Connect with us

ದಿನದ ಸುದ್ದಿ

ಡಿಪ್ಲೊಮಾ ಇನ್ ಕೋ-ಆಪರೇಟಿವ್ ಮ್ಯಾನೆಜ್‍ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ: ಕರ್ನಾಟಕ ಇನ್‍ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ಸಂಸ್ಥೆಯು ಬೆಂಗಳೂರು, ಮೈಸೂರು, ಮಡಿಕೇರಿ, ಮೂಡಬಿದ್ರೆ, ಶಿವಮೊಗ್ಗ, ಧಾರವಾಡ, ಬೆಳಗಾವಿ ಹಾಗೂ ಕಲಬುರಗಿ ರಾಜ್ಯದಲ್ಲಿ ತರಬೇತಿ ಸಂಸ್ಥೆಗಳನ್ನು ನಡೆಸುತ್ತಿದ್ದು, ಈ ಸಂಸ್ಥೆಯ ಮೂಲಕ 6 ತಿಂಗಳು 180 ದಿನಗಳ ಅವಧಿಯ ಡಿಪ್ಲೊಮಾ ಇನ್-ಕೋ-ಆಪರೇಟಿವ್ ಮ್ಯಾನೆಜ್‍ಮೆಂಟ್ ತರಬೇತಿಯನ್ನು 2021 ರ ಜುಲೈಯಿಂದ ಪ್ರಾರಂಭಿಸುತ್ತಿದ್ದು, ತರಬೇತಿಯನ್ನು ಪಡೆಯಬಯಸುವ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ತರಬೇತಿ ಪಡೆಯುವ ಅಭ್ಯರ್ಥಿಗಳು ಸಹಕಾರ ಸಂಘ ಸಂಸ್ಥೆ, ಸಹಕಾರ ಇಲಾಖೆ, ಸಹಕಾರ ಲೆಕ್ಕಪರಿಶೋಧನಾ ಇಲಾಖೆಯಲ್ಲಿ ವೇತನ ಪಡೆಯುವ ನೌಕರರಾಗಿರಬೇಕು. ಖಾಸಗಿ ಅಭ್ಯರ್ಥಿಗಳಿಗೆ ನಿಯಮಿತ ಅವಕಾಶವನ್ನು ಕಲ್ಪಿಸಲಾಗಿದ್ದು, ವಯೋಮಿತಿ ಕನಿಷ್ಟ 16 ವರ್ಷ ಆಗಿರಬೇಕು.

ಸಹಕಾರ ಸಂಘ ಸಂಸ್ಥೆಗಳಲ್ಲಿ ಕನಿಷ್ಠ ಒಂದು ವರ್ಷವಾದರೂ ಸೇವೆ ಸಲ್ಲಿಸಿರಬೇಕು. ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ, ಸಹಕಾರ ಸಂಘಗಳಲ್ಲಿ ಒಂದು ವರ್ಷಕ್ಕಿಂತ ಮೇಲ್ಪಟ್ಟು ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಯೂ ಸಹ ತರಬೇತಿ ಪಡೆಯಲು ಅರ್ಹರಾಗಿರುತ್ತಾರೆ.

ಇಂತಹ ಅಭ್ಯರ್ಥಿಗಳು ಮಾತ್ರ ತರಬೇತಿಗೆ ಅರ್ಜಿ ಸಲ್ಲಿಸಬಹುದು. ತರಬೇತಿಯಲ್ಲಿ ಸಂಘ, ಸಂಸ್ಥೆಗಳಿಂದ ಬರುವ ಅಭ್ಯರ್ಥಿಗಳಿಗೆ ತಿಂಗಳಿಗೆ ರೂ.400 ಶಿಷ್ಯವೇತನ ನೀಡಲಾಗುವುದು.

ಪರಿಶಿಷ್ಟ ಜಾತಿ ಮತ್ತು ಪಂಗಡದ ನಿರುದ್ಯೋಗಿ ಅಭ್ಯರ್ಥಿಗಳಿಗೆ 6 ತಿಂಗಳ ವಿಶೇಷ ‘ಡಿಪ್ಲೊಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್’ ತರಬೇತಿ ನೀಡಲಾಗುವುದು. ಕನಿಷ್ಠ ವಿದ್ಯಾರ್ಹತೆ ಎಸ್‍ಎಸ್‍ಎಲ್‍ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ವಯೋಮಿತಿ 16 ವರ್ಷಗಳಾಗಿರಬೇಕು ಗರಿಷ್ಠ 30 ವರ್ಷಗಳು ಮೀರಿರಬಾರದು.

ಇದನ್ನೂ ಓದಿ | ವಿದ್ಯುತ್‍ಮಗ್ಗ ನೇಕಾರರಿಗೆ ಆರ್ಥಿಕ ನೆರವು : ಅರ್ಜಿ ಆಹ್ವಾನ 

ಈ ವರ್ಗಕ್ಕೆ ಸೇರಿದ ಅಭ್ಯರ್ಥಿಗಳ ಪಟ್ಟಿಯನ್ನು ಆಯಾ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿಯಿಂದ ತರಿಸಿಕೊಳ್ಳಲಾಗುವುದು ಮತ್ತು ಜಿಲ್ಲಾ ಸಹಕಾರ ಸಂಘಗಳ ಉಪನಿಬಂಧಕರವರು ಅಥವಾ ಮುಖ್ಯಕಾರ್ಯನಿರ್ವಹಣಾಧಿಕಾರಿಗಳು, ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಇವರ ಮೂಲಕ ಅರ್ಜಿಗಳನ್ನು ಜುಲೈ 2021ರ ಒಳಗಾಗಿ ಸಲ್ಲಿಸಬಹುದು. ತರಬೇತಿ ಪಡೆಯುವ ಅಭ್ಯರ್ಥಿಗಳಿಗೆ ತಿಂಗಳಿಗೆ ರೂ.500 ಶಿಷ್ಯವೇತನವನ್ನು ನೀಡಲಾಗುದು.

ಡಿಸಿಎಂ ತರಬೇತಿಯ ಅರ್ಜಿ ಫಾರಂ ಮತ್ತು ವಿವರಣಾ ಪುಸ್ತಕವನ್ನು ದಾವಣಗೆರೆ ಜಿಲ್ಲಾ ಸಹಕಾರ ಒಕ್ಕೂಟ ನಿಯಮಿತ ಸಂಸ್ಥೆಯಿಂದ ಪಡೆಯಬಹುದು. ಅರ್ಜಿ ಮತ್ತು ವಿವರಣಾ ಪುಸ್ತಕದ ಶುಲ್ಕ ರೂ.100 ಗಳನ್ನು ನಗದಾಗಿ ಪಾವತಿಸಿ ತರಬೇತಿ ಸಂಸ್ಥೆಯಲ್ಲಿ ಪಡೆಯಬಹುದು. ಅಂಚೆ ಮೂಲಕ ಪಡೆಯಲು ಇಚ್ಚಿಸುವರು ರೂ.125 ಗಳ ಡಿ.ಡಿ ಮೂಲಕ ಪಾವತಿಸಿ ಪಡೆಯಬಹುದಾಗಿದೆ.

