ದಿನದ ಸುದ್ದಿ

15ನೇ ರಾಷ್ಟ್ರಪತಿಯಾಗಿ ದ್ರೌಪದಿ ಮುರ್ಮು ಆಯ್ಕೆ

Published

on

ಸುದ್ದಿದಿನ,ನವದೆಹಲಿ: ಎನ್.ಡಿ.ಎ ಅಭ್ಯರ್ಥಿ ದ್ರೌಪದಿ ಮುರ್ಮು ದೇಶದ 15ನೇ ರಾಷ್ಟ್ರಪತಿಯಾಗಿ ಆಯ್ಕೆಯಾಗಿದ್ದಾರೆ. ಈ ಮೂಲಕ ಬುಡಕಟ್ಟು ಸಮುದಾಯದ ಮೊದಲ ಮಹಿಳೆ ಎಂಬ ಗೌರವಕ್ಕೆ ಪಾತ್ರರಾಗಿದ್ದಾರೆ.

ಜು. 18ಕ್ಕೆ ರಾಷ್ಟ್ರಪತಿ ಚುನಾವಣೆಗೆ ಮತದಾನ ನಡೆದಿದ್ದು ಇಂದು ಬೆಳಗ್ಗೆ 11 ಗಂಟೆಗೆ ಮತ ಎಣಿಕೆ ನಡೆದಿದೆ. ಭಾರೀ ಅಂತರದಿಂದ ವಿಪಕ್ಷಗಳ ಅಭ್ಯರ್ಥಿ ಯಶವಂತ ಸಿನ್ಹಾ ಅವರ ವಿರುದ್ಧ ದ್ರೌಪದಿ ಮುರ್ಮು ಗೆಲುವು ಸಾಧಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version