ದಿನದ ಸುದ್ದಿ
ಡಾಕ್ಟರ್ ಓದಿದವರು ಕೂಡ ಮೌಡ್ಯಾಚರಣೆ ಬಿಟ್ಟಿಲ್ಲ : ಸಿಎಂ ಸಿದ್ದರಾಮಯ್ಯ ಅಸಮಾಧಾನ
ಸುದ್ದಿದಿನ,ಬೆಂಗಳೂರು:ವಿದ್ಯಾವಂತರಲ್ಲೇ ಜಾತಿಪ್ರಜ್ಞೆ ಹೆಚ್ಚಾಗುತ್ತಿದೆ. ಡಾಕ್ಟರ್ ಓದಿದವರು ಇನ್ನೂ ಮೌಡ್ಯ ಬಿಟ್ಟಿಲ್ಲ. ಓದಿದವರೇ ಇನ್ನೂ ಹಣೆಬರಹದಲ್ಲಿ, ಕರ್ಮ ಸಿದ್ಧಾಂತದಲ್ಲಿ ನಂಬಿಕೆ ಇಟ್ಟುಕೊಂಡಿದ್ದಾರೆ. ಹೀಗಾಗಿ ವಿದ್ಯಾರ್ಥಿಗಳು ಬಾಲ್ಯದಿಂದಲೇ ಇಂಥಾ ಮೌಡ್ಯದಲ್ಲಿ ನಂಬಿಕೆ ಇಡಬಾರದು ಎಂದು ಸಿಎಂ ಸಿದ್ದರಾಮಯ್ಯ ಅಭಿಪ್ರಾಯಪಟ್ಟರು.
ಸಮಾಜ ಕಲ್ಯಾಣ ಇಲಾಖೆ, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಸಂಯುಕ್ತಾಶ್ರಯದಲ್ಲಿ ಇಂದು ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಎಸ್.ಎಸ್.ಎಲ್.ಸಿ ಮತ್ತು ಪಿ.ಯು.ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆಗೈದ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಅವರು ಮಾತನಾಡಿದರು
ಸರ್ಕಾರಿ ವಸತಿ ಶಾಲೆಗಳ ಮಕ್ಕಳು ಈ ಬಾರಿ ಶೇ96 ರಷ್ಟು ಫಲಿತಾಂಶ ಪಡೆದಿದ್ದಾರೆ. ಮುಂದಿನ ಬಾರಿ ಶೇ100 ರಷ್ಟು ಅಂಕ ಪಡೆಯಬೇಕು. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಮತ್ತು ಶಿಕ್ಷಕರ ಪ್ರಯತ್ನಗಳು ಸಾಗಲಿ ಎಂದರು.
ದಲಿತ ಸಂಘರ್ಷ ಸಮಿತಿ ರಾಜ್ಯದಲ್ಲಿ ನಡೆಸಿದ, “ನಮಗೆ ಸರಾಯಿ ಅಂಗಡಿ ಬೇಡ, ವಸತಿ ಶಾಲೆ ಬೇಕು” ಎನ್ನುವ ಹೋರಾಟದಿಂದ ಪ್ರೇರಿತನಾಗಿ ಮೊದಲ ಬಜೆಟ್ ಮಂಡಿಸುವ ವೇಳೆ ಗ್ರಾಮೀಣ ಭಾಗದಲ್ಲಿ ಮೊರಾರ್ಜಿ ಶಾಲೆಗಳನ್ನು ಆರಂಭಿಸಿದೆ. ಅವತ್ತಿನಿಂದ ನಿರಂತರವಾಗಿ ಮೊರಾರ್ಜಿ ವಸತಿ ಶಾಲೆಗಳನ್ನು ತೆರೆಯುತ್ತಲೇ ಇದ್ದೇನೆ. ಸದ್ಯ ಸಮಾಜ ಕಲ್ಯಾಣ ಇಲಾಖೆ ಅಡಿಯಲ್ಲಿ 833 ವಸತಿ ಶಾಲೆಗಳಿವೆ. ಅಲ್ಪ ಸಂಖ್ಯಾತ ಇಲಾಖೆಯಡಿಯಲ್ಲಿರುವುದೂ ಸೇರಿ ಒಟ್ಟು 946 ವಸತಿ ಶಾಲೆಗಳಿವೆ.
