Connect with us

ಲೈಫ್ ಸ್ಟೈಲ್

ರಕ್ತದಾನ–ಜೀವದಾನ

Published

on

“ಮಾನವ ಮೂಳೆ ಮಾಂಸದ ತಡಿಕೆ” ಈ ಸಾಲನ್ನು ಕೇಳಿದ ಎಲ್ಲರಿಗೂ ಈ ವಿಚಾರ ತಿಳಿದೇ ಇರುತ್ತದೆ. ಮಾನವನ ದೇಹದ ಒಳಗೆ ಮಿದುಳು, ಹೃದಯ, ಯಕೃತ್ತು, ಮೂತ್ರಪಿಂಡ ಸೇರಿದಂತೆ ಇನ್ನೂ ಕೆಲವು ಅಂಗಗಳು ಮಾನವನ ‘ಜೀವ’ಕ್ಕೆ ಅವಶ್ಯಕವಾದರೆ ಕೇವಲ ಮೂಳೆ ಮಾಂಸಗಳನ್ನೊಳಗೊಂಡ ಕೈ ಕಾಲುಗಳು ‘ಜೀವನಕ್ಕೆ ಬೇಕಾಗಿವೆ.

ಜೀವ ಮತ್ತು ಜೀವನ ಎರಡೂ ಹೊಂದಿಕೊಂಡು ಸಾಗಬೇಕಾದರೆ ದೇಹದ ಒಳಗೆ ನಿತ್ಯವೂ ಪ್ರತಿಕ್ಷಣವೂ ಸಂಚರಿಸುವ ರಕ್ತ ಈ ಎಲ್ಲ ಅಂಗಾಂಗಗಳ ಜೀವಕ್ಕೆ ಬೇಕು. ಆದರೆ ದೇಹದಲ್ಲಿ ರಕ್ತದ ಪ್ರಮಾಣವೇ ಕಡಿಮೆಯಾದರೆ, ಜೀವ ಮತ್ತು ಜೀವನ ಎರಡಕ್ಕೂ ಅಪಾಯ ಕಟ್ಟಿಟ್ಟದ್ದು.

ಎಲ್ಲೋ ಒಂದು ರಸ್ತೆ ಅಪಘಾತವಾಗುತ್ತದೆ. ಕಾಲು ಮುರಿದು ವಿಪರೀತ ರಕ್ತಸ್ರಾವವಾಗಿ ಆಸ್ಪತ್ರೆಗೆ ಸಾಗಿಸಿದರೆ ಅಲ್ಲಿ ವೈದ್ಯರು ಬರೀ ಐ.ವಿ. ಫ್ಲೂಯಿಡ್ಸ್‍ನಲ್ಲಿ ಉಪಚರಿಸಲು ಸಾಧ್ಯವಾಗದೆ ರಕ್ತದ ಅವಶ್ಯಕತೆಯ ಬಗ್ಗೆ ತಿಳಿಸುತ್ತಾರೆ.

ಒಂದೊಮ್ಮೆ ಗರ್ಭಿಣಿ ತಿಂಗಳು ತುಂಬಿ ಪ್ರಸವದ ನಂತರ ತಡೆಯಲಾರದ ರಕ್ತಸ್ರಾವವಾಗಿ ವೈದ್ಯರು ರಕ್ತ ಬೇಕಾಗುತ್ತದೆ ಎನ್ನುತ್ತಾರೆ. ಇನ್ನೊಂದು ಕಡೆ ಒಬ್ಬ ವ್ಯಕ್ತಿ ಡೆಂಗ್ಯೂ ಜ್ವರಕ್ಕೆ ತುತ್ತಾಗಿ ರಕ್ತದಲ್ಲಿ ಪ್ಲೇಟಲೆಟ್ಸ್ ಕಡಿಮೆಯಾಗಿ ರಕ್ತ ಹಾಕದೇ ಉಳಿಗಾಲವಿಲ್ಲವೆಂಬ ಸ್ಥಿತಿಗೆ ತಲುಪುತ್ತಾನೆ. ಅಲ್ಲೊಬ್ಬ ತಲಸೀಮಿಯ, ಇಲ್ಲೊಬ್ಬ ಹೀಮೋಫೀಲಿಯ ರೋಗಗಳಿಂದ ಪೀಡಿತರಾಗಿರುತ್ತಾರೆ. ಈ ಎಲ್ಲಾ ಸನ್ನಿವೇಶಗಳನ್ನೂ ದಿನನಿತ್ಯ ಎಲ್ಲಾದರೊಂದು ಕಡೆ ಕಂಡಿರುತ್ತೇವೆ ಇಲ್ಲವೆ ಕೇಳಿರುತ್ತೇವೆ. ಈ ಎಲ್ಲಕ್ಕೂ ಪರಿಹಾರ ರಕ್ತವೇ ಆಗಿರುತ್ತದೆ. ಅಂದರೆ ದೇಹದಲ್ಲಿರುವ ರಕ್ತ ಅಥವಾ ರಕ್ತದ ಯಾವುದೇ ಒಂದು ಅಂಶ ಕಡಿಮೆಯಾದರೂ ರಕ್ತ ಹಾಕಬೇಕಾದ ಪರಿಸ್ಥಿತಿ ತಲುಪುತ್ತದೆ.

ಒಬ್ಬ ವ್ಯಕ್ತಿಗೆ ರಕ್ತ ಹಾಕಬೇಕಾದರೆ ಅದು ಇನ್ನೊಬ್ಬ ವ್ಯಕ್ತಿ ದಾನ ಮಾಡಿದರೇನೆ ಸಾಧ್ಯವಾಗುತ್ತದೆಯೇ ಹೊರತು ಬೇರೆಲ್ಲಿಂದಲೂ ಅಲ್ಲ. ರಕ್ತದಾನವೆಂದರೆ ಜೀವದಾನ. ಒಬ್ಬ ವ್ಯಕ್ತಿಯ ಒಂದು ಬಾಟಲಿ ರಕ್ತದಿಂದ ಮೂರು ಜೀವಗಳನ್ನು ಉಳಿಸಬಹುದು. ಒಬ್ಬ ವ್ಯಕ್ತಿಯ ಕೇವಲ ಐದು ನಿಮಿಷದ ಸಮಯ ಇನ್ನೊಬ್ಬರ ಜೀವಿತಾವಧಿಯೂ ಆಗಬಲ್ಲದು. ಹಾಗಿದ್ದರೆ ರಕ್ತದಾನದ ಬಗ್ಗೆ ಒಂದಿಷ್ಟು ತಿಳಿದುಕೊಳ್ಳೋಣ.

ರಕ್ತವನ್ನು ಯಾರು ದಾನ ಮಾಡಬಹುದು?:

ಆರೋಗ್ಯವಂತ ವ್ಕಕ್ತಿ ಯಾರಾದರೂ ರಕ್ತವನ್ನು ದಾನ ಮಾಡಬಹುದು. ಆದರೂ ರಕ್ತದಾನದ ನಂತರ ದಾನಿಯ ಆರೋಗ್ಯವೂ ಮುಖ್ಯವಾಗುವ ಕಾರಣ ಕೆಲವು ನಿಬಂಧನೆಗಳನ್ನು ಹಾಕಲಾಗುತ್ತದೆ. ವಯೋಮಿತಿ 18 ರಿಂದ 60 ವರ್ಷಗಳೊಳಗೆ ಮತ್ತು ದೇಹದ ತೂಕ 50 ಕೆ.ಜಿ.ಗಿಂತ ಜಾಸ್ತಿಯಿರಬೇಕಾಗುತ್ತದೆ.

ರಕ್ತದಾನವನ್ನು ಯಾರು ಮಾಡಲಾಗುವುದಿಲ್ಲ?

