ದಿನದ ಸುದ್ದಿ
ಚಿತ್ರದುರ್ಗ ಜಿಲ್ಲೆಯ ಮತಗಟ್ಟೆಗಳೆಷ್ಟು ಗೊತ್ತಾ..?
ಸುದ್ದಿದಿನ, ಚಿತ್ರದುರ್ಗ : ಮೇ 10 ರಂದು ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಯನ್ನು ಯಶಸ್ವಿಗೊಳಿಸುವ ನಿಟ್ಟಿನಲ್ಲಿ ಭಾರತೀಯ ಚುನಾವಣಾ ಆಯೋಗ ಹಾಗೂ ಜಿಲ್ಲಾಢಳಿತ ಸಕಲ ರೀತಿಯಲ್ಲಿ ಸಜ್ಜಾಗುತ್ತಿವೆ.
ಚುನಾವಣಾ ಆಯೋಗದಿಂದ ಅನುಮೋದನೆಗೊಂಡ ಚಿತ್ರದುರ್ಗ ಜಿಲ್ಲೆಯ ಆರು ವಿಧಾನ ಸಭಾ ಕ್ಷೇತ್ರಗಳ ವ್ಯಾಪ್ತಿಯ 1 ಸಾವಿರದ 648ಮತಗಟ್ಟೆಗಳ ಪಟ್ಟಿಯನ್ನು ಪ್ರಕಟಿಸಲಾಗಿದೆ.
ಮೊಳಕಾಲ್ಮೂರು ಕ್ಷೇತ್ರದಲ್ಲಿ 284, ಚಳ್ಳಕೆರೆ ಕ್ಷೇತ್ರದಲ್ಲಿ 259, ಚಿತ್ರದುರ್ಗ ಕ್ಷೇತ್ರದಲ್ಲಿ 283, ಹಿರಿಯೂರು ಕ್ಷೇತ್ರದಲ್ಲಿ 285, ಹೊಸದುರ್ಗ ಕ್ಷೇತ್ರದಲ್ಲಿ 240ಹಾಗೂ ಹೊಳಲ್ಕೆರೆ ಕ್ಷೇತ್ರದಲ್ಲಿ 297 ಮತಗಟ್ಟೆಗಳಿವೆ.
ಸಾರ್ವಜನಿಕರ ಮಾಹಿತಿಗಾಗಿ ಸರ್ಕಾರಿ ಕಚೇರಿಗಳಲ್ಲಿ ಮತಗಟ್ಟೆ ಪಟ್ಟಿ ಪಕ್ರಟಿಸಿದ್ದು ಹೆಚ್ಚಿನ ಮಾಹಿತಿಯನ್ನು ಸಂಬಂಧಿಸಿದ ಕಚೇರಿಗಳಲ್ಲಿ ಪಡೆಯಬಹುದಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ದಿವ್ಯಪ್ರಭು.ಜಿ.ಆರ್.ಜೆ ತಿಳಿಸಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 80 ವರ್ಷಕ್ಕೂ ಮೇಲ್ಪಟ್ಟ ಹಿರಿಯ ನಾಗರಿಕರು ಹಾಗೂ ದಿವ್ಯಾಂಗರು ಇದೇ 29 ಮತ್ತು 30 ರಂದು ಮನೆಯಿಂದಲೇ ಮತ ಚಲಾಯಿಸಬಹುದಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಆರ್.ಲತಾ ತಿಳಿಸಿದ್ದಾರೆ.
ಜಿಲ್ಲೆಯಲ್ಲಿ 583 ಜನ ಮತದಾರರು ಮನೆಯಿಂದಲೇ ಮತದಾನ ಮಾಡುವ ಕೋರಿಕೆ ಸಲ್ಲಿಸಿದ್ದು, ಅಂತವರಿಗೆ ಚುನಾವಣಾ ಅಧಿಕಾರಿಗಳ ತಂಡದಿಂದ ವಿಶೇಷ ಸೌಲಭ್ಯ ಕಲ್ಪಿಸಲಾಗಿದ್ದು, ಮತದಾನ ಪ್ರಕ್ರಿಯೆಯಲ್ಲಿ ಗೌಪ್ಯತೆ ಕಾಪಾಡಲು ಎಲ್ಲಾ ಕ್ರಮ ವಹಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243