ಕೆಲವು ಹೋಬಳಿಯಲ್ಲಿ ಒಂದಕ್ಕಿಂತ ಹೆಚ್ಚು ವಸತಿ ಶಾಲೆಗಳಿವೆ. ಆದ್ದರಿಂದ ಕೆಲವು ಹೋಬಳಿಗಳಲ್ಲಿ ಇಲ್ಲವಾಗಿತ್ತು. ಹೀಗಾಗಿ ಈ ವರ್ಷ 20 ವಸತಿ ಶಾಲೆಗಳನ್ನು ಆರಂಭಿಸಲು ಅನುಮತಿ ನೀಡಿದ್ದೇನೆ. ಹೋಬಳಿಗೊಂದು ವಸತಿ ಶಾಲೆ ನನ್ನ ಗುರಿ ಮತ್ತು ಉದ್ದೇಶವಾಗಿದೆ.
ಗ್ರಾಮೀಣ ಭಾಗದಲ್ಲಿ ಸರ್ವರಿಗೂ ಗುಣಮಟ್ಟದ ವೈಚಾರಿಕತೆ, ವೈಜ್ಞಾನಿಕತೆಯಿಂದ ಕೂಡಿದ ಶಿಕ್ಷಣ ದೊರೆಯಬೇಕು. ಎಲ್ಲಾ ಜಾತಿ, ವರ್ಗದ ಮಕ್ಕಳಿಗೆ ಓದುವ ಅವಕಾಶ ಕಲ್ಪಿಸಿದ್ದು ನಮ್ಮ ಸಂವಿಧಾನ.
ಜಾತಿ ವ್ಯವಸ್ಥೆ ಕಾರಣದಿಂದ ಸಮಾಜದಲ್ಲಿ ಅಸಮಾನತೆ ಸೃಷ್ಟಿಯಾಗಿದೆ. ಇದನ್ನು ಹೋಗಲಾಡಿಸಬೇಕಾಗಿದೆ. ನನಗೆ ಶಿಕ್ಷಣ ಸಿಕ್ಕಿದ್ದರಿಂದಲೇ ಮುಖ್ಯಮಂತ್ರಿ ಆಗುವ ಅವಕಾಶ ದೊರೆಯಿತು. ಇಲ್ಲದಿದ್ದರೆ ನಾನೂ ಎಮ್ಮೆ, ಹಸು ಮೇಯಿಸುತ್ತಾ ಅಷ್ಟಕ್ಕೇ ಸೀಮಿತ ಆಗಬೇಕಾಗಿತ್ತು.
ಬುದ್ದ, ಬಸವಣ್ಣ ಎಂಟು ಶತಮಾನಗಳ ಹಿಂದೆ ಜಾತಿ ವ್ಯವಸ್ಥೆ ಅಳಿಸಲು ಶ್ರಮಿಸಿದರು. ಆದರೆ ವಿದ್ಯಾವಂತರಲ್ಲೇ ಜಾತಿಪ್ರಜ್ಞೆ ಹೆಚ್ಚಾಗುತ್ತಿದೆ ಎಂಬುದು ವಿಪರ್ಯಾಸ. ಮಕ್ಕಳಿಗೆ ಜಾತಿ, ಧರ್ಮದ ತಾರತಮ್ಯ ಕಲಿಸುವವರೇ ನಾವು. ಆದ್ದರಿಂದ ಪೋಷಕರು, ಶಿಕ್ಷಕರು ಮೊದಲು ಕಂದಾಚಾರ, ಮೌಡ್ಯದಿಂದ ಹೊರಗೆ ಬರಬೇಕು. ಆಗ ಮಕ್ಕಳೂ ವೈಜ್ಞಾನಿಕವಾಗಿ ಬೆಳೆದು ಉತ್ತಮ ಭವಿಷ್ಯ ರೂಪಿಸಿಕೊಳ್ಳುತ್ತಾರೆ.
ಹುಟ್ಟುವಾಗ ಎಲ್ಲಾ ಮಕ್ಕಳೂ ವಿಶ್ವ ಮಾನವರಾಗಿ ಹುಟ್ಟಿ ಬೆಳೆಯುತ್ತಾ ಅಲ್ಪ ಮಾನವರಾಗುತ್ತಾರೆ ಎನ್ನುವ ಕುವೆಂಪು ಅವರ ಮಾತು ಇಂದಿಗೂ ಸತ್ಯವಾಗಿದೆ. ಮಕ್ಕಳು ಅಲ್ಪ ಮಾನವರಾಗದಂತೆ ಕಾಪಾಡುವ ಜವಾಬ್ದಾರಿ ಶಿಕ್ಷಕರು, ಪೋಷಕರ ಮೇಲಿದೆ.
ಬಸವಣ್ಣನವರು 12ನೇ ಶತಮಾನದಲ್ಲೇ ದಲಿತರು ಮತ್ತು ಬ್ರಾಹ್ಮಣರ ನಡುವೆ ಅಂತರ್ಜಾತಿ ವಿವಾಹ ಮಾಡಿಸಿ ಗೆದ್ದರು. ಜಾತಿ ವ್ಯವಸ್ಥೆ ಶಿಥಿಲವಾಗಬೇಕಾದರೆ ದಲಿತರು, ಹಿಂದುಳಿದವರಿಗೆ ಆರ್ಥಿಕ ಶಕ್ತಿ ಬರಬೇಕು, ಸಾಮಾಜಿಕವಾಗಿಯೂ ಶಕ್ತಿ ಬರಬೇಕು. ಈ ಬಗ್ಗೆ ಅಂಬೇಡ್ಕರ್ ಅವರು ಸಂವಿಧಾನ ಸಭೆಯಲ್ಲಿ ಆಡಿದ ಮಾತುಗಳು ಇವತ್ತಿಗೂ ಬಹಳ ಪ್ರಸ್ತುತವಾಗಿದೆ.
ಹಿಂದೆ ಮುಂದುವರೆದ ಜಾತಿಯ ಹೆಣ್ಣು ಮಕ್ಕಳಿಗೂ ಶಿಕ್ಷಣ ಕಲಿಯುವ ಅವಕಾಶ ಇರಲಿಲ್ಲ. ಎಲ್ಲಾ ಜಾತಿಯ ಹೆಣ್ಣುಮಕ್ಕಳೂ ಶಿಕ್ಷಣದ ವಿಚಾರದಲ್ಲಿ ಶೋಷಿತರಾಗಿದ್ದವರೇ. ಈಗ ಹೆಣ್ಣು ಮಕ್ಕಳೇ ಶಿಕ್ಷಣದಲ್ಲಿ ಮುಂದಿರುವುದು ನೋಡಿದರೆ ಖುಷಿ ಆಗುತ್ತದೆ. ಇದಕ್ಕೆ ಕಾರಣವಾದ ನಮ್ಮ ಸಂವಿಧಾನಕ್ಕೆ, ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ಕೋಟಿ ಪ್ರಣಾಮಗಳು ಎಂದು ಭಾವುಕರಾದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ವಸತಿ ಯೋಜನೆಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ: ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ದಿ ನಿಗಮದ ವಸತಿ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ.ಅರ್ಜಿ ಸಲ್ಲಿಸಲು ಜೂನ್ 12 ಕೊನೆಯ ದಿನವಾಗಿರುತ್ತದೆ.
