ದಿನದ ಸುದ್ದಿ
ಕೋವಿಡ್ -19 : ವೈದ್ಯರ ವೇತನ ಗಣನೀಯವಾಗಿ ಹೆಚ್ಚಿಸಲು ರಾಜ್ಯ ಸರ್ಕಾರ ಮಹತ್ವದ ನಿರ್ಧಾರ
ಸುದ್ದಿದಿನ, ಬೆಂಗಳೂರು : ಕೋವಿಡ್ ಗಾಗಿ ಹಗಲಿರುಳು ದುಡಿಯುತ್ತಿರುವ ಗುತ್ತಿಗೆ ವೈದ್ಯರ ಸಂಬಳವನ್ನು ಗಣನೀಯವಾಗಿ ಹೆಚ್ವಿಸಲು ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ.
ಗುರುವಾರ ವಿಧಾನಸೌಧದಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ಮಹತ್ವದ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ.
ಕೋವಿಡ್ 19 ರ ನಂತರ ಅಭಿವೃದ್ಧಿ ಕಾರ್ಯಗಳು ಗತಿ ಕಳಿದುಕೊಂಡಿರುವುದನ್ನು ಗಮನದಲ್ಲಿಟ್ಟುಕೊಂಡು ಆಡಳಿತ ಯಂತ್ರ ಚುರುಕುಗೊಳಿಸಲು ಉನ್ನತ ಮಟ್ಟದ ಅಧಿಕಾರಿಗಳ ಸಭೆ ನಡೆಸಲಾಯಿತು. ಈ ಸಂದರ್ಭದಲ್ಲಿ ವೈದ್ಯರ ವೇತನ ಹೆಚ್ಚಿಸುವ ನಿರ್ಧಾರ ತಿಳಿಸಲಾಯಿತು.
ಸುದ್ದಿದಿನ.ಕಾಂ|ವಾಟ್ಸಾಪ್|9980346243