  • ರಕ್ತದಲ್ಲಿ ಹೀಮೊಗ್ಲೊಬಿನ್ ಅಂಶ ಕಡಿಮೆಯಿರುವವರು
  • ಕಳೆದೊಂದು ವರ್ಷದಲ್ಲಿ ಯಾವುದೇ ಸಾಂಕ್ರಾಮಿಕ ರೋಗಗಳಿಂದ ಪೀಡಿತರಾಗಿದ್ದರೆ.
    ಕಳೆದೊಂದು ವರ್ಷದಲ್ಲಿ ಯಾವುದೇ ಶಸ್ತ್ರಚಿಕಿತ್ಸೆಗಳಪಟ್ಟಿದ್ದರೆ ಸ್ವತಃ ರಕ್ತ ಹಾಕಿಸಿಕೊಂಡಿದ್ದರೆ.
  • ಅಧಿಕ ರಕ್ತದೊತ್ತಡ ಮತ್ತು ಮಧುಮೇಹದಿಂದ ಬಳಲುತ್ತಿರುವವರು.
  • ದೇಹದ ಒಳಗಿನ ಯಾವುದೇ ಅಂಗಾಂಗವು, ರೋಗಪೀಡಿತವಾಗಿದ್ದರೆ.
  • ಕಳೆದ 6 ತಿಂಗಳಲ್ಲಿ ಹಚ್ಚೆ ಹಾಕಿಸಿಕೊಂಡಿದ್ದರೆ, ಕಿವಿ ಚುಚ್ಚಿಸಿಕೊಂಡಿದ್ದರೆ, ಅಥವಾ ಹಲ್ಲು ಕೀಳಿಸಿಕೊಂಡಿದ್ದರೆ.
  • ಕಳೆದ ಮೂರು ದಿನಗಳಲ್ಲಿ ಯಾವುದೇ ಮಾತ್ರೆ, ಔಷಧಿ/ಇಂಜೆಕ್ಷನ್‍ಗಳನ್ನು ತೆಗೆದುಕೊಂಡಿದ್ದರೆ.

ರಕ್ತದಾನದ ಮೊದಲು ಅನುಸರಿಸಬೇಕಾದ ಅಂಶಗಳು

  • ರಕ್ತದಾನದ ಮೂರು ದಿನಗಳ ಅವಧಿಯಲ್ಲಿ ಮಧ್ಯಪಾನ ಹಾಗೂ 10 ರಿಂದ 12 ತಾಸಿನ ಅವಧಿಯಲ್ಲಿ ಧೂಮಪಾನವನ್ನು ಮಾಡಿರಬಾರದು.
  • ರಕ್ತದಾನದ ಹಿಂದಿನ ದಿನ ಸಾಕಷ್ಟು ನೀರು ಹಾಗೂ ಹೆಚ್ಚಿನ ದ್ರವ ಪದಾರ್ಥಗಳನ್ನು ಸೇವಿಸಿದ್ದರೆ ಒಳಿತು
  • ರಕ್ತದಾನದ ಹಿಂದಿನ ರಾತ್ರಿ ಸಂಪೂರ್ಣ ನಿದ್ರೆ ಮಾಡಿರಬೇಕು.
  • ಉಪಾಹಾರ ಹಾಗೂ ರಕ್ತದಾನ ಮಾಡುವ ನಡುವೆ 3 ತಾಸುಗಳಿಗಿಂತ ಜಾಸ್ತಿ ಸಮಯ ಕಳೆದಿರಬಾರದು, ಹಾಗೇನಾದರೂ ಇದ್ದಲ್ಲಿ ಇನ್ನೊಮ್ಮೆ ಉಪಾಹಾರ ಸೇವಿಸುವುದು ಸೂಕ್ತ

ರಕ್ತದಾನದ ನಂತರ ಅನುಸರಿಸಬೇಕಾದ ಅಂಶಗಳು

  • ಮುಂದಿನ 2-3 ತಾಸುಗಳವರೆಗೆ ವಾಹನ ಚಲಾಯಿಸುವಂತಿಲ್ಲ, ಮತ್ತು ಅಂದಿನ ಯಾವುದೇ ಪ್ರಯಾಣಗಳನ್ನು ಮುಂದೂಡುವುದು ಸೂಕ್ತ.
  • ನಂತರ ದಾನಿಗಳು ಮುಂದಿನ 2 ದಿನಗಳ ನಂತರ ಸಾಕಷ್ಟು ನೀರು ಮತ್ತು ಇತರೆ ದ್ರವ ಆಹಾರಗಳನ್ನು ಸೇವಿಸಬೇಕಾಗುತ್ತದೆ.
  • ಮುಂದಿನ 3 ತಿಂಗಳವರೆಗೆ(ಪುರುಷರು) ಮತ್ತು 4 ತಿಂಗಳವರೆಗೆ(ಮಹಿಳೆಯರು) ಮತ್ತೆ ರಕ್ತದಾನ ಮಾಡುವಂತಿಲ್ಲ.

ರಕ್ತದಾನದ ನಂತರ ಸಂಭವಿಸಬಹುದಾದ ತೊಂದರೆಗಳು

  • ರೋಗಿಯ ಆರೋಗ್ಯದಷ್ಟೇ ದಾನಿಯ ಆರೋಗ್ಯವು ಮುಖ್ಯವಾಗುತ್ತದೆ. ಆದ್ದರಿಂದ ರಕ್ತದಾನ ಮಾಡುವ ಸ್ಥಳಗಳಲ್ಲಿಯೇ ದಾನಿಗಳನ್ನು ಪರೀಕ್ಷಿಸಿ ಸಂಭವಿಸಬಹುದಾದ ತೊಂದರೆಗಳಿದ್ದಲ್ಲಿ ಅವರನ್ನು ಅನರ್ಹರೆಂದು ಪರಿಗಣ ಸಿ ತಿರಸ್ಕರಿಸಲಾಗುತ್ತದೆ ಮತ್ತು ಅರ್ಹರಾದವರನ್ನು ಆ ಅವಧಿಯ ಪೂರ್ತಿಯೂ ಪರಿವೀಕ್ಷಣೆಯಲ್ಲಿರಿಸಲಾಗುತ್ತದೆ.
  • ಸುಸ್ತಾಗುವುದು, ನಿಶ್ಯಕ್ತಿಯೆನಿಸುಬಹುದು
    ರಕ್ತ ತೆಗೆದುಕೊಂಡ ಜಾಗದಲ್ಲಿ ರಕ್ತಸ್ರಾವವಾಗಬಹುದು
  • ತುಂಬಾ ವಿರಳವಾಗಿ ಕೈ ಕಾಲುಗಳು ಸೆಳೆತಕ್ಕೊಳಗಾಗಬಹುದು.
  • ಈ ಎಲ್ಲಾ ತೊಂದರೆಗಳನ್ನು ಗಮನಿಸಲೆಂದೇ ರಕ್ತದಾನದ ನಂತರ 10-15 ನಿಮಿಷಗಳ ಕಾಲ ದಾನಿಯನ್ನು ಅಲ್ಲೇ ಇರಿಸಿಕೊಳ್ಳಲಾಗುತ್ತದೆ. ಹಾಗೇನಾದರೂ ಸಂಭವಿಸಿದಲ್ಲಿ ತಕ್ಷಣದಲ್ಲಿ ಅವರಿಗೆ ಅಲ್ಲೇ ಉಪಚರಿಸಿ ಅಲ್ಲಿರುವ ವೈದ್ಯಾಧಿಕಾರಿಗಳ ಸಲಹೆಯಂತೆ ಸೂಕ್ತ ಚಿಕಿತ್ಸೆ ನೀಡಲಾಗುತ್ತದೆ.

ರಕ್ತದಾನದಿಂದಾಗುವ ಲಾಭಗಳೇನು?

ದೇಹದ ಆರೋಗ್ಯ ಕಾಪಾಡುವಲ್ಲಿ ಸಹಕಾರಿಯಾಗುತ್ತದೆ
ದೇಹದಲ್ಲಿ ಹೊಸ ರಕ್ತಕಣಗಳ ಉತ್ಪತ್ತಿ ಹೆಚ್ಚಾಗುತ್ತದೆ
ಅಧಿಕ ರಕ್ತದೊತ್ತಡ ಮತ್ತು ಸಕ್ಕರೆ ಅಂಶಗಳನ್ನು ಕಡಿಮೆ ಮಾಡುವಲ್ಲಿ ಸಹಕಾರಿಯಾಗುತ್ತದೆ
ಬೊಜ್ಜು ಕರಗಿಸುವಲ್ಲಿ ಸಹಕಾರಿಯಾಗುತ್ತದೆ
ವಿವಿಧ ಕಾನ್ಸರ್‍ಗಳ ಸಂಭವವನ್ನು ಕಡಿಮೆ ಮಾಡುತ್ತದೆ.

ಈ ಎಲ್ಲದಕ್ಕೂ ಹೆಚ್ಚಾಗಿ ಬೇರೊಬ್ಬರ ಜೀವ ಉಳಿಸುವಲ್ಲಿ ಸಹಕಾರಿಯಾಗುತ್ತದೆ. ಒಬ್ಬರಲ್ಲಿ ಹರಿಯುವ ರಕ್ತ ಇನ್ನೊಬ್ಬರ ಜೀವನಾಡಿಗಳಲ್ಲಿ ಸಂಚರಿಸಿ ಅವರ ಜೀವವನ್ನೂ ಕಾಪಾಡುತ್ತದೆ. ಇದಕ್ಕಿಂತ ಇನ್ಯಾವ ಸಾರ್ಥಕತೆ ಬೇಕು ಹೇಳಿ.

