ದಿನದ ಸುದ್ದಿ
ಜಿಲ್ಲಾ ಯೋಜನಾ ಸಮಿತಿ ಚುನಾವಣೆ ವೇಳಾಪಟ್ಟಿ ಪ್ರಕಟ
ಸುದ್ದಿದಿನ,ದಾವಣಗೆರೆ:ಕರ್ನಾಟಕ ಪಂಚಾಯತ್ ರಾಜ್ (ಜಿಲ್ಲಾ ಯೋಜನಾ ಸಮಿತಿ ಸದಸ್ಯರುಗಳ ಚುನಾವಣೆ) ನಿಯಮಗಳ ಮೇರೆಗೆ ಪುರಸಭಾ, ಪಟ್ಟಣ ಪಂಚಾಯಿತಿ ಮತ ಕ್ಷೇತ್ರದಿಂದ ಜಿಲ್ಲೆಯ ಜಿಲ್ಲಾ ಯೋಜನಾ ಸಮಿತಿಗೆ ಸದಸ್ಯರ ಸ್ಥಾನಗಳಿಗೆ ಚುನಾವಣೆ ನಡೆಸಲು ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮತ್ತು ಜಿಲ್ಲಾ ಯೋಜನಾ ಸಮಿತಿಯ ಪದನಿಮಿತ್ತ ಚುನಾವಣಾಧಿಕಾರಿ ಗಿತ್ತೆ ಮಾಧವ್ ವಿಠ್ಠಲರಾವ್ ವೇಳಾಪಟ್ಟಿಯನ್ನು ಹೊರಡಿಸಿರುತ್ತಾರೆ.
ನವಂಬರ್ 10 ರಿಂದ 17 ರವರೆಗೆ ಜಿಲ್ಲಾ ಪಂಚಾಯತ್ ಯೋಜನಾ ವಿಭಾಗದಲ್ಲಿ ಬೆಳಿಗ್ಗೆ 11 ರಿಂದ ಮಧ್ಯಾಹ್ನ 3 ಗಂಟೆಯವರೆಗೆ ನಾಮಪತ್ರ ಸಲ್ಲಿಸ ಸಬೇಕು. ನ.17 ರಂದು ನಾಮಪತ್ರ ಪರಿಶೀಲಿಸುವ ದಿನ. ನ.19 ಉಮೇದಾರಿಕೆಯನ್ನು ಹಿಂತೆಗೆದುಕೊಳ್ಳುವ ದಿನ. ನ.29 ರಂದು ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ಜಿಲ್ಲಾ ಪಂಚಾಯತ್‍ಯಲ್ಲಿ ಮತದಾನ ಅವಶ್ಯವಿದ್ದರೆ ಮತದಾನ ನಡೆಸಿ ಅದೇ ದಿನ ಸಂಜೆ 5 ಗಂಟೆಗೆ ಮತ ಎಣಿಕೆ ಮಾಡಲಾಗುತ್ತದೆ.
ಚುನಾಯಿಸಬೇಕಾದ ಸ್ಥಾನ 2, ಪುರಸಭೆ ಸದಸ್ಯರ ಒಟ್ಟು ಸಂಖ್ಯೆ 23 ಇರುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದೇವದಾಸಿ ಪುನರ್‍ವಸತಿ ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ದೇವದಾಸಿ ಪುನರ್‍ವಸತಿ ಯೋಜನೆಯಡಿ ತಾತ್ಕಾಲಿಕವಾಗಿ ಖಾಲಿ ಇರುವ ಹುದ್ದೆಗೆ ನೇರ ತಾತ್ಕಾಲಿಕ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅಭ್ಯರ್ಥಿಗಳು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಇಲಾಖೆ, 14ನೇ ಮುಖ್ಯ ರಸ್ತೆ, ಕುವೆಂಪು ನಗರ, ಎಮ್.ಸಿ.ಸಿ ‘ಬಿ’ ಬ್ಲಾಕ್, ದಾವಣಗೆರೆ ಇಲ್ಲಿ ಅರ್ಜಿಗಳನ್ನು ಪಡೆದು ಫೆಬ್ರವರಿ 12 ರೊಳಗಾಗಿ ಕಚೇರಿ ಸಲ್ಲಿಸಬೇಕು.
ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ಯೋಜನಾಧಿಕಾರಿಗಳ ಹುದ್ದೆ ಸಂಖ್ಯೆ-1, ನಿವೃತ್ತ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳು, ಎಂಎಸ್‍ಡಬ್ಲ್ಯೂ, ಸಮಾಜಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ, ಮನಃಶಾಸ್ತ್ರದಲ್ಲಿ ಎಂ.ಎಸ್ಸಿ, ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
ಚನ್ನಗಿರಿ ತಾಲ್ಲೂಕು ಯೋಜನಾ ಅನುಷ್ಟಾನಾಧಿಕಾರಿಗಳು ಹುದ್ದೆ ಸಂಖ್ಯೆ-1, ಬಿಎಸ್‍ಡಬ್ಲ್ಯೂ, ಬಿಎ ಇನ್ ಸೋಶಿಯಲಾಜಿ, ಎಂಎಸ್‍ಸಿ ಇನ್ ಸೈಕೋಲಾಜಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು. ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ದಾಖಲಾಧಿಕಾರಿಗಳ ಹುದ್ದೆ ಸಂಖ್ಯೆ-1, ಬಿಕಾಂ ಪದವಿ ಅಥವಾ ತತ್ಸಮಾನ ಪದವಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಕನ್ನಡ ಮತ್ತು ಇಂಗ್ಲೀಷ್ ಟೈಪಿಂಗ್ ಜ್ಞಾನವನ್ನು ಹೊಂದಿರಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08192-222117 ಸಂಪರ್ಕಿಸಬಹುದೆಂದು ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಭರತ ಹುಣ್ಣಿಮೆ ಪ್ರಯುಕ್ತ 25 ಹೆಚ್ಚುವರಿ ವಿಶೇಷ ವಾಹನ
ಸುದ್ದಿದಿನ,ದಾವಣಗೆರೆ : ಜನವರಿ 31 ರಿಂದ ಫೆಬ್ರವರಿ 2 ರವರೆಗೆ ಹರಪನಹಳ್ಳಿ ತಾಲ್ಲೂಕು ಉಚ್ಚಂಗಿದುರ್ಗದಲ್ಲಿ ಜರುಗಲಿರುವ ಭಾರತ ಹುಣ್ಣಿಮೆಗಾಗಿ ರಾಜ್ಯ ರಸ್ತೆ ಸಾರಿಗೆ ನಿಗಮ, ದಾವಣಗೆರೆ ವಿಭಾಗದ ಘಟಕಗಳಿಂದ ರಾಜ್ಯದಾದ್ಯಂತ ಬರುವ ಭಕ್ತಾಧಿಗಳ ಅನುಕೂಲಕ್ಕಾಗಿ 25 ಹೆಚ್ಚುವರಿ ವಿಶೇಷ ವಾಹನ ಕಾರ್ಯಾಚರಣೆ ಮಾಡಲಾಗಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.

ದಿನದ ಸುದ್ದಿ
ಕಾಗದ ರಹಿತ ನೋಂದಣಿ ವ್ಯವಸ್ಥೆಯ ತರಬೇತಿ
ಸುದ್ದಿದಿನ,ದಾವಣಗೆರೆ:ಕಾಗದ ರಹಿತ ನೋಂದಣಿ ವ್ಯವಸ್ಥೆಯನ್ನು ಜಾರಿಗೊಳಿಸಿದ್ದು, ಜಿಲ್ಲಾ ನೋಂದಣಿ ಕಚೇರಿ ವ್ಯಾಪ್ತಿಗೆ ಬರುವ ದಸ್ತಾವೇಜು ಬರಹಗಾರರು, ವಕೀಲರು, ಕರ್ನಾಟಕ ಒನ್, ದಾವಣಗೆರೆ ಒನ್, ಗ್ರಾಮ ಒನ್ ಮತ್ತು ಬಾಪೂಜಿ ಸೇವಾ ಕೇಂದ್ರ ಸಿಬ್ಬಂದಿ ವರ್ಗದವರಿಗೆ ತರಬೇತಿ ಆಯೋಜಿಸಲಾಗಿದೆ.
ತರಬೇತಿಯು ಜ.30 ರಂದು ಹೊನ್ನಾಳಿ ಉಪ ನೋಂದಣಿ ಕಚೇರಿ ಆವರಣ, ಜ.31 ರಂದು ಚನ್ನಗಿರಿ ಉಪ ನೋಂದಣಿ ಕಚೇರಿ ಆವರಣ, ಫೆ.2 ರಂದು ಹರಿಹರ ಉಪ ನೋದಣಿ ಕಚೇರಿ ಆವರಣ, ಫೆ.3 ರಂದು ದಾವಣಗೆರೆ ಉಪ ನೋಂದಣಿ ಕಚೇರಿ, ಫೆ.4 ರಂದು ಜಗಳೂರು ಉಪ ನೋಂದಣಿ ಕಚೇರಿ ಆವರಣಗಳಲ್ಲಿ ಮಧ್ಯಾಹ್ನ 1 ರಿಂದ 2 ಗಂಟೆಯವರೆಗೆ ನಡೆಯಲಿದೆ ಎಂದು ಜಿಲ್ಲಾ ನೋಂದಣಾಧಿಕಾರಿ ತಿಳಿಸಿದ್ದಾರೆ.


