Connect with us

ದಿನದ ಸುದ್ದಿ

ಸಿಕ್ಕಾಬಟ್ಟೆ ಸಾಲ, ಸಾಲು ಸಾಲು ಚೆಕ್‌ಬೌನ್ಸ್‌ ಕೇಸ್‌ ; ನಿರ್ದೇಶಕ ಗುರುಪ್ರಸಾದ್ ಸಾವಿಗೆ ಕಾರಣವಾಯ್ತಾ..!?

Published

on

ಸುದ್ದಿದಿನಡೆಸ್ಕ್:ಸ್ಯಾಂಡಲ್‌ವುಡ್‌ನ ಖ್ಯಾತ ನಿರ್ದೇಶಕ ʻಮಠʼ ಗುರುಪ್ರಸಾದ್‌ ಆತ್ಮಹತ್ಯೆ ಮಾಡಿಕೊಂಡು ಸಾವನ್ನಪ್ಪಿದ್ದಾರೆ.

ಗುರುಪ್ರಸಾದ್‌ ಮೇಲೆ ಸಾಲು ಸಾಲು ಚೆಕ್‌ಬೌನ್ಸ್‌ ಕೇಸ್‌ಗಳಿದ್ದವು. ಸಿಕ್ಕ ಸಿಕ್ಕವರ ಬಳಿ ಸಾಲ ಮಾಡಿಕೊಂಡಿದ್ದರು. ಶ್ರೀನಿವಾಸ್‌ ಗೌಡ ಎಂಬುವರ ಜೊತೆ ಹಣದ ವ್ಯವಹಾರಕ್ಕೆ ಕಿರಿಕ್‌ ಕೂಡ ಆಗಿತ್ತು. ಗುರುಪ್ರಸಾದ್‌ಗೆ ಅಭಿಮಾನಿಯಾಗಿದ್ದ ಶ್ರೀನಿವಾಸ್‌ ಗೌಡ 25 ಲಕ್ಷ ಹಣ ನೀಡಿದ್ದರು. ಗುರುಪ್ರಸಾದ್‌ ಬರವಣಿಗೆ ಮೆಚ್ಚಿ ಜೊತೆಯಲ್ಲೇ ಇದ್ದರು ಶ್ರೀನಿವಾಸ್‌ ಗೌಡ.

ಹಣ ವಾಪಸ್‌ ಕೊಡಲಾಗದೇ ಕಿರಿಕ್‌ ಮಾಡಿಕೊಂಡಿದ್ದರು ನಿರ್ದೇಶಕ ಗುರುಪ್ರಸಾದ್‌ ಅವರು. ಈ ಬಗ್ಗೆ ಕೋರ್ಟ್‌ ಮೆಟ್ಟಿಲೇರಿದ್ದ, ಗುರುಪ್ರಸಾದ್‌ ವಿರುದ್ದ ಕಾನೂನು ಸಮರ ಸಾರಿದ್ದರು. ಅಕ್ಟೋಬರ್‌ 24ರಂದು ಇದ್ದ ಕೋರ್ಟ್‌ವಿಚಾರಣೆಗೂ ಹಾಜರಾಗಿರಲಿಲ್ಲ ಗುರುಪ್ರಸಾದ್‌. ಮೆಡಿಕಲ್‌ ರಿಪೋರ್ಟ್‌ ನೀಡಿ ವಿಚಾರಣೆ ಮುಂದೂಡಿಸಿಕೊಂಡಿದ್ದರು.

ನಿನ್ನೆ ಅಂದರೆ ನವೆಂಬರ್‌ 2ಕ್ಕೆ ಗುರುಪ್ರಸಾದ್‌ ಹುಟ್ಟುಹಬ್ಬ ಇತ್ತು. ಶುಭಾಶಯ ಕೋರಲು ಕರೆಮಾಡಿದವರಿಗೂ ನಾಟ್‌ ರೀಚಬಲ್‌ ಬಂದಿತ್ತು ಮೊಬೈಲ್‌.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ದಾವಣಗೆರೆ | ಏಪ್ರಿಲ್ 5 ಮತ್ತು 6 ರಂದು ಜಲಸಾಹಸ ಕ್ರೀಡೆ

Published

on

ಸುದ್ದಿದಿನ,ದಾವಣಗೆರೆ:ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ, ಜನರಲ್ ತಿಮ್ಮಯ್ಯ ರಾಷ್ಟ್ರೀಯ ಸಾಹಸ ಅಕಾಡೆಮಿ ಇವರುಗಳ ಸಂಯುಕ್ತಾಶ್ರಯದಲ್ಲಿ ಮಹಿಳಾ ದಿನಾಚರಣೆ ಪ್ರಯುಕ್ತ ಏಪ್ರಿಲ್ 5 ಮತ್ತು 6 ರಂದು ದಾವಣಗೆರೆ ಕೊಂಡಜ್ಜಿ ಕೆರೆಯಲ್ಲಿ ಜಲಸಾಹಸ ಕ್ರೀಡೆಯನ್ನು ಆಯೋಜಿಸಲಾಗಿದೆ.

ಜಲಸಾಹಸ ಕ್ರೀಡೆಯಲ್ಲಿ ಲೋಕಸಭಾ ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್ ಭಾಗವಹಿಸುವರು ಎಂದು ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಭವಿಷ್ಯಕ್ಕಾಗಿ ಹೂಡಿಕೆಯ ಜ್ಞಾನ ಅವಶ್ಯಕ

Published

on

ಸುದ್ದಿದಿನ,ದಾವಣಗೆರೆ:ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ದಾವಣಗೆರೆಯ ನಿರ್ಣಯ ಶಾಸ್ತ್ರ ವಿಭಾಗದ ವತಿಯಿಂದ ನಿರ್ಣಯ ಶಾಸ್ತ್ರ ವಿದ್ಯಾರ್ಥಿಗಳಿಗಾಗಿ ಒಂದು ದಿನದ ಹೂಡಿಕೆ ಕುರಿತ ಕಾರ್ಯಾಗಾರವನ್ನು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಹೂಡಿಕೆ ತಜ್ಞರಾದ ಎಂಜಲ್ ವನ್ನ ಆದಿತ್ಯ ಮತ್ತು ಅಶೋಕ್ ರಾಯಭಾಗಿ ಅವರು ವಿದ್ಯಾರ್ಥಿಗಳಿಗೆ ಹೂಡಿಕೆ ವಿಷಯದ ಬಗ್ಗೆ ವಿವರವಾಗಿ ಮಾಹಿತಿ ನೀಡಿದರು.

ಕಾರ್ಯಕ್ರಮದ ಆರಂಭದಲ್ಲಿ ಮುಖ್ಯಸ್ಥರಾದ ವೆಂಕಟೇಶ್ ಬಾಬು ಎಸ್. ಅವರು ವಿದ್ಯಾರ್ಥಿಗಳಿಗೆ ಹೂಡಿಕೆಯ ಮಹತ್ವ ಮತ್ತು ಅದರ ಪ್ರಾಯೋಗಿಕ ಅಂಶಗಳ ಕುರಿತು ವಿವರಿಸಿದರು. ಅವರು ಹೂಡಿಕೆ ಹೇಗೆ ವಿದ್ಯಾರ್ಥಿಗಳ ಭವಿಷ್ಯ ರೂಪಿಸಬಹುದು ಮತ್ತು ಹೇಗೆ ಸ್ಮಾರ್ಟ್ ಹೂಡಿಕೆಗೆ ಮೊದಲ ಹೆಜ್ಜೆ ಇಡಬೇಕು ಎಂಬುದರ ಬಗ್ಗೆ ಉದಾಹರಣೆಗಳ ಮೂಲಕ ವಿವರಿಸಿದರು.

ಎಂಜಲ್ ವನ್ನ ಆದಿತ್ಯ ಅವರು ಹೂಡಿಕೆಯ ವಿವಿಧ ಪ್ರಕಾರಗಳು, ಅದರ ಲಾಭ-ನಷ್ಟಗಳು ಮತ್ತು ಸರಿಯಾದ ಹೂಡಿಕೆ ತಂತ್ರಗಳ ಬಗ್ಗೆ ಮಾಹಿತಿ ನೀಡಿದರು. ವಿದ್ಯಾರ್ಥಿಗಳಿಗೆ ಅನುಕೂಲಕರವಾಗುವಂತೆ ಅವರು ನೈಜ ಜಗತ್ತಿನ ಉದಾಹರಣೆಗಳನ್ನು ನೀಡಿ, ಹೂಡಿಕೆಯಲ್ಲಿ ತಿಳಿವಳಿಕೆಯಿಂದ ನಿರ್ಧಾರ ಕೈಗೊಳ್ಳುವ ತಂತ್ರಗಳನ್ನು ವಿವರಿಸಿದರು.

ಅಶೋಕ್ ರಾಯಭಾಗಿ ಅವರು ಹೂಡಿಕೆ ಕ್ಷೇತ್ರದಲ್ಲಿ ಜನರು ಸಾಮಾನ್ಯವಾಗಿ ಮಾಡುವ ತಪ್ಪುಗಳು ಮತ್ತು ಅವುಗಳನ್ನು ತಪ್ಪಿಸುವ ವಿಧಾನಗಳ ಬಗ್ಗೆ ಮಾತನಾಡಿದರು. ಇಂದಿನ ಹೂಡಿಕೆ ಪ್ರವೃತ್ತಿಗಳು ಮತ್ತು ಮಾರುಕಟ್ಟೆಯ ಬದಲಾವಣೆಗಳ ಬಗ್ಗೆ ವಿವರಿಸುವ ಮೂಲಕ ಅವರು ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಜ್ಞಾನವನ್ನು ನೀಡಿದರು.

ಕಾರ್ಯಾಗಾರವು ವಿದ್ಯಾರ್ಥಿಗಳಿಗೆ ಭವಿಷ್ಯದ ಹಣಕಾಸು ನಿರ್ವಹಣೆಗೆ ಹಿತಕರ ಮಾಹಿತಿ ನೀಡಿದ್ದು, ಅವರು ಹೂಡಿಕೆ ಜಗತ್ತಿನಲ್ಲಿ ತಮ್ಮ ಮೊದಲ ಹೆಜ್ಜೆ ಇಡುವ ನೈಪುಣ್ಯವನ್ನು ಸಂಪಾದಿಸಲು ಪ್ರೇರೇಪಿಸಲಾಯಿತು. ಕಾರ್ಯಗಾರದಲ್ಲಿ ವಿಭಾಗದ ಎಲ್ಲಾ ಅಧ್ಯಾಪಕರೂ ಭಾಗವಹಿಸಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

Photo Gallery | ಚನ್ನಗಿರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ಜಾನಪದ ಉತ್ಸವ-2025

Published

on

Photo Gallery: ಚನ್ನಗಿರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ಜಾನಪದ ಉತ್ಸವ-2025'

ಚನ್ನಗಿರಿ:ಪಟ್ಟಣದ ಶ್ರೀ ಶಿವಲಿಂಗೇಶ್ವರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶನಿವಾರ (ಮಾರ್ಚ್-22) ‘ಜಾನಪದ ಉತ್ಸವ – 2025″ ಅದ್ದೂರಿಯಾಗಿ ನಡೆಯಿತು.

ಜಾನಪದ ತಜ್ಞ, ಕುವೆಂಪು ವಿಶ್ವವಿದ್ಯಾಲಯದ ವಿಶ್ರಾಂತ ಪ್ರಾಧ್ಯಾಪಕ ಡಾ.ಬಸವರಾಜ ನೆಲ್ಲಿಸರ, ಅವರು ಉತ್ಸವಕ್ಕೆ ಚಾಲನೆ ನೀಡಿದರು.

ಎತ್ತಿನ ಬಂಡಿಯಲ್ಲಿ ಅಧ್ಯಾಪಕರು, ಅತಿಥಿಗಳ ಮೆರವಣಿಗೆ ನಡೆಯಿತು. ಈ ಸಂದರ್ಭದಲ್ಲಿ ವಿದ್ಯಾರ್ಥಿನಿಯರು ನೀರು ತುಂಬಿದ ಪೂರ್ಣ ಕುಂಭಗಳನ್ನು ಹೊತ್ತು ಅತಿಥಿಗಳನ್ನು ಸ್ವಾಗತಿಸಿದರು.
 

ಅಂದು ಕಾಲೇಜಿನಲ್ಲಿ ಹಬ್ಬದ ವಾತಾವರಣ ಮನೆ ಮಾಡಿತ್ತು. ವರ್ಷದಲ್ಲಿ ಬರುವ ಯುಗಾದಿ, ಸಂಕ್ರಾಂತಿ, ಶಿವರಾತ್ರಿ, ಕ್ರಿಸ್ ಮಸ್, ರಂಜಾನ್, ದಸರಾ, ಭೂಮಿ ಹುಣ್ಣಿಮೆ, ರಾಶಿ ಪೂಜೆ ಸೇರಿದಂತೆ, ಬಳೆಗಾರ, ಕಣಿಹೇಳುವ, ಚೌಕಾಬಾರಾ, ಗುರುಕುಲ, ಆಯುರ್ವೇದ, ಗೋ ಪೂಜೆ ಎಲ್ಲವೂ ಜಾನಪದ ಸಂಸ್ಕೃತಿಯನ್ನು ಪುನರ್ ನಿರ್ಮಾಣಮಾಡಿದ್ದವು.

ಉತ್ಸವದಲ್ಲಿ ವಿದ್ಯಾರ್ಥಿಗಳು ಹಾಗೂ ಅಧ್ಯಾಪಕರು, ಪಂಚೆ, ಅಂಗಿ, ಕುರ್ತಾ, ಲಂಗಾದಾವಣಿ, ಸೀರೆ ಉಟ್ಟು ,ಬುರ್ಕಾ, ತೊಟ್ಟು ಸಡಗರ ಸಂಭ್ರಮದಿಂದ ಕುಣಿದಾಡಿದರು.

ರಾಮನವಮಿಯ ಬೆಲ್ಲದ ಪಾನಕ – ಕೋಸಂಬರಿ, ಕ್ರಿಸ್ಮಸ್ ನ ಕೇಕ್, ರಂಜಾನ್ ಹಬ್ಬದ ಇಪ್ತಾರ್ ಕೂಟದ ಫಲಾಹಾರ, ಗಣಪತಿ ಹಬ್ಬದ ಕಡುಬು, ಯುಗಾದಿಯ ಹೋಳಿಗೆ, ಭೂಮಿ‌ಪೂಜೆಯ ಪಾಯಸ ಹೀಗೆ ವಿವಿಧ ಬಗೆಯ ತಿಂಡಿತಿನಿಸುಗಳು 30 ಜಿಲ್ಲೆಗಳ ವಿಶೇಷ ಖಾಧ್ಯಗಳು ಹಬ್ಬದ ಸಡಗರವನ್ನು ಇಮ್ಮಡಿಗೊಳಿಸಿದವು.

 

ವಸ್ತು ಪ್ರದರ್ಶನ

 

ಸುಮಾರು ವರ್ಷಗಳ ಹಿಂದೆ ಬಳಕೆಯಲ್ಲಿದ್ದ ಬೀಸು ಕಲ್ಲು, ಒನಕೆ, ಸೌದೆ ಒಲೆ, ಕೊಡಲಿ, ಮಚ್ಚು, ಬರ್ಜಿ, ಚನ್ನೆಮಣೆ, ಕೀಲುಗೊಂಬೆ, ಪಾರಂಪರಿಕ ಔಷಧಿ, ಕುಡುಗೋಲು, ಬಂಡಿ,ನಾಣ್ಯಗಳು,ಸೇರು, ಒಳಕಲ್ಲು, ಶಹನಾಯಿ,ಮಜ್ಜಿಗೆಯ ಕಡೆಗೋಲು, ತಾಳ, ಹಾರ್ಮೊನಿಯಂ, ಗಂಡುಕೊಡಲಿ,ಶಾವಿಗೆ ಒತ್ತು,ಹುತ್ತದ ಮಾದರಿ,ವಿಭಿನ್ನ ಬಗೆಯ ರಂಗವಲ್ಲಿ, ವಿವಿಧ ಧಾನ್ಯದ ರಾಶಿ,ಕಳಸ, ದಸರಾ ಗೊಂಬೆಗಳು, ನವರಾತ್ರಿಯ ಮಾತೃದೇವತೆ, ಕುರಾನ್ ಪ್ರತಿ, ಜಾನಮಾಜ್,ಕ್ರಿಸ್ತನ ಜನನದ ಗೋದರಿ, ಶಿಲುಬೆಗೇರಿಸಲ್ಪಟ್ಟ ಕ್ರಿಸ್ತನ ಮಾದರಿ ಚಿತ್ರಗಳು ವಸ್ತುಪ್ರದರ್ಶನದಲ್ಲಿದ್ದವು.

 

ದೇಸೀ ಆಟಗಳು

 

ದೇಸೀ ಆಟಗಳಾದ ಹಗ್ಗ ಜಗ್ಗಾಟ, ಲಗೋರಿ, ಬುಗುರಿ, ಕುಂಟೋಬಿಲ್ಲೆ ಹಾಗೂ ಜನಪದ ನೃತ್ಯ-ಹಾಡು ಸ್ಪರ್ಧೆಗಳಲ್ಲಿ ವಿದ್ಯಾರ್ಥಿಗಳು ಸಂತಸದಿಂದ ಭಾಗವಹಿಸಿದರು.

ಉತ್ಸವದ ಅಧ್ಯಕ್ಷತೆಯನ್ನು ಪ್ರಾಂಶುಪಾಲ ಡಾ.ಬಿ.ಜಿ.ಅಮೃತೇಶ್ವರ ಅವರು ವಹಿಸಿಕೊಂಡಿದ್ದರು. ಹಾಗೂ ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಪಕ ಹಾಗೂ ಸಾಂಸ್ಕೃತಿಕ ವೇದಿಕೆ ಸಂಚಾಲಕರಾದ ಷ್ಮುಖಪ್ಪ ಕೆ.ಹೆಚ್, ಐಕ್ಯುಎಸಿ ಸಂಚಾಲಕ ಪ್ರೊ.ವಿಜಯ್ ಕುಮಾರ್, ಉತ್ಸವದ ಕ್ರೀಡೆಗಳ ಆಯೋಜಕ ಹಾಗೂ ದೈಹಿಕ ನಿರ್ದೇಶಕರಾದ ಕಲ್ಲೇಶಪ್ಪ ಎಸ್.ಜಿ ಹಾಗೂ ಕಾಲೇಜಿನ ಎಲ್ಲಾ ಅಧ್ಯಾಪಕರು ಹಾಗೂ ಬೋಧಕೇತರ ಸಿಬಂದಿಗಳು ಮತ್ತು ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರು ಭಾಗವಹಿಸಿದ್ದರು.

Janapada Utsava Channagiri Govt collage (24)
Continue Reading

Trending