Connect with us

ದಿನದ ಸುದ್ದಿ

ವೈದ್ಯರು-ತಜ್ಞವೈದ್ಯರು, ಶುಷ್ರೂಷಕರ ನೇಮಕಕ್ಕೆ ನೇರ ಸಂದರ್ಶನ

Published

on

ಸುದ್ದಿದಿನ,ದಾವಣಗೆರೆ : ಜಿಲ್ಲಾ ಆಸ್ಪತ್ರೆಗಳು ಹಾಗೂ ಜಿಲ್ಲಾ ಮಟ್ಟದ ಆಸ್ಪತ್ರೆಗಳಲ್ಲಿ ಕೊರೊನಾ ವೈರಸ್ ಪ್ರಕರಣಗಳನ್ನು ಸಮರ್ಪಕವಾಗಿ ನಿಭಾಯಿಸಲು ಜಿಲ್ಲೆಯಲ್ಲಿ ತಾತ್ಕಾಲಿಕವಾಗಿ ವೈದ್ಯಕೀಯ ಸೇವೆಯ ಹುದ್ದೆಗಳನ್ನು ಗರಿಷ್ಟ 6 ತಿಂಗಳ ಅವಧಿಗೆ ಗುತ್ತಿಗೆ/ಹೊರಗುತ್ತಿಗೆ ಆಧಾರದಲ್ಲಿ ನೇಮಕ ಮಾಡಿಕೊಳ್ಳಲು ನೇರ ಸಂದರ್ಶನ ಕರೆಯಲಾಗಿದೆ.

ಜಿಲ್ಲಾಧಿಕಾರಿಗಳ ಸಹಮತದೊಂದಿಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ನೇರ ಸಂದರ್ಶನ (walk in Interview) ನಡೆಸಿ ದಾಖಲಾತಿಗಳನ್ನು ಪರಿಶೀಲಿಸಿ ನಿಯಮಾನುಸಾರ ಈ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಿದ್ದು, ಅರ್ಹ ವೈದ್ಯರು/ತಜ್ಞವೈದ್ಯರು/ ಅರೆವೈದ್ಯಕೀಯ (ಪಲ್ಮನಾಲೊಜಿಸ್ಟ್ 02, ಜನರಲ್ ಮೆಡಿಸಿನ್ 2, ಎಮೆರ್ಜೆನ್ಸಿ ಮೆಡಿಸಿನ್ 02 ಮತ್ತು ಅನಸ್ತೇಷಿಯಾ 01 ವೈದ್ಯರು/ತಜ್ಞವೈದ್ಯರು ಹಾಗೂ 13 ಸಂಖ್ಯೆಯಲ್ಲಿ ಶುಶ್ರೂಷಕರು) ಸಿಬ್ಬಂದಿಯವರಿಗೆ ಗುತ್ತಿಗೆ ಆಧಾರದ ಮೇಲೆ ಗರಿಷ್ಟ 6 ತಿಂಗಳ ಅವಧಿಗೆ ನೇಮಕಾತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ನೇರ ಸಂದರ್ಶನ ಕರೆಯಲಾಗಿತ್ತು.

ಆದರೆ ಸಂದರ್ಶನಕ್ಕೆ ವೈದ್ಯರು ಅವಶ್ಯಕತೆಗನುಗುಣವಾಗಿ ಹಾಜರಾಗದೇ ಇರುವುದರಿಂದ ಜುಲೈ 18 ರಂದು ಬೆಳಿಗ್ಗೆ 11.30 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ, ದಾವಣಗೆರೆ ಇಲ್ಲಿ ಅರ್ಹ ಅಭ್ಯರ್ಥಿಗಳಿಂದ ಕೆಳಕಂಡಂತೆ ನೇರ ಮರು ಸಂದರ್ಶನಕ್ಕೆ ಕರೆಯಲಾಗಿದೆ.

ಅಭ್ಯರ್ಥಿಗಳು ಜುಲೈ 17 ರಂದು ಬೆಳಿಗ್ಗೆ 10.30 ರಿಂದ ಮದ್ಯಾಹ್ನ 01.30 ರೊಳಗೆ ಈ ಕಚೇರಿ (ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಛೇರಿ, ದಾವಣಗೆರೆ)ಗೆ ಹಾಜರಾಗಿ ಸಂಬಂಧಪಟ್ಟ ವಿಭಾಗದಲ್ಲಿ ವಿದ್ಯಾರ್ಹತೆಯ ಅರ್ಹತಾ ಮೂಲ ದಾಖಲೆಗಳ ಪರಿಶೀಲನೆ ಮಾಡಿಸಿ, ಅರ್ಹತಾ ದಾಖಲೆಗಳ ಒಂದು ಸೆಟ್ ದೃಢೀಕೃತ ಜೆರಾಕ್ಸ್ ಪ್ರತಿಗಳನ್ನು ಸಲ್ಲಿಸಬೇಕೆಂದು ಪ್ರಕಟಣೆ ತಿಳಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ದುರ್ಗಾಂಬಿಕಾದೇವಿ ಜಾತ್ರೆ ; ಭಕ್ತಾದಿಗಳಿಗೆ ಶೌಚಾಲಯ ವ್ಯವಸ್ಥೆ

Published

on

ಸುದ್ದಿದಿನ,ದಾವಣಗೆರೆ:ಫೆಬ್ರವರಿ 23 ರಿಂದ 27 ರವರೆಗೆ ನಡೆಯುವ ದುರ್ಗಾಂಬಿಕಾದೇವಿ ಜಾತ್ರೆ ಪ್ರಯಕ್ತ ದೇವಾಲಯಕ್ಕೆ ಆಗಮಿಸುವ ಭಕ್ತಾಧಿಗಳಿಗೆ ಶೌಚಾಲಯಗಳ ವ್ಯವಸ್ಥೆ ಕಲ್ಪಿಸಲಾಗಿದೆ.

ದೊಡ್ಡಪೇಟೆಯ ನಾಮದೇವ ಸಿಂಪಿ ಕಲ್ಯಾಣ ಮಂಟಪ, ವಿರಕ್ತಮಠ ಮತ್ತು ನಗರ ಕುಟುಂಬ ಕಲ್ಯಾಣ ಕೇಂದ್ರ-1, ಎಸ್.ಕೆ.ಪಿ ರಸ್ತೆಯ ಎಸ್.ವಿ.ಎಸ್.ಶಾಲೆ ಮತ್ತು ಕನ್ನಿಕಾಪರಮೇಶ್ವರಿ ದೇವಸ್ಥಾನ ಸಂಘ, ಮಾರ್ಕಂಡೇಶ್ವರ ಕಲ್ಯಾಣ ಮಂಟಪ, ಈ ಸ್ಥಳಗಳಲ್ಲಿರುವ ಶೌಚಾಲಯಗಳನ್ನು ಉಪಯೋಗಿಸುವ ಮೂಲಕ ದೇವಾಲಯದ ಸುತ್ತಮುತ್ತಲಿನ ಆವರಣವನ್ನು ಸ್ವಚ್ಚವಾಗಿಡಲು ಸಹಕರಿಸಬೇಕೆಂದು ಪಾಲಿಕೆ ಆಯುಕ್ತರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ : ಆಕ್ಷೇಪಣೆಗಳಿಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ : ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ -2025ಕ್ಕೆ ಸಂಬಂಧಿಸಿದಂತೆ ಜಿಲ್ಲಾ ಮಟ್ಟದ ಮೇಲ್ವಿಚಾರಣೆ ಮತ್ತು ಮೌಲ್ಯಮಾಪನಗಳಿಗೆ ಆಕ್ಷೇಪಣೆ, ತಕರಾರು ಸಲ್ಲಿಸಲು ಅರ್ಜಿ ಆಹ್ವಾನಿಸಲಾಗಿದೆ.

ತಿರಸ್ಕೃತಗೊಂಡ ಅರ್ಜಿಗಳ ಅಭ್ಯರ್ಥಿಗಳ ಆಕ್ಷೇಪಣೆಗಳಿದ್ದಲ್ಲಿ, ಮಾರ್ಚ್ 13 ರೊಳಗೆ ನಿಗದಿಪಡಿಸಿದ ದಿನಾಂಕದೊಳಗಾಗಿ ಪೂರಕ ದಾಖಲಾತಿಗಳನ್ನು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕೆಂದು ಜಿಲ್ಲಾಧಿಕಾರಿ ಗಂಗಾರ‍್ವಾಮಿ.ಜಿ.ಎಂ.ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಉದ್ಯೋಗಿಗಳಿಗೆ ಗೂಗಲ್ ಶಾಕ್..! AI ಕಲಿಯದಿದ್ದರೆ ಉದ್ಯೋಗ ತೊರೆಯಿರಿ

Published

on

ಸುದ್ದಿದಿನ,ಬೆಂಗಳೂರು: ಜಗತ್ತಿನ ಟೆಕ್ ದೈತ್ಯ ಕಂಪನಿ ಗೂಗಲ್ ತನ್ನ ಉದ್ಯೋಗಿಗಳಿಗೆ ಶಾಕ್ ನೀಡಿದೆ. AI ಕಲಿಯದಿದ್ದರೆ ಉದ್ಯೋಗ ತೊರೆಯುವಂತೆ ಸೂಚಿಸಿದ್ದು, ‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP) ಘೋಷಿಸಿದೆ.

ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP)

AI ಕಲಿಯುವುದು ಅನಿವಾರ್ಯ: ಗೂಗಲ್ ಈಗ ಸಂಪೂರ್ಣವಾಗಿ ‘AI ಫಸ್ಟ್’ ಕಂಪನಿಯಾಗಿ ರೂಪಾಂತರಗೊಳ್ಳುತ್ತಿದೆ. ತಂತ್ರಜ್ಞಾನದ ವೇಗಕ್ಕೆ ಹೊಂದಿಕೊಳ್ಳಲು ಸಾಧ್ಯವಾಗದ ಅಥವಾ AI ಕಲಿಯಲು ಆಸಕ್ತಿ ಇಲ್ಲದ ಉದ್ಯೋಗಿಗಳಿಗೆ ಗೌರವಯುತವಾಗಿ ಉದ್ಯೋಗ ತೊರೆಯಲು ‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP) ಯನ್ನು ಜಾರಿಗೊಳಿಸಿದೆ.

ಯಾರಿಗೆ ಅನ್ವಯಿಸುತ್ತದೆ?: ಇದು ಮುಖ್ಯವಾಗಿ ಗೂಗಲ್‌ನ ಗ್ಲೋಬಲ್ ಬಿಸಿನೆಸ್ ಆರ್ಗನೈಸೇಷನ್ (GBO) ವಿಭಾಗದ ಉದ್ಯೋಗಿಗಳಿಗೆ (ಸೇಲ್ಸ್, ಕಾರ್ಪೊರೇಟ್ ಡೆವಲಪ್ಮೆಂಟ್ ಮತ್ತು ಸೊಲ್ಯೂಷನ್ಸ್ ಟೀಮ್) ಗೆ ಅನ್ವಯಿಸುತ್ತದೆ. ಆದರೆ, ಗ್ರಾಹಕರೊಂದಿಗೆ ನೇರ ಸಂಪರ್ಕ ಹೊಂದಿರುವ ತಂಡಗಳಿಗೆ ಇದರಿಂದ ವಿನಾಯಿತಿ ನೀಡಲಾಗಿದೆ.

ಇದು ಲೇ-ಆಫ್ ಅಲ್ಲ: ಇದು ಕಡ್ಡಾಯವಾಗಿ ಕೆಲಸದಿಂದ ತೆಗೆದುಹಾಕುವ ಪ್ರಕ್ರಿಯೆಯಲ್ಲ. ಬದಲಾಗಿ, ಸ್ವತಃ ಹೊರಹೋಗಲು ಬಯಸುವ ಉದ್ಯೋಗಿಗಳಿಗೆ ಉತ್ತಮ ಪರಿಹಾರ ಧನ (Severance Package) ಮತ್ತು ಇತರ ಸೌಲಭ್ಯಗಳನ್ನು ನೀಡಿ ಕಳುಹಿಸಿಕೊಡುವ ಯೋಜನೆಯಾಗಿದೆ.

ಕಾರಣವೇನು?: ತಂತ್ರಜ್ಞಾನ ಅತ್ಯಂತ ವೇಗವಾಗಿ ಬದಲಾಗುತ್ತಿದ್ದು, ಕಂಪನಿಗೆ AI ಮಿಷನ್‌ಗೆ ಸಂಪೂರ್ಣವಾಗಿ ಹೊಂದಿಕೊಳ್ಳುವ ಮತ್ತು ಕ್ರಿಯಾತ್ಮಕವಾಗಿ ಕೆಲಸ ಮಾಡುವ ಕಾರ್ಯಪಡೆಯ ಅಗತ್ಯವಿದೆ ಎಂದು ಗೂಗಲ್‌ನ ಚೀಫ್ ಬಿಸಿನೆಸ್ ಆಫೀಸರ್ ಫಿಲಿಪ್ ಶೆಡ್ಲರ್ ತಿಳಿಸಿದ್ದಾರೆ.

ಭವಿಷ್ಯದ ಮುನ್ಸೂಚನೆ: ಅಮೆಜಾನ್, ಮೆಟಾ ಮತ್ತು ಮೈಕ್ರೋಸಾಫ್ಟ್‌ನಂತಹ ಇತರ ಟೆಕ್ ದೈತ್ಯ ಕಂಪನಿಗಳು ಕೂಡ ಇದೇ ಹಾದಿಯಲ್ಲಿ ಸಾಗುವ ಸಾಧ್ಯತೆ ಇದೆ. 2026ರಲ್ಲಿ ಈ ನಾಲ್ಕು ಕಂಪನಿಗಳು AI ತಂತ್ರಜ್ಞಾನಕ್ಕಾಗಿ ಸುಮಾರು 58.92 ಲಕ್ಷ ಕೋಟಿ ರೂಪಾಯಿ ಹೂಡಿಕೆ ಮಾಡುವ ಅಂದಾಜಿದೆ.

ಒಟ್ಟಾರೆಯಾಗಿ, ಭವಿಷ್ಯದ ಉದ್ಯೋಗ ಮಾರುಕಟ್ಟೆಯಲ್ಲಿ AI ಕೌಶಲ್ಯ ಅತ್ಯಂತ ಅನಿವಾರ್ಯ ಎಂಬ ಎಚ್ಚರಿಕೆಯ ಸಂದೇಶವನ್ನು ಗೂಗಲ್ ಈ ಮೂಲಕ ನೀಡಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending