ದಿನದ ಸುದ್ದಿ
ಸುಸೂತ್ರ ಮತದಾನಕ್ಕೆ ಜಿಲ್ಲಾಡಳಿತದ ಸಕಲ ಸಿದ್ಧತೆ
ಸುದ್ದಿದಿನ,ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಏಪ್ರಿಲ್ 9 ರಂದು ನಡೆಯಲಿರುವ ಮತದಾನಕ್ಕೆ ಸಂಬಂಧಿಸಿದಂತೆ ಜಿಲ್ಲಾಡಳಿತ ಮತ್ತು ಚುನಾವಣಾ ಆಯೋಗವು ಎಲ್ಲಾ ರೀತಿಯ ಸಿದ್ಧತೆಗಳನ್ನು ಪೂರ್ಣಗೊಳಿಸಿದೆ ಎಂದು ಚುನಾವಣಾಧಿಕಾರಿ ಸಂತೋಷ್ ಕುಮಾರ್ ತಿಳಿಸಿದರು.
ಅವರು ಇಂದು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣಾ ಸಂಬಂಧ ಮಹಾನಗರ ಪಾಲಿಕೆ ಕಚೇರಿಯ ಚುನಾವಣಾಧಿಕಾರಿಗಳ ಕಚೇರಿಯಲ್ಲಿ ಏರ್ಪಡಿಸಿದ್ದ ಪತ್ರಿಕಾಗೋಷಿಯಲ್ಲಿ ಮಾಧ್ಯಮದವರನ್ನು ಕುರಿತು ಮಾತನಾಡಿದರು.
ನಂ-107 ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ 1,13,399 ಪುರುಷರು , 1,17,690 ಮಹಿಳೆಯರು ಹಾಗೂ 43 ಇತರರು ಒಟ್ಟು 2,31,072 ಸಾಮಾನ್ಯ ಮತದಾರಿದ್ದಾರೆ, ಇವರಲ್ಲಿ 1,494-ಪುರುಷರು, 1,376-ಮಹಿಳೆಯರು ಒಟ್ಟು 2,870 ಯುವ ಮತದಾರರು, 1,375 ಪುರುಷರು , 1,137-ಮಹಿಳೆಯರು ಒಟ್ಟು 2,512 ವಿಕಲಚೇತನ (PWD) ಮತದಾರರು , 891 ಪುರುಷರು 1,083-ಮಹಿಳೆಯರು ಒಟ್ಟು 1974 ಮತದಾರರು 85+ ವರ್ಷ ಮೇಲ್ಪಟ್ಟವರು , 8 ಪುರುಷರು , 20-ಮಹಿಳೆಯರು ಒಟ್ಟು 28 ಮತದಾರರು 100+ ವರ್ಷ ಮೇಲ್ಪಟ್ಟವರು ಮತ್ತು 34-ಪುರುಷರು , 1–ಮಹಿಳೆಯರು ಒಟ್ಟು 35 ಸೇವಾ ಮತದಾರರು ಇದ್ದಾರೆ. ಎಲ್ಲರಿಗೂ ಮತದಾನದ ಹಕ್ಕನ್ನು ಚಲಾಯಿಸಲು ಅನುಕೂಲ ಮಾಡಿಕೊಡಲಾಗಿದೆ ಎಂದರು.
ಕ್ಷೇತ್ರದಲ್ಲಿ ಒಟ್ಟು 284 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಇದರಲ್ಲಿ ನಗರ ವ್ಯಾಪ್ತಿಯಲ್ಲಿ 234 ಮತ್ತು ಗ್ರಾಮೀಣ ವ್ಯಾಪ್ತಿಯಲ್ಲಿ 50 ಮತಗಟ್ಟೆಗಳು ಸೇರಿವೆ. ಪ್ರತಿಯೊಂದು ಮತಗಟ್ಟೆಯಲ್ಲಿ ಕಾಯ್ದಿರಿಸಿದ ಕೊಠಡಿ, ಕುಡಿಯುವ ನೀರು, ರ‍್ಯಾಂಪ್ ವ್ಯವಸ್ಥೆ, ಶೌಚಾಲಯ, ನೆರಳು ಮತ್ತು ಕ್ಯೂ ಮ್ಯಾನೇಜ್‌ಮೆಂಟ್ ಫಿಡಿಂಗ್ ಕೊಠಡಿ ಸೇರಿದಂತೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗಿದೆ 229 ಮಂದಿ ಹಿರಿಯ ನಾಗರಿಕರು ಮತ್ತು ವಿಕಲಚೇತನರು ಅಂಚೆ ಪತ್ರದ ಮೂಲಕ ಮನೆಯಿಂದಲೇ ಮತದಾನ ಮಾಡುವ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದಾರೆ ಎಂದು ತಿಳಿಸಿದರು.
ಪಾರದರ್ಶಕ ಮತದಾನಕ್ಕೆ ತಂತ್ರಜ್ಞಾನದ ಬಳಕೆ
ಚುನಾವಣಾ ಪ್ರಕ್ರಿಯೆಯು ಪಾರದರ್ಶಕವಾಗಿ ನಡೆಯಲು 284 ಮತಗಟ್ಟೆಗಳಲ್ಲೂ ವೆಬ್‌ಕಾಸ್ಟಿಂಗ್ ವ್ಯವಸ್ಥೆ ಮಾಡಲಾಗಿದ್ದು, ಮತದಾನದ ದಿನದಂದು ನೇರ ಪ್ರಸಾರ ಇರಲಿದೆ. ಸ್ಟ್ರಾಂಗ್ ರೂಮ್‌ಗಳಲ್ಲಿ ಇವಿಎಂ, ಕಂಟ್ರೋಲ್ ಯೂನಿಟ್ ಮತ್ತು ವಿವಿಪ್ಯಾಟ್ ಯಂತ್ರಗಳನ್ನು ಕಮಿಷನಿಂಗ್ ಮಾಡಿ ಸಜ್ಜುಗೊಳಿಸಲಾಗಿದೆ. ತಾಂತ್ರಿಕ ತೊಂದರೆ ಎದುರಾದರೆ ತಕ್ಷಣ ಬದಲಿಸಲು ‘ರಿಸರ್ವ್ ಯಂತ್ರಗಳನ್ನು’ ಸೆಕ್ಟರ್ ಅಧಿಕಾರಿಗಳ ಬಳಿ ಇರಿಸಲಾಗಿದೆ ಎಂದರು.
