Connect with us

ರಾಜಕೀಯ

ಸಿದ್ದುಗೆ ‘ಡಿಕೆಶಿ ಟಾಂಗ್’ ನೀಡಿದ್ದು ಏನಂತ ಗೊತ್ತಾ ?

Published

on

ಸುದ್ದಿದಿನ ಡೆಸ್ಕ್: ಪಡಿತರ ಅಕ್ಕಿ ಇಳಿಕೆ ವಿಚಾರವಾಗಿ ಮಾಜಿ ಮುಖ್ಯಮಂತ್ರಿ ‌ಸಿದ್ದರಾಮಯ್ಯ ಅವರಿಗೆ ಸಚಿವ ಡಿ.ಕೆ. ಶಿವಕುಮಾರ್ ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ.

ಪಡಿತರ ಅಕ್ಕಿ ಪ್ರಮಾಣವನ್ನು 7ರಿಂದ 5 ಕೆಜಿಗೆ ಇಳಿಸಿರುವ ಕುರಿತು ಮಾಜಿ ಮುಖ್ಯಮಂತ್ರಿ ‌ಸಿದ್ದರಾಮಯ್ಯ ಸರ್ಕಾರಕ್ಕೆ ಪತ್ರ ಬರೆದಿದ್ದು ಈ ಕುರಿತು ಸಚಿವ ಡಿ.ಕೆ. ಶಿವಕುಮಾರ್ ಹೇಳಿಕೆ ನೀಡಿದ್ದಾರೆ.

ಅಕ್ಕಿ ಇಳಿಕೆ ವಿಚಾರವನ್ನು ಪರಿಶೀಲನೆ ಮಾಡುವುದಾಗಿ ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದಾರೆ. ಅದೇ ವಿಚಾರದಲ್ಲಿ ಪದೇಪದೇ ಸರ್ಕಾರದ ಮೇಲೆ ಒತ್ತಡ ಹಾಕುವುದು ಸರಿಯಲ್ಲ ಎಂದು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ

ಸರ್ಕಾರಿ ವೈದ್ಯರು ಬೆಳಗ್ಗೆ 9 ಗಂಟೆಯಿಂದ 4 ಗಂಟೆಯವರೆಗೆ ಕಾರ್ಯ ನಿರ್ವಹಿಸುವುದು ಕಡ್ಡಾಯ:ಸಚಿವ ಶರಣಪ್ರಕಾಶ್ ಪಾಟೀಲ್

Published

on

ಸುದ್ದಿದಿನಡೆಸ್ಕ್:ಸರ್ಕಾರಿ ಆಸ್ಪತ್ರೆಗಳಲ್ಲಿ ಇನ್ನು ಮುಂದೆ ಕರ್ತವ್ಯ ನಿರ್ವಹಿಸುವ ವೈದ್ಯರು ಬೆಳಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆವರೆಗೆ ಕಡ್ಡಾಯವಾಗಿ ಕಾರ್ಯ ನಿರ್ವಹಿಸಬೇಕು ಎಂದು ವೈದ್ಯಕೀಯ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಪರಿಷತ್‌ನಲ್ಲಿ ತಿಳಿಸಿದ್ದಾರೆ.

ಕಾಂಗ್ರೆಸ್ ಸದಸ್ಯೆ ಬಲ್ಕಿಶ್ ಬಾನು ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಸರ್ಕಾರಿ ವೈದ್ಯರು ಯಾವುದೇ ಕಾರಣಕ್ಕೂ ಬೇರೆ ಸ್ಥಳಗಳಲ್ಲಿ ಕಾರ್ಯ ನಿರ್ವಹಿಸುವಂತಿಲ್ಲ ಎಂದು ಸೂಚನೆ ನೀಡಿದ್ದಾರೆ.