ಡಾ.ಸಂತೋಷ್ ಕೆ.ಬಿ. ದಾವಣಗೆರೆಯಲ್ಲಿ ಎಂ.ಬಿ.ಬಿ.ಎಸ್. ಪದವಿ ಮುಗಿಸಿ ಸದ್ಯ ಶಿವಮೊಗ್ಗದಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ವೈದ್ಯ ವೃತ್ತಿಯ ಜತೆಗೆ ಬರವಣಿಗೆಯಲ್ಲೂ ಆಸಕ್ತಿ ಹೊಂದಿರುವ ಇವರು, 'ಕವಲೊಡೆದ ನದಿ' ಎಂಬ ಕವನ ಸಂಕಲನ ಹೊರತಂದಿದ್ದಾರೆ. ಅದಕ್ಕೆ ಕನ್ನಡ ಪುಸ್ತಕ ಪ್ರಾಧಿಕಾರ ಬೆಂಗಳೂರು ಇವರಿಂದ ಪ್ರೋತ್ಸಾಹಧನ ಹಾಗೂ ಕನ್ನಡ ಸಾಹಿತ್ಯ ಪರಿಷತ್ತು, ಬೆಂಗಳೂರು ಇವರಿಂದ ನಾ.ಕು.ದತ್ತಿ ಪ್ರಶಸ್ತಿ ಲಭಿಸಿವೆ. ಮೊ: 8971256894

ಅಂಕಣ

ಭಾಷೆ ಗಡಿಗಳ ಮೀರಿ ಮೊಳಗಿದ ಧ್ವನಿ ; ಗಾನಕೋಗಿಲೆ ಎಸ್. ಜಾನಕಿ ನಿರ್ಗಮನ

Published

on

ಭಾರತೀಯ ಚಿತ್ರಸಂಗೀತದ ಇತಿಹಾಸದಲ್ಲಿ ಕೆಲವೇ ಕೆಲವು ಧ್ವನಿಗಳು ಕಾಲವನ್ನು ಮೀರಿ ಅಮರತ್ವ ಪಡೆದಿವೆ. ಅಂತಹ ಅಮರ ಸ್ವರಗಳಲ್ಲಿ ಅತ್ಯಂತ ಪ್ರಕಾಶಮಾನವಾದ ಹೆಸರು ಎಸ್. ಜಾನಕಿ. ತಮ್ಮ ಅಪೂರ್ವ ಕಂಠಸಿರಿಯಿಂದ ಆರು ದಶಕಗಳಿಗೂ ಹೆಚ್ಚು ಕಾಲ ಕೋಟ್ಯಂತರ ಸಂಗೀತಾಭಿಮಾನಿಗಳ ಹೃದಯವನ್ನು ಗೆದ್ದಿದ್ದ ಈ ಮಹಾನ್ ಹಿನ್ನೆಲೆ ಗಾಯಕಿ ಇಹಲೋಕ ತ್ಯಜಿಸಿದ್ದಾರೆ. ಅವರ ನಿಧನವು ಕೇವಲ ಒಬ್ಬ ಗಾಯಕಿಯ ಅಗಲಿಕೆಯಲ್ಲ; ಭಾರತೀಯ ಸಂಗೀತ ಪರಂಪರೆಯ ಒಂದು ಮಹತ್ತರ ಯುಗದ ಅಂತ್ಯವಾಗಿದೆ.

ಸಂಗೀತವು ಭಾಷೆಯ ಎಲ್ಲೆಗಳನ್ನು ಮೀರಿ ಹೃದಯವನ್ನು ತಲುಪುವ ಮಾಧ್ಯಮ. ಆ ಸತ್ಯವನ್ನು ತಮ್ಮ ಗಾಯನದ ಮೂಲಕ ಸಾಬೀತುಪಡಿಸಿದ ಕಲಾವಿದೆ ಎಸ್. ಜಾನಕಿ. ಅವರು ಹಾಡಿದ ಸಾವಿರಾರು ಗೀತೆಗಳು ಇಂದಿಗೂ ಪ್ರೀತಿ, ವಿರಹ, ಭಕ್ತಿ, ಮಾತೃತ್ವ, ಸಂತೋಷ ಮತ್ತು ಬದುಕಿನ ಸೂಕ್ಷ್ಮ ಭಾವನೆಗಳಿಗೆ ಧ್ವನಿಯಾಗಿವೆ. ಅವರ ಕಂಠ ಕೇಳಿದ ಕ್ಷಣವೇ ಹಾಡಿನ ಪಾತ್ರ ಜೀವಂತವಾಗಿ ಕಣ್ಣೆದುರು ಮೂಡುತ್ತಿತ್ತು. ಅದೇ ಅವರ ಗಾಯನದ ಮಹತ್ವ.

ಸಾಮಾನ್ಯ ಕುಟುಂಬದಿಂದ ಸಂಗೀತ ಸಾಮ್ರಾಜ್ಯದವರೆಗೆ

1938ರ ಏಪ್ರಿಲ್ 23ರಂದು ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ರೆಪಲ್ಲೆ ಸಮೀಪ ಜನಿಸಿದ ಜಾನಕಿ, ಬಾಲ್ಯದಿಂದಲೇ ಸಂಗೀತದತ್ತ ಅತೀವ ಆಸಕ್ತಿ ಹೊಂದಿದ್ದರು. ಮನೆಯಲ್ಲಿದ್ದ ಸಂಗೀತದ ವಾತಾವರಣವೇ ಅವರ ಪ್ರತಿಭೆಗೆ ಮೊದಲ ಪ್ರೇರಣೆ. ಸಂಪ್ರದಾಯಬದ್ಧ ಸಂಗೀತ ಶಿಕ್ಷಣ ಸೀಮಿತವಾಗಿದ್ದರೂ, ದೇವರು ನೀಡಿದ ಸಹಜ ಕಂಠವೇ ಅವರನ್ನು ಅಪರೂಪದ ಗಾಯಕಿಯನ್ನಾಗಿ ರೂಪಿಸಿತು.

ಕುಟುಂಬದ ಬೆಂಬಲದೊಂದಿಗೆ ಅವರು ಆಗಿನ ಮದ್ರಾಸಿಗೆ ತೆರಳಿ ಹಿನ್ನೆಲೆ ಗಾಯನದಲ್ಲಿ ಅವಕಾಶ ಹುಡುಕಿದರು. ಆರಂಭದ ದಿನಗಳು ಸುಲಭವಾಗಿರಲಿಲ್ಲ. ಆದರೆ ಪ್ರತಿಭೆ, ಶ್ರಮ ಮತ್ತು ಸಂಗೀತದ ಮೇಲಿನ ಅಚಲ ನಿಷ್ಠೆ ಅವರನ್ನು ಬೇಗನೇ ಸಂಗೀತ ನಿರ್ದೇಶಕರ ಗಮನಕ್ಕೆ ತಂದಿತು. 1957ರಲ್ಲಿ ಆರಂಭವಾದ ಅವರ ಗಾಯನಯಾನ, ನಂತರ ಭಾರತದ ಸಂಗೀತ ಇತಿಹಾಸದಲ್ಲೇ ಅತ್ಯಂತ ದೀರ್ಘ ಹಾಗೂ ಯಶಸ್ವಿ ಪಯಣಗಳಲ್ಲಿ ಒಂದಾಗಿ ಬೆಳೆಯಿತು.

ಭಾಷೆಗಳ ಗಡಿಗಳನ್ನು ಮೀರಿ ಮೊಳಗಿದ ಧ್ವನಿ

ತೆಲುಗು, ಕನ್ನಡ, ತಮಿಳು, ಮಲಯಾಳಂ, ಹಿಂದಿ, ಒಡಿಯಾ, ತುಳು, ಕೊಂಕಣಿ ಸೇರಿದಂತೆ ಅನೇಕ ಭಾರತೀಯ ಭಾಷೆಗಳಲ್ಲಿ ಅವರು ಸಾವಿರಾರು ಹಾಡುಗಳನ್ನು ಹಾಡಿದರು. ವಿವಿಧ ಮೂಲಗಳ ಪ್ರಕಾರ ಅವರು 40 ಸಾವಿರಕ್ಕೂ ಅಧಿಕ ಗೀತೆಗಳಿಗೆ ಧ್ವನಿಯಾಗಿದ್ದಾರೆ.

ಪ್ರತಿ ಭಾಷೆಯ ಉಚ್ಚಾರಣೆಯನ್ನು ಅತ್ಯಂತ ಶ್ರದ್ಧೆಯಿಂದ ಕಲಿತು, ಆ ಭಾಷೆಯವರೇ ಹಾಡಿದಂತೆ ಹಾಡುವುದು ಅವರ ವಿಶೇಷತೆ. ಅದಕ್ಕಾಗಿಯೇ ಅವರು ಹಾಡಿದ ಗೀತೆಗಳನ್ನು ಯಾವ ರಾಜ್ಯದ ಜನರೂ ತಮ್ಮದೇ ಭಾಷೆಯ ಹಾಡುಗಳೆಂದು ಪ್ರೀತಿಸಿದರು. ಒಬ್ಬ ಗಾಯಕಿಗೆ ಇದಕ್ಕಿಂತ ದೊಡ್ಡ ಗೌರವ ಮತ್ತೊಂದಿಲ್ಲ.

ಕನ್ನಡಿಗರ ಮನದ ಜಾನಕಿ

ಕರ್ನಾಟಕದ ಸಂಗೀತಾಸಕ್ತರಿಗೆ ಎಸ್. ಜಾನಕಿ ಎಂದರೆ ವಿಶೇಷವಾದ ಭಾವನಾತ್ಮಕ ಬಂಧ. ಕನ್ನಡ ಚಿತ್ರರಂಗದ ಸುವರ್ಣಯುಗದ ನೂರಾರು ಅಮರಗೀತೆಗಳಿಗೆ ಅವರು ಜೀವ ತುಂಬಿದ್ದಾರೆ.

ಡಾ. ರಾಜ್‌ಕುಮಾರ್, ವಿಷ್ಣುವರ್ಧನ್, ಅಂಬರೀಷ್, ಶಂಕರ್ ನಾಗ್, ಅನಂತ್ ನಾಗ್, ರಮೇಶ್ ಅರವಿಂದ್ ಸೇರಿದಂತೆ ಹಲವು ತಲೆಮಾರಿನ ನಟ–ನಟಿಯರ ಭಾವನೆಗಳಿಗೆ ಅವರ ಧ್ವನಿಯೇ ಆತ್ಮವಾಗಿತ್ತು.

ವಿಜಯಭಾಸ್ಕರ್, ಜಿ.ಕೆ. ವೆಂಕಟೇಶ್, ರಾಜನ್–ನಾಗೇಂದ್ರ, ಉಪೇಂದ್ರ ಕುಮಾರ್, ಹಂಸಲೇಖ ಸೇರಿದಂತೆ ಕನ್ನಡದ ಶ್ರೇಷ್ಠ ಸಂಗೀತ ನಿರ್ದೇಶಕರೊಂದಿಗೆ ಅವರು ನೀಡಿದ ಹಾಡುಗಳು ಇಂದಿಗೂ ಸಂಗೀತಾಸಕ್ತರ ತುಟಿಗಳಲ್ಲಿ ಜೀವಂತವಾಗಿವೆ.

ಪ್ರೇಮಗೀತೆಗಳಾಗಲಿ, ಭಕ್ತಿಗೀತೆಗಳಾಗಲಿ, ಜಾನಪದ ಸೊಗಡಿನ ಹಾಡುಗಳಾಗಲಿ ಅಥವಾ ವಿರಹದ ಮೌನವನ್ನು ಹೇಳುವ ಮಧುರಗೀತೆಗಳಾಗಲಿ—ಜಾನಕಿ ಅವರ ಧ್ವನಿ ಪ್ರತಿಯೊಂದು ಭಾವಕ್ಕೂ ಹೊಸ ಅರ್ಥ ನೀಡುತ್ತಿತ್ತು.

ಇಳಯರಾಜಾ–ಜಾನಕಿ: ಸಂಗೀತದ ಅದ್ಭುತ ಜೋಡಿ

ತಮಿಳು ಚಿತ್ರರಂಗದಲ್ಲಿ ಸಂಗೀತ ನಿರ್ದೇಶಕ ಇಳಯರಾಜಾ ಮತ್ತು ಎಸ್. ಜಾನಕಿ ಅವರ ಸಂಗಮ ಭಾರತೀಯ ಚಿತ್ರಸಂಗೀತದ ಅತ್ಯಂತ ಯಶಸ್ವಿ ಜೋಡಿಗಳಲ್ಲಿ ಒಂದು.

ಇಳಯರಾಜಾ ಅವರ ಸಂಗೀತದ ಸೂಕ್ಷ್ಮ ಭಾವಗಳನ್ನು ಜಾನಕಿ ತಮ್ಮ ಧ್ವನಿಯಲ್ಲಿ ಜೀವಂತಗೊಳಿಸುತ್ತಿದ್ದರು. ಈ ಜೋಡಿಯ ಅನೇಕ ಗೀತೆಗಳು ಇಂದಿಗೂ ದಕ್ಷಿಣ ಭಾರತದ ಸಂಗೀತಾಭಿಮಾನಿಗಳ ನಿತ್ಯ ಸಂಗಾತಿಗಳಾಗಿವೆ.

ಅದೇ ರೀತಿ ಎಂ.ಎಸ್. ವಿಶ್ವನಾಥನ್, ಕೆ.ವಿ. ಮಹಾದೇವನ್, ಚಕ್ರವರ್ತಿ, ಹಂಸಲೇಖ, ರಾಜನ್–ನಾಗೇಂದ್ರ, ವಿಜಯಭಾಸ್ಕರ್ ಮೊದಲಾದ ದಿಗ್ಗಜರ ಸಂಗೀತಕ್ಕೂ ಅವರು ವಿಶಿಷ್ಟ ಕಂಠಸಿರಿ ನೀಡಿದ್ದಾರೆ.

ಧ್ವನಿಯೊಳಗಿದ್ದ ಸಾವಿರ ರೂಪಗಳು

ಎಸ್. ಜಾನಕಿ ಅವರ ಗಾಯನದ ಅತ್ಯಂತ ದೊಡ್ಡ ವೈಶಿಷ್ಟ್ಯವೆಂದರೆ ಧ್ವನಿಯ ರೂಪಾಂತರ. ಒಂದು ಹಾಡಿನಲ್ಲಿ ಮಗು ಮಾತನಾಡಿದಂತೆ ಹಾಡಬಲ್ಲರು; ಮತ್ತೊಂದು ಹಾಡಿನಲ್ಲಿ ವಯಸ್ಸಾದ ಮಹಿಳೆಯ ಭಾವನೆ ಮೂಡಿಸುತ್ತಿದ್ದರು. ಕೆಲವೊಮ್ಮೆ ಗ್ರಾಮೀಣ ಹುಡುಗಿಯ ಮುಗ್ಧತೆ, ಮತ್ತೊಮ್ಮೆ ನಗರ ಮಹಿಳೆಯ ಆತ್ಮವಿಶ್ವಾಸ, ಇನ್ನೊಮ್ಮೆ ತಾಯಿಯ ಮಮತೆ, ಮತ್ತೆ ಭಕ್ತೆಯ ಪ್ರಾರ್ಥನೆ—ಪ್ರತಿ ಭಾವಕ್ಕೂ ಬೇರೆ ಧ್ವನಿಯನ್ನು ನೀಡುವ ಸಾಮರ್ಥ್ಯ ಅವರಿಗೆ ಮಾತ್ರ ಸಾಧ್ಯವಾಗಿತ್ತು. ಅವರ ಧ್ವನಿ ಕೇವಲ ಸಂಗೀತವಲ್ಲ; ಅದು ಅಭಿನಯವೂ ಆಗಿತ್ತು.

ಶ್ರಮ, ಶಿಸ್ತು ಮತ್ತು ಪರಿಪೂರ್ಣತೆಯ ಪ್ರತೀಕ

ಒಂದು ಹಾಡನ್ನು ಹಾಡುವ ಮೊದಲು ಅದರ ಸಾಹಿತ್ಯವನ್ನು ಸಂಪೂರ್ಣ ಅರ್ಥೈಸಿಕೊಳ್ಳುವುದು ಅವರ ಅಭ್ಯಾಸ. ಉಚ್ಚಾರಣೆಯಲ್ಲಿ ಯಾವುದೇ ತಪ್ಪು ಆಗಬಾರದು ಎಂಬ ಕಾರಣಕ್ಕೆ ಹೊಸ ಭಾಷೆಗಳನ್ನು ಸಹ ಕಲಿಯುತ್ತಿದ್ದರು.

ರೆಕಾರ್ಡಿಂಗ್ ಸ್ಟುಡಿಯೋದಲ್ಲಿ ಸಮಯಪಾಲನೆ, ಶಿಸ್ತು ಹಾಗೂ ಸಂಗೀತದ ಮೇಲಿನ ಅಪಾರ ಗೌರವದಿಂದ ಅವರು ಎಲ್ಲರ ಪ್ರೀತಿಗೆ ಪಾತ್ರರಾಗಿದ್ದರು.