ಬಿಗಿ ಪೊಲೀಸ್ ಬಂದೋಬಸ್ತ್ ಮತ್ತು ಕಣ್ಗಾವಲು
ಚುನಾವಣಾ ಅಕ್ರಮಗಳನ್ನು ತಡೆಗಟ್ಟಲು ಮತ್ತು ಕಾನೂನು ಸುವ್ಯವಸ್ಥೆ ಕಾಪಾಡಲು ವ್ಯಾಪಕ ಭದ್ರತೆ ನಿಯೋಜಿಸಲಾಗಿದೆ. ಸುಮಾರು 1,000ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದ್ದು, ಇದರಲ್ಲಿ ಸಿಎಪಿಎಫ್ (CAPF), ಎಎಸ್ಐ, ಎಚ್‌ಸಿ ಮತ್ತು ಪಿಸಿ ಸಿಬ್ಬಂದಿಗಳು ಸೇರಿದ್ದಾರೆ.
ಸೂಕ್ಷ್ಮ ಮತಗಟ್ಟೆಗಳು: 76 ಮತಗಟ್ಟೆಗಳನ್ನು ‘ಸೂಕ್ಷ್ಮ’ (Critical) ಎಂದು ಗುರುತಿಸಲಾಗಿದ್ದು, ಅಲ್ಲಿ ಹೆಚ್ಚುವರಿ ಕೇಂದ್ರ ಸಶಸ್ತ್ರ ಪಡೆಗಳನ್ನು ನಿಯೋಜಿಸಲಾಗಿದೆ.
ಮುಂದಿನ 48 ಗಂಟೆಗಳ ಕಾಲ ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ನೋಡಿಕೊಳ್ಳಲು ಫ್ಲೈಯಿಂಗ್ ಸ್ಕ್ವಾಡ್ (SST), ಅಕೌಂಟಿಂಗ್ ಟೀಮ್ ಮತ್ತು ಸೆಕ್ಟರ್ ಅಧಿಕಾರಿಗಳು ಹಗಲಿರುಳು ಕಾರ್ಯನಿರ್ವಹಿಸಲಿದ್ದಾರೆ.
ಇವಿಎಂ ವಿವರ: BU: 568, CU: 284, VVPAT: 284. ಮೀಸಲು (Reserve): BU: 169, CU: 70, VVPAT: 100.
ಸಾರಿಗೆ ಮತ್ತು ವಿತರಣಾ ಕೇಂದ್ರ
ಮತದಾನದ ಸಾಮಗ್ರಿಗಳನ್ನು ವಿತರಿಸಲು ಮತ್ತು ಸ್ವೀಕರಿಸಲು ಡಿ.ಆರ್.ಆರ್ (DRR) ಸಂಸ್ಥೆಯ ಶಾಲೆಯನ್ನು ಮಸ್ಟರಿಂಗ್ ಮತ್ತು ಡಿ-ಮಸ್ಟರಿಂಗ್ ಕೇಂದ್ರವನ್ನಾಗಿ ಮಾಡಲಾಗಿದೆ. ಮತದಾನದ ನಂತರ ಇವಿಎಂಗಳನ್ನು ಇದೇ ಕೇಂದ್ರದ ಸ್ಟ್ರಾಂಗ್ ರೂಮ್‌ನಲ್ಲಿ ಇರಿಸಲಾಗುವುದು. ಚುನಾವಣಾ ಸಿಬ್ಬಂದಿ ಮತ್ತು ಸಾಮಗ್ರಿಗಳ ಸಾಗಾಟಕ್ಕಾಗಿ 28 ಕೆಎಸ್ಆರ್‌ಟಿಸಿ ಬಸ್‌ಗಳು, 39 ಮಿನಿ ಬಸ್‌ಗಳು ಹಾಗೂ 5 ಜೀಪ್‌ಗಳನ್ನು ಬಳಸಿಕೊಳ್ಳಲಾಗುತ್ತಿದೆ ಎಂದರು.
ಮೇ 4ರಂದು ಡಿ.ಆರ್.ಆರ್ ಶಾಲೆಯಲ್ಲಿಯೇ ಮತ ಎಣಿಕೆ ಕಾರ್ಯ ನಡೆಯಲಿದ್ದು, ಸಾರ್ವಜನಿಕರು ಶಾಂತಿಯುತವಾಗಿ ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವಂತೆ ಜಿಲ್ಲಾಡಳಿತ ಮನವಿ ಮಾಡುತ್ತದೆ ಎಂದರು.
ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆ: ಪೊಲೀಸರಿಂದ ಬಿಗಿ ಕ್ರಮ
ದಾವಣಗೆರೆ ದಕ್ಷಿಣ ಕ್ಷೇತ್ರದ ಉಪ ಚುನಾವಣೆ ಮುಕ್ತ, ನ್ಯಾಯಸಮ್ಮತ ಮತ್ತು ಶಾಂತಿಯುತವಾಗಿ ನಡೆಸಲು ಪೊಲೀಸ್ ಇಲಾಖೆ ಸಂಪೂರ್ಣ ಸಜ್ಜಾಗಿದೆ.
ಬಹಿರಂಗ ಪ್ರಚಾರಕ್ಕೆ ತೆರೆ: ಹೊರಗಿನವರಿಗೆ ನಿರ್ಬಂಧ
ಇಂದು ಸಂಜೆ 5:30ಕ್ಕೆ ಬಹಿರಂಗ ಪ್ರಚಾರ ಅಂತ್ಯಗೊಳ್ಳಲಿದ್ದು, ಪ್ರಚಾರಕ್ಕಾಗಿ ಬಂದಿರುವ ಹೊರಗಿನ ವ್ಯಕ್ತಿಗಳು ತಕ್ಷಣವೇ ಕ್ಷೇತ್ರವನ್ನು ತೊರೆಯಬೇಕು. ಇದಕ್ಕಾಗಿ ಪೊಲೀಸರು ಹೋಟೆಲ್‌ಗಳು, ರೆಸಾರ್ಟ್‌ಗಳು, ಕಲ್ಯಾಣ ಮಂಟಪಗಳು ಮತ್ತು ಲಾಡ್ಜ್‌ಗಳಲ್ಲಿ ತಪಾಸಣೆ ನಡೆಸಲಿದ್ದಾರೆ, ಯಾವುದೇ ರಾಜಕೀಯ ಪಕ್ಷ ಅಥವಾ ಧಾರ್ಮಿಕ ಸಂಸ್ಥೆಗಳು ಮುಂದಿನ 48 ಗಂಟೆಗಳ ಕಾಲ ಮೆರವಣಿಗೆ ಅಥವಾ ಪ್ರತಿಭಟನೆ ನಡೆಸುವಂತಿಲ್ಲ.
ನೈತಿಕ ಸಂಹಿತೆ ಉಲ್ಲಂಘನೆ: ಕಟ್ಟುನಿಟ್ಟಿನ ನಿಗಾ
ಶಸ್ತ್ರಾಸ್ತ್ರ ನಿಷೇಧ: ಮಾರಕಾಸ್ತ್ರಗಳು, ಕತ್ತಿ, ಈಟಿ ಅಥವಾ ದೈಹಿಕ ಹಿಂಸೆಗೆ ಪ್ರಚೋದಿಸುವ ಯಾವುದೇ ವಸ್ತುಗಳನ್ನು ಕೊಂಡೊಯ್ಯುವುದನ್ನು ನಿಷೇಧಿಸಲಾಗಿದೆ.
ಚೆಕ್ ಪೋಸ್ಟ್ ತಪಾಸಣೆ: ನಗರದ ವಿವಿಧ ಚೆಕ್ ಪೋಸ್ಟ್‌ಗಳಲ್ಲಿ ತಪಾಸಣೆ ಚುರುಕುಗೊಳಿಸಲಾಗಿದ್ದು, ಈಗಾಗಲೇ 15.37 ಲಕ್ಷ ರೂಪಾಯಿ ನಗದು ಮತ್ತು 233.49 ಲೀಟರ್ ಅಂದರೆ ರೂ. 133849/- ಗಳಷ್ಟು ಮದ್ಯವನ್ನು ವಶಪಡಿಸಿಕೊಳ್ಳಲಾಗಿದೆ ಎಂದರು.
ತಂಡಗಳ ನಿಯೋಜನೆ: ಮತದಾರರಿಗೆ ಆಮಿಷ ಒಡ್ಡಲು ಕುಕ್ಕರ್, ಸೀರೆ ಮುಂತಾದ ವಸ್ತುಗಳನ್ನು ಹಂಚುತ್ತಿರುವ ಬಗ್ಗೆ ದೂರುಗಳು ಬರುತ್ತಿದ್ದು, ಫ್ಲೈಯಿಂಗ್ ಸ್ಕ್ವಾಡ್‌ಗಳು ತಕ್ಷಣವೇ ಕ್ರಮ ಕೈಗೊಳ್ಳುತ್ತಿವೆ. ಹಲವೆಡೆ ಈಗಾಗಲೇ ಎಫ್‌ಐಆರ್ ದಾಖಲಿಸಲಾಗಿದೆ ಎಂದರು.
ಸೋಷಿಯಲ್ ಮೀಡಿಯಾ ಮೇಲೆ ಹದ್ದಿನ ಕಣ್ಣು
ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಐಡಿ ಸೃಷ್ಟಿಸಿ ಅಭ್ಯರ್ಥಿಗಳ ಪರ ಅಥವಾ ವಿರುದ್ಧ ಅಪಪ್ರಚಾರ ನಡೆಸುವವರ ಮೇಲೆ ಸೈಬರ್ ಪೊಲೀಸ್ ತಂಡ ನಿಗಾ ಇರಿಸಿದೆ. ಎಂ.ಸಿ.ಸಿ (ಮಾದರಿ ನೀತಿ ಸಂಹಿತೆ) ಉಲ್ಲಂಘಿಸುವ ಪೋಸ್ಟ್‌ಗಳನ್ನು ಹಾಕುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಲಾಗಿದೆ ಎಂದರು.
ಮತದಾನದ ಸಮಯ: ಬೆಳಿಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಮತದಾನ ನಡೆಯಲಿದೆ. ಟೋಕನ್ ವ್ಯವಸ್ಥೆ: ಸಂಜೆ 6 ಗಂಟೆಯ ಒಳಗೆ ಮತಗಟ್ಟೆಗೆ ಬಂದು ಸಾಲಿನಲ್ಲಿ ನಿಂತಿರುವ ಮತದಾರರಿಗೆ ಟೋಕನ್ ನೀಡಲಾಗುವುದು. ಟೋಕನ್ ಪಡೆದ ಪ್ರತಿಯೊಬ್ಬರಿಗೂ ಮತದಾನಕ್ಕೆ ಅವಕಾಶವಿರುತ್ತದೆ.
ಮಾಕ್ ಪೋಲ್: ಮತದಾನದ ದಿನ ಬೆಳಿಗ್ಗೆ 5:30 ರಿಂದ 7 ಗಂಟೆಯವರಿಗೆ ಅಭ್ಯರ್ಥಿಗಳ ಏಜೆಂಟರ ಸಮ್ಮುಖದಲ್ಲಿ ‘ಮಾಕ್ ಪೋಲ್’ ನಡೆಯಲಿದೆ ಎಂದರು.ಪತ್ರಿಕಾಗೋಷ್ಠಿಯಲ್ಲಿ ಚುನಾವಣಾ ಸಿಬ್ಬಂದಿಗಳು ಹಾಜರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಗೃಹ ಜ್ಯೋತಿ ಯೋಜನೆಗೆ 3 ವರ್ಷಗಳ ಸಂಭ್ರಮ – 1.65 ಕೋಟಿ ಕುಟುಂಬಗಳ ಬದುಕಿಗೆ ಬೆಳಕು!