ಈ ಮೊದಲು 2 ಗಂಟೆಗಳ ನಂತರ 1 ಗಂಟೆ ಕಾರ್ಯ ನಿರ್ವಹಿಸಲು ಅವಕಾಶ ನೀಡಲಾಗಿತ್ತು. ಆದರೆ ವೈದ್ಯರು 1 ಗಂಟೆ ಮುಂಚಿತವಾಗಿ ಹೋಗುವುದು, ಇಲ್ಲವೇ 1 ಗಂಟೆ ತಡವಾಗಿ ಬರುತ್ತಾರೆಂಬ ಆರೋಪ ಕೇಳಿಬರುತ್ತಿದೆ. ಇದನ್ನು ತಡೆಗಟ್ಟಲು ಈ ಕ್ರಮ ತೆಗೆದುಕೊಂಡಿದ್ದಾಗಿ ಸಚಿವರು ಸಮರ್ಥಿಸಿಕೊಂಡಿದ್ದಾರೆ.

ಒAದು ವೇಳೆ ವೈದ್ಯರು, ಉಲ್ಲಂಘನೆ ಮಾಡಿರುವುದು ಕಂಡುಬಂದರೆ ಶಿಸ್ತುಕ್ರಮ ಜರುಗಿಸುವುದಾಗಿ ಎಚ್ಚರಿಸಿದ್ದಾರೆ.
ವೈದ್ಯರು ಕರ್ತವ್ಯಕ್ಕೆ ಹಾಜರಾಗುವ ಸಂದರ್ಭದಲ್ಲಿ ನಾಲ್ಕು ಬಾರಿ ಬಯೋಮೆಟ್ರಿಕ್‌ಗೆ ತಮ ಹಸ್ತಮುದ್ರೆ ಹಾಕಬೇಕು ಎಂದು ನಿರ್ದೇಶನ ನೀಡಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಸಿಎಂ ಸಿದ್ದರಾಮಯ್ಯ ಬಜೆಟ್ ಮಂಡನೆ ; ಇಲ್ಲಿವೆ ಪ್ರಮುಖಾಂಶಗಳು

Published

on

ಸುದ್ದಿದಿನಡೆಸ್ಕ್:ಮುಖ್ಯಮಂತ್ರಿ ಸಿದ್ದರಾಮಯ್ಯ 2025-26ನೇ ಸಾಲಿನ 4 ಲಕ್ಷದ 9 ಸಾವಿರದ 549 ಕೋಟಿ ರೂ ಬಜೆಟ್ ಗಾತ್ರದ ಕರ್ನಾಟಕ ರಾಜ್ಯ ಆಯವ್ಯಯವನ್ನು ಇಂದು ಮಂಡಿಸಿದ್ದಾರೆ.

ಕೃಷಿ ಮತ್ತು ಇನ್ನಿತರ ದಾಖಲೀಕರಣ, ಮೂಲಸೌಕರ್ಯ ಒದಗಿಸುವಿಕೆ, ಸಮರ್ಪಕ ವಿದ್ಯುತ್ ಪೂರೈಕೆ, ಗೋದಾಮುಗಳ ಒದಗಿಸುವಿಕೆ ಮುಂತಾದ ಚಟುವಟಿಕೆಗಳ ಮೂಲಕ ಗ್ರಾಮಗಳ ಅಭಿವೃದ್ದಿಗೆ ಮತ್ತು ಗ್ರಾಮೀಣ ಜನರ ಆದಾಯ ಹೆಚ್ಚಿಸಲು ಶ್ರಮಿಸಲಾಗುವುದು ಎಂದು ಮುಖ್ಯಮಂತ್ರಿ ಬಜೆಟ್ ಭಾಣದಲ್ಲಿ ತಿಳಿಸಿದ್ದಾರೆ.