ಸಂಗೀತ ನಿರ್ದೇಶಕರು ಅನೇಕ ಬಾರಿ ಹೇಳಿದ್ದೇನಂದರೆ, ಜಾನಕಿ ಹಾಡನ್ನು ಒಮ್ಮೆ ಅರ್ಥ ಮಾಡಿಕೊಂಡರೆ ಅದನ್ನು ಮತ್ತೆ ವಿವರಿಸುವ ಅಗತ್ಯವೇ ಇರಲಿಲ್ಲ.

ಪ್ರಶಸ್ತಿಗಳಿಗಿಂತ ದೊಡ್ಡದು ಜನರ ಪ್ರೀತಿ

ಎಸ್. ಜಾನಕಿ ಅವರು ನಾಲ್ಕು ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಪಡೆದಿದ್ದಾರೆ. ವಿವಿಧ ರಾಜ್ಯ ಸರ್ಕಾರಗಳಿಂದ ಮೂವತ್ತಕ್ಕೂ ಅಧಿಕ ಅತ್ಯುತ್ತಮ ಹಿನ್ನೆಲೆ ಗಾಯಕಿ ಪ್ರಶಸ್ತಿಗಳು ಅವರಿಗೆ ಸಂದಿವೆ. ಆದರೆ ಅವರು ಎಂದಿಗೂ ಪ್ರಶಸ್ತಿಗಳಿಗಾಗಿ ಹಾಡಲಿಲ್ಲ. ಸಂಗೀತವೇ ಅವರ ಧ್ಯಾನ, ಗಾಯನವೇ ಅವರ ಪೂಜೆ.

ಪದ್ಮಭೂಷಣ ಪ್ರಶಸ್ತಿಯನ್ನು ಅವರು ವಿನಯಪೂರ್ವಕವಾಗಿ ನಿರಾಕರಿಸಿದ್ದು ದೇಶಾದ್ಯಂತ ಚರ್ಚೆಗೆ ಕಾರಣವಾಗಿತ್ತು. ತಮ್ಮ ಸಾಧನೆಗೆ ತಡವಾಗಿ ಗೌರವ ನೀಡಲಾಗಿದೆ ಎಂಬ ಭಾವನೆಯನ್ನು ಅವರು ಅತ್ಯಂತ ಗೌರವಯುತವಾಗಿ ವ್ಯಕ್ತಪಡಿಸಿದ್ದರು.

ಎಸ್.ಪಿ.ಬಿ.–ಜಾನಕಿ: ಮರೆಯಲಾಗದ ಸಂಗೀತಯಾನ

ಎಸ್.ಪಿ. ಬಾಲಸುಬ್ರಹ್ಮಣ್ಯಂ ಮತ್ತು ಎಸ್. ಜಾನಕಿ ಅವರ ಜೋಡಿ ಭಾರತೀಯ ಚಿತ್ರಸಂಗೀತದ ಅತ್ಯಂತ ಜನಪ್ರಿಯ ಗಾಯನ ಜೋಡಿಗಳಲ್ಲಿ ಒಂದು.

ಅವರಿಬ್ಬರು ಹಾಡಿದ ಸಾವಿರಾರು ಯುಗಲಗೀತೆಗಳು ಇಂದಿಗೂ ರೇಡಿಯೋಗಳಲ್ಲಿ, ಸಂಗೀತ ಕಾರ್ಯಕ್ರಮಗಳಲ್ಲಿ ಮತ್ತು ಅಭಿಮಾನಿಗಳ ನೆನಪುಗಳಲ್ಲಿ ಸದಾ ಕೇಳಿಸುತ್ತಿವೆ.ಇವರ ಗಾಯನದಲ್ಲಿ ಸ್ಪರ್ಧೆಯಿರಲಿಲ್ಲ; ಪರಸ್ಪರ ಪೂರಕವಾದ ಸಂಗೀತ ಮಾತ್ರ ಇತ್ತು.

ಸರಳತೆಯೇ ಅವರ ಅಲಂಕಾರ

ಅಸಂಖ್ಯಾತ ಪ್ರಶಸ್ತಿಗಳು, ಲಕ್ಷಾಂತರ ಅಭಿಮಾನಿಗಳು, ದೇಶವ್ಯಾಪಿ ಖ್ಯಾತಿ—ಇವೆಲ್ಲ ಇದ್ದರೂ ಎಸ್. ಜಾನಕಿ ಅತ್ಯಂತ ಸರಳ ಜೀವನ ನಡೆಸಿದರು.ವೇದಿಕೆಯಲ್ಲಿ ಎಂದಿಗೂ ಆಡಂಬರ ತೋರಲಿಲ್ಲ. ಸಂದರ್ಶನಗಳಲ್ಲಿಯೂ ತಮ್ಮ ಸಾಧನೆಗಿಂತ ಸಂಗೀತದ ಮಹತ್ವದ ಬಗ್ಗೆ ಹೆಚ್ಚು ಮಾತನಾಡುತ್ತಿದ್ದರು.ಹೊಸ ಗಾಯಕರಿಗೆ ಪ್ರೋತ್ಸಾಹ ನೀಡುವುದು, ಅವರನ್ನು ಮೆಚ್ಚುವುದು ಮತ್ತು ಸಂಗೀತವನ್ನು ಗೌರವಿಸುವಂತೆ ಸಲಹೆ ನೀಡುವುದು ಅವರ ಸ್ವಭಾವವಾಗಿತ್ತು.

ಹೊಸ ತಲೆಮಾರಿನಲ್ಲೂ ಜೀವಂತ ಧ್ವನಿ

ಡಿಜಿಟಲ್ ಸಂಗೀತದ ಯುಗದಲ್ಲಿಯೂ ಎಸ್. ಜಾನಕಿ ಅವರ ಹಾಡುಗಳ ಜನಪ್ರಿಯತೆ ಕಡಿಮೆಯಾಗಲಿಲ್ಲ. ಯೂಟ್ಯೂಬ್, ಸಂಗೀತ ಆ್ಯಪ್‌ಗಳು, ರಿಯಾಲಿಟಿ ಶೋಗಳು, ಸಾಮಾಜಿಕ ಜಾಲತಾಣಗಳು—ಎಲ್ಲೆಡೆ ಅವರ ಹಾಡುಗಳು ಹೊಸ ತಲೆಮಾರಿನ ಕಿವಿಗಳಿಗೆ ತಲುಪುತ್ತಲೇ ಇವೆ. ಇಂದಿನ ಅನೇಕ ಯುವ ಗಾಯಕ–ಗಾಯಕಿಯರು ತಮ್ಮ ಸಂಗೀತಯಾನದ ಪ್ರೇರಣೆಯಾಗಿ ಜಾನಕಿ ಅವರನ್ನು ಉಲ್ಲೇಖಿಸುತ್ತಾರೆ.

ಸಂಗೀತ ಲೋಕದ ಕಂಬನಿ

ಅವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ದೇಶದಾದ್ಯಂತ ಸಂಗೀತ ಲೋಕದಲ್ಲಿ ಶೋಕದ ಛಾಯೆ ಆವರಿಸಿತು. ಚಿತ್ರರಂಗದ ಗಣ್ಯರು, ಸಂಗೀತ ನಿರ್ದೇಶಕರು, ಗಾಯಕ–ಗಾಯಕಿಯರು, ಸಾಹಿತ್ಯಿಕರು, ರಾಜಕೀಯ ನಾಯಕರು ಹಾಗೂ ಲಕ್ಷಾಂತರ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳ ಮೂಲಕ ಭಾವಪೂರ್ಣ ನಮನ ಸಲ್ಲಿಸಿದರು.

“ಒಂದು ಯುಗ ಮುಗಿಯಿತು”, “ಗಾನಕೋಗಿಲೆಯ ಧ್ವನಿ ಎಂದೆಂದಿಗೂ ಜೀವಂತ”, “ನಮ್ಮ ಜೀವನದ ನೆನಪುಗಳಿಗೆ ಹಿನ್ನೆಲೆ ಸಂಗೀತ ನೀಡಿದ ಧ್ವನಿ” ಎಂಬ ಮಾತುಗಳು ಎಲ್ಲೆಡೆ ಕೇಳಿಬಂದವು.

ಕನ್ನಡಿಗರ ನೆನಪಿನಲ್ಲಿ ಎಂದೆಂದಿಗೂ

ಕರ್ನಾಟಕದ ಮನೆಮನೆಗಳಲ್ಲೂ ಎಸ್. ಜಾನಕಿ ಅವರ ಹಾಡುಗಳು ಇಂದಿಗೂ ಬೆಳಗಿನ ಭಕ್ತಿಗೀತೆಗಳಾಗಿ, ಪ್ರೇಮಗೀತೆಗಳಾಗಿ, ಹಬ್ಬದ ಸಂಭ್ರಮವಾಗಿ, ಬದುಕಿನ ನೆನಪುಗಳಾಗಿ ಮೊಳಗುತ್ತಿವೆ.

ಅವರ ಧ್ವನಿ ಅನೇಕ ಕುಟುಂಬಗಳ ಭಾವನೆಗಳ ಒಂದು ಭಾಗವಾಗಿದೆ. ತಾಯಿಯ ನೆನಪಿನಲ್ಲಿ, ಪ್ರೀತಿಯ ನೆನಪಿನಲ್ಲಿ, ಬಾಲ್ಯದ ನೆನಪಿನಲ್ಲಿ, ಹಬ್ಬದ ಸಂಭ್ರಮದಲ್ಲಿ—ಎಲ್ಲೆಲ್ಲೂ ಜಾನಕಿ ಅವರ ಹಾಡುಗಳಿವೆ.

ಸ್ವರ ಮೌನವಾದರೂ…

ಕಾಲ ಬದಲಾಗಬಹುದು. ಸಂಗೀತದ ಶೈಲಿಗಳು ಬದಲಾಗಬಹುದು. ಹೊಸ ತಂತ್ರಜ್ಞಾನಗಳು ಬರಬಹುದು. ಆದರೆ ಭಾವನೆಗೆ ಜೀವ ತುಂಬುವ ಧ್ವನಿಗಳು ಅಪರೂಪ.

ಎಸ್. ಜಾನಕಿ ಅಂತಹ ಅಪರೂಪದ ಧ್ವನಿ. ಅವರ ದೇಹ ನಮ್ಮೊಂದಿಗಿಲ್ಲ. ಆದರೆ ಅವರು ಹಾಡಿದ ಪ್ರತಿಯೊಂದು ಗೀತೆ ಮುಂದಿನ ಹಲವು ತಲೆಮಾರುಗಳಿಗೂ ಬದುಕಿನ ಸಂಗಾತಿಯಾಗಿರುತ್ತದೆ. ಸಂಗೀತ ಇತಿಹಾಸವನ್ನು ಬರೆಯುವಾಗ ಅವರ ಹೆಸರನ್ನು ಬಿಟ್ಟು ಮುಂದೆ ಸಾಗುವುದು ಅಸಾಧ್ಯ. ಮರಣವು ಒಬ್ಬ ವ್ಯಕ್ತಿಯನ್ನು ಮಾತ್ರ ಕಸಿದುಕೊಳ್ಳಬಹುದು; ಅವರು ಸೃಷ್ಟಿಸಿದ ಕಲೆಯನ್ನು ಅಲ್ಲ.

ಎಸ್. ಜಾನಕಿ ಅವರ ಸ್ವರ ಇಂದು ಮೌನವಾಗಿದೆ. ಆದರೆ ಅವರು ಹಾಡಿದ ಸಾವಿರಾರು ಗೀತೆಗಳು ಭಾರತೀಯ ಸಂಗೀತಾಕಾಶದಲ್ಲಿ ಶಾಶ್ವತವಾಗಿ ಪ್ರತಿಧ್ವನಿಸುತ್ತಲೇ ಇರುತ್ತವೆ.
ಅವರ ಕಂಠಸಿರಿ ಕಾಲವನ್ನು ಮೀರಿದೆ.
ಅವರ ಸಂಗೀತ ತಲೆಮಾರುಗಳನ್ನು ಮೀರಿದೆ.
ಅವರ ನೆನಪು ಎಂದಿಗೂ ಅಳಿಯದು.

ಸ್ವರ ಮೌನವಾಗಿದೆ… ಆದರೆ ಸಂಗೀತ ಅಮರವಾಗಿದೆ. ಅದೇ ಎಸ್. ಜಾನಕಿ ಅವರ ಶಾಶ್ವತ ಪರಂಪರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂಕಣ

ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ.

ಈ‌ ಹಿನ್ನೆಲೆಯಲ್ಲಿ ದೀಪಾವಳಿ ವಿಷೇಶಾಂಕ 2026ರ ವಿಭಾಗಕ್ಕೆ ಕತೆ, ಕವಿತೆ ಹಾಗೂ ಲೇಖನ ಹಾಗೂ ರೂಪದರ್ಶಿಗಳ ಛಾಯಾಚಿತ್ರಗಳನ್ನು ಆಹ್ವಾನಿಸಿದ್ದೇವೆ.

ಕತೆ – ಕವಿತೆಗಳನ್ನು ಕಳುಹಿಸಲು ಇರುವ ನಿಯಮಗಳು

ಕತೆ/ಕವಿತೆ ಸ್ವತಂತ್ರ ರಚನೆಯಾಗಿರಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು.

ಕತೆ 1500 ಸಾವಿರ ಪದಗಳ ಮಿತಿಯಲ್ಲಿರಲಿ. ಕವಿತೆಗೆ 40 ಸಾಲಿನ ಮಿತಿಯಿರಲಿ, ನುಡಿ ಅಥವಾ ಬರಹ ತಂತ್ರಾಂಶದಲ್ಲಿ ಇಲ್ಲವೆ ಯೂನಿಕೋಡ್‌ನಲ್ಲಿ ಇರಬೇಕು. ವಯಸ್ಸಿನ ಮಿತಿ ಇರುವುದಿಲ್ಲ.

ಕತೆ/ಕವಿತೆ ಇರುವ ಪುಟದಲ್ಲಿ ಹೆಸರು, ವಿವರ ಬರೆಯುವಂತಿಲ್ಲ. ಪ್ರತ್ಯೇಕ ಪುಟದಲ್ಲಿ ಹೆಸರು, ಅಂಚೆ ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಒದಗಿಸಬೇಕು.

ಇತ್ತೀಚಿನ ಪಾಸ್‌ಪೋರ್ಟ್ ಅಳತೆಯ ವರ್ಣಮಯ ಭಾವಚಿತ್ರದೊಂದಿಗೆ 100 ಪದಗಳ ಒಳಗೆ ಕಿರು ಪರಿಚಯ ಕಳುಹಿಸಬೇಕು.

ಸ್ಪರ್ಧೆಗೆ ಕಳುಹಿಸಿರುವ ಬರಹಗಳನ್ನು ಹಿಂದಿರುಗಿಸುವುದಿಲ್ಲ. ಬರಹಗಳು ಕಡ್ಡಾಯವಾಗಿ ಎಂಎಸ್ ವರ್ಡ್ ಫೈಲ್ (MS word File) ನಲ್ಲಿರಲಿ.

ಬರಹ ಮತ್ತು ಫೋಟೋಗಳನ್ನು ಇ-ಮೇಲ್ ಮೂಲಕವಷ್ಟೇ ಕಳಿಸಿ.

ತೀರ್ಪುಗಾರರ ತೀರ್ಮಾನವೇ ಅಂತಿಮ.

ಲೇಖನಗಳಿಗೆ ಆಹ್ವಾನ : ವೈಚಾರಿಕತೆ, ವಿಮರ್ಶೆ, ಕಾನೂನು, ಸಾಹಿತ್ಯ, ತಂತ್ರಜ್ಞಾನ, ವಿಜ್ಞಾನ, ಡಿಜಿಟಲ್ ಮಾಧ್ಯಮ, ಸಿನೆಮಾ, ಪ್ರೇಮಪತ್ರ, ಕೃಷಿ, ರಾಜಕೀಯ, ಕಲೆ, ಆರೋಗ್ಯ, ಪ್ರವಾಸ, ಅಡುಗೆ, ಫೋಟೋಗ್ರಫಿ, ವೈಲ್ಡ್ ಲೈಫ್, ಹಾಸ್ಯ ಕುರಿತಾದ ಲೇಖನಗಳನ್ನು 450 ಪದಗಳನ್ನು ಮೀರದಂತೆ ಬರೆದು ಕಳುಹಿಸಿ.

ಹಾಗೆಯೇ, ವಿಶೇಷಾಂಕದ ಮುಖಪುಟದ ರೂಪದರ್ಶಿಯಾಗಲು ಅವಕಾಶವನ್ನು ಕಲ್ಪಸಿಲಾಗಿದೆ. ಆಸಕ್ತ ರೂಪದರ್ಶಿಗಳು ಸ್ಟುಡಿಯೋ ಅಥವಾ ಫೋಟೋಗ್ರಾಫರ್ ಮೂಲಕ ತೆಗೆದ ‘6*4 ಅಳತೆಯ ಮುದ್ರಿತ ಫೋಟೋ ಮತ್ತು ಇ-ಮೇಲ್ ಮೂಲಕವೂ ಕಳಿಸಬಹುದು. 80 ಪದಗಳಮಿತಿಯೊಳಗೆ ನಿಮ್ಮ ಪರಿಚಯದೊಂದಿಗೆ, ಒಬ್ಬರು 4 ಫೋಟೋ ಕಳುಹಿಸಬೇಕು. ವಯಸ್ಸಿನ ಮಿತಿಯಿಲ್ಲ ಇರುವುದಿಲ್ಲ.

ಕತೆಯ ವಿಜೇತರಿಗೆ ಪ್ರಥಮ ಬಹುಮಾನ : 10000, ದ್ವಿತೀಯ ಬಹುಮಾನ : 5000, ತೃತೀಯ ಬಹುಮಾನ : 3000 ಹಾಗೂ ಕವಿತೆ ಬಹುಮಾನ ವಿಜೇತರಿಗೆ ಪ್ರಥಮ ಬಹುಮಾನ : 5000 ದ್ವಿತೀಯ ಬಹುಮಾನ : 3000 ಹಾಗೂ ತೃತೀಯ ಬಹುಮಾನ : ₹2000 ಸಿಗಲಿದೆ.

ಆಗಸ್ಟ್‌ 30ರೊಳಗೆ ಬರಹಗಳನ್ನು ಇ-ಮೇಲ್‌: deepasuddidina@gmail.com ಗೆ ಕಳುಹಿಸಲು ತಿಳಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ :9980346243 ಹಾಗೂ visit: www.suddidina.com ಅನ್ನು ವೀಕ್ಷಿಸಬಹುದಾಗಿದೆ.

ಕಚೇರಿ ವಿಳಾಸ 

ದೇವನಗರಿ ಸುದ್ದಿದಿನ- ಕನ್ನಡ ದಿನ ಪತ್ರಿಕೆ
ದೀಪಾವಳಿ ವಿಶೇಷಾಂಕ ವಿಭಾಗ
#3231/1, ಸಂಜೀವ ಸದನ, 11ನೇ ಮುಖ್ಯರಸ್ತೆ, 4 ನೇ ಅಡ್ಡರಸ್ತೆ, ಎಂಸಿಸಿ ಬಿ ಬ್ಲಾಕ್, ದಾವಣಗೆರೆ, 577004

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಭೀಕರ | ಪ್ರಿಯಕರನಿಂದ ಪ್ರೇಯಸಿಯ ಬರ್ಬರ ಹತ್ಯೆ

Published

on

ಸುದ್ದಿದಿನ ಡೆಸ್ಕ್:ಬೆಂಗಳೂರಿನಲ್ಲಿ ಪ್ರೀತಿಯೊಂದು ರಕ್ತಸಿಕ್ತ ಅಂತ್ಯ ಕಂಡಿದೆ. ಮದುವೆಗೆ ನಿರಾಕರಿಸಿದ ಪ್ರೇಯಸಿಯನ್ನು ಪ್ರಿಯಕರನೇ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯ ಪೈಪ್‌ಲೈನ್ ರಸ್ತೆಯಲ್ಲಿ ನಡೆದಿದೆ.

23 ವರ್ಷದ ಅಂಜಲಿ ಕೊಲೆಯಾದ ಯುವತಿಯಾಗಿದ್ದು, ರಾಜೀವ್ ಬಂಧಿತ ಆರೋಪಿ. ಕಳೆದ ಮೂರು-ನಾಲ್ಕು ವರ್ಷಗಳಿಂದ ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು. ಈ ಹಿಂದೆ ಕೆಲಸ ಮಾಡುತ್ತಿದ್ದ ಸ್ಥಳದಲ್ಲೇ ಪರಿಚಯವಾಗಿ ಸ್ನೇಹ ಬೆಳೆದು, ಬಳಿಕ ಅದು ಪ್ರೀತಿಗೆ ತಿರುಗಿತ್ತು.

ಆದರೆ ರಾಜೀವ್‌ಗೆ ಕ್ರಿಮಿನಲ್ ಹಿನ್ನೆಲೆ ಇದ್ದ ಕಾರಣ ಅಂಜಲಿ ಕುಟುಂಬಸ್ಥರು ಈ ಮದುವೆಗೆ ವಿರೋಧ ವ್ಯಕ್ತಪಡಿಸಿದ್ದರು. ಹಲವು ಬಾರಿ ಕುಟುಂಬಸ್ಥರನ್ನು ಒಪ್ಪಿಸಲು ರಾಜೀವ್ ಪ್ರಯತ್ನಿಸಿದ್ದರೂ ಫಲಿಸಿರಲಿಲ್ಲ. ಇತ್ತೀಚೆಗೆ ಪೋಷಕರ ಒತ್ತಾಯಕ್ಕೆ ಮಣಿದ ಅಂಜಲಿ ರಾಜೀವ್‌ನಿಂದ ದೂರವಾಗಲು ಆರಂಭಿಸಿದ್ದಳು. ಇಂದು ಸಂಜೆ ಅಂಜಲಿಯನ್ನು ಊಟದ ನೆಪದಲ್ಲಿ ಕರೆಸಿಕೊಂಡಿದ್ದ ರಾಜೀವ್, ಮತ್ತೊಮ್ಮೆ ಮದುವೆ ವಿಚಾರ ಪ್ರಸ್ತಾಪಿಸಿದ್ದಾನೆ. ಈ ವೇಳೆ ಇಬ್ಬರ ನಡುವೆ ಮಾತಿನ ಚಕಮಕಿ ನಡೆದು, ಕೋಪಗೊಂಡ ರಾಜೀವ್ ಚಾಕುವಿನಿಂದ ಅಂಜಲಿಯ ಕುತ್ತಿಗೆಗೆ ಇರಿದಿದ್ದಾನೆ.

ರಕ್ತದ ಮಡುವಿನಲ್ಲಿ ಬಿದ್ದಿದ್ದ ಅಂಜಲಿಯನ್ನು ಸ್ಥಳೀಯರು ತಕ್ಷಣ ಆಸ್ಪತ್ರೆಗೆ ದಾಖಲಿಸಿದರೂ, ಚಿಕಿತ್ಸೆ ಫಲಕಾರಿಯಾಗದೆ ಆಕೆ ಮೃ*ತಪಟ್ಟಿದ್ದಾಳೆ. ಘಟನೆ ಕುರಿತು ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ ಮಹಾಲಕ್ಷ್ಮಿ ಲೇಔಟ್ ಪೊಲೀಸರು ಪರಿಶೀಲನೆ ನಡೆಸಿ, ಕೆಲವೇ ನಿಮಿಷಗಳಲ್ಲಿ ಆರೋಪಿ ರಾಜೀವ್‌ನನ್ನು ಬಂಧಿಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಎಂ.ಎಸ್. ರಾಮಯ್ಯ ಆಸ್ಪತ್ರೆಗೆ ರವಾನಿಸಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಮುಂದುವರಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ಅಂತರಂಗ11 hours ago

ಪ್ರಪ್ರಥಮ ಮಹಿಳಾ ಸಾಹಿತ್ಯ ಸಮ್ಮೇಳನ : ಸರ್ವ ಕ್ಷೇತ್ರದಲ್ಲಿಯೂ ರಾರಾಜಿಸುವ ಶಿಖರ ಶಿರೋಮಣಿಗಳು

~ಶ್ರೀಮತಿ ವೀಣಾ ಮಹಾಂತೇಶ್ ಬಿ ಎಂ ಲೇಖಕಿ ಆಪ್ತ ಸಮಾಲೋಚಕಿ. ದಾವಣಗೆರೆ ಆಗಸ್ಟ್ ದಿನಾಂಕ 8 ಮತ್ತು 9ನೇ ತಾರೀಕು,ಸಾಹಿತ್ಯದ ಬೃಹತ್ ಹಡಗೊಂದು ಶ್ರೀಮಂತನಗರಿ ದಾವಣಗೆರೆ. ಜ್ಞಾನದ...

