ಸಿನಿ ಸುದ್ದಿ
ಮಜಾ ಟಾಕೀಸ್ ನಲ್ಲಿ ‘ದಿ ವಿಲನ್’ ಮೇಕರ್ ಪ್ರೇಮ್ ಮಸ್ತಿ..!
ಸುದ್ದಿದಿನ ಡೆಸ್ಕ್ : ತನ್ನ ಭಿನ್ನ ಶೈಲಿಯ ಸಿನೆಮಾ ಮೇಕಿಂಗ್ ಹಾಗೂ ಪಬ್ಲಿಸಿಟಿಯಲ್ಲಿ ಕಿಲಾಡಿತನ ತೋರುವ ಡೈರೆಕ್ಟರ್ ಪ್ರೇಮ್ ಅವರ ‘ದಿ ವಿಲನ್’ ಸಿನೆಮಾ ತೆರೆಗೆ ಅಪ್ಪಳಿಸಲು ಆರು ದಿನಗಳು ಮಾತ್ರ ಬಾಕಿ ಉಳಿದಿವೆ.
‘ದಿ ವಿಲನ್’ ಹಾಡುಗಳು ಮತ್ತು ಟೀಸರ್ ಗಳು ಶಿವಣ್ಣ ಹಾಗೂ ಕಿಚ್ಚನ ಅಭಿಮಾನಿಗಳಲ್ಲಿ ಕಿಡಿಹೊತ್ತಿಸಿ ಬಿಟ್ಟಿವೆ. ಈ ಮಧ್ಯೆ ಫ್ಯಾನ್ಸ್ ಗಳು ಟೀಸರ್ ಬಗ್ಗೆ ಕೌಂಟರ್ ಡೈಲಾಗ್ ಹೊಡ್ಕೊಂಡು ಮಾಜಾನು ತಗೊಳ್ತಿದಾರೆ.
#Thevillain thanks to Maja Talkies n team ….
Tickets Booking opened today for 18th release …Grab ua tickets now….thanks for ua love n support 🙏@ArjunjanyaAJ pic.twitter.com/8IIb62wC6F— PREM❣️S (@directorprems) October 11, 2018
ಅಂದಹಾಗೆ ಡೈರೆಕ್ಟರ್ ಪ್ರೇಮ್ ಹಾಗೂ ಸಂಗೀತ ಮಾಂತ್ರಿಕ ಅರ್ಜುನ್ ಜನ್ಯ ಸೃಜನ್ ಲೋಕೇಶ್ ಅವರ ಮಜಾಟಾಕೀಸ್ ನಲ್ಲಿ ಇದೇ ವಾರ ಕಾಣಿಸಿ ಕೊಳ್ಳಲಿದ್ದಾರೆ. ಪ್ರೇಮ್ ಟ್ವೀಟ್ ಕೂಡಾ ಮಾಡಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ
‘ಸಪ್ತ ಸಾಗರದಾಚೆ ಎಲ್ಲೋ – ಸೈಡ್ ಬಿ’ ಚಿತ್ರದ ಟಿಕೆಟ್ ಮೇಲೆ ಶೆ.20ರಷ್ಟು ಕಡಿತ

ಸುದ್ದಿದಿನ ಡೆಸ್ಕ್ : ರಕ್ಷಿತ್ ಶೆಟ್ಟಿ ಮತ್ತು ರುಕ್ಷಿಣಿ ವಸಂತ್ ಅಭಿನಯದ ‘ಸಪ್ತ ಸಾಗರದಾಚೆ ಎಲ್ಲೋ – ಸೈಡ್ ಬಿ’ ಚಿತ್ರವು ಕಳೆದ ಶುಕ್ರವಾರ ಬಿಡುಗಡೆಯಾಗಿ, ಯಶಸ್ವಿಯಾಗಿ ಪ್ರದರ್ಶನವಾಗುತ್ತಿದೆ.
ಈ ಮಧ್ಯೆ, ಇನ್ನಷ್ಟು ಹೆಚ್ಚು ಜನರನ್ನು ಚಿತ್ರಮಂದಿರಗಳಿಗೆ ಕರೆತರುವ ನಿಟ್ಟಿನಲ್ಲಿ ಚಿತ್ರತಂಡ ಇಂದಿನಿಂದ ಪ್ರತಿ ಟಿಕೆಟ್ ಶೇ. 20ರಷ್ಟು ರಿಯಾಯ್ತಿಯನ್ನು ಚಿತ್ರತಂಡ ಘೋಷಿಸಿದೆ. ಈ ಚಿತ್ರವನ್ನು ಹೇಮಂತ್ ರಾವ್ ನಿರ್ದೇಶಿಸಿದ್ದು, ಗೋಪಾಲಕೃಷ್ಣ ದೇಶಪಾಂಡೆ, ಚೈತ್ರಾ ಆಚಾರ್, ಅಚ್ಯುತ್ ಕುಮಾರ್, ರಮೇಶ್ ಅರವಿಂದ್ ಮುಂತಾದವರು ನಟಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
‘ಬ್ಯಾಡ್ ಮ್ಯಾನರ್ಸ್’ ಸಿನಿಮಾ ನೋಡಿದ ಮೊದಲ ಪ್ರೇಕ್ಷಕ ದರ್ಶನ್

ಸುದ್ದಿದಿನ ಡೆಸ್ಕ್ : ಸೂರಿ ನಿರ್ದೇಶನದಲ್ಲಿ ಅಭಿಷೇಕ್ ಅಂಬರೀಶ್ ಅಭಿನಯಿಸಿರುವ ‘ಬ್ಯಾಡ್ ಮ್ಯಾನರ್ಸ್’ ಚಿತ್ರವು ಇದೇ ನ.24ಕ್ಕೆ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.
ಈ ಮಧ್ಯೆ, ಇತ್ತೀಚೆಗೆ ಚಿತ್ರತಂಡ ಆಯೋಜಿಸಿದ್ದ ವಿಶೇಷ ಪ್ರದರ್ಶನದಲ್ಲಿ ದರ್ಶನ್ ಮತ್ತು ಸುಮಲತಾ ಅಂಬರೀಷ್ ಅವರು ಚಿತ್ರವನ್ನು ನೋಡಿದ್ದಾರೆ. ಚಿತ್ರದ ಬಗ್ಗೆ ಖುಷಿಯಿಂದ ಮಾತನಾಡಿರುವ ದರ್ಶನ್, ಅಭಿ ಬೆನ್ನಿಗೆ ‘ನಿಮ್ಮಪ್ರೀತಿಯ ದಾಸ’ ಎಂದು ಬರೆದು 5ಕ್ಕೆ 5 ಸ್ಟಾರ್ ಗಳನ್ನ ಕೊಟ್ಟಿದ್ದಾರೆ.
“ಈ ಸಿನಿಮಾದಲ್ಲಿ ನೀವು ರಿಯಲ್ ರೆಬೆಲ್ ಸ್ಟಾರ್‍ನ ನೋಡ್ತೀರಿ. ಹೆಮ್ಮೆಯಾಗ್ತಿದೆ ಎರಡನೇ ಸಿನಿಮಾದಲ್ಲಿ ಈ ಲೆವ್ವೆಲ್ಲಿಗೆ ಅಭಿ ಮಾಗಿರೋದು. ಸಿನಿಮಾ ಬೇರೆ ಲೆವ್ವಲ್ ಇದೆ. ದೊಡ್ಡ ಯಶಸ್ಸು ಇದಕ್ಕೆ ಖಂಡಿತ ಧಕ್ಕಲಿದೆ’ ಎಂದು ಬರೆಯುವ ಮೂಲಕ ದರ್ಶನ್ ಚಿತ್ರದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
10,000 ಅಡಿ ಉದ್ದದ ‘ಘೋಸ್ಟ್’ ಪೋಸ್ಟರ್ ಬಿಡುಗಡೆ

ಸುದ್ದಿದಿನ ಡೆಸ್ಕ್ : ಶಿವರಾಜಕುಮಾರ್ ಅಭಿನಯದ ‘ಘೋಸ್ಟ್’ ಚಿತ್ರವು ಈಗಾಗಲೇ ನವೆಂಬರ್ 17ರಂದು ಜೀ5ನಲ್ಲಿ ಬಿಡುಗಡೆಯಾಗಿದೆ.
ಈ ಚಿತ್ರದ ಪ್ರಮೋಷನ್ಗೆ ಬರೋಬ್ಬರಿ 10 ಸಾವಿರ ಚದರ ಅಡಿಯ ‘ಘೋಸ್ಟ್’ ಪೋಸ್ಟರನ್ನು ಜೀ5 ಬಿಡುಗಡೆ ಮಾಡಿದೆ. ಜಯನಗರದ ಎಂ.ಇ.ಎಸ್ ಗ್ರೌಂಡ್ ನಲ್ಲಿ ‘ಘೋಸ್ಟ್’ ಸಿನಿಮಾದ 10,000 ಅಡಿ ಪೋಸ್ಟರ್ ಅನಾವರಣ ಮಾಡಲಾಗಿದೆ. ಥಿಯೇಟರ್‌ಗಳಲ್ಲಿ ಬಿಡುಗಡೆಯಾಗುತ್ತಿರುವ ಸಿನಿಮಾಗೆ ಬ್ಯಾನರ್, ಪೋಸ್ಟರ್ ಹಾಕೋದು ಸಹಜ. ಆದರೆ, ಈ ಬಾರಿ ಒಟಿಟಿ ರಿಲೀಸ್‌ಗೆ ಪೋಸ್ಟರ್ ಹಾಕಿ ವಿಭಿನ್ನವಾಗಿ ಪ್ರಚಾರ ಮಾಡಿದೆ ಜೀ ಕನ್ನಡ.
ಸಂದೇಶ್ ಪ್ರೊಡಕ್ಷನ್ಸ್ ಬ್ಯಾನರ್‌ನಲ್ಲಿ ನಿರ್ಮಾಣವಾಗಿರುವ ‘ಘೋಸ್ಟ್’ ಚಿತ್ರವನ್ನು ಆರ್.ಜೆ. ಶ್ರೀನಿ ಬರೆದು, ನಿರ್ದೇಶಿಸಿದ್ದು, ಅರ್ಜುನ್ ಜನ್ಯಾ ಸಂಗೀತವಿದೆ. ಶಿವರಾಜಕುಮಾರ್ ಜೊತೆ ಮಲಯಾಳಂ ನಟ ಜಯರಾಮ್, ಹಿಂದಿ ನಟ ಅನುಪಮ್ ಖೇರ್, ಅರ್ಚನಾ ಜೋಯಿಸ್, ಸತ್ಯಪ್ರಕಾಶ್, ನಿರ್ದೇಶಕ ಎಂಜಿ ಶ್ರೀನಿವಾಸ್ ಹಾಗೂ ಇನ್ನಿತರರು ನಟಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ6 days ago
ಚನ್ನಗಿರಿ | ಅತಿಥಿ ಉಪನ್ಯಾಸಕರಿಂದ ಅನಿರ್ದಿಷ್ಟಾವಧಿ ಮುಷ್ಕರ ; ತಹಶೀಲ್ದಾರರಿಗೆ ಮನವಿ
-
ದಿನದ ಸುದ್ದಿ4 days ago
ಭಾರತೀಯರೆಲ್ಲರ ಪವಿತ್ರಗ್ರಂಥ ಭಾರತದ ಸಂವಿಧಾನ : ಡಾ.ಕೆ.ಎ.ಓಬಳೇಶ್
-
ದಿನದ ಸುದ್ದಿ3 days ago
ಮಹಿಳೆಗೆ ಮೀಸಲಾತಿ ಬೇಡ, ಸಮಾನ ಪ್ರಾತಿನಿಧ್ಯ ಕೊಡಿ : ಡಾ.ಜ್ಯೋತಿ ಟಿ.ಬಿ
-
ದಿನದ ಸುದ್ದಿ6 days ago
ಸರ್ಕಾರಕ್ಕೆ ಸೆಡ್ಡು ಹೊಡೆದ ದಾವಣಗೆರೆ ರೈತರು