2024-25ರಲ್ಲಿ ಶೇಕಡ 4ರಷ್ಟು ಬೆಳವಣಿಗೆ ಸಾಧಿಸುವ ಮೂಲಕ ಚೇತರಿಕೆ ಕಂಡಿದ್ದು, ದೇಶದ ಕೃಷಿ ವಲಯದ ಬೆಳವಣಿಗೆ ಶೇಕಡ 3.8ಕ್ಕಿಂತ ಹೆಚ್ಚಾಗಿದೆ. ರಾಜ್ಯ ಸರ್ಕಾರವು ರೈತರ ಕಲ್ಯಾಣ ಉದ್ದೇಶಿತ ಯೋಜನೆಗಳಿಗೆ ಪ್ರಸಕ್ತ ವರ್ಷದಲ್ಲಿ ಒಟ್ಟು 51 ಸಾವಿದ 339 ಕೋಟಿ ರೂಪಾಯಿ ಅನುದಾನವನ್ನು ನೀಡಲಾಗಿದೆ. ಪ್ರಸಕ್ತ ಹಣಕಾಸು ವರ್ಷದಲ್ಲಿ ಗ್ಯಾರಂಟಿ ಯೋಜನೆಗಳಿಗಾಗಿ 51 ಸಾವಿರದ 34 ಕೋಟಿ ರೂಪಾಯಿ ಒದಗಿಸಲಾಗಿದೆ. 2025-26ನೇ ಸಾಲಿನಲ್ಲಿ ರಾಜ್ಯದಲ್ಲಿ ಕೃಷಿ ಯಾಂತ್ರೀಕರಣ ಕಾರ್ಯಕ್ರಮದಡಿ 50 ಸಾವಿರ ರೈತರಿಗೆ ಸಹಾಯಧನ ಒದಗಿಸಲು 428 ಕೋಟಿ ರೂಪಾಯಿ ಅನುದಾನ ಕಲ್ಪಿಸಲಾಗುವುದು ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.

ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಅತಿಥಿ ಶಿಕ್ಷಕರು ಮತ್ತು ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ಅತಿಥಿ ಉಪನ್ಯಾಸಕರಿಗೆ ಪ್ರಸ್ತುತ ನೀಡಲಾಗುತ್ತಿರುವ ಮಾಸಿಕ ಗೌರವಧನವನ್ನು ತಲಾ 2 ಸಾವಿರ ರೂಪಾಯಿಗೆ ಹೆಚ್ಚಿಸಲಾಗುವುದು.

ಸರ್ಕಾರಿ ಶಾಲೆಗಳಲ್ಲಿ ಬಿಸಿಯೂಟ ತಯಾರಿಸುವ ಸಿಬ್ಬಂದಿಗೆ ನೀಡುತ್ತಿರುವ ಮಾಸಿಕ ಗೌರವಧನವನ್ನು ತಲಾ 1 ಸಾವಿರ ರೂಪಾಯಿಗೆ ಏರಿಸಲಾಗುವುದು. ರಾಜ್ಯದಲ್ಲಿ ತಡೆಗಟ್ಟಬಹುದಾದ ತಾಯಿ ಮರಣ ಪ್ರಮಾಣವನ್ನು ಶೂನ್ಯಕ್ಕೆ ಇಳಿಸಲು ಅಭಿಯಾನ ರೂಪದಲ್ಲಿ ಕ್ರಮ ಕೈಗೊಳ್ಳಲು 320 ಕೋಟಿ ರೂಪಾಯಿ ಒದಗಿಸಲಾಗಿದೆ.

ಬೆಂಗಳೂರು ಉತ್ತರ ತಾಲ್ಲೂಕಿನ ವ್ಯಾಪ್ತಿಯಲ್ಲಿ 200 ಹಾಸಿಗೆಯ ಅತ್ಯಾಧುನಿಕ ಮತ್ತು ಸುಸಜ್ಜಿತ ಆಸ್ಪತ್ರೆಯನ್ನು 150 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗುವುದು. ರಾಜ್ಯದ ರಸ್ತೆ ಮತ್ತು ಮೂಲಸೌಕರ್ಯ ಅಭಿವೃದ್ಧಿಗಾಗಿ 8 ಸಾವಿರ ಕೋಟಿ ರೂಪಾಯಿ ವೆಚ್ಚದಲ್ಲಿ ಮುಖ್ಯಮಂತ್ರಿ ಮೂಲ ಸೌಕರ್ಯ ಅಭಿವೃದ್ಧಿ ಕಾರ್ಯಕ್ರಮ ಜಾರಿಗೊಳಿಸಲಾಗುವುದು.

