಚೇರಿ ಆವರಣಗಳಲ್ಲಿ ಮಧ್ಯಾಹ್ನ 1 ರಿಂದ 2 ಗಂಟೆಯವರೆಗೆ ನಡೆಯಲಿದೆ ಎಂದು ಜಿಲ್ಲಾ ನೋಂದಣಾಧಿಕಾರಿ ತಿಳಿಸಿದ್ದಾರೆ.


