ರಾಜಕೀಯ
ಸಿದ್ದುಗೆ ‘ಡಿಕೆಶಿ ಟಾಂಗ್’ ನೀಡಿದ್ದು ಏನಂತ ಗೊತ್ತಾ ?
ಸುದ್ದಿದಿನ ಡೆಸ್ಕ್: ಪಡಿತರ ಅಕ್ಕಿ ಇಳಿಕೆ ವಿಚಾರವಾಗಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಚಿವ ಡಿ.ಕೆ. ಶಿವಕುಮಾರ್ ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ.
ಪಡಿತರ ಅಕ್ಕಿ ಪ್ರಮಾಣವನ್ನು 7ರಿಂದ 5 ಕೆಜಿಗೆ ಇಳಿಸಿರುವ ಕುರಿತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರಕ್ಕೆ ಪತ್ರ ಬರೆದಿದ್ದು ಈ ಕುರಿತು ಸಚಿವ ಡಿ.ಕೆ. ಶಿವಕುಮಾರ್ ಹೇಳಿಕೆ ನೀಡಿದ್ದಾರೆ.
ಅಕ್ಕಿ ಇಳಿಕೆ ವಿಚಾರವನ್ನು ಪರಿಶೀಲನೆ ಮಾಡುವುದಾಗಿ ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದಾರೆ. ಅದೇ ವಿಚಾರದಲ್ಲಿ ಪದೇಪದೇ ಸರ್ಕಾರದ ಮೇಲೆ ಒತ್ತಡ ಹಾಕುವುದು ಸರಿಯಲ್ಲ ಎಂದು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9986715401