ದಿನದ ಸುದ್ದಿ
ರಂಗಶಿಕ್ಷಣ ಡಿಪ್ಲೋಮಾ ಕೋರ್ಸ್‍ಗೆ ಅರ್ಜಿ ಆಹ್ವಾನ
ಸುದ್ದಿದಿನ,ಶಿವಮೊಗ್ಗ,: ಸಾಣೇಹಳ್ಳಿಯ ಶ್ರೀ ಶಿವಕುಮಾರ ರಂಗಪ್ರಯೋಗ ಶಾಲೆಯ 2019 ಹಾಗೂ 20ನೇ ಸಾಲಿನ ರಂಗಶಿಕ್ಷಣ ಡಿಪ್ಲೋಮಾ ಕೋರ್ಸ್‍ಗೆ ಅರ್ಜಿ ಆಹ್ವಾನಿಸಲಾಗಿದ್ದು, ಎಸ್‍ಎಸ್‍ಎಲ್‍ಸಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದ್ದು, ಪದವಿಧರರಿಗೆ ಹೆಚ್ಚಿನ ಆಧ್ಯತೆ ನೀಡಲಾಗಿದೆ.
ಒಂದು ವರ್ಷದ ಈ ಡಿಪ್ಲೋಮಾ ಕೋರ್ಸ್‍ನಲ್ಲಿ ಭಾರತೀಯ ರಂಗಭೂಮಿ, ಕನ್ನಡ ರಂಗಭೂಮಿ ಮತ್ತು ಸಾಹಿತ್ಯ ಪರಂಪರೆ, ಪಾಶ್ಚಾತ್ಯ ರಂಗಭೂಮಿ, ಅಭಿನಯ, ಆಹಾರ್ಯ, ಶಿಕ್ಷಣದಲ್ಲಿ ರಂಗಭೂಮಿ ಕುರಿತಾದ ಸೈಧಾಂತಿಕ ಮತ್ತು ಪ್ರಾಯೋಗಿಕ ತರಗತಿಗಳು ಹಾಗೂ ನಾಟಕ ಅಭ್ಯಾಸ, ಪ್ರದರ್ಶನ ಇನ್ನಿತರೆ ಚಟುವಟಿಕೆಗಳನ್ನು ನಡೆಸಲಾಗುತ್ತದೆ.
ಅರ್ಜಿಯನ್ನು ಪ್ರಾಚಾರ್ಯರು, ಶ್ರೀ ಶಿವಕುಮಾರ ರಂಗಪ್ರಯೋಗ ಶಾಲೆ, ಸಾಣೇಹಳ್ಳಿ-577515, ಹೊಸದುರ್ಗ ತಾಲ್ಲೂಕು, ಚಿತ್ರದುರ್ಗ ಜಿಲ್ಲೆ, ಇವರಿಂದ ಅಥವಾ ರಂಗಶಾಲೆಯ ವೆಬ್‍ಸೈಟ್ www.theatreschoolsanehalli.org ನಲ್ಲಿ ಡೌನ್‍ಲೋಡ್ ಮಾಡಿ ಜೂನ್ 30 ರೊಳಗಾಗಿ ಸಲ್ಲಿಸಲು ಸೂಚಿಸಲಾಗಿದೆ.
ಜುಲೈ 1 ರಿಂದ 4 ರ ವರೆಗೆ ಅಭ್ಯರ್ಥಿಗಳಿಗೆ ಸಂದರ್ಶನ ನಡೆಯಲಿದ್ದು ಅಭ್ಯರ್ಥಿಗಳು ಎಲ್ಲಾ ದಿನವು ಪಾಲ್ಗೊಳ್ಳಬೇಕು. ಆಯ್ಕೆಯಾದ ಅಭ್ಯರ್ಥಿಗಳಿಗೆ ಜುಲೈ 15 ರಿಂದ ತರಗತಿಗಳು ಆರಂಭಗೊಳ್ಳಲಿದ್ದು, ಎರಡನೇ ವರ್ಷದ “ಶಿವಸಂಚಾರ” ಕಾರ್ಯಕ್ರಮದಲ್ಲಿ ಅಭ್ಯರ್ಥಿಗಳು ಪಾಲ್ಗೊಳ್ಳುವುದು ಕಡ್ಡಾಯವಾಗಿರುತ್ತದೆ. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 08199 243772, 9448398144, 9743095604 ಕ್ಕೆ ಸಂಪರ್ಕಿಸುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ದಿನದ ಸುದ್ದಿ
ದೇವದಾಸಿ ಪುನರ್‍ವಸತಿ ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ದೇವದಾಸಿ ಪುನರ್‍ವಸತಿ ಯೋಜನೆಯಡಿ ತಾತ್ಕಾಲಿಕವಾಗಿ ಖಾಲಿ ಇರುವ ಹುದ್ದೆಗೆ ನೇರ ತಾತ್ಕಾಲಿಕ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅಭ್ಯರ್ಥಿಗಳು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಇಲಾಖೆ, 14ನೇ ಮುಖ್ಯ ರಸ್ತೆ, ಕುವೆಂಪು ನಗರ, ಎಮ್.ಸಿ.ಸಿ ‘ಬಿ’ ಬ್ಲಾಕ್, ದಾವಣಗೆರೆ ಇಲ್ಲಿ ಅರ್ಜಿಗಳನ್ನು ಪಡೆದು ಫೆಬ್ರವರಿ 12 ರೊಳಗಾಗಿ ಕಚೇರಿ ಸಲ್ಲಿಸಬೇಕು.
ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ಯೋಜನಾಧಿಕಾರಿಗಳ ಹುದ್ದೆ ಸಂಖ್ಯೆ-1, ನಿವೃತ್ತ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳು, ಎಂಎಸ್‍ಡಬ್ಲ್ಯೂ, ಸಮಾಜಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ, ಮನಃಶಾಸ್ತ್ರದಲ್ಲಿ ಎಂ.ಎಸ್ಸಿ, ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
ಚನ್ನಗಿರಿ ತಾಲ್ಲೂಕು ಯೋಜನಾ ಅನುಷ್ಟಾನಾಧಿಕಾರಿಗಳು ಹುದ್ದೆ ಸಂಖ್ಯೆ-1, ಬಿಎಸ್‍ಡಬ್ಲ್ಯೂ, ಬಿಎ ಇನ್ ಸೋಶಿಯಲಾಜಿ, ಎಂಎಸ್‍ಸಿ ಇನ್ ಸೈಕೋಲಾಜಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು. ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ದಾಖಲಾಧಿಕಾರಿಗಳ ಹುದ್ದೆ ಸಂಖ್ಯೆ-1, ಬಿಕಾಂ ಪದವಿ ಅಥವಾ ತತ್ಸಮಾನ ಪದವಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಕನ್ನಡ ಮತ್ತು ಇಂಗ್ಲೀಷ್ ಟೈಪಿಂಗ್ ಜ್ಞಾನವನ್ನು ಹೊಂದಿರಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08192-222117 ಸಂಪರ್ಕಿಸಬಹುದೆಂದು ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಭರತ ಹುಣ್ಣಿಮೆ ಪ್ರಯುಕ್ತ 25 ಹೆಚ್ಚುವರಿ ವಿಶೇಷ ವಾಹನ
ಸುದ್ದಿದಿನ,ದಾವಣಗೆರೆ : ಜನವರಿ 31 ರಿಂದ ಫೆಬ್ರವರಿ 2 ರವರೆಗೆ ಹರಪನಹಳ್ಳಿ ತಾಲ್ಲೂಕು ಉಚ್ಚಂಗಿದುರ್ಗದಲ್ಲಿ ಜರುಗಲಿರುವ ಭಾರತ ಹುಣ್ಣಿಮೆಗಾಗಿ ರಾಜ್ಯ ರಸ್ತೆ ಸಾರಿಗೆ ನಿಗಮ, ದಾವಣಗೆರೆ ವಿಭಾಗದ ಘಟಕಗಳಿಂದ ರಾಜ್ಯದಾದ್ಯಂತ ಬರುವ ಭಕ್ತಾಧಿಗಳ ಅನುಕೂಲಕ್ಕಾಗಿ 25 ಹೆಚ್ಚುವರಿ ವಿಶೇಷ ವಾಹನ ಕಾರ್ಯಾಚರಣೆ ಮಾಡಲಾಗಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.

ದಿನದ ಸುದ್ದಿ
ಕಾಗದ ರಹಿತ ನೋಂದಣಿ ವ್ಯವಸ್ಥೆಯ ತರಬೇತಿ
ಸುದ್ದಿದಿನ,ದಾವಣಗೆರೆ:ಕಾಗದ ರಹಿತ ನೋಂದಣಿ ವ್ಯವಸ್ಥೆಯನ್ನು ಜಾರಿಗೊಳಿಸಿದ್ದು, ಜಿಲ್ಲಾ ನೋಂದಣಿ ಕಚೇರಿ ವ್ಯಾಪ್ತಿಗೆ ಬರುವ ದಸ್ತಾವೇಜು ಬರಹಗಾರರು, ವಕೀಲರು, ಕರ್ನಾಟಕ ಒನ್, ದಾವಣಗೆರೆ ಒನ್, ಗ್ರಾಮ ಒನ್ ಮತ್ತು ಬಾಪೂಜಿ ಸೇವಾ ಕೇಂದ್ರ ಸಿಬ್ಬಂದಿ ವರ್ಗದವರಿಗೆ ತರಬೇತಿ ಆಯೋಜಿಸಲಾಗಿದೆ.
ತರಬೇತಿಯು ಜ.30 ರಂದು ಹೊನ್ನಾಳಿ ಉಪ ನೋಂದಣಿ ಕಚೇರಿ ಆವರಣ, ಜ.31 ರಂದು ಚನ್ನಗಿರಿ ಉಪ ನೋಂದಣಿ ಕಚೇರಿ ಆವರಣ, ಫೆ.2 ರಂದು ಹರಿಹರ ಉಪ ನೋದಣಿ ಕಚೇರಿ ಆವರಣ, ಫೆ.3 ರಂದು ದಾವಣಗೆರೆ ಉಪ ನೋಂದಣಿ ಕಚೇರಿ, ಫೆ.4 ರಂದು ಜಗಳೂರು ಉಪ ನೋಂದಣಿ ಕಚೇರಿ ಆವರಣಗಳಲ್ಲಿ ಮಧ್ಯಾಹ್ನ 1 ರಿಂದ 2 ಗಂಟೆಯವರೆಗೆ ನಡೆಯಲಿದೆ ಎಂದು ಜಿಲ್ಲಾ ನೋಂದಣಾಧಿಕಾರಿ ತಿಳಿಸಿದ್ದಾರೆ.


