ದಿನದ ಸುದ್ದಿ
ರಾತ್ರೋ ರಾತ್ರಿ ಕೊಚ್ಚಿ ಕೊಂದರು ; ಡಬಲ್ ಮರ್ಡರ್ ಗೆ ಹಾವೇರಿ ಜನ ಬೆಚ್ಚಿಬಿದ್ದರು..!
ಸುದ್ದಿದಿನ,ಹಾವೇರಿ: ಬಾಲಕ ಮತ್ತು ಯುವಕನ ಮೇಲೆ ದುಷ್ಕರ್ಮಿಗಳು ರಾತ್ರೋ ರಾತ್ರಿ ಮಲಗಿದ್ದ ವೇಳೆ ದಾಳಿ ಮಾಡಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಹಾವೇರಿ ಸಮೀಪದ ಯತ್ತಿನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಕೊಲೆಯಾದವರನ್ನು ಕುಂದಾಪುರದ ನಿಂಗಪ್ಪ ಶಿರಗುಪ್ಪಿ(28) ಮತ್ತು ಗಣೇಶ್(13) ಎಂದು ಗುರುತಿಸಲಾಗಿದೆ. ಈ ಇಬ್ಬರು ಯತ್ತಿನಹಳ್ಳಿ ಗ್ರಾಮದ ಬಸ್ ನಿಲ್ದಾಣದ ಬಳಿ ಇರುವ ಕಾಂಪ್ಲೆಕ್ಸ್ ಒಂದರಲ್ಲಿ ರಾತ್ರಿ ಹೊತ್ತು ಮಲಗಿದ್ದರು. ಈ ವೇಳೆ ದಾಳಿ ಮಾಡಿರುವ ದುಷ್ಕರ್ಮಿಗಳು ಯಾವುದೋ ಹರಿತವಾದ ಆಯುಧದಿಂದ ಹೊಡೆದು ಇಬ್ಬರನ್ನು ಕೊಲೆ ಮಾಡಿ ಪರಾರಿಯಾಗಿದ್ದಾರೆ ಎಂದು ಶಂಕಿಸಲಾಗಿದೆ.
ಇದನ್ನೂ ಓದಿ | ಬ್ರೇಕಿಂಗ್ | ಹಿಮಾಚಲ ಪ್ರದೇಶ : ಬಿಜೆಪಿ ಸಂಸದ ಶರ್ಮಾ ನೇಣು ಬಿಗಿದು ಆತ್ಮಹತ್ಯೆ…!
ಕೊಲೆಯಾದ ಸ್ಥಳಕ್ಕೆ ಹೆಚ್ಚುವರಿ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ, ಡಿವೈಎಸ್ಪಿ ವಿಜಯಕುಮಾರ್, ಸಿಪಿಐ ಪ್ರಹ್ಲಾದ್ ಚನ್ನಗಿರಿ, ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಾವೇರಿ ನಗರ ಪೋಲಿಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಯಾರು? ಯಾವ ಕಾರಣಕ್ಕೆ? ಕೊಲೆ ಮಾಡಿದ್ದಾರೆ ಎನ್ನುವುದು ತನಿಖೆಯ ನಂತರ ತಿಳಿದು ಬರಬೇಕಾಗಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243