ಸುದ್ದಿದಿನ, ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹ ಜ್ಯೋತಿ ಯೋಜನೆ ತನ್ನ 3 ವರ್ಷಗಳ ಸಾರ್ಥಕ ಪಯಣವನ್ನು ಪೂರ್ಣಗೊಳಿಸಿದೆ. `ಕುಟುಂಬಗಳ ಆರ್ಥಿಕ ಸಬಲೀಕರಣಕ್ಕೆ ಸಹಕಾರ’ ಎಂಬ ಧ್ಯೇಯದೊಂದಿಗೆ ಆರಂಭವಾದ ಈ ಯೋಜನೆ ಇಂದು ಕೋಟ್ಯಂತರ ಕುಟುಂಬಗಳ ಬದುಕಿಗೆ ಬೆಳಕಾಗಿದೆ.
ಹೌದು! 2023ರ ಆಗಸ್ಟ್‌ನಲ್ಲಿ ಜಾರಿಗೆ ಬಂದ ಈ ಯೋಜನೆಯಡಿ ರಾಜ್ಯದ ಪ್ರತಿಯೊಂದು ಕುಟುಂಬಕ್ಕೂ ಪ್ರತಿ ತಿಂಗಳು 200 ಯೂನಿಟ್‌ಗಳವರೆಗೆ ಉಚಿತ ವಿದ್ಯುತ್ ನೀಡಲಾಗುತ್ತಿದ್ದು, ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳ ಮಾಸಿಕ ಬಜೆಟ್‌ಗೆ ದೊಡ್ಡ ಆಸರೆಯಾಗಿದೆ ಎಂದೇ ಹೇಳಬಹುದು.
http://Visit : www.suddidina.com
ಗೃಹಜ್ಯೋತಿ ಯೋಜನೆಯ ಸಾಧನೆಯ ಗಿರಿ:
ಇಂಧನ ಇಲಾಖೆ ಬಿಡುಗಡೆ ಮಾಡಿರುವ ಮಾಹಿತಿ ಪ್ರಕಾರ, ರಾಜ್ಯದ್ಯಂತ ಬರೋಬ್ಬರಿ 1.65 ಕೋಟಿ. ಫಲಾನುಭವಿಗಳು ಕುಟುಂಬಗಳು ಯೋಜನೆಯ ಪ್ರಯೋಜನ ಪಡೆದುಕೊಳ್ಳುತ್ತಿದ್ದರೆ, ಸೇವಾಸಿಂಧು ಪೋರ್ಟಲ್‌ನಲ್ಲಿ ಒಟ್ಟು 1,76,69,368 ಜನರು ನೋಂದಾಯಿಸಿಕೊಂಡಿದ್ದರೆ. ಒಟ್ಟು 2,06,65,451 ಗೃಹಬಳಕೆ ವಿದ್ಯುತ್ ಗ್ರಾಹಕರಿದ್ದಾರೆ. ಅಂದರೆ ಶೇ.85ಕ್ಕಿಂತ ಹೆಚ್ಚು ಗ್ರಾಹಕರು ಈ ಯೋಜನೆಯಡಿ ನೋಂದಾಯಿಸಿಕೊಂಡು ಲಾಭ ಪಡೆಯುತ್ತಿದ್ದಾರೆ.
ಆರ್ಥಿಕವಾಗಿ ನೋಡುವುದಾದರೆ, 2023ರ ಆಗಸ್ಟ್‌ನಿಂದ 2026ರ ಜುಲೈ ವರೆಗೆ, ಕಳೆದ ಮೂರು ವರ್ಷಗಳಲ್ಲಿ ಸರ್ಕಾರವು ಫಲಾನುಭವಿಗಳಿಗೆ ಒಟ್ಟು ₹28,759.54 ಕೋಟಿ ರೂಪಾಯಿ ಸಬ್ಸಿಡಿ ಬಿಡುಗಡೆ ಮಾಡಿದೆ. ಇದು ಸರ್ಕಾರದ ಬದ್ಧತೆ ಮತ್ತು ಜನಪರ ಕಾಳಜಿಗೆ ಹಿಡಿದ ಕನ್ನಡಿಯಾಗಿದೆ.
ಕುಟುಂಬದ ಬಜೆಟ್‌ಗೆ ಆಸರೆ, ಉಜ್ವಲ ಭವಿಷ್ಯಕ್ಕೆ ಬುನಾದಿ:
ಪ್ರತಿ ತಿಂಗಳು 1000 ದಿಂದ 1500 ರೂಪಾಯಿಗಳವರೆಗೆ ವಿದ್ಯುತ್ ಬಿಲ್ ಕಟ್ಟುತ್ತಿದ್ದ ಸಾಮಾನ್ಯ ಕುಟುಂಬಗಳಿಗೆ ಈಗ ಆ ಹಣ ಸಂಪೂರ್ಣವಾಗಿ ಉಳಿತಾಯವಾಗುತ್ತಿದೆ. ಈ ಉಳಿತಾಯದ ಹಣವನ್ನು ಅವರು ಮಕ್ಕಳ ಶಿಕ್ಷಣ, ಆರೋಗ್ಯ ಮತ್ತು ಇತರ ಅಗತ್ಯಗಳಿಗೆ ಬಳಸಿಕೊಳ್ಳುತ್ತಿದ್ದಾರೆ. ವಿಶೇಷವಾಗಿ ಗೃಹಿಣಿಯರಿಗೆ ಇದು ಆರ್ಥಿಕವಾಗಿ ದೊಡ್ಡ ನೆರವಾಗಿದೆ.
ಕೇವಲ ಉಚಿತ ವಿದ್ಯುತ್ ನೀಡುವುದಷ್ಟೇ ಅಲ್ಲ, ಜನರನ್ನು ಆರ್ಥಿಕವಾಗಿ ಸಬಲರನ್ನಾಗಿ ಮಾಡುವುದೇ ಈ ಯೋಜನೆಯ ಮುಖ್ಯ ಗುರಿಯಾಗಿದ್ದು, ರಾಜ್ಯದ ಜನರ ಜೀವನಮಟ್ಟ ಸುಧಾರಿಸಿದೆ. ಗೃಹ ಜ್ಯೋತಿ ಯೋಜನೆಯು ಕೇವಲ ಒಂದು ಯೋಜನೆಯಾಗಿ ಉಳಿಯದೆ, ಕರ್ನಾಟಕದ ಸಾಮಾಜಿಕ ಮತ್ತು ಆರ್ಥಿಕ ಪರಿವರ್ತನೆಯಲ್ಲಿ ಮಹತ್ವದ ಮೈಲಿಗಲ್ಲಾಗಿದೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಕುಟುಂಬಗಳನ್ನು ಈ ಯೋಜನೆಯಡಿ ತರಲು ಇಂಧನ ಇಲಾಖೆ ಕ್ರಮ ಕೈಗೊಳ್ಳುತ್ತಿದೆ.

ದಿನದ ಸುದ್ದಿ
ರೈಲ್ವೆ ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ – 20 ಸಾವಿರ ಕೋಟಿ ರೂ. ವೆಚ್ಚದ 8 ಬಹು ಟ್ರ್ಯಾಕಿಂಗ್ ಯೋಜನೆಗಳಿಗೆ ಕೇಂದ್ರದ ಅಸ್ತು!
ಸುದ್ದಿದಿನ, ಹೊಸದಿಲ್ಲಿ: ದೇಶದ ರೈಲ್ವೆ ಮೂಲಸೌಕರ್ಯಕ್ಕೆ ಬೃಹತ್ ಉತ್ತೇಜನ ನೀಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಕರ್ನಾಟಕ ಸೇರಿದಂತೆ ಒಂಬತ್ತು ರಾಜ್ಯಗಳ 20ಕ್ಕೂ ಹೆಚ್ಚು ಜಿಲ್ಲೆಗಳನ್ನು ಸಂಪರ್ಕಿಸುವ 20,000 ಕೋಟಿ ರೂಪಾಯಿಗೂ ಅಧಿಕ ಮೊತ್ತದ 8 ಬಹು ಟ್ರ್ಯಾಕಿಂಗ್ (Multi-Tracking) ರೈಲು ಯೋಜನೆಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಬುಧವಾರ (ಸೆ.09) ನಡೆದ ಕೇಂದ್ರ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಈ ಯೋಜನೆಗಳು ಪಿಎಂ-ಗತಿ ಶಕ್ತಿ ರಾಷ್ಟ್ರೀಯ ಮಾಸ್ಟರ್ ಪ್ಲಾನ್ ಅಡಿಯಲ್ಲಿ ಅನುಷ್ಠಾನಗೊಳ್ಳಲಿವೆ.
http://Visit : www.suddidina.com
ಈ ಯೋಜನೆಗಳಿಂದ ಭಾರತೀಯ ರೈಲ್ವೆಯ ಅಸ್ತಿತ್ವದಲ್ಲಿರುವ ಜಾಲವು ಬರೋಬ್ಬರಿ 1,200 ಕಿಲೋಮೀಟರ್‌ಗಳಷ್ಟು ವಿಸ್ತರಣೆಯಾಗಲಿದೆ. ಇದರಿಂದ 6,900ಕ್ಕೂ ಹೆಚ್ಚು ಗ್ರಾಮಗಳಿಗೆ ಸುಧಾರಿತ ಸಂಪರ್ಕ ಸಿಗಲಿದ್ದು, ರೈಲುಗಳ ಕಾರ್ಯಾಚರಣೆಯ ದಕ್ಷತೆ ಮತ್ತು ಸೇವಾ ವಿಶ್ವಾಸಾರ್ಹತೆ ಗಣನೀಯವಾಗಿ ಹೆಚ್ಚಾಗಲಿದೆ.
ಯಾವೆಲ್ಲ ಯೋಜನೆಗಳಿಗೆ ಅನುಮೋದನೆ?
ಸಂಪುಟ ಸಭೆಯಲ್ಲಿ ಅನುಮೋದನೆ ಪಡೆದ ಪ್ರಮುಖ ಯೋಜನೆಗಳು ಹೀಗಿವೆ:
1. ಅರಾಕೋಣಂ-ರೇಣಿಗುಂಟಾ ಮತ್ತು ವೈಟ್‌ಫೀಲ್ಡ್-ಬಂಗಾರಪೇಟೆ ನಡುವೆ 3 ಮತ್ತು 4ನೇ ಮಾರ್ಗ: ಇದು ಕರ್ನಾಟಕ ಮತ್ತು ತಮಿಳುನಾಡು, ಆಂಧ್ರಪ್ರದೇಶಕ್ಕೆ ಅತ್ಯಂತ ಮಹತ್ವದ ಯೋಜನೆಯಾಗಿದೆ.
2. ಸಿಕಂದರಾಬಾದ್-ಕಾಜಿಪೇಟೆ ನಡುವೆ ಮಲ್ಟಿ ಟ್ರ್ಯಾಕಿಂಗ್: ತೆಲಂಗಾಣದ ಪ್ರಮುಖ ಮಾರ್ಗದ ದಟ್ಟಣೆ ಕಡಿಮೆ ಮಾಡಲಿದೆ.
3. ಹೊಸೂರು-ಓಮಲೂರು, ಸೇಲಂ-ಕರೂರ್-ದಿಂಡಿಗಲ್ ಜೋಡಿ ಹಳಿ ಯೋಜನೆ: ತಮಿಳುನಾಡು ಮತ್ತು ಕರ್ನಾಟಕದ ಗಡಿ ಭಾಗದ ಸಂಪರ್ಕವನ್ನು ಬಲಪಡಿಸಲಿದೆ.
4. ಖರಗ್‌ಪುರ-ಝಾರ್ಸುಗುಡ ಮತ್ತು ಕತ್ನಿ-ಪೆಂದ್ರ ರಸ್ತೆ ನಡುವೆ 4ನೇ ಮಾರ್ಗ ಮತ್ತು ಬಿಲಾಸ್‌ಪುರ್-ಪೆಂದ್ರ ರಸ್ತೆ ನಡುವೆ 3ನೇ ಮಾರ್ಗ: ಛತ್ತೀಸ್‌ಗಢ, ಒಡಿಶಾ, ಮಧ್ಯಪ್ರದೇಶದ ಕಲ್ಲಿದ್ದಲು ಮತ್ತು ಖನಿಜ ಸಾಗಣೆಗೆ ಸಹಕಾರಿಯಾಗಲಿದೆ.
ಈ ಎಲ್ಲಾ ಯೋಜನೆಗಳು ಕರ್ನಾಟಕ, ಪಶ್ಚಿಮ ಬಂಗಾಳ, ಜಾರ್ಖಂಡ್, ಒಡಿಶಾ, ಮಧ್ಯಪ್ರದೇಶ, ಛತ್ತೀಸ್‌ಗಢ, ತಮಿಳುನಾಡು, ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯಗಳನ್ನು ಒಳಗೊಳ್ಳಲಿವೆ.
ಕರ್ನಾಟಕಕ್ಕೆ ಏನು ಲಾಭ?
ಈ ಬಹು ಟ್ರ್ಯಾಕಿಂಗ್ ಯೋಜನೆಗಳಿಂದ ಕರ್ನಾಟಕಕ್ಕೆ ಹಲವು ರೀತಿಯಲ್ಲಿ ಅನುಕೂಲವಾಗಲಿದೆ.ಕೈಗಾರಿಕೆಗಳಿಗೆ ಅನುಕೂಲ: ರಾಜ್ಯದ ಉಕ್ಕು ಕಾರ್ಖಾನೆಗಳಿಗೆ ಕಚ್ಚಾ ವಸ್ತುಗಳಾದ ಖನಿಜ ಸಾಗಿಸಲು ವಾಡಿ-ತಂದೂರು, ಮೋಟುಮಾರಿ-ವಿಷ್ಣುಪುರಂ ಮಾರ್ಗದಲ್ಲಿನ ಅಭಿವೃದ್ಧಿಯಿಂದ ಹೆಚ್ಚಿನ ಅನುಕೂಲವಾಗಲಿದೆ. ಹೂಟಗಿ, ಕೂಡಗಿ, ಯಾದ್ಲಾಪುರ, ಬಳ್ಳಾರಿ ಮತ್ತು ಯರಮರಸ್‌ನಲ್ಲಿರುವ ಉಷ್ಣ ವಿದ್ಯುತ್ ಸ್ಥಾವರಗಳಿಗೆ ಕಲ್ಲಿದ್ದಲು ಸಾಗಣೆ ಇನ್ನಷ್ಟು ವೇಗ ಮತ್ತು ಸುಲಭವಾಗಲಿದೆ.
ಬೆಂಗಳೂರು-ಚೆನ್ನೈ ಮಾರ್ಗದಲ್ಲಿ ದಟ್ಟಣೆ ಕಡಿಮೆ: ವೈಟ್‌ಫೀಲ್ಡ್-ಬಂಗಾರಪೇಟೆ ನಡುವಿನ 47 ಕಿ.ಮೀ ಉದ್ದದ 3 ಮತ್ತು 4ನೇ ಮಾರ್ಗವು ಅತ್ಯಂತ ದಟ್ಟಣೆಯ ಮನ್ಮಾಡ-ಹುಬ್ಬಳ್ಳಿ-ಬೆಂಗಳೂರು-ಜೋಳರಪೇಟೆ ವಿಭಾಗದಡಿ ಬರುತ್ತದೆ. ಇದು ಬೆಂಗಳೂರು-ಚೆನ್ನೈ ನಡುವಿನ ರೈಲು ಸಂಚಾರ ದಟ್ಟಣೆಯನ್ನು ಗಣನೀಯವಾಗಿ ಕಡಿಮೆ ಮಾಡಿ, ಹೆಚ್ಚಿನ ರೈಲುಗಳ ಸಂಚಾರಕ್ಕೆ ಅವಕಾಶ ಮಾಡಿಕೊಡಲಿದೆ.
ಪ್ರವಾಸೋದ್ಯಮ ಮತ್ತು ಸರಕು ಸಾಗಣೆಗೆ ಉತ್ತೇಜನ: ಹೊಸೂರು-ಓಮಲೂರು ಜೋಡಿ ಹಳಿ ಮಾರ್ಗದಿಂದ ಕನ್ಯಾಕುಮಾರಿ, ರಾಮೇಶ್ವರಂನಂತಹ ಪುಣ್ಯಕ್ಷೇತ್ರಗಳಿಗೆ ತೆರಳುವ ಲಕ್ಷಾಂತರ ಯಾತ್ರಿಕರಿಗೆ ಅನುಕೂಲವಾಗಲಿದೆ. ಜೊತೆಗೆ ಬೆಂಗಳೂರು ಸುತ್ತಮುತ್ತಲಿನ ಕೈಗಾರಿಕಾ ಪ್ರದೇಶಗಳಿಗೆ ಸರಕು ಸಾಗಣೆಯೂ ವೇಗವಾಗಲಿದೆ.ಒಟ್ಟಾರೆಯಾಗಿ, ಈ ಯೋಜನೆಗಳು ಕೇವಲ ರೈಲು ಮಾರ್ಗಗಳ ವಿಸ್ತರಣೆಯಷ್ಟೇ ಅಲ್ಲ, ದೇಶದ ಆರ್ಥಿಕ ಬೆಳವಣಿಗೆ, ಉದ್ಯೋಗ ಸೃಷ್ಟಿ ಮತ್ತು ಪ್ರಾದೇಶಿಕ ಸಂಪರ್ಕಕ್ಕೆ ಹೊಸ ಶಕ್ತಿ ತುಂಬಲಿವೆ ಎಂದು ಕೇಂದ್ರ ಸರ್ಕಾರ ಹೇಳಿದೆ.

ದಿನದ ಸುದ್ದಿ
ಡಿಕೆಶಿ ಸರ್ಕಾರಕ್ಕೆ 100 ದಿನಗಳ ಸಂಭ್ರಮ – `ದೃಢ ಕರ್ನಾಟಕದ ಸಂಕಲ್ಪ’ ಕಾರ್ಯಕ್ರಮಕ್ಕೆ ವಿಧಾನಸೌಧ ಸಜ್ಜು
ಸುದ್ದಿದಿನ, ಬೆಂಗಳೂರು: ಕರ್ನಾಟಕ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರವು ತನ್ನ ಆಡಳಿತದ 100 ದಿನಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಈ ಶತಕದ ಸಂಭ್ರಮವನ್ನು ಆಚರಿಸಲು ರಾಜ್ಯ ಸರ್ಕಾರವು `ದೃಢ ಕರ್ನಾಟಕದ ಸಂಕಲ್ಪ – ಶತಕದ ಪಥ, ಪ್ರಗತಿಯ ರಥ’ ಎಂಬ ವಿಶೇಷ ಮತ್ತು ಅದ್ಧೂರಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.
