ದಿನದ ಸುದ್ದಿ
ಡಿಪ್ಲೊಮ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ : ಬೆಂಗಳೂರು ಹೆಚ್.ಎ.ಎಲ್‍ನಿಂದ ಮೂರು ವರ್ಷದ ಡಿಪ್ಲೊಮ (ಡಿಪ್ಲೊಮ ಏರೋನಾಟಿಕಲ್ ಎಂಜಿನಿಯರಿಂಗ್, ಮೆಕ್ಯಾನಿಕಲ್, ಇಲೆಕ್ಟ್ರಿಕಲ್ ಆ್ಯಂಡ್ ಎಲೆಕ್ಟ್ರಾನಿಕ್ಸ್, ಎಲೆಕ್ಟ್ರಾನಿಕ್ಸ್ ಆ್ಯಂಡ್ ಕಮ್ಯೂನಿಕೇಶನ್, ಸಿವಿಲ್, ಕಂಪ್ಯೂಟರ್ ಸೈನ್ಸ್ /ಇನ್‍ಫರ್‍ಮೇಶನ್ ಸೈನ್ಸ್,ಮೆಟಲರ್ಜಿ & ಕಮರ್ಶಿಯಲ್ ಪ್ರ್ಯಾಕ್ಟಿಸ್) ತೇರ್ಗಡೆ ಹೊಂದಿದ ಅಭ್ಯರ್ಥಿಗಳಿಂದ ಅಪ್ರೆಂಟಿಸ್ ತರಬೇತಿಗಾಗಿ ಅರ್ಜಿ ಆಹ್ವಾನಿಸಿದ್ದಾರೆ.
ಅರ್ಜಿ ನಮೂನೆಯನ್ನು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ದಾವಣಗೆರೆ ಇಲ್ಲಿ ಪಡೆಯಬಹುದಾಗಿದೆ. ಅರ್ಜಿ ಸಲ್ಲಿಸಲು ಆ.5 ಕಡೆಯ ದಿನವಾಗಿದೆ. ಭರ್ತಿ ಮಾಡಿದ ಅರ್ಜಿಯನ್ನು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಕೊಠಡಿ ಸಂಖ್ಯೆ:35, ಜಿಲ್ಲಾಡಳಿತ ಭವನ, 1ನೇ ಮಹಡಿ, ಬಿ-ಬ್ಲಾಕ್, ಪಿ.ಬಿ. ರಸ್ತೆ, ದಾವಣಗೆರೆ ಇಲ್ಲಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಜಿಲ್ಲಾ ಆಡಳಿತ ಭವನ, ದಾವಣಗೆರೆ ದೂ.ಸಂಖ್ಯೆ:08192-259446 ಗೆ ಸಂಪರ್ಕಿಸವಂತೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243