ಈ ಯೋಜನೆಯಡಿ ಸೌಲಭ್ಯ ಒದಗಿಸಲು ನಿಗಧಿತ ಅರ್ಜಿ ನಮೂನೆಯಲ್ಲಿ ಅವಶ್ಯಕ ದಾಖಲಾತಿ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು ಗ್ರೇಡ್-1ರವರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಚನ್ನಗಿರಿ ಕಚೇರಿಯನ್ನು ಸಂಪರ್ಕಿಸಬಹುದೆಂದು ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
10 ಮುಖ್ಯ ಅಂಶಗಳನ್ನು ಪಾಲಿಸಿ ; ಸಕ್ಕರೆ ಕಾಯಿಲೆಗೆ ಗುಡ್ ಬೈ ಹೇಳಿ..
1. ಸಮತೋಲಿತ ಆಹಾರ (Balanced Diet): ನಿಮ್ಮ ಆಹಾರದಲ್ಲಿ ಹೆಚ್ಚು ನಾರಿನಂಶವಿರುವ (fiber) ತರಕಾರಿ, ಸೊಪ್ಪು, ಮೊಳಕೆ ಬರಿಸಿದ ಕಾಳುಗಳು ಮತ್ತು ಸಿರಿಧಾನ್ಯಗಳನ್ನು ಬಳಸಿ. ಕಾರ್ಬೋಹೈಡ್ರೇಟ್ ಹಾಗೂ ಎಣ್ಣೆಯಂಶವಿರುವ ಆಹಾರವನ್ನು ಕಡಿಮೆ ಮಾಡಿ.
2. ಸಿಹಿ ಪದಾರ್ಥಗಳ ನಿಯಂತ್ರಣ (Avoid Sweets): ಸಕ್ಕರೆ, ಬೆಲ್ಲ, ಬೇಕರಿ ತಿಂಡಿಗಳು, ಐಸ್ಕ್ರೀಮ್ ಮತ್ತು ಕೃತಕ ಸಕ್ಕರೆ ಇರುವ ತಂಪು ಪಾನೀಯಗಳ ಬಳಕೆಯನ್ನು ಸಂಪೂರ್ಣವಾಗಿ ಕಡಿಮೆ ಮಾಡಿ ಅಥವಾ ದೂರವಿಡಿ.
3. ದಿನನಿತ್ಯದ ವ್ಯಾಯಾಮ (Regular Exercise): ಪ್ರತಿದಿನ ಕನಿಷ್ಠ 30 ರಿಂದ 45 ನಿಮಿಷಗಳ ಕಾಲ ವೇಗದ ನಡಿಗೆ (brisk walking), ಸೈಕ್ಲಿಂಗ್, ಈಜು ಅಥವಾ ಯೋಗ ಮಾಡುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟ ನಿಯಂತ್ರಣಕ್ಕೆ ಬರುತ್ತದೆ.
4. ದೇಹದ ತೂಕದ ನಿರ್ವಹಣೆ (Weight Management): ಅತಿಯಾದ ದೇಹದ ತೂಕವು ಇನ್ಸುಲಿನ್ ಕಾರ್ಯಕ್ಷಮತೆಯನ್ನು ಕುಂಠಿತಗೊಳಿಸುತ್ತದೆ. ಆದ್ದರಿಂದ ತೂಕವನ್ನು ಆರೋಗ್ಯಕರ ಮಿತಿಯಲ್ಲಿ ಇಟ್ಟುಕೊಳ್ಳುವುದು ಅತ್ಯಗತ್ಯ.
5. ನಿಯಮಿತ ರಕ್ತದ ಪರೀಕ್ಷೆ (Regular Blood Sugar Check): ವೈದ್ಯರ ಸಲಹೆಯಂತೆ ಕಾಲಕಾಲಕ್ಕೆ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು (Fasting ಮತ್ತು Post Prandial) ಹಾಗೂ ಮೂರು ತಿಂಗಳ ಸರಾಸರಿ ತಿಳಿಸುವ HbA1c ಪರೀಕ್ಷೆಯನ್ನು ಮಾಡಿಸಿಕೊಳ್ಳಿ.
6. ಸಮಯಕ್ಕೆ ಸರಿಯಾಗಿ ಔಷಧಿ ಸೇವನೆ (Timely Medication): ವೈದ್ಯರು ಸೂಚಿಸಿದ ಮಾತ್ರೆಗಳನ್ನು ಅಥವಾ ಇನ್ಸುಲಿನ್ ಅನ್ನು ನಿಗದಿತ ಸಮಯಕ್ಕೆ ತೆಗೆದುಕೊಳ್ಳಿ. ಸ್ವಂತ ನಿರ್ಧಾರದಿಂದ ಔಷಧಿಯನ್ನು ನಿಲ್ಲಿಸಬೇಡಿ.
7. ಮಾನಸಿಕ ಒತ್ತಡದ ನಿರ್ವಹಣೆ (Stress Management): ಅತಿಯಾದ ಮಾನಸಿಕ ಒತ್ತಡವು ದೇಹದಲ್ಲಿ ಸಕ್ಕರೆ ಮಟ್ಟವನ್ನು ಹೆಚ್ಚಿಸುವ ಹಾರ್ಮೋನ್ಗಳನ್ನು ಬಿಡುಗಡೆ ಮಾಡುತ್ತದೆ. ಒತ್ತಡ ಕಡಿಮೆ ಮಾಡಿಕೊಳ್ಳಲು ಧ್ಯಾನ (Meditation) ಅಥವಾ ಹವ್ಯಾಸಗಳಲ್ಲಿ ತೊಡಗಿಕೊಳ್ಳಿ.
8. ಪೂರಕ ನೀರು ಕುಡಿಯುವುದು (Stay Hydrated): ದಿನವಿಡೀ ಸಾಕಷ್ಟು ಪ್ರಮಾಣದಲ್ಲಿ ನೀರು ಕುಡಿಯಿರಿ. ಇದು ದೇಹದಲ್ಲಿರುವ ಹೆಚ್ಚುವರಿ ಗ್ಲೂಕೋಸ್ ಮೂತ್ರದ ಮೂಲಕ ಹೊರಹೋಗಲು ಸಹಾಯ ಮಾಡುತ್ತದೆ.
9. ಉತ್ತಮ ನಿದ್ರೆ (Good Sleep): ಪ್ರತಿದಿನ ರಾತ್ರಿ 7 ರಿಂದ 8 ಗಂಟೆಗಳ ಕಾಲ ಶಾಂತಿಯುತವಾದ ನಿದ್ರೆ ಮಾಡುವುದು ದೇಹದ ಚಯಾಪಚಯ ಕ್ರಿಯೆ (Metabolism) ಮತ್ತು ಹಾರ್ಮೋನ್ಗಳ ಸಮತೋಲನಕ್ಕೆ ಬಹಳ ಮುಖ್ಯ.
10. ದುರಭ್ಯಾಸಗಳಿಂದ ದೂರವಿರಿ (Avoid Smoking and Alcohol): ಧೂಮಪಾನ ಮತ್ತು ಮದ್ಯಪಾನವು ಸಕ್ಕರೆ ಕಾಯಿಲೆಯ ತೊಂದರೆಗಳನ್ನು (ಹೃದಯ ಮತ್ತು ನರಗಳ ಸಮಸ್ಯೆ) ಮತ್ತಷ್ಟು ಹೆಚ್ಚು ಮಾಡುವುದರಿಂದ ಇವುಗಳಿಂದ ದೂರವಿರುವುದು ಒಳ್ಳೆಯದು.
ಗಮನಿಸಿ: ಈ ಮೇಲಿನ ಮಾಹಿತಿ ರೋಗದ ನಿರ್ವಹಣೆಗೆ ಸಾಮಾನ್ಯ ಮಾರ್ಗದರ್ಶನವಾಗಿದೆ. ಪ್ರತಿಯೊಬ್ಬರ ದೇಹ ಪ್ರಕೃತಿ ವಿಭಿನ್ನವಾಗಿರುವುದರಿಂದ, ನಿಮ್ಮ ವೈದ್ಯರ ವೈಯಕ್ತಿಕ ಸಲಹೆ ಮತ್ತು ಚಿಕಿತ್ಸೆಯ ಕ್ರಮವೇ ಅಂತಿಮ ಹಾಗೂ ಸುರಕ್ಷಿತ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ರಾಷ್ಟ್ರೀಯ ಖಾದ್ಯ ತೈಲ ಅಭಿಯಾನ – ಎಣ್ಣೆಕಾಳು ಕಾರ್ಯಕ್ರಮದಡಿ ಸೌಲಭ್ಯ: ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ: ಖಾದ್ಯ ತೈಲಗಳನ್ನು ಆಮದು ಮಾಡಿಕೊಳ್ಳುವಲ್ಲಿ ದೇಶದ ಅವಲಂಬನೆಯನ್ನು ಕಡಿಮೆ ಮಾಡಲು ಮತ್ತು ದೇಶಿಯ ಎಣ್ಣೆಕಾಳುಗಳ ಉತ್ಪಾದನೆಯನ್ನು ಹೆಚ್ಚಿಸುವ ಹಾಗೂ ರೈತರ ಆದಾಯವನ್ನು ಸುಧಾರಿಸಲು ಭಾರತ ಸರ್ಕಾರದ ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆಯ ಕೇಂದ್ರ ಪುರಷ್ಕೃತ ಕೃಷಿಯೋನ್ನತಿ ಯೋಜನೆಯಡಿ ‘’ರಾಷ್ಟ್ರೀಯ ಖಾದ್ಯ ತೈಲ ಅಭಿಯಾನ – ಎಣ್ಣೆಕಾಳು’’ (National Mission on Edible Oil – Oilseeds (NMEO-OS) ಯೋಜನೆಯನ್ನು ಅನುಷ್ಠಾನ ಮಾಡಲಾಗುತ್ತಿದೆ.
ಎಣ್ಣೆಕಾಳು ಬೆಳೆಗಾರರು ಮತ್ತು ಮೌಲ್ಯ ಸರಪಳಿ ಪಾಲುದಾರರನ್ನು (Value Chain Partners) ಸಂಸ್ಕರಣಾದಾರರೊಂದಿಗೆ ಸಂಪರ್ಕಿಸಲು ಮತ್ತು ಅವರಿಗೆ ಮಾರುಕಟ್ಟೆ ಕಲ್ಪಿಸುವುದರೊಂದಿಗೆ ಉತ್ತಮ ಲಾಭವನ್ನು ಪಡೆಯುವಂತೆ ಖಾತ್ರಿಪಡಿಸುವುದು ಯೋಜನೆಯ ಗುರಿಗಳಲ್ಲಿ ಒಂದಾಗಿದೆ.
ಸದರಿ ಯೋಜನೆಯಡಿ ಸ್ಥಳೀಯವಾಗಿ ಉದ್ಯೋಗಾವಕಾಶ ಕಲ್ಪಿಸಲು ಹಾಗೂ ಶುದ್ಧ ಖಾದ್ಯ ತೈಲ ಉಪಯೋಗಿಸಲು ಅನುಕೂಲವಾಗುವಂತೆ ಪ್ರೇರೇಪಿಸಲು ಸೂಕ್ತವಾಗುವಂತೆ ಹಾಗೂ ಮೌಲ್ಯ ಸರಪಳಿಯನ್ನು ಉತ್ತೇಜಿಸಲು, ಸಂಸ್ಕರಣಾ ಘಟಕಗಳಿಗೆ ಅವಶ್ಯವಿರುವ ಯಂತ್ರೋಪಕರಣಗಳನ್ನು ಪಡೆಯಲು/ಪ್ರಾಥಮಿಕ ಮತ್ತು ದ್ವಿತೀಯ ಎಣ್ಣೆಕಾಳು ಕೊಯ್ಲೋತ್ತರ ಮೂಲ ಸೌಕರ್ಯ ಸೌಲಭ್ಯ ಪಡೆಯಲು ಗರಿಷ್ಠ ಯೋಜನಾ ವರದಿಯ ಶೇ.33 ರಷ್ಟು ಅಥವಾ ರೂ.9.99 ಲಕ್ಷಕ್ಕೆ ಮೀರದಂತೆ ಅನುದಾನವನ್ನು ನೀಡಲಾಗುವುದು. ಸದರಿ ಯೋಜನೆಯ ಘಟಕದಡಿ ಕಟ್ಟಡ ವೆಚ್ಚ ಮತ್ತು ಭೂಮಿ ಬಾಡಿಗೆಯನ್ನು ಪರಿಗಣಿಸಲಾಗುವುದಿಲ್ಲ.
ಸದರಿ ಯೋಜನೆಯಡಿ ಸೌಲಭ್ಯ ಪಡೆಯಲು ಸರ್ಕಾರ / ಸರ್ಕಾರೇತರ ಸಂಸ್ಥೆಗಳು, FPOs ಗಳು ಜುಲೈ 04 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಯೋಜನೆಯ ಮಾರ್ಗಸೂಚಿಯನ್ವಯ ಜಿಲ್ಲಾ ಕಾರ್ಯಕಾರಿ ಸಮಿತಿಯಲ್ಲಿ ಫಲಾನುಭವಿ ಆಯ್ಕೆ ನಡೆಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ಜಂಟಿ ಕೃಷಿ ನಿರ್ದೇಶಕರ ಕಛೇರಿ, ಉಪ ಕೃಷಿ ನಿರ್ದೇಶಕರ ಕಛೇರಿ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಛೇರಿಗಳನ್ನು ಸಂಪರ್ಕಿಸುವಂತೆ ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ5 days agoಆಶ್ರಯ ಯೋಜನೆ – ಆವಧಿ ವಿಸ್ತರಣೆ
-
ದಿನದ ಸುದ್ದಿ4 days agoಹೊಳಲ್ಕೆರೆ | ಸ್ಪೀಚ್ ಸಂಸ್ಥೆ ಸಂಸ್ಥಾಪಕ ಹೆಚ್.ರಾಮಚಂದ್ರಪ್ಪ ನಿಧನ ; ಇಂದು ಅಂತ್ಯಕ್ರಿಯೆ
-
ಅಂಕಣ4 days agoಕವಿತೆ | ದೇವರ ಹೂವು
-
ದಿನದ ಸುದ್ದಿ6 days agoಗರಿಕೆ ಹುಲ್ಲಿನ ಜ್ಯೂಸ್ನಲ್ಲಿದೆ ರಕ್ತದ ಕ್ಯಾನ್ಸರ್ ಗುಣಪಡಿಸುವ ಶಕ್ತಿ
-
ದಿನದ ಸುದ್ದಿ3 days agoರಾಷ್ಟ್ರೀಯ ಖಾದ್ಯ ತೈಲ ಅಭಿಯಾನ – ಎಣ್ಣೆಕಾಳು ಕಾರ್ಯಕ್ರಮದಡಿ ಸೌಲಭ್ಯ: ಅರ್ಜಿ ಆಹ್ವಾನ
-
ದಿನದ ಸುದ್ದಿ2 days ago10 ಮುಖ್ಯ ಅಂಶಗಳನ್ನು ಪಾಲಿಸಿ ; ಸಕ್ಕರೆ ಕಾಯಿಲೆಗೆ ಗುಡ್ ಬೈ ಹೇಳಿ..
-
ದಿನದ ಸುದ್ದಿ3 days agoಉಚಿತ ಕೋಳಿ ಸಾಕಾಣಿಕೆ ತರಬೇತಿ: ಅರ್ಜಿ ಆಹ್ವಾನ
-
ದಿನದ ಸುದ್ದಿ3 days agoಕೃಷಿ ಪಂಡಿತ ಹಾಗೂ ಆತ್ಮ ಶ್ರೇಷ್ಠ ಕೃಷಿಕ ಪ್ರಶಸ್ತಿ: ಅರ್ಜಿ ಆಹ್ವಾನ