ತರಬೇತಿಗೆ ಅರ್ಜಿಯನ್ನು ಜುಲೈ ತಿಂಗಳ ಒಳಗಾಗಿ ಅಭ್ಯರ್ಥಿಗಳು ಅರ್ಜಿಯನ್ನು ಭರ್ತಿ ಮಾಡಿ ಆಯಾ ತರಬೇತಿ ಸಂಸ್ಥೆಯ ಪ್ರಾಂಶುಪಾಲರಿಗೆ ಸಲ್ಲಿಸಬೇಕೆಂದು ದಾವಣಗೆರೆ ಜಿಲ್ಲಾ ಸಹಕಾರ ಯೂನಿಯನ್ ನಿಯಮಿತದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಂತೋಷ್‍ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ದಾವಣಗೆರೆ | ಇಂದು ಕರೆಂಟ್ ಇರಲ್ಲ

Published

on

ಸುದ್ದಿದಿನ,ದಾವಣಗೆರೆ:ಬೆಸ್ಕಾಂ ಜಗಳೂರು ಉಪವಿಭಾಗದ ವ್ಯಾಪ್ತಿಯಲ್ಲಿ ತುರ್ತು ಜಂಗಲ್ ಕಟಿಂಗ್ ಮತ್ತು ಫೀಡರ್‌ಗಳ ನಿರ್ವಹಣಾ ಕಾಮಗಾರಿಗಳನ್ನು ಹಮ್ಮಿಕೊಂಡಿರುವುದರಿಂದ ಮೇ 26 ರಂದು ಬೆಳಿಗ್ಗೆ 09-00 ರಿಂದ ಸಂಜೆ 05-00 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

ಕೊರಚರ ಹಟ್ಟಿ ಸರ್ಕಲ್, ಅಂಜನೆಯ ಬಡಾವಣೆ, ಶಕ್ತಿ ನಗರ, ಭಗೀರಥ ಲೇಔಟ್ ಸರ್ಕಲ್, ಕೊಟ್ಟುರೇಶ್ವರ ಬಡಾವಣೆ, , ಡಿ.ಸಿ.ಎಂ ಎಬಿಸಿ ಬ್ಲಾಕ್, ರಾಜೇಂದ್ರ ಬಡಾವಣೆ, ಭೂಮಿಕಾ ನಗರ, ಎಸ್.ಎಸ್ ಹೈ-ಟೆಕ್ ಮೇನ್ ರೋಡ್, ಶೇಶಾಂ ಲೇಔಟ್, ಹೊಂ ಟೈಲಾರ್ ರೋಡ್, ಬನಶಂಕರಿ ದೇವಸ್ಥಾನ, ಶ್ರೀರಾಮ್ ಬಡಾವಣೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳು, ಎಮ್.ಸಿ.ಸಿ. ಎ ಬ್ಲಾಕ್, ನಿಜಲಿಂಗಪ್ಪ ಲೇಔಟ್, ಅಶ್ವಿನಿ ಆರ್ಯುವೇಧಿಕ್ ಆಸ್ಪತ್ರೆ, ಜೊಲ್ಲಿಗುರು ಕಾಂಪೌಡ್, ಮುದ್ದೊಳ್ಳಿ ತೋಟ, ನರಹರಿಶೇಟ ಕಲ್ಯಾಣ ಮಂದಿರ, ಪೊಲೀಸ್ ಹಳೆಯ ವಸತಿ ಗೃಹಗಳು, ವಿನೋಬ ನಗರ 1ನೇ ಮತ್ತು 2ನೇಯ ಮುಖ್ಯ ರಸ್ತೆ ಚರ್ಚ್ ರಸ್ತೆ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ಹಾಗೂ ಬೆಳಗ್ಗೆ 10:00 ಗಂಟೆಯಿಂದ ಸಂಜೆ 5:00 ಗಂಟೆಯವರೆಗೆ ಬಿದರಕೆರೆ ವಿದ್ಯುತ್ ವಿತರಣಾ ಕೇಂದ್ರಕ್ಕೆ ಒಳಪಡುವ ಎಫ್- ಕಟ್ಟಿಗೆಹಳ್ಳಿ, ಎನ್‌ಜೆವೈ (NJY) ಜಗಳೂರು ವಿದ್ಯುತ್ ವಿತರಣಾ ಕೇಂದ್ರಕ್ಕೆ ಒಳಪಡುವ ಅರಿಶಿನಗುಂಡಿ ಹಾಗೂ ಜ್ಯೋತಿಪುರ ಎನ್‌ಜೆವೈ (NJY) 11ಕೆವಿ ಮಾರ್ಗಗಳು ಸೇರಿದಂತೆ ವಿವಿಧ ಗ್ರಾಮಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಅಲ್ಪಸಂಖ್ಯಾತರ ಇಲಾಖೆ ನಿರ್ದೇಶಕ ಜಿಲಾನಿ ಎಚ್. ಮೊಕಾಶಿ ವಿರುದ್ಧ ಲೋಕಾಗೆ ದೂರು

Published

on

ಸುದ್ದಿದಿನ,ದಾವಣಗೆರೆ:ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳಲ್ಲಿ ಇಲಾಖೆಯ ನಿಯಮಾನುಸಾರ ಬಯೋಟ್ರಿಕ್ ಹಾಜರಾತಿ ಅಳವಡಿಸಿಕೊಳ್ಳದೆ ಸರ್ಕಾರಕ್ಕೆ ವಂಚಿಸಿರುವ ಬಗ್ಗೆ ದೂರು ನೀಡಿ ನಿಗಧಿತ ಅವಧಿ ಮುಕ್ತಾಯವಾದರೂ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ತೋರಿದ ಅಲ್ಪಸಂಖ್ಯಾತರ ನಿರ್ದೇಶನಾಲಯದ ನಿರ್ದೇಶಕರಾದ ಜಿಲಾನಿ ಎಚ್. ಮೊಕಾಶಿ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಪ್ರಕರಣ ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಪ್ರತಿದಿನದ ಹಾಜರಾತಿಯನ್ನು ಬಯೋಮೆಟ್ರಿಕ್ ಹಾಜರಾತಿ ವ್ಯವಸ್ಥೆಯ ಮೂಲಕ ಕಡ್ಡಾಯವಾಗಿ ನಿರ್ವಹಿಸಲು ದಿನಾಂಕ: 12-07-2022 ರಂದು ನಿರ್ದೇಶಕರು, ಅಲ್ಪಸಂಖ್ಯಾತರ ನಿರ್ದೇಶನಾಲಯ, ಬೆಂಗಳೂರು ಇವರು ಸುತ್ತೋಲೆ ಹೊರಡಿಸಿದ್ದಾರೆ.

ಸದರಿ ಸುತ್ತೋಲೆಯಲ್ಲಿ ‘ಎಲ್ಲಾ ನಿಲಯಪಾಲಕರು/ ಮೇಲ್ವಿಚಾರಕರು ಬೆಲಗ್ಗೆ ತಿಂಡಿ ಸಮಯದಲ್ಲಿ ಹಾಗೂ ರಾತ್ರಿ ಊಟದ ಸಮಯದಲ್ಲಿ ವಸತಿ ಶಾಲೆ/ಕಾಲೇಜು ಹಾಗೂ ವಿದ್ಯಾರ್ಥಿ ನಿಲಯಗಳಲ್ಲಿ ಕಡ್ಡಾಯವಾಗಿ ಹಾಜರಿದ್ದು, ವಿದ್ಯಾರ್ಥಿಗಳ ಬಯೋಮೆಟ್ರಿಕ್ ಹಾಜರಾತಿಯನ್ನು ಪಡೆಯತಕ್ಕದ್ದು’ ಎಂಬುದಾಗಿ ಸೂಚಿಸಲಾಗಿದೆ.

‘ಬಯೋಮೆಟ್ರಿಕ್ ಹಾಜರಾತಿ ಪಡೆಯದೆ ಆಹಾರ ವೆಚ್ಚ ಭರಿಸಿದ್ದಲ್ಲಿ ಸಂಬAಧಪಟ್ಟ ನಿಲಯಪಾಲಕರು, ಅಲ್ಪಸಂಖ್ಯಾತರ ತಾಲ್ಲೂಕು ವಿಸ್ತರಣಾಧಿಕಾರಿಗಳು/ ಪ್ರಾಂಶುಪಾಲರು, ಜಿಲ್ಲಾ ಅಧಿಕಾರಿಗಳನ್ನು ನೇರವಾಗಿ ಹೊಣೆಗಾರರನ್ನಾಗಿ ಮಾಡಿ ಅವರ ಮೇಲೆ ಶಿಸ್ತಿನ ಕ್ರಮ ಜರುಗಿಸಲಾಗುವುದು’ ಎಂಬುದಾಗಿ ಕಟ್ಟುನಿಟ್ಟಿನ ಆದೇಶ ಹೊರಡಿಸಲಾಗಿರುತ್ತದೆ.

ಆದರೆ ದಾವಣಗೆರೆ ಜಿಲ್ಲೆಯಾದ್ಯಂತ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳಲ್ಲಿ ಬಯೋಮೆಟ್ರಿಕ್ ವ್ಯವಸ್ಥೆಯನ್ನು ಅಳವಡಿಸಿಕೊಳ್ಳದೆ ಸರ್ಕಾರದ ಆದೇಶವನ್ನು ಉಲ್ಲಂಘನೆ ಮಾಡಿರುವ ಮಾಹಿತಿ ಆಧಾರದಲ್ಲಿ ದಿನಾಂಕ: 28-11-2025 ರಂದು ಜಿಲ್ಲಾ ಅಧಿಕಾರಿಗಳು, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ದಾವಣಗೆರೆ ಇವರಿಗೆ ದಿನಾಂಕ: 28-11-2025 ರಂದು ದೂರು ನೀಡಿ ‘ದಾವಣಗೆರೆ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆ ಹಾಗೂ ವಸತಿ ನಿಲಯಗಳಲ್ಲಿ ಅಳವಡಿಸಿರುವ ಬಯೋಮೆಟ್ರಿಕ್ ಹಾಜರಾತಿ ನಿರ್ವಹಣೆಯನ್ನು ತನಿಖೆಗೆ ಒಳಪಡಿಸುವಂತೆ’ ಕೋರಲಾಗಿತ್ತು.

ಜಿಲ್ಲಾ ಅಧಿಕಾರಿಗಳು, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ದಾವಣಗೆರೆ ಇವರು ನೀಡಿದ ಹಿಂಬರಹದಲ್ಲಿ ‘ಈ ಸಂಬAಧ ಜಿಲ್ಲೆಯ ಕೆಲವು ವಸತಿ ನಿಲಯಗಳಲ್ಲಿ ಬಯೋಮೆಟ್ರಿಕ್ ಯಂತ್ರದಲ್ಲಿನ ತಾಂತ್ರಿಕ ದೋಷದಿಂದ ವಿದ್ಯಾರ್ಥಿಗಳ ಹಾಜರಾತಿಯನ್ನು ದಾಖಲಿಸಲು ಸಾಧ್ಯವಾಗಿರುವುದಿಲ್ಲವೆಂದು ಹಾಗೂ ಮತ್ತೆ ಕೆಲವು ವಸತಿ ಶಾಲೆ ಮತ್ತು ವಸತಿ ನಿಲಯಗಳಿಗೆ ಹೊಸ ಬಯೋಮೆಟ್ರಿಕ್ ಯಂತ್ರವನ್ನು ಪೂರೈಕೆ ಮಾಡುವಂತೆ ಪ್ರಾಂಶುಪಾಲರುಗಳು ಮತ್ತು ತಾಲ್ಲೂಕು ವಿಸ್ತರಣಾಧಿಕಾರಿಗಳು ಕೋರಿರುವ ಪತ್ರವನ್ನು ಲಗತ್ತಿಸಿ’ ನಿರ್ದೇಶಕರು, ಅಲ್ಪಸಂಖ್ಯಾತರ ನಿರ್ದೇಶಕರು, ಬೆಂಗಳೂರು ಇವರಿಗೆ ಪತ್ರ ಬರೆಯಲಾಗಿದೆ ಎಂಬುದಾಗಿ ತಿಳಿಸಿರುತ್ತಾರೆ.

ಆದ ಕಾರಣ ದಿನಾಂಕ: 17-02-2026 ರಂದು ನಿರ್ದೇಶಕರು, ಅಲ್ಪಸಂಖ್ಯಾತರ ನಿರ್ದೇಶನಾಲಯ, ಬೆಂಗಳೂರು ಇವರಿಗೆ ದೂರು ನೀಡಿ ದಾವಣಗೆರೆ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆ ಹಾಗೂ ವಸತಿ ನಿಲಯಗಳಲ್ಲಿ ಇಲಾಖೆಯ ನಿಯಮಾನುಸಾರ ಬಯೋಟ್ರಿಕ್ ಹಾಜರಾತಿ ಅಳವಡಿಸಿಕೊಳ್ಳದೆ ಸರ್ಕಾರಕ್ಕೆ ವಂಚಿಸಿರುವ ಬಗ್ಗೆ ಸೂಕ್ತ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಂಡು, ಕೈಗೊಂಡ ಕ್ರಮದ ವರದಿಯನ್ನು ಒಂದು ತಿಂಗಳ ಒಳಗಾಗಿ ನೀಡುವಂತೆ ಸಾರ್ವಜನಿಕ ಹಿತಾಸಕ್ತಿ ಅಡಿಯಲ್ಲಿ ಕೋರಲಾಗಿತ್ತು. ಆದರೆ ದೂರು ನೀಡಿ 3 ತಿಂಗಳು ಕಳೆದರೂ ಅಲ್ಪಸಂಖ್ಯಾತರ ನಿರ್ದೇಶನಾಲಯ ನಿರ್ದೇಶಕರಾದ ಜಿಲಾನಿ ಎಚ್. ಮೊಕಾಶಿ ಇವರು ಯಾವುದೇ ಕ್ರಮ ಕೈಗೊಳ್ಳದ ಕಾರಣ ಕರ್ತವ್ಯ ಲೋಪದ ಅಡಿಯಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಬಳ್ಳಾರಿ ಗಾಂಧಿನಗರ ಠಾಣೆಯ ವ್ಯಾಪ್ತಿ ಜೂಜಾಟ | ಠಾಣೆಯ ಅಧಿಕಾರಿಗಳು ಮೌನ ; ಕ್ರಮ ಕೈಗೊಳ್ತಾರಾ ಎಸ್ ಪಿ..?

Published

on

ಗಿರೀಶ್ ಬಳ್ಳಾರಿ

ಸುದ್ದಿದಿನ,ಬಳ್ಳಾರಿ:ನಗರದ ಗಾಂಧಿ ನಗರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ರಾತ್ರಿ 10 ಗಂಟೆಯ ನಂತರ ಕೊಂಡಯ್ಯ ಫ್ಯಾಕ್ಟರಿಯ ಹುಸೇನ್ ನಗರದ ಜಾಲಿ ಬೇಲಿಯ ಒಳಭಾಗದಲ್ಲಿ ಅಕ್ರಮವಾಗಿ ಇಸ್ಪೀಟ್ ಆಡುತ್ತಿದ್ದಾರೆ ಜೊತೆಗೆ ಆ ಪ್ರದೇಶಕ್ಕೆ ಹೋಗುವ ಈ ಜೂಜಾಟ ಆಡುವವರು ಬೈಕ್ ಗಳ ಶಬ್ದ ಮಾಡಿಕೊಂಡು, ಮನೆಗಳಲ್ಲಿ ಇರುವ ಮಹಿಳೆಯರಿಗೆ ತೊಂದರೆ ಉಂಟು ಮಾಡುತ್ತಿದ್ದಾರೆ ಎನ್ನುವ ಆರೋಪ ಸ್ಥಳೀಯ ನಿವಾಸಿಗಳಿಂದ ಕೇಳಿ ಬಂದಿದೆ.

ಇನ್ನು ಈ ಇಸ್ಪೀಟ್ ಜೂಜಾಟ ಆಡಿಸುತ್ತಿರುವ ವ್ಯಕ್ತಿಗಳು ದುಬ್ಬ ರಾಜು, ದಾದು ಮತ್ತು ಜಾನಿ, ರಘು ಎಂದು ತಿಳಿದು ಬಂದಿದೆ. ಇನ್ನು ಗಾಂಧಿನಗರ ಠಾಣೆಯ ಸಿಪಿಐ ಮತ್ತು ಪಿ.ಎಸ್.ಐ ಮತ್ತು ಕ್ರೈಂ ಸಿಬ್ಬಂದಿಗಳಿಗೆ ಮಾಹಿತಿ ಇದ್ದರು ಅವರಿಂದ ಹಣ ಪಡೆದುಕೊಂಡು ಈ ಜೂಜಾಟ ಆಡಿಸುತ್ತಿರುವ ಮಾಹಿತಿ ಸಹ ಲಭ್ಯವಾಗಿದೆ.

ಸಾಧಿಕ್ ಪೊಲೀಸರಿಗೆ ಸಾಥ್

ಇನ್ನು ಸಾಧಿಕ್ ಎನ್ನುವ ವ್ಯಕ್ತಿ ಗಾಂಧಿನಗರ ಠಾಣೆಯ ಅನೇಕ ಪೊಲೀಸರಿಗೆ ಪರಿಚಯ ಇದ್ದಾನೆ ಅಂತ ಹೇಳಿ ಜನ ಸಾಮಾನ್ಯರ ಮೇಲೆ ದೌರ್ಜನ್ಯ, ದಬ್ಬಾಳಿಕೆ ಮಾಡಿ ಅವರ ವಿರುದ್ಧ ಠಾಣೆಯಲ್ಲಿ ಕೇಸ್ ಹಾಕಿಸುತ್ತೇನೆ ಎಂದು ಹಣ ವಸೂಲಿ ಸಹ ಮಾಡಿದ್ದಾನೆ ಎನ್ನುವ ಆರೋಪ ಕೇಳಿ ಬಂದಿದೆ.

ಇನ್ನು ಬಳ್ಳಾರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸುಮನ್ನ ಪನ್ನಿಕರ್ ಪೊಲೀಸ್ ಠಾಣೆಯ ಸಿಪಿಐ ಮತ್ತು ಪಿಎಸ್ಐ ಮತ್ತು ಸಿಬ್ಬಂದಿಗಳ ವಿರುದ್ಧ ಕ್ರಮ ತೆಗೆದುಕೊಳ್ಳುತ್ತಾರೋ ಕಾದು ನೋಡಬೇಕಿದೆ. ಇನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅವರಿಗೆ ದೂರವಾಣಿ ಮೂಲಕ ಸಂಪರ್ಕಿಸಿದಾಗ ಅವರು ಕರೆಯನ್ನು ಸ್ವೀಕರಿಸಿಲಿಲ್ಲ.

“ಇನ್ನು ಗಾಂಧಿನಗರ ಪೊಲೀಸ್ ಠಾಣೆಯ ಪೊಲೀಸ್ ಸಬ್ ಇನ್ಸ್ಪೆಕ್ಟರ್ ರವಿಚಂದ್ರ ಅವರಿಗೆ ದೂರವಾಣಿ ಮೂಲಕ ಮಾತನಾಡಿಸಿದಾಗ ನಮ್ಮ ಗಮನಕ್ಕೆ ಇಲ್ಲ, ಗೋತ್ತಾದ್ರೆ ರೈಡ್ ಮಾಡುತ್ತೇವೆ ಎಂದರು.”

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending