ದಿನದ ಸುದ್ದಿ
ಕಬ್ಬು ಪೂರೈಕೆ | ರೈತರಿಗೆ ಏಪ್ರಿಲ್ 30ರೊಳಗೆ ಹಣ ಪಾವತಿ ಮಾಡಿ ; ವಿಳಂಬವಾದರೆ ಕಾರ್ಖಾನೆ ವಿರುದ್ಧ ಕ್ರಮ : ಡಿಸಿ ದಾನಮ್ಮನವರ
ಸುದ್ದಿದಿನ,ವಿಜಯಪುರ :ಜಿಲ್ಲೆಯಲ್ಲಿ 2021-22ನೇ ಸಾಲಿನಲ್ಲಿ ಕಬ್ಬು ಪೂರೈಕೆ ಮಾಡಿದ ಎಲ್ಲ ರೈತರಿಗೆ ಇದೇ 30ರೊಳಗಾಗಿ ಕಡ್ಡಾಯವಾಗಿ ಹಣ ಪಾವತಿ ಮಾಡಬೇಕು ಎಂದು ಜಿಲ್ಲಾಧಿಕಾರಿ ಡಾ. ವಿಜಯ ಮಹಾಂತೇಶ ದಾನಮ್ಮನವರ ತಿಳಿಸಿದ್ದಾರೆ.
ಒಂದು ವೇಳೆ ಹಣ ಪಾವತಿ ವಿಳಂಬವಾದರೆ ಕಾರ್ಖಾನೆಯ ವಿರುದ್ಧ ಕ್ರಮ ಜರುಗಿಸುವಂತೆ ಕಬ್ಬು ಆಯುಕ್ತರಿಗೆ ವರದಿ ಸಲ್ಲಿಸಲಾಗುವುದು ಎಂದರು.
ಜಿಲ್ಲಾ ಉಸ್ತುವಾರಿ ಸಚಿವರು ಜಿಲ್ಲೆಗೆ ಭೇಟಿ ನೀಡಿದ್ದ ಸಮಯದಲ್ಲಿ ಇದೇ 30ರೊಳಗಾಗಿ ಕಬ್ಬು ಪೂರೈಕೆ ಮಾಡಿದ ಎಲ್ಲ ರೈತರಿಗೂ ಹಣ ಪಾವತಿ ಮಾಡುವಂತೆ ಸೂಚಿಸಿದ್ದರು. ಅದರಂತೆ ಜಿಲ್ಲಾಡಳಿತ ಕ್ರಮಕ್ಕೆ ಮುಂದಾಗಿದೆ.2021-22ನೇ ಸಾಲಿನ ಹಂಗಾಮಿನಲ್ಲಿ ಕಬ್ಬು ಪೂರೈಕೆ ಮಾಡಿದ ರೈತರಿಗೆ ಹಣವನ್ನು ಈ ತಿಂಗಳ ಅಂತ್ಯದೊಳಗೆ ಪಾವತಿಸುವಂತೆ ನಿರ್ದೇಶನ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243