ದಿನದ ಸುದ್ದಿ
ದಿಶಾರವಿಗೆ ಜಾಮೀನು ಮಂಜೂರು
ಸುದ್ದಿದಿನ ನವದೆಹಲಿ : ರೈತರ ಪ್ರತಿಭಟನೆಗೆ ಸಂಬಂಧಿಸಿದ ಸೋಷಿಯಲ್ ಮೀಡಿಯಾದಲ್ಲಿ “ಟೂಲ್ ಕಿಟ್” ಹಂಚಿಕೊಳ್ಳುವಲ್ಲಿ ಭಾಗಿಯಾಗಿದ್ದಕ್ಕಾಗಿ ಬಂಧಿಸಲ್ಪಟ್ಟಿದ್ದ 21 ವರ್ಷದ ಪರಿದರ ಕಾರ್ಯಕರ್ತೆ ದಿಶಾ ರವಿ ಅವರಿಗೆ ದೆಹಲಿ ನ್ಯಾಯಾಲಯ ಮಂಗಳವಾರ ಜಾಮೀನು ಮಂಜೂರು ಮಾಡಿದೆ.
ದಿಶಾ ರವಿ ಅವರಿಗೆ ಒಂದು ಲಕ್ಷ ರೂ.ಗಳ ವೈಯಕ್ತಿಕ ಬಾಂಡ್ ಮೇಲೆ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಧರ್ಮೇಂದರ್ ರಾಣಾ ಅವರು ಜಾಮೀನು ಮಂಜೂರು ಮಾಡಿದ್ದಾರೆ. ದಿಶಾ ರವಿಯನ್ನು ದೆಹಲಿ ಪೊಲೀಸರ ಸೈಬರ್ ಸೆಲ್ ತಂಡವು ಬೆಂಗಳೂರಿನಿಂದ ಬಂಧಿಸಿ ದೆಹಲಿಗೆ ಕರೆತಂದಿತು.
ಸುದ್ದಿದಿನ.ಕಾಂ|ವಾಟ್ಸಾಪ್|9980346243