ಈ ಕಾರ್ಯಕ್ರಮವು ನಾಳೆ ಅಂದರೆ 2026ನೇ ಸೆಪ್ಟೆಂಬರ್ 10ರ ಗುರುವಾರ ಬೆಳಿಗ್ಗೆ 10 ಗಂಟೆಗೆ ವಿಧಾನಸೌಧದ ಪ್ರತಿಷ್ಠಿತ ಬ್ಯಾಂಕ್ವೇಟ್ ಸಭಾಂಗಣದಲ್ಲಿ ನಡೆಯಲಿದೆ. ಸರ್ಕಾರದ ನೂರು ದಿನಗಳ ಸಾಧನೆ, ಜನಪರ ಯೋಜನೆಗಳ ಅನುಷ್ಠಾನ ಮತ್ತು ಮುಂದಿನ ಅಭಿವೃದ್ಧಿಯ ದೂರದೃಷ್ಟಿಯನ್ನು ಜನರ ಮುಂದಿಡುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ.
ಗಣ್ಯರ ದಂಡು, ಸಿದ್ದರಾಮಯ್ಯರಿಂದ ಉದ್ಘಾಟನೆ:
ಈ ಶತದಿನೋತ್ಸವ ಕಾರ್ಯಕ್ರಮಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಲಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಇದು ಕಾಂಗ್ರೆಸ್ ಪಕ್ಷದಲ್ಲಿನ ಒಗ್ಗಟ್ಟು ಮತ್ತು ನಾಯಕತ್ವದ ನಿರಂತರತೆಯನ್ನು ಸಂಕೇತಿಸುತ್ತದೆ.
ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಹಾಗೂ ಕಂದಾಯ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ಜಿ. ಪರಮೇಶ್ವರ್, ರಾಜ್ಯ ಸಂಪುಟದ ಎಲ್ಲಾ ಸಚಿವರು, ಎಲ್ಲಾ ಶಾಸಕರು, ವಿಧಾನ ಪರಿಷತ್ ಸದಸ್ಯರು, ರಾಜ್ಯದ ಲೋಕಸಭಾ ಮತ್ತು ರಾಜ್ಯಸಭಾ ಸದಸ್ಯರು ಭಾಗವಹಿಸಲಿದ್ದಾರೆ. ಇದರ ಜೊತೆಗೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಸೇರಿದಂತೆ ಸರ್ಕಾರದ ಎಲ್ಲಾ ಇಲಾಖೆಗಳ ಅಪರ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು ಮತ್ತು ಹಿರಿಯ ಅಧಿಕಾರಿಗಳು ಉಪಸ್ಥಿತರಿರಲಿದ್ದಾರೆ.
http://Visit : www.suddidina.com
ಫಲಾನುಭವಿಗಳೊಂದಿಗೆ ನೇರ ಸಂವಾದ – ಕಾರ್ಯಕ್ರಮದ ಪ್ರಮುಖ ಆಕರ್ಷಣೆ
ಈ ಕಾರ್ಯಕ್ರಮದ ಅತ್ಯಂತ ಪ್ರಮುಖ ಆಕರ್ಷಣೆ ಎಂದರೆ ಮುಖ್ಯಮಂತ್ರಿಗಳೊಂದಿಗೆ ಫಲಾನುಭವಿಗಳ ನೇರ ಸಂವಾದ. ಸರ್ಕಾರದ ಮಹತ್ವಾಕಾಂಕ್ಷೆಯ ಐದು ಗ್ಯಾರಂಟಿ ಯೋಜನೆಗಳಾದ ಅನ್ನಭಾಗ್ಯ, ಗೃಹಲಕ್ಷ್ಮಿ, ಶಕ್ತಿ, ಯುವನಿಧಿ ಮತ್ತು ಗೃಹಜ್ಯೋತಿ ಯೋಜನೆಗಳ ಫಲಾನುಭವಿಗಳು ಈ ವೇದಿಕೆಯಲ್ಲಿ ತಮ್ಮ ಅನುಭವಗಳನ್ನು ಹಂಚಿಕೊಳ್ಳಲಿದ್ದಾರೆ.
ದೃಢ ಕರ್ನಾಟಕದ ಸಂಕಲ್ಪ
ಶತಕದ ಪಥ – ಪ್ರಗತಿಯ ರಥ100 ದಿನಗಳು.. ಇದು ಕೇವಲ ಆರಂಭವಷ್ಟೇ. ಜನರ ಆಶಯಗಳಿಗೆ ಸ್ಪಂದಿಸಿ, ರಾಜ್ಯದ ಸಮಗ್ರ ಅಭಿವೃದ್ಧಿಗೆ ವೇಗ ನೀಡುವ ಸಂಕಲ್ಪದೊಂದಿಗೆ ಕಳೆದ 100 ದಿನಗಳಲ್ಲಿ ಹಲವು ಮಹತ್ವದ ಹೆಜ್ಜೆಗಳನ್ನು ಇಡಲಾಗಿದೆ. ಮುಂದಿನ ದಿನಗಳಲ್ಲಿ ಅಭಿವೃದ್ಧಿ, ಉದ್ಯೋಗ, ತಂತ್ರಜ್ಞಾನ, ಮೂಲಸೌಕರ್ಯ, ಶಿಕ್ಷಣ, ಕೃಷಿ ಹಾಗೂ… pic.twitter.com/NDViSWw6LV
— DK Shivakumar (@DKShivakumar) September 10, 2026
ಕೇವಲ ಗ್ಯಾರಂಟಿ ಯೋಜನೆಗಳಷ್ಟೇ ಅಲ್ಲದೆ, ಸಮಾಜದ ವಿವಿಧ ವರ್ಗಗಳ ಶ್ರಮಿಕರು ಮತ್ತು ಕಾರ್ಮಿಕರು ಕೂಡ ಈ ಸಂವಾದದಲ್ಲಿ ಪಾಲ್ಗೊಳ್ಳಲಿದ್ದಾರೆ. ಕೃಷಿಕರು, ಆಟೋ ಚಾಲಕರು, ಹಮಾಲಿಗಳು, ಗಿಗ್ ಕಾರ್ಮಿಕರು, ಬೀದಿ ಬದಿ ವ್ಯಾಪಾರಿಗಳು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಮತ್ತು ಪೌರಕಾರ್ಮಿಕರು ತಮ್ಮ ಬದುಕಿನಲ್ಲಿ ಸರ್ಕಾರದ ಯೋಜನೆಗಳಿಂದ ಆಗಿರುವ ಬದಲಾವಣೆಗಳ ಕುರಿತು ಮುಖ್ಯಮಂತ್ರಿಗಳೊಂದಿಗೆ ಮುಕ್ತವಾಗಿ ಮಾತನಾಡಲಿದ್ದಾರೆ.
100 ದಿನಗಳಲ್ಲಿ ಸರ್ಕಾರವು ಕೈಗೊಂಡಿರುವ ಜನಪರ ನಿರ್ಧಾರಗಳು, ಅಭಿವೃದ್ಧಿ ಕಾಮಗಾರಿಗಳು ಮತ್ತು ಆಡಳಿತದಲ್ಲಿ ತಂದಿರುವ ಪಾರದರ್ಶಕತೆಯ ಬಗ್ಗೆ ಈ ವೇದಿಕೆಯಲ್ಲಿ ಚರ್ಚೆ ನಡೆಯಲಿದೆ. ಸರ್ಕಾರದ ಸಾಧನೆಗಳನ್ನು ಕೇವಲ ಭಾಷಣದ ಮೂಲಕವಲ್ಲ, ಬದಲಾಗಿ ಫಲಾನುಭವಿಗಳ ಬಾಯಿಂದಲೇ ಜನರಿಗೆ ತಲುಪಿಸುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ ಎಂದು ಮೂಲಗಳು ತಿಳಿಸಿವೆ.
ಮುಂದಿನ ದಿನಗಳಲ್ಲಿ ದೃಢ ಕರ್ನಾಟಕ’ ನಿರ್ಮಾಣದ ನಿಟ್ಟಿನಲ್ಲಿ ಸರ್ಕಾರದ ಮುಂದಿನ 5 ವರ್ಷಗಳ ಕಾರ್ಯಯೋಜನೆ ಮತ್ತು ರೂಪುರೇಷೆಗಳನ್ನು ಈ ಸಮಾರಂಭದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪ್ರಕಟಿಸಲಿದ್ದಾರೆ ಎಂದು ನಿರೀಕ್ಷಿಸಲಾಗಿದೆ.

-
ದಿನದ ಸುದ್ದಿ5 days agoಬರ ನಿರ್ವಹಣೆಗೆ ಸಚಿವ ಸಂಪುಟ ಉಪಸಮಿತಿ ಸಭೆ – ದಾವಣಗೆರೆಯಲ್ಲಿ ಕುಡಿಯುವ ನೀರು, ಮೇವು ಕೊರತೆ ಬಗ್ಗೆ ಸಚಿವ ಮಲ್ಲಿಕಾರ್ಜುನ್ ಪ್ರಸ್ತಾಪ
-
ದಿನದ ಸುದ್ದಿ4 days agoರೈಲ್ವೆ ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ – 20 ಸಾವಿರ ಕೋಟಿ ರೂ. ವೆಚ್ಚದ 8 ಬಹು ಟ್ರ್ಯಾಕಿಂಗ್ ಯೋಜನೆಗಳಿಗೆ ಕೇಂದ್ರದ ಅಸ್ತು!
-
ದಿನದ ಸುದ್ದಿ4 days agoಡಿಕೆಶಿ ಸರ್ಕಾರಕ್ಕೆ 100 ದಿನಗಳ ಸಂಭ್ರಮ – `ದೃಢ ಕರ್ನಾಟಕದ ಸಂಕಲ್ಪ’ ಕಾರ್ಯಕ್ರಮಕ್ಕೆ ವಿಧಾನಸೌಧ ಸಜ್ಜು
-
ದಿನದ ಸುದ್ದಿ4 days agoಗೃಹ ಜ್ಯೋತಿ ಯೋಜನೆಗೆ 3 ವರ್ಷಗಳ ಸಂಭ್ರಮ – 1.65 ಕೋಟಿ ಕುಟುಂಬಗಳ ಬದುಕಿಗೆ ಬೆಳಕು!
-
ದಿನದ ಸುದ್ದಿ5 days ago5 ವರ್ಷದಿಂದ PFಗೆ ಹಣ ಜಮಾ ಮಾಡಿಲ್ಲ, ಬಡ್ಡಿ ಸಿಗುತ್ತಾ? ಇಲ್ಲಿದೆ EPFO ನಿಯಮದ ಸ್ಪಷ್ಟ ಮಾಹಿತಿ!
-
ದಿನದ ಸುದ್ದಿ5 days agoಬಿಎಂಟಿಸಿ ಪ್ರಯಾಣಿಕರಿಗೆ ಗುಡ್ ನ್ಯೂಸ್ – ಇನ್ಮುಂದೆ ಓಲಾ, ಉಬರ್ ಆ್ಯಪ್ನಲ್ಲೇ ಬಿಎಂಟಿಸಿ ಬಸ್ ಟ್ರ್ಯಾಕಿಂಗ್ ಮತ್ತು ಟಿಕೆಟ್ ಬುಕಿಂಗ್!
-
ದಿನದ ಸುದ್ದಿ5 days agoಭದ್ರೆ ಆಗಮನದಿಂದ ರೈತರಲ್ಲಿ ಹೊಸ ಭರವಸೆ – ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ
-
ದಿನದ ಸುದ್ದಿ5 days agoವಿಶೇಷ ಚೇತನ ಮಕ್ಕಳು ದೇವರ ಮಕ್ಕಳು – ವಿಧಾನ ಪರಿಷತ್ ಸದಸ್ಯ ಕೆ.ಎಸ್. ನವೀನ್