ಎತ್ತಿನಹೊಳೆಯ ಯೋಜನೆಯಿಂದ ತುಮಕೂರು ಜಿಲ್ಲೆಯ ಮಧುಗಿರಿ ತಾಲ್ಲೂಕಿನ 45 ಕೆರೆಗಳನ್ನು ಹಾಗೂ ಕೊರಟಗೆರೆ ತಾಲ್ಲೂಕಿನ 62 ಕೆರೆಗಳನ್ನು ತುಂಬಿಸಿ ಅಂತರ್ಜಲ ಹೆಚ್ಚಿಸುವ ಯೋಜನೆಯನ್ನು 553 ಕೋಟಿ ರೂಪಾಯಿ ಮೊತ್ತದಲ್ಲಿ ಅನುಷ್ಠಾನಗೊಳಿಸಲು ಕ್ರಮವಹಿಸಲಾಗುವುದು.

ವಿದ್ಯಾರ್ಥಿಗಳು ಭವಿಷ್ಯದಲ್ಲಿ ಸೂಕ್ತ ವೃತ್ತಿಯನ್ನು ಆಯ್ಕೆ ಮಾಡಿಕೊಳ್ಳಲು ಮಾರ್ಗದರ್ಶನವನ್ನು ಒದಗಿಸಲು ’ನನ್ನ ವೃತ್ತಿ, ನನ್ನ ಆಯ್ಕೆ’ ಕಾರ್ಯಕ್ರಮದಡಿ ಸರ್ಕಾರಿ ಶಾಲಾ/ಕಾಲೇಜುಗಳಲ್ಲಿನ 2.30 ಲಕ್ಷ ವಿದ್ಯಾರ್ಥಿಗಳಿಗೆ ವೃತ್ತಿಮಾರ್ಗದರ್ಶನ ನೀಡಲಾಗುವುದು. ಸೌರಶಕ್ತಿಯನ್ನು ಬಳಸಿ ಗ್ರಾಮ ಪಂಚಾಯಿತಿಗಳ ವಿದ್ಯುತ್ ಬಿಲ್ಲಿನ ಹೊರೆಯನ್ನು ತಗ್ಗಿಸಲು ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ಸೋಲಾರ್ ಮೈಕ್ರೋ-ಗ್ರಿಡ್‌ಗಳನ್ನು ಸ್ಥಾಪಿಸಲಾಗುವುದು.

ಬೆಂಗಳೂರನ್ನು ಅಂತಾರಾಷ್ಟ್ರೀಯ ಆರೋಗ್ಯ ಮಾನದಂಡಗಳ ನಗರವನ್ನಾಗಿ ಮಾಡಲು, ಬ್ರ‍್ಯಾಂಡ್ ಬೆಂಗಳೂರು ಅಭಿಯಾನದ ಅಡಿಯಲ್ಲಿ ಮುಂದಿನ ಮೂರು ವರ್ಷಗಳಲ್ಲಿ 413 ಕೋಟಿ ರೂಪಾಯಿ ವೆಚ್ಚದಲ್ಲಿ ಸಮಗ್ರ ಆರೋಗ್ಯ ಯೋಜನೆಯನ್ನು ಜಾರಿಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಮುಗಡಪತ್ರ ಭಾಷಣದಲ್ಲಿ ಘೋಷಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಗ್ರಾಮೀಣ ಪತ್ರಕರ್ತರಿಗೆ ಜಿಲ್ಲಾ ಬಸ್ ಪಾಸ್ : ಆನ್‌ಲೈನ್ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ:ವಿದ್ಯುನ್ಮಾನ ಮತ್ತು ಮುದ್ರಣ ಮಾಧ್ಯಮ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಾಮೀಣ ಪತ್ರಕರ್ತರಿಗೆ ವೃತ್ತಿ ಸಂಬಂಧಿತ ಚಟುವಟಿಕೆಗಳಿಗೆ ಜಿಲ್ಲಾ ವ್ಯಾಪ್ತಿಯಲ್ಲಿ ಪ್ರಯಾಣಿಸಲು ಉಚಿತ ಬಸ್ ಪಾಸ್ ಯೋಜನೆಗೆ ಅರ್ಹ ಪತ್ರಕರ್ತರಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಮುಖ್ಯಮಂತ್ರಿಗಳು 2024-25 ನೇ ಸಾಲಿನ ಆಯವ್ಯಯದಲ್ಲಿ ಈ ಯೋಜನೆ ಘೋಷಿಸಿದ್ದರು. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ವಿದ್ಯುನ್ಮಾನ ಅಥವಾ ಮುದ್ರಣ ಮಾಧ್ಯಮಗಳಲ್ಲಿ ಪೂರ್ಣಾವಧಿಗೆ ನೇಮಕಗೊಂಡು 4 ವರ್ಷಗಳ ಸೇವಾನುಭವ ಹೊಂದಿರುವ ಪತ್ರಕರ್ತರು ಅರ್ಜಿ ಸಲ್ಲಿಸಬಹುದು. ನೇಮಕಾತಿ ಆದೇಶ/ವೇತನ ಪತ್ರ/ಬ್ಯಾಂಕ್ ಸ್ಟೇಟ್‌ಮೆಂಟ್ ಗಳಲ್ಲಿ ಯಾವುದಾದರೂ ದಾಖಲೆಗಳನ್ನು ಸೇವಾನುಭವಕ್ಕಾಗಿ ಒದಗಿಸಬೇಕು.

