Connect with us

ದಿನದ ಸುದ್ದಿ

ಕನ್ನಡ ಪುಸ್ತಕಗಳ ರಿಯಾಯಿತಿ ಮಾರಾಟ ಮೇಳಕ್ಕೆ ಚಾಲನೆ

Published

on

ಸುದ್ದಿದಿನ,ಧಾರವಾಡ : ಕನ್ನಡ ಪುಸ್ತಕ ಪ್ರಾಧಿಕಾರವು ಕರ್ನಾಟಕ ವಿಶ್ವವಿದ್ಯಾಲಯ ಸಹಯೋಗದೊಂದಿಗೆ ಕರ್ನಾಟಕ ಕಾಲೇಜು ಮೈದಾನದಲ್ಲಿ ಏರ್ಪಡಿಸಿರುವ ಕನ್ನಡ ಪುಸ್ತಕಗಳ ರಿಯಾಯಿತಿ ಮಾರಾಟ ಮೇಳಕ್ಕೆ ಹಿರಿಯ ವಿದ್ವಾಂಸ ಹಾಗೂ ಲೇಖಕ ಡಾ.ಗುರುಲಿಂಗ ಕಾಪಸೆ ಚಾಲನೆ ನೀಡಿದರು.

ಡಾ.ಗುರುಲಿಂಗ ಕಾಪಸೆ ಮಾತನಾಡಿ, ಕರ್ನಾಟಕದಲ್ಲಿರುವ ಎಲ್ಲ ಪುಸ್ತಕ ಪ್ರಕಾಶನ ಸಂಸ್ಥೆಗಳು ಬಹಳ ವರ್ಷಗಳಿಂದ ಕ್ರಿಯಾಶೀಲವಾಗಿ ಕಾರ್ಯನಿರ್ವಹಿಸುತ್ತಿವೆ. ಪ್ರಕಟಣೆ ಮತ್ತು ವಿತರಣೆ ಕಾರ್ಯದಲ್ಲಿಯೂ ಯಶಸ್ವಿಯಾಗಿವೆ. ಹಲವಾರು ಹಳೆಯ ಪ್ರಕಟಣೆಗಳು ಈಗ ಉಪಲಬ್ಧವಿಲ್ಲ ಎಂದರೆ, ಅವುಗಳಿಗೆ ಬೇಡಿಕೆ ಇದೆ ಎಂದರ್ಥ. ಸಾಹಿತ್ಯ ಅಕಾಡೆಮಿಯು ಶತಮಾನದ ಸಂಪುಟಗಳ ಪುನರ್ ಮುದ್ರಣ ಮಾಡಬೇಕು. ಓದುವ ಹವ್ಯಾಸವನ್ನು ಬೆಳೆಸುವುದು. ಸಾಂಸ್ಕøತಿಕ ಮನೋಧರ್ಮವನ್ನು ಹೆಚ್ಚಿಸುವುದು ಮುಖ್ಯ. ಇತರೆ ರಾಜ್ಯಗಳಿಗಿಂತ ನಮ್ಮ ರಾಜ್ಯದಲ್ಲಿ ಸಾಹಿತ್ಯ ಹಾಗೂ ಸಾಂಸ್ಕøತಿಕ ಚಟುವಟಿಕೆಗಳಿಗೆ ವಿಶೇಷ ಮಹತ್ವ ನೀಡಲಾಗುತ್ತಿದೆ ಎಂದರು.

ಕರ್ನಾಟಕ ವಿಶ್ವವಿದ್ಯಾಲಯ ಕುಲಪತಿ ಪ್ರೊ.ಕೆ.ಬಿ. ಗುಡಸಿ ಮಾತನಾಡಿ, ಪುಸ್ತಕ ಪ್ರಾಧಿಕಾರವು ಪ್ರಕಾಶಕರ ಪುಸ್ತಕಗಳನ್ನು ರಾಜ್ಯದ ಮೂಲೆಮೂಲೆಗಳಿಗೆ ತಲುಪಿಸುತ್ತಿದೆ. ಜೊತೆಗೆ ರಿಯಾಯಿತಿ ದರದಲ್ಲಿ ಪುಸ್ತಕಗಳನ್ನು ಮಾರಾಟ ಮಾಡಿ ಕನ್ನಡದ ಸಾಹಿತ್ಯ ಮತ್ತು ಸಂಸ್ಕøತಿ ಹರಡಲು ಪ್ರಯತ್ನಿಸುತ್ತಿದೆ. ಜನರಲ್ಲಿ ಓದುವ ಹವ್ಯಾಸ ಬೆಳೆಯಬೇಕು. ಧಾರವಾಡ ಸುತ್ತಮುತ್ತಲಿನ ಜನರಿಗೆ ಈ ಪುಸ್ತಕ ಮಾರಾಟ ಮೇಳ ವರವಾಗಿದೆ ಎಂದರು.

