Connect with us

ದಿನದ ಸುದ್ದಿ

ದೊಡ್ಡಘಟ್ಟ | ಮಾ.14ರಂದು ‘ಸಾಮರಸ್ಯ ಸಂಭ್ರಮ ವೇದಿಕೆ’ಯಿಂದ ವಿಷೇಶ ಉಪನ್ಯಾಸ ಹಾಗೂ ಸನ್ಮಾನ ಕಾರ್ಯಕ್ರಮ

Published

on

ಸುದ್ದಿದಿನ, ದಾವಣಗೆರೆ-ಚನ್ನಗಿರಿ: ನಮ್ಮನ್ನಗಲಿರುವ ನಮ್ಮೂರಿನ ಎಲ್ಲಾ ಹಿರಿಯ ಜೀವಗಳ ಸ್ಮರಣಾರ್ಥ ನಮ್ಮೂರಿನ ಸರ್ವ ಸಮಾಜದ ಸಮಾನ ಮನಸ್ಕರರು ಸೇರಿ ಸಂಘಟಿಸಿರುವ ‘ಸಾಮರಸ್ಯ ಸಂಭ್ರಮ ವೇದಿಕೆ’ಯ ಅಡಿಯಲ್ಲಿ ಮಾರ್ಚ್ 14 ರ ಭಾನುವಾರ ವಿನೂತ ಕಾರ್ಯಕ್ರಮವನ್ನು ದೊಡ್ಡಘಟ್ಟ ಗ್ರಾಮದಲ್ಲಿ ಆಯೋಜಿಸಲಾಗಿದೆ ಎಂದು ವೇದಿಕೆಯ ರಾಘುದೊಡ್ಡಮನಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಶೇಷ ಉಪನ್ಯಾಸ – ಸನ್ಮಾನ ಕಾರ್ಯಕ್ರಮ

ಅಂದು ‘ಸಾಮರಸ್ಯಕ್ಕಾಗಿ ಸಂಕಲ್ಪ’ ಎಂಬ ವಿಶೇಷ ಉಪನ್ಯಾಸವನ್ನು ಪ್ರೊ.ಎ.ಬಿ.ರಾಮಚಂದ್ರಪ್ಪ ಮಾಡಲಿದ್ದಾರೆ.  ಹಾಗೆ ಸರ್ವ ಸಮಾಜದ ಹಿರಿಯರಿಗೆ, ನೂತನ ಗ್ರಾಮ ಪಂಚಾಯತಿ ಸದಸ್ಯರಿಗೆ ಹಾಗೂ ದೊಡ್ಡಘಟ್ಟ್ ಗ್ರಾ.ಪಂ ಚುನಾವಣೆಗೆ ಸ್ಪರ್ಧಿಸಿದ್ದ ಎಲ್ಲಾ ಅಭ್ಯರ್ಥಿಗಳಿಗೆ ಸನ್ಮಾನ ಮಾಡಲಾಗಿತ್ತದೆ.

ಹಾಗೂ ಪಬ್ಲಿಕ್ ವಾರಿಯರ್ಸ್‌ಗಳಾದ ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ನೀರುಗಂಟಿಗಳು, ಮತ್ತು ದೊಡ್ಡಘಟ್ಟ ಗ್ರಾಮದ SSLC ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ಯಲ್ಲಿ ಗರಿಷ್ಠ ಅಂಕಗಳನ್ನು ಗಳಿಸಿದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರವನ್ನು ನೀಡಲಾಗುತ್ತದೆ.

ಪುಸ್ತಕ ಬಿಡುಗಡೆ

ಜತೆಗೆ ಷಕೀಬ್ ಎಸ್ ಕಣದಮನೆ, ನವಿಲೇಹಾಳ್ ಅವರ ‘ಮೋಹದ ಮೋಡಗಳು, ಕವನ ಸಂಕಲನ ಬಿಡುಗಡೆಯನ್ನು ಕವಿ ಸಂತೇಬೆನ್ನೂರು ಫೈಜ್ನಟ್ರಾಜ್ ಮಾಡಲಿದ್ದಾರೆ.

ಇದನ್ನೂ ಓದಿ |ಎರಡನೇ ಮದುವೆಗೆ ಕುಟುಂಬದವರು ಒಪ್ಪದ ಕಾರಣ ಕರೆಂಟ್ ಕಂಬ ಏರಿದ ವೃದ್ಧ..!

