ದಿನದ ಸುದ್ದಿ

ರಾಷ್ಟ್ರಪತಿ ಚುನಾವಣೆಯ ಎನ್‌ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಇಂದು ಬೆಂಗಳೂರಿಗೆ : ರಾಜ್ಯದ ನಾಯಕರ ಬೆಂಬಲ ಕೋರಿಕೆ

Published

on

ಸುದ್ದಿದಿನ ಡೆಸ್ಕ್ : ರಾಷ್ಟ್ರಪತಿ ಚುನಾವಣೆಗೆ ಎನ್‌ಡಿಎ ಮೈತ್ರಿಕೂಟದಿಂದ ಅಭ್ಯರ್ಥಿಯಾಗಿರುವ ದೌಪದಿ ಮುರ್ಮು ಅವರು ಇಂದು ಬೆಂಗಳೂರಿಗೆ ಆಗಮಿಸಲಿದ್ದಾರೆ.

ಮುರ್ಮು ಅವರನ್ನು ವೈಭವದಿಂದ ಸ್ವಾಗತಿಸಲು ಕರ್ನಾಟಕ ಬಿಜೆಪಿ ಘಟಕ ಸಿದ್ಧತೆ ಮಾಡಿಕೊಂಡಿದೆ. ಬಿಜೆಪಿ ಮಹಿಳಾ ಮೊರ್ಚಾದಿಂದಲೂ ಸಹ ಅವರನ್ನು ವಿಶೇಷವಾಗಿ ಸ್ವಾಗತಿಸಲು ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ.

ಕರ್ನಾಟಕದ ಭೇಟಿಯ ವೇಳೆ ಮುರ್ಮು ಅವರು ರಾಷ್ಟ್ರಪತಿ ಚುನಾವಣೆಯಲ್ಲಿ ತಮ್ಮನ್ನು ಬೆಂಬಲಿಸುವಂತೆ ರಾಜ್ಯದ ಸಂಸದರು ಮತ್ತು ಶಾಸಕರನ್ನು ಕೋರಲಿದ್ದಾರೆ. ಒಡಿಶಾದ ಬುಡಕಟ್ಟು ಸಮುದಾಯಕ್ಕೆ ಸೇರಿದ ಮುರ್ಮು ಅವರು 2 ದಶಕಕ್ಕೂ ಹೆಚ್ಚು ಕಾಲ ರಾಜಕೀಯದಲ್ಲಿದ್ದು, ಸಾಂವಿಧಾನಿಕ ಹುದ್ದೆಗಳನ್ನು ಅಲಂಕರಿಸಿದ್ದಾರೆ. ಜಾರ್ಖಂಡ್ ರಾಜ್ಯಪಾಲರಾಗಿಯೂ ಮುರ್ಮು ಸೇವೆ ಸಲ್ಲಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version