ದಿನದ ಸುದ್ದಿ

ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿ ಗಲಭೆ : ಸಾಮೂಹಿಕ ನಮಾಜ್ ನಿಷೇಧ

Published

on

ಸುದ್ದಿದಿನ,ಬೆಂಗಳೂರು:  ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿಯಲ್ಲಿ ಗಲಭೆ ಹಿನ್ನೆಲೆ ನಿಷೇದಾಜ್ಞೆ ಜಾರಿಯಾಗಿದೆ. ಆದ್ದರಿಂದ ಇಂದು ನಮಾಜ್‍ ಮಾಡದಂತೆ ನಿಷೇಧಿಸಲಾಗಿದೆ.

ಈ ದಿನ ಶುಕ್ರವಾರ ಆಗಿರುವ ಕಾರಣ ಸಾಮೂಹಿಕವಾಗಿ ನಮಾಜ್ ಮಾಡಲು ಮಸೀದಿ ಕಡೆಗೆ ಮುಸಲ್ಮಾನರು ಬರುವ ಸಾಧ್ಯತೆ ಇದೆ ಎಂಬ ಮಾಹಿತಿ ಪೊಲೀಸರಿಗೆ ಲಭ್ಯವಾಗಿದೆ. ಆದ್ದರಿಂದ ಸಾಮೂಹಿಕ ಪ್ರಾರ್ಥನೆಗಾಗಿ ಅವಕಾಶ ನಿಷೇಧಿಸಲಾಗಿದ್ದು, ಕೇಲವ ಒಬ್ಬರು ಮೌಲ್ವಿ ಮಾತ್ರ ಮಸೀದಿಗೆ ಹೋಗಿ ನಮಾಜ್ ಮಾಡಲು ಅವಕಾಶವನ್ನು ನೀಡಲಾಗಿದೆ.

ಇಂದು ನಿಷೇದಾಜ್ಞೆ ಪ್ರದೇಶದಲ್ಲಿ ನಮಾಜ್ ನಿಷೇಧ ಮಾಡಿರುವ ಹಿನ್ನೆಲೆಯಲ್ಲಿ ಹೆಚ್ಚುವರಿ ಭದ್ರತೆಯನ್ನು ನಿಯೋಜನೆ ಮಾಡಲಾಗಿದ್ದು, ಕೆಎಸ್‌ಆರ್‌ಪಿ, ಸಿಎಆರ್ ತುಕಡಿ ಸೇರಿ ಸುಮಾರು 1,500 ಸಾವಿರಕ್ಕೂ ಹೆಚ್ಚು ಪೊಲೀಸರನ್ನು ಭದ್ರತೆಗೆ ನಿಯೋಜನೆ ಮಾಡಲಾಗಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version