ದಿನದ ಸುದ್ದಿ1 day ago

ನಾನೇ ಮುಖ್ಯಮಂತ್ರಿ ಇದ್ದಂತೆ : ಶಾಸಕ ಶಿವಗಂಗಾ ಬಸವರಾಜ್

ಸುದ್ದಿದಿನ,ದಾವಣಗೆರೆ: “ತಮ್ಮ ಕ್ಷೇತ್ರದ ಅಭಿವೃದ್ಧಿ ವಿಚಾರದಲ್ಲಿ ತಾವು ಮುಖ್ಯಮಂತ್ರಿಯಂತೆ ಜವಾಬ್ದಾರಿಯಿಂದ ಕೆಲಸ ಮಾಡುತ್ತಿದ್ದೇನೆ” ಎಂದು ಶಾಸಕ ಶಿವಗಂಗಾ ಬಸವರಾಜ್ ಹೇಳಿದರು. ದಾವಣಗೆರೆಯಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಕಾಂಗ್ರೆಸ್...

ದಿನದ ಸುದ್ದಿ2 days ago

ದಾವಣಗೆರೆ ವಿಶ್ವವಿದ್ಯಾಲಯ | ಗುಣಮಟ್ಟದ ಸಂಶೋಧನೆ ಶೈಕ್ಷಣಿಕ ಪ್ರಗತಿ – ಜಾಗತಿಕ ಮಾನ್ಯತೆಯ ಮೂಲಾಧಾರ : ಕುಲಪತಿ ಪ್ರೊ. ಬಿ. ಇ. ರಂಗಸ್ವಾಮಿ

ಸುದ್ದಿದಿನ,ದಾವಣಗೆರೆ: ದಾವಣಗೆರೆ ವಿಶ್ವವಿದ್ಯಾಲಯದ ಶಿವಗಂಗೋತ್ರಿಯ ನೂತನ ವಿಜ್ಞಾನ ಸಭಾಂಗಣದಲ್ಲಿ ಕಂಪ್ಯೂಟರ್ ಅಪ್ಲಿಕೇಷನ್ಸ್ (ಎಮ್.ಸಿ.ಎ) ಹಾಗೂ ಕಂಪ್ಯೂಟರ್ ಸೈನ್ಸ್ (ಎಮ್.ಎಸ್ಸಿ) ವಿಭಾಗಗಳ ಸಂಯುಕ್ತಾಶ್ರಯದಲ್ಲಿ “ಸಂಶೋಧನಾ ಸಮಸ್ಯೆಯನ್ನು ಗುರುತಿಸುವ ವಿವಿಧ...

ದಿನದ ಸುದ್ದಿ4 days ago

ಮಾಯಕೊಂಡ ಶಾಸಕ ಕೆ.ಎಸ್. ಬಸವಂತಪ್ಪ ಸಚಿವರಾಗಿ ಆಯ್ಕೆ: ದಾವಣಗೆರೆಯಲ್ಲಿ ಸಂಭ್ರಮ ಆಚರಣೆ

ಸುದ್ದಿದಿನ,ದಾವಣಗೆರೆ: ರಾಜ್ಯ ಸಚಿವ ಸಂಪುಟ ವಿಸ್ತರಣೆಯಲ್ಲಿ ಮಾಯಕೊಂಡ ವಿಧಾನಸಭಾ ಕ್ಷೇತ್ರದ ಶಾಸಕ ಕೆ.ಎಸ್. ಬಸವಂತಪ್ಪ ಅವರಿಗೆ ಸಚಿವ ಸ್ಥಾನ ದೊರೆತಿರುವುದು ದಾವಣಗೆರೆ ಜಿಲ್ಲೆಯ ರಾಜಕೀಯ ಇತಿಹಾಸದಲ್ಲಿ ಮಹತ್ವದ...

ದಿನದ ಸುದ್ದಿ1 week ago

ಡಾ. ಪ್ರೀತಿ ಅವರಿಗೆ ‘ಪರಮ್ ಭೂಷಣ್ ನ್ಯಾಷನಲ್ ಎಕ್ಸಲೆನ್ಸ್ ಅವಾರ್ಡ್

ಸುದ್ದಿದಿನ,ದಾವಣಗೆರೆ: ದಾವಣಗೆರೆಯ ಹೆಮ್ಮೆಯ ಶಿಕ್ಷಣ ತಜ್ಞೆ, ಉದ್ಯಮಿ ಹಾಗೂ Parvatha Global Ventures LLP ಸಂಸ್ಥೆಯ ಸಂಸ್ಥಾಪಕಿ ಮತ್ತು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (Founder & CEO)...

ದಿನದ ಸುದ್ದಿ1 week ago

ಸುಶೋಭನ್ ಸೋನು ರಾಯ್ ಬೆಳ್ಳಿತೆರೆಗೆ

ಸುದ್ದಿದಿನ ಡೆಸ್ಕ್:ಹಲವಾರು ವರ್ಷಗಳ ಕಾಲ ಬಂಗಾಳಿ ಟೆಲಿವಿಷನ್ನಲ್ಲಿ ಕೆಲಸ ಮಾಡಿದ ನಂತರ ಮತ್ತು ನಂತರ ಮಾಡೆಲಿಂಗ್ ಮೂಲಕ ತಮ್ಮ ವೃತ್ತಿಜೀವನವನ್ನು ವಿಸ್ತರಿಸಿದ ನಂತರ, ಅಭಿನೇತಾ ಸುಶೋಭನ್ ಸೋನು...

ದಿನದ ಸುದ್ದಿ1 week ago

ತುರ್ತು ಕುಡಿಯುವ ನೀರಿನ ಯೋಜನೆ ; 7 ಕೋಟಿ ಅನುದಾನದಲ್ಲಿ ಅವ್ಯವಹಾರ : ತನಿಖೆಗೆ ಆದೇಶಿಸಿ ವಕೀಲ ಡಾ‌.ಕೆ.ಎ.ಓಬಳಪ್ಪ ಲೋಕಾಗೆ ದೂರು

ಸುದ್ದಿದಿನ, ಚಿತ್ರದುರ್ಗ: ಜಿಲ್ಲಾ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗಗಳಲ್ಲಿ 2023-24 ಮತ್ತು 2024-25ನೇ ಸಾಲಿನಲ್ಲಿ ತುರ್ತು ಕುಡಿಯುವ ನೀರಿನ ಯೋಜನೆಗೆ ಬಿಡುಗಡೆಯಾಗಿರುವ ಅಂದಾಜು 7...

ದಿನದ ಸುದ್ದಿ1 week ago

ಅನುದಾನ ದುರುಪಯೋಗ | ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ನಿರ್ದೇಶಕ ಡಾ. ಅಶೋಕ್ ಡಿ.ಆರ್ ವಿರುದ್ಧ ಲೋಕಾಗೆ ದೂರು

ಸುದ್ದಿದಿನ,ದಾವಣಗೆರೆ: ಕರ್ನಾಟಕ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆ, ಮೈಸೂರು ಇವರಿಗೆ ರಾಜ್ಯಾದ್ಯಂತ ಅರಿವು ಮೂಡಿಸುವ ಕಾರ್ಯಕ್ರಮಕ್ಕೆ ಬಿಡುಗಡೆಯಾದ ರೂ. 695 ಲಕ್ಷಗಳ ಅನುದಾನದ ಖರ್ಚು ವೆಚ್ಚವನ್ನು ಇಲಾಖಾ...

ದಿನದ ಸುದ್ದಿ2 weeks ago

ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಬಾಷಾ ಒತ್ತಾಯ

ಸುದ್ದಿದಿನ,ದಾವಣಗೆರೆ:ವಿದ್ಯಾರ್ಥಿಗಳ ಭವಿಷ್ಯದ ಜೊತೆಗೆ ಕೇಂದ್ರ ಸರ್ಕಾರ ಚೆಲ್ಲಾಟವಾಡುತ್ತಿದ್ದು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಕಗ್ಗೊಲೆ ಮಾಡುತ್ತಿದ್ದೆ ಎಂದು ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಭಾಷಾ ಆಕ್ರೋಶ ವ್ಯಕ್ತಪಡಿಸಿದ್ದಾರೆ,...

ದಿನದ ಸುದ್ದಿ2 weeks ago

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ; ವಿದ್ಯಾರ್ಥಿಗಳ ಆತ್ಮಹತ್ಯೆ: ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ವಿನಾಯಕ ಬಿ. ಎನ್ ಆಗ್ರಹ

ಸುದ್ದಿದಿನ,ದಾವಣಗೆರೆ :ವಿದ್ಯಾರ್ಥಿಗಳ ಭವಿಷ್ಯದ ಜತೆಗೆ ಕೇಂದ್ರ ಸರ್ಕಾರ ಚೆಲ್ಲಾಟವಾಡುತ್ತಿದೆ. ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ನಂತರ20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದೆಹಲಿಯಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಹೋರಾಟ ನಡೆಸುತ್ತಿದ್ದಾರೆ....

Trending