ಜಿಲ್ಲಾ ವ್ಯಾಪ್ತಿಯಲ್ಲಿ ಸಂಚರಿಸುವ ಕರ್ನಾಟಕ ಸಾರಿಗೆ ಸಂಸ್ಥೆ ಬಸ್ಸುಗಳಲ್ಲಿ ಜಿಲ್ಲಾ ವ್ಯಾಪ್ತಿಗೆ ಉಚಿತವಾಗಿ ಸಂಚರಿಸಬಹುದು.ತಹಸೀಲ್ದಾರರಿಂದ ಪಡೆದ ವಾಸಸ್ಥಳ ಪ್ರಮಾಣ ಪತ್ರ ಒದಗಿಸಬೇಕು.

ರಾಜ್ಯ ಮಟ್ಟದ ಪತ್ರಿಕೆಗಳಲ್ಲಿ ಕಾರ್ಯನಿರ್ವಹಿಸುವ ವರದಿಗಾರರಿಗೆ ಪ್ರತಿ ತಾಲ್ಲೂಕಿಗೆ ಸಂಪಾದಕರು ಸೂಚಿಸುವ ಒಬ್ಬರಿಗೆ, ಜಿಲ್ಲಾ ಮಟ್ಟದ ಪತ್ರಿಕೆಗಳು ತಮ್ಮ ಜಿಲ್ಲಾ ವ್ಯಾಪ್ತಿಯಲ್ಲಿ ಒಬ್ಬರಿಗೆ, ಆರು ಪುಟಗಳಲ್ಲಿ ಪ್ರಕಟವಾಗುವ ಪ್ರಾದೇಶಿಕ ಪತ್ರಿಕೆಗಳು ಓರ್ವ ವರದಿಗಾರರು ಹಾಗೂ ಓರ್ವ ಫೋಟೋಗ್ರಾಫರ್ ಎಂಟು ಅಥವಾ ಹೆಚ್ಚು ಪುಟಗಳಲ್ಲಿ ಪ್ರಕಟವಾಗುವ ಪ್ರಾದೇಶಿಕ ಪತ್ರಿಕೆಗಳು ಇಬ್ಬರು ವರದಿಗಾರರು ಹಾಗೂ ಓರ್ವ ಫೋಟೋಗ್ರಾಫರ್‌ಗೆ ಬಸ್ ಪಾಸ್ ಪಡೆಯಲು ಅವಕಾಶವಿದೆ.

ಉಪಗ್ರಹ ಆಧಾರಿತ ವಿದ್ಯುನ್ಮಾನ ವಾಹಿನಿಗಳ ವರದಿಗಾರರು ತಾಲೂಕು ಕೇಂದ್ರಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದರೆ ಪ್ರತಿ ತಾಲ್ಲೂಕಿಗೆ ಓರ್ವ ಕ್ಯಾಮರಾಮ್ಯಾನ್ ಹಾಗೂ ಓರ್ವ ವರದಿಗಾರರು ಬಸ್ ಪಾಸ್ ಪಡೆಯಬಹುದಾಗಿದೆ.

ದಿನಪತ್ರಿಕೆಗಳು ಹಾಗೂ ಉಪಗ್ರಹ ಸುದ್ದಿ ವಾಹಿನಿಗಳ ಸಂಪಾದಕರು ನೀಡುವ ನೇಮಕಾತಿ ಪತ್ರ ಹಾಗೂ ಶಿಫಾರಸ್ಸು ಆಧರಿಸಿ ಅರ್ಹ ಪತ್ರಕರಿಗೆ ಬಸ್ ಪಾಸ್‌ಗಳನ್ನು ನೀಡಲಾಗುವುದು.

ಆಸಕ್ತ ಹಾಗೂ ಅರ್ಹ ಪತ್ರಕರ್ತರು ತಮ್ಮ ಸಮೀಪದ ಗ್ರಾಮ ಒನ್,ಕರ್ನಾಟಕ ಒನ್ ಅಥವಾ ಬೆಂಗಳೂರು ಒನ್ ಕೇಂದ್ರಗಳಿಗೆ ತೆರಳಿ ಸೇವಾಸಿಂಧು ಪೋರ್ಟಲ್‌‌ ‌ನಲ್ಲಿ ಆನ್‌ಲೈನ್ ಮೂಲಕ ಅಗತ್ಯ ದಾಖಲೆಗಳನ್ನು ಅಪ್‌ಲೋಡ್ ಮಾಡಿ ಅರ್ಜಿ ಸಲ್ಲಿಸಬಹುದು.ಅಪ್‌ಲೋಡ್ ಮಾಡಿದ ದಾಖಲೆಗಳು ಹಾಗೂ ಆನ್‌ಲೈನ್ ಅರ್ಜಿಯ ಮುದ್ರಿತ ಪ್ರತಿಯನ್ನು ತಮ್ಮ ಜಿಲ್ಲೆಯ ಜಿಲ್ಲಾ ವಾರ್ತಾಧಿಕಾರಿಗಳ ಕಚೇರಿಗೆ ಸ್ವಯಂ ದೃಢೀಕರಿಸಿ ಸಲ್ಲಿಸಬೇಕು ಎಂದು ಪ್ರಕಟಣೆ ತಿಳಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ35 minutes ago

ಸರ್ಕಾರಿ ವೈದ್ಯರು ಬೆಳಗ್ಗೆ 9 ಗಂಟೆಯಿಂದ 4 ಗಂಟೆಯವರೆಗೆ ಕಾರ್ಯ ನಿರ್ವಹಿಸುವುದು ಕಡ್ಡಾಯ:ಸಚಿವ ಶರಣಪ್ರಕಾಶ್ ಪಾಟೀಲ್

ಸುದ್ದಿದಿನಡೆಸ್ಕ್:ಸರ್ಕಾರಿ ಆಸ್ಪತ್ರೆಗಳಲ್ಲಿ ಇನ್ನು ಮುಂದೆ ಕರ್ತವ್ಯ ನಿರ್ವಹಿಸುವ ವೈದ್ಯರು ಬೆಳಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆವರೆಗೆ ಕಡ್ಡಾಯವಾಗಿ ಕಾರ್ಯ ನಿರ್ವಹಿಸಬೇಕು ಎಂದು ವೈದ್ಯಕೀಯ ಸಚಿವ ಡಾ.ಶರಣಪ್ರಕಾಶ್...

ದಿನದ ಸುದ್ದಿ53 minutes ago

ಮಹಿಳಾ ಸಬಲೀಕರಣಕ್ಕೆ ಶಿಕ್ಷಣ ಮತ್ತು ಆರ್ಥಿಕ ಸ್ವಾವಲಂಬನೆಯೇ ಪೂರಕ : ಡಾ.ಬಾಬು

ಸುದ್ದಿದಿನ,ದಾವಣಗೆರೆ:ಮಹಿಳಾ ಸಬಲೀಕರಣ, ಸಾಮಾಜಿಕ. ನ್ಯಾಯಕ್ಕೆ ಶಿಕ್ಷಣ ಮತ್ತು ಆರ್ಥಿಕ ಸ್ವಾವಲಂಬನೆ ಪೂರಕ ಮತ್ತು ಅವರ ಸಾಧನೆಯ ಮಹತ್ವವನ್ನು ಬೆಳಕಿಗೆ ತರುವ ಉದ್ದೇಶವೇ ಮಹಿಳಾ ದಿನಾಚರಣೆಯ ಉದ್ದೇಶ ಎಂದು...

ದಿನದ ಸುದ್ದಿ2 days ago

ಮುಂದಿನ ನಾಯಕರಾಗಿ ತಯಾರಾಗಿ : ಪ್ರೊ ಇಗ್ನಿಸಿಯಸ್

ಸುದ್ದಿದಿನ,ದಾವಣಗೆರೆ:ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ನಿರ್ವಹಣಾ ಶಾಸ್ತ್ರ ವಿಭಾಗದ ವತಿಯಿಂದ “ಫ್ರೆಷರ್ಸ್ ಫಿಯೆಸ್ಟಾ – 2K25” ಕಾರ್ಯಕ್ರಮವು ಮಹಾ ಸಡಗರದಿಂದ ನಡೆಯಿತು. ಈ ಕಾರ್ಯಕ್ರಮಕ್ಕೆ ಕಾಲೇಜಿನ ಪ್ರಾಂಶುಪಾಲರಾದ...

ದಿನದ ಸುದ್ದಿ4 days ago

ಸಿಎಂ ಸಿದ್ದರಾಮಯ್ಯ ಬಜೆಟ್ ಮಂಡನೆ ; ಇಲ್ಲಿವೆ ಪ್ರಮುಖಾಂಶಗಳು

ಸುದ್ದಿದಿನಡೆಸ್ಕ್:ಮುಖ್ಯಮಂತ್ರಿ ಸಿದ್ದರಾಮಯ್ಯ 2025-26ನೇ ಸಾಲಿನ 4 ಲಕ್ಷದ 9 ಸಾವಿರದ 549 ಕೋಟಿ ರೂ ಬಜೆಟ್ ಗಾತ್ರದ ಕರ್ನಾಟಕ ರಾಜ್ಯ ಆಯವ್ಯಯವನ್ನು ಇಂದು ಮಂಡಿಸಿದ್ದಾರೆ. ಕೃಷಿ ಮತ್ತು...

ಅಂತರಂಗ5 days ago

ಮಹಿಳಾ ದಿನಾಚರಣೆ | ಸಾಧನೆಯ ಸುಗಂಧ, ಪ್ರೇರಣೆಯ ಬೆಳಕು

ಡಾ. ವೆಂಕಟೇಶ ಬಾಬು ಎಸ್, ಸಹ ಪ್ರಾಧ್ಯಾಪಕರು, ದಾವಣಗೆರೆ ಇಂದು ಮಹಿಳಾ ದಿನಾಚರಣೆ ಪ್ರಯುಕ್ತ ಎಲ್ಲಾ ಮಹಿಳೆಯರಿಗೆ ಶುಭಾಷಯಗಳು ಪ್ರತಿಯೊಂದು ಮಹಿಳೆ ತನ್ನ ಜೀವನದಲ್ಲಿ ವಿವಿಧ ಹಂತಗಳನ್ನು...

ದಿನದ ಸುದ್ದಿ1 week ago

ಗ್ರಾಮೀಣ ಪತ್ರಕರ್ತರಿಗೆ ಜಿಲ್ಲಾ ಬಸ್ ಪಾಸ್ : ಆನ್‌ಲೈನ್ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ:ವಿದ್ಯುನ್ಮಾನ ಮತ್ತು ಮುದ್ರಣ ಮಾಧ್ಯಮ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಾಮೀಣ ಪತ್ರಕರ್ತರಿಗೆ ವೃತ್ತಿ ಸಂಬಂಧಿತ ಚಟುವಟಿಕೆಗಳಿಗೆ ಜಿಲ್ಲಾ ವ್ಯಾಪ್ತಿಯಲ್ಲಿ ಪ್ರಯಾಣಿಸಲು ಉಚಿತ ಬಸ್ ಪಾಸ್ ಯೋಜನೆಗೆ ಅರ್ಹ ಪತ್ರಕರ್ತರಿಂದ...

