ದಿನದ ಸುದ್ದಿ

ತಜ್ಞವೈದ್ಯರು-ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳ ಹುದ್ದೆಗೆ ನೇರ ಸಂದರ್ಶನ

Published

on

ಸುದ್ದಿದಿನ,ದಾವಣಗೆರೆ : ಜಿಲ್ಲೆಯ ಸಾರ್ವಜನಿಕ ಆಸ್ಪತ್ರೆ, ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಖಾಲಿ ಇರುವ ತಜ್ಞವೈದ್ಯರು/ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳ ಒಟ್ಟು 12 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಸರ್ಕಾರದ ಆದೇಶದಂತೆ ಸಾರ್ವಜನಿಕ ಆಸ್ಪತ್ರೆ ಹಾಗೂ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಖಾಲಿ ಇರುವ ತಜ್ಞವೈದ್ಯರ ಹುದ್ದೆಗೆ ಎದುರು ಎಂ.ಬಿ.ಬಿ.ಎಸ್ ವೈದ್ಯರನ್ನು ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಖಾಲಿ ಇರುವ ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳ ಹುದ್ದೆಗೆ ಎಂ.ಬಿ.ಬಿ.ಎಸ್ ವೈದ್ಯರನ್ನು ಗುತ್ತಿಗೆ ಆಧಾರದ ಮೇಲೆ ಒಂದು ವರ್ಷದ ಅವಧಿಗೆ ನೇಮಕಾತಿ ಮಾಡಲು ಸೆ.24 ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ, ಜಿಲ್ಲಾಧಿಕಾರಿಗಳ ಕಚೇರಿ ದಾವಣಗೆರೆ ಇಲ್ಲಿ ಅರ್ಹ ಅಭ್ಯರ್ಥಿಗಳಿಂದ ನೇರ ಸಂದರ್ಶನ ಕರೆಯಲಾಗಿದೆ.

ಅಭ್ಯರ್ಥಿಗಳು ಸೆ.23 ರಂದು ಬೆಳಿಗ್ಗೆ 10.30 ರಿಂದ ಮದ್ಯಾಹ್ನ 01.30 ರೊಳಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ, ದಾವಣಗೆರೆ ಇಲ್ಲಿ ಹಾಜರಾಗಿ ಸಂಬಂಧಪಟ್ಟ ವಿಭಾಗದಲ್ಲಿ ವಿದ್ಯಾರ್ಹತೆ ಮತ್ತು ಮೀಸಲಾತಿಯ ಅರ್ಹತಾ ಮೂಲ ದಾಖಲೆಗಳ ಪರಿಶೀಲನೆ ಮಾಡಿಸಿ, ಅರ್ಹತಾ ದಾಖಲೆಗಳ ಒಂದು ಸೆಟ್ ದೃಢೀಕೃತ ಜೆರಾಕ್ಸ್ ಪ್ರತಿಗಳನ್ನು ಸಲ್ಲಿಸಲು ಸೂಚಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ, ದಾವಣಗೆರೆ ಜಿಲ್ಲೆ,ಎಸ್.ಎಸ್.ಹೈಟೆಕ್ ಆಸ್ಪತ್ರೆ ಹತ್ತಿರ, ಶ್ರೀರಾಮನಗರ ರಸ್ತೆ, ಎನ್.ಸಿ.ಸಿ ಕ್ಯಾಂಪ್ ಪಕ್ಕ, ದಾವಣಗೆರೆ-577005
ದೂ.ಸಂ : 08192 237833 ನ್ನು ಸಂಪರ್ಕಿಸಬಹುದೆಂದು ಪ್ರಕಟಣೆ ತಿಳಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version