ದಿನದ ಸುದ್ದಿ
ಬ್ರೇಕಿಂಗ್ ನ್ಯೂಸ್ | ಡಿ.ಕೆ.ಶಿವಕುಮಾರ್ ಮನೆ ಮೇಲೆ ಸಿಸಿಬಿ ದಾಳಿ
ಸುದ್ದಿದಿನ,ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರ ಮನೆಯ ಮೇಲೆ ಸಿಬಿಐ ಅಧಿಕಾರಿಗಳು ಬೆಳ್ಳಂಬೆಳಗ್ಗೆ ರೇಡ್ ಮಾಡಿದ್ದಾರೆ.
ಸದಾಶಿವನಗರದಲ್ಲಿರುವ ಡಿ.ಕೆ.ಶಿವಕುಮಾರ್ ನಿವಾಸದ ಮೇಲೆ ಸೋಮವಾರ 5ಜನ ಸಿಬಿಐ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಡಿಜೆ ಶಿವಕುಮಾರ್ ಮನೆಯ ಮೇಲೆ ದಾಳಿ ಮಾಡುವಂತೆ ರಾಜ್ಯ ಸರ್ಕಾರ ಸಿಬಿಐ ಅಧಿಕಾರಿಗಳಿಗೆ ಅನುಮತಿ ನೀಡಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.
ರಾಜ್ಯ ಸರ್ಕಾರದ ಅನುಮತಿ ಮೇರೆಗೆ ಇಂದು ಬೆಳಗ್ಗೆ 8 ಗಂಟೆಗೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದಿ, ಅವರ ಮನೆಯಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ. ಕಳೆದ ವರ್ಷ ಸೆಪ್ಟೆಂಬರ್ 3ರಂದು ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧಿತರಾಗಿ ಡಿಕೆ.ಶಿವಕುಮಾರ್ ಜೈಲು ಸೇರಿದ್ದರು.
ಒಂದು ವರ್ಷ ಕಳೆಯುವ ಬೆನ್ನಲ್ಲೇ ಮತ್ತೆ ಸಿಬಿಐ ಅಧಿಕಾರಿಗಳು ದಾಳಿ ಮಾಡಿದ್ದು, ಡಿ.ಕೆ.ಶಿವಕುಮಾರ್ ಸಹೋದರ ಡಿ.ಕೆ.ಸುರೇಶ್ ಮನೆಯ ಮೇಲೂ ಸಿಬಿಐ ಅಧಿಕಾರಿಗಳು ದಾಳಿ ನಡೆಸಿ ಅವರ ಮನೆಯಲ್ಲೂ ಶೋಧಕಾರ್ಯ ನಡೆಸುತ್ತಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243