ಕಾರ್ಯಕ್ರಮದ ಉದ್ಘಾಟನೆಯನ್ನು ಜಿ.ಪಂ ಸದಸ್ಯರಾದ ತೇಜಸ್ವಿ ಪಟೇಲ್ ಮಾಡಲಿದ್ದು, ಅಧ್ಯಕ್ಷತೆಯನ್ನು ದೊಡ್ಡಘಟ್ಟ ಗ್ರಾಮದ ಹಿರಿಯ ಮುಖಂಡರಾದ ವಿ.ಬಾಲಚಂದ್ರ ವಹಿಸಲಿದ್ದಾರೆ. ಮುಖ್ಯ ಅಥಿತಿಗಳಾಗಿ ಭೀಮಪ್ಪ, ಕೋಟೆ ಚಂದ್ರಯ್ಯ, ಡಿ.ಆರ್. ಶ್ರೀನಿವಾಸ್ ,ಡಿ.ಎನ್. ಜಯಪ್ಪ, ಡಿ.ಆರ್, ಶಿವಮೂರ್ತಿ, ಗೌಡ್ರು ಶಾಂತಕುಮಾರ್, ಎಸ್.ಸಿ. ಪ್ರಭುದೇವ್,ಸನಾವುಲ್ಲಾ, ಡಿ.ಹೆಚ್, ಜಯಪ್ಪ (ನ್ಯಾಯಬೆಲೆ), ಫಕ್ಕೀರಪ್ಪ (ಛತ್ರದ ವ್ಯಾಪಾರಿ),ಬೀರೂರು ಶ್ರೀನಿವಾಸ, ಡಿ.ಎಂ. ಕುಬೇರಪ್ಪ (ಮಡಿವಾಳ),ಚಂದ್ರಾಚಾರ್, ಆರ್. ಗಂಗಪ್ಪ, ಸ್ವಾಮಿ (ಛಲವಾದಿ) ಭಾಗವಹಿಸಲಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

‘ಹಿಟ್ಲರ್ ಕಲ್ಯಾಣ’ದ ನಾಯಕನ ಬದುಕಿನ ಪಯಣ ಹೀಗಿತ್ತು

Published

on

ಸುದ್ದಿದಿನ ಡೆಸ್ಕ್:ಆರಂಭಿಕ ಜೀವನ – 1978ರಲ್ಲಿ ಬೆಂಗಳೂರಿನಲ್ಲಿ ಜನಿಸಿದ ದಿಲೀಪ್ ರಾಜ್ ಅವರು ಕಾಲೇಜು ದಿನಗಳಿಂದಲೇ ಕಲೆಯತ್ತ ಒಲವು ಹೊಂದಿದ್ದರು.

ಚಲನಚಿತ್ರ ರಂಗ – 2005ರಲ್ಲಿ ‘ಬಾಯ್ ಫ್ರೆಂಡ್’ ಚಿತ್ರದ ಮೂಲಕ ಎಂಟ್ರಿ ಕೊಟ್ಟ ಅವರು, 2007ರಲ್ಲಿ ಪುನೀತ್ ರಾಜ್‌ಕುಮಾರ್ ಅವರ ‘ಮಿಲನ’ ಚಿತ್ರದಲ್ಲಿ ಹೇಮಂತ್ ಎಂಬ ವಿಲನ್ ಪಾತ್ರದ ಮೂಲಕ ಎಲ್ಲರ ಗಮನ ಸೆಳೆದರು.

ಇತ್ತೀಚಿನ ಜನಪ್ರಿಯತೆ – ‘ಲವ್ ಮಾಕ್ಟೇಲ್’ ಸಿನಿಮಾ ಮತ್ತು ಕಿರುತೆರೆಯಲ್ಲಿ ನಟ-ನಿರ್ಮಾಪಕರಾಗಿ ದೊಡ್ಡ ಹೆಸರು ಮಾಡಿದ್ದರು.

ದಿಲೀಪ್ ರಾಜ್ ಅವರ ಸಾವು ಕೇವಲ ಒಂದು ಕುಟುಂಬಕ್ಕೆ ಮಾತ್ರವಲ್ಲದೆ ಇಡೀ ಚಿತ್ರರಂಗಕ್ಕೆ ದೊಡ್ಡ ನಷ್ಟ. ಇವರ ಈ ಹಠಾತ್ ನಿಧನವು ಒತ್ತಡದ ಜೀವನಶೈಲಿ ಮತ್ತು ಆರೋಗ್ಯದ ಕಡೆಗೆ ನಾವು ನೀಡಬೇಕಾದ ಹೆಚ್ಚಿನ ಗಮನದ ಬಗ್ಗೆ ಎಚ್ಚರಿಕೆ ನೀಡುವಂತಿದೆ.

Continue Reading

ದಿನದ ಸುದ್ದಿ

ಬ್ಯಾಕ್‌ಲಾಗ್ ನಿಯಮಾವಳಿ ಉಲ್ಲಂಘನೆ ; ಶಾಲಾ ಶಿಕ್ಷಣ ಇಲಾಖೆ ನಿರ್ದೇಶಕ ಕರಿಚಣ್ಣನವರ್ ವಿರುದ್ಧ ಲೋಕಾಗೆ ದೂರು

Published

on

ಸುದ್ದಿದಿನ,ದಾವಣಗೆರೆ: ದಾವಣಗೆರೆ ಜಿಲ್ಲಾ ಹರಿಹರ ನಗರದ ಮಾತೃಶ್ರೀ ರುದ್ರಮಾಂಬಾ ಬಸವಾರ್ಯ ಪ್ರೌಢಶಾಲೆಯ ಕನ್ನಡ ಶಿಕ್ಷಕರ ಬ್ಯಾಕ್‌ಲಾಗ್ (ಪರಿಶಿಷ್ಟ ಜಾತಿ) ನೇಮಕಾತಿಯಲ್ಲಿನ ಅಕ್ರಮಗಳನ್ನು ತನಿಖೆಗೆ ಒಳಪಡಿಸಿ ಆಡಳಿತ ಮಂಡಳಿ ಹಾಗೂ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ದೂರು ನೀಡಿ ವರ್ಷಗಳೇ ಕಳೆದರೂ ತಪ್ಪಿತಸ್ಥರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷö್ಯ ತೋರಿದ ಶಾಲಾ ಶಿಕ್ಷಣ ಇಲಾಖೆಯ ನಿರ್ದೇಶಕರಾದ ಶ್ರೀ ಕೃಷ್ಣಾಜಿ ಎಸ್. ಕರಿಚಣ್ಣನವರ್ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಲೋಕಾಯುಕ್ತದಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ದಾವಣಗೆರೆ ಜಿಲ್ಲಾ ಹರಿಹರ ನಗರದ ಮಾತೃಶ್ರೀ ರುದ್ರಮಾಂಬ ಬಸವಾರ್ಯ ಪ್ರೌಢಶಾಲೆಯಲ್ಲಿನ ಕನ್ನಡ ಶಿಕ್ಷಕರ ಬ್ಯಾಕ್‌ಲಾಗ್ (ಪರಿಶಿಷ್ಟ ಜಾತಿ) ನೇಮಕಾತಿಯು ನಿಯಮಬಾಹಿರವಾಗಿ ನಡೆದಿರುವ ಮಾಹಿತಿಯ ಆಧಾರದ ಮೇಲೆ ಆಯುಕ್ತರು ಹಾಗೂ ನಿರ್ದೇಶಕರು, ಶಾಲಾ ಶಿಕ್ಷಣ ಇಲಾಖೆ, ಆಯುಕ್ತರ ಕಛೇರಿ, ಬೆಂಗಳೂರು ಇವರಿಗೆ ದೂರು ನೀಡಿ, ಬ್ಯಾಕ್‌ಲಾಗ್ ನಿಯಮಕ್ಕೆ ವಿರುದ್ಧವಾಗಿ ಸಂದರ್ಶನ ನಡೆಸಿ, ನೇಮಕಾತಿ ಪ್ರಕ್ರಿಯೆಗೆ ಮುಂದಾಗಿರುವ ಉಪನಿರ್ದೇಶಕರು, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಮೂಖ್ಯೋಪಧ್ಯಾಯರು, ವಿಷಯ ಪರಿವೀಕ್ಷಕರು, ವಿಷಯ ತಜ್ಞರು ಹಾಗೂ ಆಡಳಿತ ಮಂಡಳಿಯ ಸದಸ್ಯರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಂಡು, ಕೈಗೊಂಡ ಕ್ರಮದ ವರದಿಯನ್ನು ದೂರು ಅರ್ಜಿ ತಲುಪಿದ ಒಂದು ತಿಂಗಳ ಒಳಗಾಗಿ ನೀಡುವಂತೆ ಮನವಿ ಮಾಡಲಾಗಿತ್ತು. ಆದರೆ ವರ್ಷಗಳೇ ಕಳೆದರೂ ತಪ್ಪಿತಸ್ಥರ ವಿರುದ್ಧ ಯಾವುದೇ ಕ್ರಮ ಕೈಗೊಂಡಿರುವುದಿಲ್ಲ.

ವಯಸ್ಸು ಮತ್ತು ಮೆರಿಟ್ ಆಧಾರದಲ್ಲಿ ನೇಮಕಾತಿ ನಡೆಸದೆ ಸಂದರ್ಶನ ನಡೆಸಿ ಬ್ಯಾಕ್‌ಲಾಗ್ ನಿಯಮವನ್ನು ಉಲ್ಲಂಘನೆ ಮಾಡಿರುವುದು ತನಿಖೆಯಲ್ಲಿ ಕಂಡುಬAದಿರುತ್ತದೆ. ಆದರೆ ತಪ್ಪಿತಸ್ಥ ಅಧಿಕಾರಿಗಳು ಹಾಗೂ ಆಡಳಿತ ಮಂಡಳಿಯ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷö್ಯ ತೋರಿದ ಕಾರಣ ಶಾಲಾ ಶಿಕ್ಷಣ ಇಲಾಖೆಯ ನಿರ್ದೇಶಕರಾದ ಕೃಷ್ಣಾಜಿ ಎಸ್. ಕರಿಚಣ್ಣನವರ್ ಕರ್ತವ್ಯ ಲೋಪದ ಅಡಿಯಲ್ಲಿ ಲೋಕಾಯುಕ್ತದಲ್ಲಿ ದೂರು ದಾಖಲಿಸಿ, ಬ್ಯಾಕ್‌ಲಾಗ್ ನಿಯಮಗಳನ್ನು ಉಲ್ಲಂಘಿಸಿ ಸಂದರ್ಶನ ನಡೆಸಲು ಕಾರಣರಾದವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಆಯುಕ್ತರು, ಶಾಲಾ ಶಿಕ್ಷಣ ಇಲಾಖೆ ಇವರಿಗೆ ದೂರು ನೀಡಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ನಕಲಿ ಬಿಲ್ಲುಗಳ ಮೂಲಕ ಲಕ್ಷಾಂತರ ರೂಪಾಯಿ ಅವ್ಯವಹಾರ | ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರಾಂಶುಪಾಲ ನಾಗರಾಜ ವಿರುದ್ಧ ಲೋಕಾಗೆ ದೂರು

Published

on

ಸುದ್ದಿದಿನ,ದಾವಣಗೆರೆ: ನಕಲಿ ಬಿಲ್ಲುಗಳ ಮೂಲಕ ಲಕ್ಷಾಂತರ ರೂಪಾಯಿಗಳ ಅವ್ಯವಹಾರ ನಡೆಸಿರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಕೊಡಚಗೊಂಡನಹಳ್ಳಿ, ನ್ಯಾಮತಿ ತಾಲ್ಲೂಕು ಇಲ್ಲಿನ ಪ್ರಾಂಶುಪಾಲರಾದ ನಾಗರಾಜ ಜಿ.ಎಂ ಇವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಲೋಕಾಯುಕ್ತದಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ದಾವಣಗೆರೆ ಜಿಲ್ಲೆಯಾದ್ಯಂತ ಕಾರ್ಯನಿರ್ವಹಿಸುತ್ತಿರುವ ಅಲ್ಪಸಂಖ್ಯಾತರ ವಸತಿ ಶಾಲೆಗಳಲ್ಲಿ ನಕಲಿ ಬಿಲ್ಲುಗಳ ಮೂಲಕ ಸರ್ಕಾರದ ಅನುದಾನವನ್ನು ವಂಚಿಸುತ್ತಿರುವ ವಿಷಯ ತಿಳಿದು ಪ್ರಾಂಶುಪಾಲರು, ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಕೊಡಚಗೊಂಡನಹಳ್ಳಿ, ನ್ಯಾಮತಿ ತಾಲ್ಲೂಕು ಇವರು ನೀಡಿರುವ 37 ಬಿಲ್ಲುಗಳನ್ನು ಪರಿಶೀಲನೆ ಮಾಡಿದಾಗ, ಇವುಗಳಲ್ಲಿನ ಬಹುತೇಕ ಜಿ.ಎಸ್.ಟಿ ಬಿಲ್ಲುಗಳಲ್ಲಿ ದಿನಾಂಕವೇ ಇರುವುದಿಲ್ಲ.

ಇನ್ನೂ ಕೆಲವು ಬಿಲ್ಲುಗಳನ್ನು ಹೊರ ರಾಜ್ಯದಿಂದ ಪಡೆಯಲಾಗಿರುತ್ತದೆ. ಆದ್ದರಿಂದ ಮರು ಲೆಕ್ಕಪರಿಶೋಧನೆ ನಡೆಸಿ, ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಲೋಕಾಯಕ್ತದಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending