ದಿನದ ಸುದ್ದಿ
ಶಿಷ್ಯವೇತನ | ಆನ್‍ಲೈನ್ ಅರ್ಜಿ ಅವಧಿ ವಿಸ್ತರಣೆ
ಸುದ್ದಿದಿನ,ದಾವಣಗೆರೆ : 2020-21ನೇ ಸಾಲಿಗೆ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಅಲೆಮಾರಿ/ಅರೆಅಲೆಮಾರಿ ವಿದ್ಯಾರ್ಥಿಗಳಿಂದ ಮೆಟ್ರಿಕ್ ನಂತರ ವಿದ್ಯಾರ್ಥಿವೇತನ, ಶುಲ್ಕವಿನಾಯಿತಿ, ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ ಮತ್ತು ನರ್ಸಿಂಗ್ ವಿದ್ಯಾರ್ಥಿಗಳಿಗೆ ಶಿಷ್ಯವೇತನ ಸೌಲಭ್ಯಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಏಪ್ರಿಲ್ 20 ರವರೆಗೆ ವಿಸ್ತರಿಸಲಾಗಿದೆ.
ಈ ಹಿಂದೆ ಅರ್ಜಿ ಅವಧಿಯನ್ನು ಮಾರ್ಚ್ 20 ರವರೆಗೆ ನಿಗದಿಗೊಳಿಸಲಾಗಿತ್ತು. ಅರ್ಜಿ ಸಲ್ಲಿಸುವ ಈ ಅವಧಿಯನ್ನು ವಿಸ್ತರಿಸುವಂತೆ ಪೊಷಕರು/ವಿದ್ಯಾರ್ಥಿಗಳು/ಶಿಕ್ಷಣ ಸಂಸ್ಥೆಗಳು ಮನವಿ ಸಲ್ಲಿಸಿದ ಹಿನ್ನೆಲೆಯಲ್ಲಿ ಅರ್ಜಿ ಸಲ್ಲಿಕೆ ಅವಧಿಯನ್ನು ಏಪ್ರಿಲ್ 20 ರವರೆಗೆ ವಿಸ್ತರಿಸಲಾಗಿದೆ.
ಇದನ್ನೂ ಓದಿ | ದಾವಣಗೆರೆ | ರಾಜ್ಯ ಮಹಿಳಾ ನಿಲಯದಲ್ಲಿ ವಿವಾಹ ಸಂಭ್ರಮ : ವಧು-ವರರನ್ನು ಹಾರೈಸಿದ ಡಿಸಿ, ಸಿಇಒ
ಆನ್‍ಲೈನ್ ಅರ್ಜಿಯನ್ನು
www.ssp.postmatric.karnataka.gov.in
ಮೂಲಕ ಸಲ್ಲಿಸಬೇಕಾಗಿದ್ದು ಕಾರ್ಯಕ್ರಮಗಳ ವಿವರ, ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳು ಹಾಗೂ ವಿದ್ಯಾರ್ಥಿವೇತನಕ್ಕೆ ಸಂಬಂಧಿಸಿದ ಸರ್ಕಾರಿ ಆದೇಶಗಳ ಬಗ್ಗೆ ಮಾಹಿತಿಗಾಗಿ www.bcwd.karnataka.gov.in
ವೆಬ್‍ಸೈಟ್ ಹಾಗೂ ಇಲಾಖಾ ಸಹಾಯವಾಣಿ ದೂರವಾಣಿ ಸಂಖ್ಯೆ 8050770005/8050770004 ಅಥವಾ ಇಮೇಲ್
bcwd.scholarship@karnataka.gov.in ನ್ನು ಸಂಪರ್ಕಿಸಬಹುದು ಜೊತೆಗೆ ರಾಜ್ಯ ವಿದ್ಯಾರ್ಥಿವೇತನ ತಂತ್ರಾಶಂದಯ ಸಮಾಯವಾಣಿ ಇಮೇಲ್ postmatrichelp@karnataka.gov.in ದೂರವಾಣಿ ಸಂಖ್ಯೆ 080-35254757 ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243