ಹಿರಿಯ ಸಾಹಿತಿ ಡಾ.ಶಾಂತಾ ಇಮ್ರಾಪೂರ ಮಾತನಾಡಿ, ಕನ್ನಡ ಪುಸ್ತಕ ಮಾರಾಟ ಮೇಳ ಸಾಹಿತ್ಯ ಪ್ರಿಯರಿಗೆ ಸಂತೋಷಕರ ವಿಷಯವಾಗಿದೆ. ಸಾವಿರಾರು ವೈವಿಧ್ಯಮಯ ಶೀರ್ಷಿಕೆಯ ಪುಸ್ತಕಗಳು ಮಾರಾಟ ಮೇಳದಲ್ಲಿ ಲಭ್ಯವಿವೆ. ಅನೇಕ ರೀತಿಯಿಂದ ನಮ್ಮ ಸಾಹಿತ್ಯ ಸಾಂಸ್ಕೃತಿಕ ಕ್ಷೇತ್ರ ಸಮೃದ್ಧಗೊಳ್ಳುತ್ತಿದೆ. ಸಮೃದ್ಧ ಜ್ಞಾನಬಂಡಾರ ನಮ್ಮದಾಗಿಸಿಕೊಳ್ಳಬೇಕು. ಡಿಜಿಟಲ್ ಓದು ತಾತ್ಕಾಲಿಕ ಮಾಹಿತಿಯನ್ನು ಕೊಡುತ್ತದೆ. ಆಳವಾದ ಅಧ್ಯಯನ, ಸಮಗ್ರ ತಿಳುವಳಿಕೆ ನಮಗೆ ಲಭ್ಯವಾಗಬೇಕೆಂದರೆ ಗ್ರಂಥಗಳ ಜೊತೆಗೆ ಸಾಂಗತ್ಯವಿರಬೇಕು. ಗ್ರಂಥ ಸಂಗಾತಿಗಳಾಗಬೇಕು. ಯುವತಲೆಮಾರಿನ ಜನತೆ ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಬೇಕು ಎಂದರು.

ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ಡಾ.ಎಂ.ಎನ್.ನಂದೀಶ್ ಹಂಜೆ, ಆಡಳಿತಾಧಿಕಾರಿ ಕೆ.ಬಿ. ಕಿರಣಸಿಂಗ್, ಕರ್ನಾಟಕ ಕಲಾ ಕಾಲೇಜು ಪ್ರಾಚಾರ್ಯ ಡಾ.ಡಿ.ಬಿ.ಕರಡೋಣಿ, ಪತ್ರಾಗಾರ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕಿ ಮಂಜುಳಾ ಯಲಿಗಾರ, ಮತ್ತಿತರರು ಇದ್ದರು.

ಏಪ್ರೀಲ್ 8 ರಿಂದ 13 ರವರೆಗೆ ಪುಸ್ತಕ ಮಾರಾಟ ಮೇಳ ಜರುಗಲಿದೆ. ಪ್ರತಿದಿನ ಸಂಜೆ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ನಾಲ್ಕು ತಿಂಗಳಲ್ಲಿ ರಾಜ್ಯದಲ್ಲಿ ನಡೆದ ಕೊಲೆಗಳೆಷ್ಟು ? ಅತ್ಯಾಚಾರಗಳೆಷ್ಟು ಗೊತ್ತಾ?

Published

on

ಸುದ್ದಿದಿನ ಡೆಸ್ಕ್ : ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದು ಬಿದ್ದಿದೆ. ಹಾದಿ ಬೀದಿಯಲ್ಲಿ ಹತ್ಯೆಗಳು ಆಗುತ್ತಿವೆ. ಬೆಂಗಳೂರು ನಗರದಲ್ಲಿ ಮಾದಕ ವಸ್ತುಗಳ ದಂಧೆ ಅವ್ಯಾಹತವಾಗಿದೆ.

ಕಳೆದ ನಾಲ್ಕು ತಿಂಗಳಲ್ಲಿ ರಾಜ್ಯದಲ್ಲಿ 430 ಹತ್ಯೆಗಳು ಮತ್ತು 198ಅತ್ಯಾಚಾರ ಪ್ರಕರಣಗಳು ವರದಿಯಾಗಿವೆ. ರಾಜ್ಯಗೃಹ ಇಲಾಖೆ ಕಾರ್ಯನಿರ್ವಹಿಸುತ್ತಿದೆಯೋ ಅಥವಾ ನಿದ್ದೆ ಮಾಡುತ್ತಿದೆಯೋ ? ಎಂದು ಸಾಮಾಜಿಕ ಜಾಲತಾಣದಲ್ಲಿ ಜೆಡಿಎಸ್ ಪ್ರಶ್ನಿಸಿದೆ.ಇದೇ ವೇಳೆ, ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹದಗೆಟ್ಟಿದ್ದು, ಅಪರಾಧ ಪ್ರಮಾಣ ಹೆಚ್ಚಳವಾಗಿರುವುದರಿಂದ ಕೂಡಲೇ ಈ ಬಗ್ಗೆ ಕ್ರಮವಹಿಸಬೇಕೆಂದು ಆಗ್ರಹಿಸಿ, ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ಬಿಜೆಪಿ ನಿಯೋಗ ದೂರು ನೀಡಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಬಿಜೆಪಿ ಆರೋಪದಂತೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿಲ್ಲ : ಗೃಹ ಸಚಿವ ಡಾ. ಜಿ.ಪರಮೇಶ್ವರ್

Published

on

ಸುದ್ದಿದಿನ, ತುಮಕೂರು : ರಾಜ್ಯದಲ್ಲಿ ಜನರು ಶಾಂತಿ ಮತ್ತು ನೆಮ್ಮದಿಯಿಂದ ಬದುಕಲು ಯಾವುದೇ ಕ್ರಮ ತೆಗೆದುಕೊಳ್ಳಲು ಸಿದ್ಧ. ಬಿಜೆಪಿ ಆರೋಪದಂತೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿಲ್ಲ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಹೇಳಿದರು.

ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಶಾಂತಿಯನ್ನು ಕದಡಲು ಎಷ್ಟು ಪ್ರಯತ್ನ ನಡೆಸಿದರೂ ಅದನ್ನು ನಿಯಂತ್ರಿಸುವ ಶಕ್ತಿ ನಮ್ಮ ಸರ್ಕಾರಕ್ಕಿದೆ ಎಂದು ತಿರುಗೇಟು ನೀಡಿದರು. ರಾಜ್ಯದಲ್ಲಿ ಅಪರಾಧ ಪ್ರಕರಣ ಹೆಚ್ಚಳವಾಗುತ್ತಿರುವ ಬಗ್ಗೆ ಪೊಲೀಸ್ ಅಧಿಕಾರಿಗಳೊಂದಿಗೆ ಕೂಲಂಕುಷವಾಗಿ ಚರ್ಚಿಸಿ, ಅಪರಾಧ ಪ್ರಕರಣಗಳ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಡಾ. ಜಿ. ಪರಮೇಶ್ವರ್ ಹೇಳಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ವಿಧಾನ ಪರಿಷತ್ ಚುನಾವಣೆ ; 91 ನಾಮಪತ್ರಗಳು ಪುರಸ್ಕೃತ

Published

on

ಸುದ್ದಿದಿನ ಡೆಸ್ಕ್ : ಕರ್ನಾಟಕ ವಿಧಾನ ಪರಿಷತ್‌ನ ಚುನಾವಣೆಗೆ ಸಂಬಂಧಪಟ್ಟಂತೆ ಒಟ್ಟು 91ನಾಮಪತ್ರಗಳು ಪುರಸ್ಕೃತಗೊಂಡಿವೆ. ಈಶಾನ್ಯ ಪದವಿಧರ ಕ್ಷೇತ್ರಕ್ಕೆ ಒಟ್ಟು 26 ನಾಮಪತ್ರಗಳು ಪುರಸ್ಕೃತಗೊಂಡಿದೆ.

ಅದೇ ರೀತಿ ಕರ್ನಾಟಕದ ಆಗ್ನೇಯಾ ಶಿಕ್ಷಕರ ಕ್ಷೇತ್ರಕ್ಕೆ 15, ಬೆಂಗಳೂರು ಪದವೀಧರರ ಕ್ಷೇತ್ರಕ್ಕೆ 16, ಕರ್ನಾಟಕ ನೈಋತ್ಯ ಶಿಕ್ಷಕರ ಕ್ಷೇತ್ರಕ್ಕೆ 9, ಕನಾಟಕ ನೈಋತ್ಯ ಪದವೀಧರ ಕ್ಷೇತ್ರಕ್ಕೆ12 ಹಾಗೂ ಕರ್ನಾಟಕ ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ಒಟ್ಟು 13 ನಾಮಪತ್ರಗಳು ಪುರಸ್ಕೃತಗೊಂಡಿವೆ ಎಂದು ಚುನಾವಣಾ ಆಯೋಗದ ಪ್ರಕಟಣೆ ತಿಳಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending