ದಿನದ ಸುದ್ದಿ

ರಾಜ್ಯದಲ್ಲಿರುವ ಆಹಾರ ಪಾರ್ಕ್‌ಗಳ ಸ್ಥಿತಿಗತಿ ಕುರಿತು ವರದಿ ನೀಡಲು ಅಧಿಕಾರಿಗಳಿಗೆ ಸೂಚನೆ : ಸಚಿವ ಬಿ.ಸಿ. ಪಾಟೀಲ್

Published

on

ಸುದ್ದಿದಿನ ಡೆಸ್ಕ್ : ರಾಜ್ಯದಲ್ಲಿ ಈಗಾಗಲೇ ಸ್ಥಾಪಿಸಲಾಗಿರುವ ಆಹಾರ ಪಾರ್ಕ್‌ಗಳನ್ನು ಸಮರ್ಪಕವಾಗಿ ಬಳಸಿಕೊಳ್ಳುವ ಉದ್ದೇಶದಿಂದ ಪಾರ್ಕ್‌ಗಳ ಪ್ರಸ್ತುತ ಪರಿಸ್ಥಿತಿ ಬಗ್ಗೆ ವರದಿಯ ಮಾಹಿತಿಯನ್ನು ನಬಾರ್ಡ್ ಸಂಸ್ಥೆಯ ಮೂಲಕ ಪಡೆದು ಸರ್ಕಾರಕ್ಕೆ ಸಲ್ಲಿಸಬೇಕು ಎಂದು ಕೃಷಿ ಸಚಿವ. ಬಿ.ಸಿ. ಪಾಟೀಲ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಕೃಷಿ ಸಚಿವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು. ವಿಜಯಪುರ ಜಿಲ್ಲೆಯ ಇಟ್ಟಂಗಿಹಾಳದಲ್ಲಿ ಸ್ಥಾಪಿಸಲಾಗುತ್ತಿರುವ ಆಹಾರ ಪಾರ್ಕ್‌ನಲ್ಲಿ ಜಿಲ್ಲೆಯಲ್ಲಿ ಬೆಳೆಯುವ ವಿವಿಧ ಬೆಳೆಗಳ ಮೌಲ್ಯವರ್ಧನೆ ಮತ್ತು ಸಂಸ್ಕರಣೆ ಕೈಗೊಳ್ಳುವುದಕ್ಕಾಗಿ ಕೈಗಾರಿಕೆಗಳನ್ನು ಸ್ಥಾಪಿಸಲು ಅಗತ್ಯ ನಿವೇಶನಗಳನ್ನು ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ ಮೂಲಕ ಉದ್ಯಮಿಗಳಿಗೆ ವಿತರಿಸಲಾಗುವುದು. ಅದರಿಂದ ರೈತರ ಬೆಳೆದ ಉತ್ಪನ್ನಗಳಿಗೆ ಹೆಚ್ಚಿನ ಲಾಭ ದೊರೆಯಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version