ರಾಜಕೀಯ

ರಾಜ್ಯದಲ್ಲಿ ಬಿಜೆಪಿ ಮತ್ತೆ ಅಧಿಕಾರ ಬರಬಾರದೆಂದು ಜೆಡಿಎಸ್ ಜೊತೆ ಮೈತ್ರಿ : ಡಾ.ಜಿ.ಪರಮೇಶ್ವರ್

Published

on

ಸುದ್ದಿದಿನ, ತುಮಕೂರು : ಎಚ್.ಡಿ. ಕುಮಾರಸ್ವಾಮಿ ಅವರಿಗೆ ಪೂರ್ಣಾವಧಿಯ ಮುಖ್ಯಮಂತ್ರಿಯಾಗಿ ಉಳಿಯುತ್ತಾರೆಯೇ ಎಂಬುದರ ಬಗ್ಗೆ ಇನ್ನೂ ಚರ್ಚೆ ನಡೆಯ ಬೇಕಿದೆ. ಈ‌ ಬಗೆಗೆ ಯಾವುದೇ ತೀರ್ಮಾನಗಳನ್ನು ತೆಗೆದುಕೊಂಡಿಲ್ಲವೆಂದು ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.

ಮಂಗಳವಾರ (ಮೇ29) ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿದ್ದ ಅವರು, ಡಾ. ಶಿವಕುಮಾರ ಸ್ವಾಮಿಗಳ ಆಶೀರ್ವಾದ‌ ಪಡೆದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.

ಸಚಿವ ಸಂಪುಟದ ವಿಸ್ತರಣೆ ಅತಿ‌‌ ಶೀಘ್ರದಲ್ಲೇಯೇ ನಡೆಯಲಿದ್ದು, ಕರ್ನಾಟಕದ ಜನತೆಗೆ ಉತ್ತಮವಾದ ಆಡಳಿತ ನೀಡುವ ಆಶಾವಾದದೊಂದಿಗೆ ಜೆಡಿಎಸ್ ನೊಂದಿಗೆ ಮೈತ್ರಿ ಮಾಡಿಕೊಂಡಿದ್ದೇವೆ. ಸರ್ಕಾರ ಕಾನೂನುಬದ್ಧವಾಗಿ ರಚನೆಯಾಗಿದೆ ಎಂದು ತಿಳಿಸಿದ್ದಾರೆ.

ರಾಜ್ಯದಲ್ಲಿ ಬಿಜೆಪಿ‌ ಮತ್ತೆ ಅಧಿಕಾರಕ್ಕೆ ಬರಬಾರದು. 2008 ರಿಂದ 2013 ರವರೆಗೆ ಬಿಜೆಪಿ ಅತ್ಯಂತ ಕಳಪೆ ಆಡಳಿತ ನಡೆಸಿದ್ದೂ ಎಲ್ಲರಿಗೂ ಗೊತ್ತಿದೆ. ಆದ್ದರಿಂದ ಕಾಂಗ್ರೆಸ್ ಜೆಡಿಎಸ್ ಜೊತೆ ಸೇರಿ ಮೈತ್ರಿ ಸರ್ಕಾರ ರಚಿಸಿದೆ. ರಾಜ್ಯದ ಎಲ್ಲಾ ಸಾಮಾನ್ಯಜನತೆಗೆ, ರೈತರಿಗೆ ಹಾಗೂ ಕಾರ್ಮಿಕರಿ ಅಭಿವೃದ್ಧಿಗೋಸ್ಕರ ನಮ್ಮ ಆಡಳಿತದಲ್ಲಿ ಪ್ರಾಮುಖ್ಯತೆಯನ್ನು ನೀಡಲಾಗುತ್ತದೆ.

ಸುದ್ದಿದಿನ.ಕಾಂ|ವಾಟ್ಸಾಪ್|9986715401

Leave a Reply

Your email address will not be published. Required fields are marked *

Trending

Exit mobile version