ದಿನದ ಸುದ್ದಿ2 weeks ago

ನಮ್ಮ‌ ಪೂರ್ವಿಕ ಶಿವನೂ ; ಅವರ ಡುಬಾಕು ಸನಾತನವೂ..

ಹರ್ಷಕುಮಾರ್ ಕುಗ್ವೆ ಲಿಂಗವು ದೇವರಲ್ಲ ಶಿವನು ದೇವರಲ್ಲ ಶಕ್ತಿಯೂ ದೇವರಲ್ಲ. ಮನುಷ್ಯನ ಕಲ್ಪನೆಯ ಆಳವನ್ನು ಮೀರಿದ ಯಾವ ದೇವರೂ ಇಲ್ಲ. ಅಸಲಿಗೆ ಇಡೀ ಜಗತ್ತನ್ನು ನಡೆಸುವ ದೇವರೆಂಬುದೇ...

ದಿನದ ಸುದ್ದಿ2 weeks ago

ಚಿಕ್ಕಮಗಳೂರು | ಕಾಡ್ಗಿಚ್ಚಿನಿಂದ ಕಾಫಿ ತೋಟ, ಅರಣ್ಯ ಪ್ರದೇಶ ನಾಶ

ಸುದ್ದಿದಿನ,ಚಿಕ್ಕಮಗಳೂರು:ಜಿಲ್ಲೆಯ ಮೂಡಿಗೆರೆ ಹಾಗು ಕಳಸ ತಾಲೂಕುಗಳಲ್ಲಿ ಉಂಟಾದ ಪ್ರತ್ಯೇಕ ಕಾಡ್ಗಿಚ್ಚು ಪ್ರಕರಣಗಳಲ್ಲಿ 15 ಎಕರೆ ಕಾಫಿ ತೋಟ ಮತ್ತು 25 ಕ್ಕು ಹೆಚ್ಚು ಎಕರೆ ಅರಣ್ಯ ಪ್ರದೇಶ...

ದಿನದ ಸುದ್ದಿ2 weeks ago

ಕಂದಗಲ್‌ ಗ್ರಾಮ ಪಂಚಾಯಿತಿ ನೂತನ ಆಧ್ಯಕ್ಷರಾಗಿ ಎಲ್‌.ಆರ್.‌ ಚಂದ್ರಪ್ಪ ಆಯ್ಕೆ

ಸುದ್ದಿದಿನ,ದಾವಣಗೆರೆ:ತಾಲೂಕಿನ ಕಂದಗಲ್‌ ಗ್ರಾಮ ಪಂಚಾಯಿತಿಯ ನೂತನ ಆಧ್ಯಕ್ಷರಾಗಿ ಫೆ.21 ರಂದು ಎಲ್‌.ಆರ್.‌ ಚಂದ್ರಪ್ಪ ಆಯ್ಕೆಯಾಗಿದ್ದಾರೆ. ಎರಡನೇ ಅವಧಿಗೆ ಸಾಮಾನ್ಯ ಪುರುಷ ಮೀಸಲಿದ್ದು, ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಚುನಾವಣಾ ಆಧಿಕಾರಿಯಾಗಿ...

ದಿನದ ಸುದ್ದಿ2 weeks ago

ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕ ಎಂದು ಘೋಷಿಸಿದ್ದು ಕಾಂಗ್ರೆಸ್ ಸರ್ಕಾರ : ಸಿಎಂ ಸಿದ್ದರಾಮಯ್ಯ

ಸುದ್ದಿದಿನ,ಬೆಂಗಳೂರು:ಕಾವೇರಿ ನಿವಾಸದಲ್ಲಿ ಲಿಂಗಾಯತ ಸ್ವಾಮೀಜಿಗಳು, ಸಚಿವರು, ಶಾಸಕರು, ಸಮಾಜದ ಮುಖಂಡರ ನಿಯೋಗದವರು ಸೊಮವಾರ ನನ್ನನ್ನು ಭೇಟಿಯಾಗಿ, ಸಮುದಾಯದ ಬೇಡಿಕೆಗಳ ಕುರಿತು ಸಮಾಲೋಚನೆ ನಡೆಸಿ, ಮನವಿಪತ್ರ ನೀಡಿದರು. ಬಸವ...

Trending