ದಿನದ ಸುದ್ದಿ

ಡ್ರಗ್ಸ್ ಮಾಫಿಯಾ | ನಟಿ ರಾಗಿಣಿಗೆ ಪೋಲಿಸ್ ನೋಟಿಸ್

Published

on

ಸುದ್ದಿದಿನ,ಬೆಂಗಳೂರು: ಸ್ಯಾಂಡಲ್‍ವುಡ್ ಡ್ರಗ್ಸ್ ಮಾಫಿಯಾ ಪ್ರಕರಣಕ್ಕೆ ಈಗ ರೋಚಕ ತಿರುವು ಬಂದಿದೆ. ಇದೇ ಮೊದಲ ಬಾರಿಗೆ ಡ್ರಗ್ಸ್ ಜಾಲದಲ್ಲಿ ಲಿಂಕ್ ಹೊಂದಿದ ಆರೋಪದ ಮೇರೆಗೆ ಸಿಸಿಬಿ ಪೊಲೀಸರು ತುಪ್ಪದ ಬೆಡಗಿ ಖ್ಯಾತಿಯ ನಟಿ ರಾಗಿಣಿ ದ್ವಿವೇದಿಗೆ ನೋಟಿಸ್ ನೀಡಿದ್ದಾರೆ.

ನಾಳೆ ಬೆಳಿಗ್ಗೆ 10 ಗಂಟೆಗೆ ಸಿಸಿಬಿ ಕಚೇರಿಗೆ ಹಾಜರಾಗುವಂತೆ ನೋಟಿಸ್‍ನಲ್ಲಿ ರಾಗಿಣಿಗೆ ಸೂಚನೆ ನೀಡಲಾಗಿದೆ. ನಾಳೆ ಸಿಸಿಬಿ ಹೆಚ್ಚುವರಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ನೇತೃತ್ವದಲ್ಲಿ ವಿಚಾರಣೆ ನಡೆಯಲಿದೆ.

ರಾಗಿಣಿಗೆ ನೋಟಿಸ್ ನೀಡುವ ಮುನ್ನ ಸಿಸಿಬಿ ಪೊಲೀಸರು ಜಯನಗರ ಆರ್‍ಟಿಒ ಅಧಿಕಾರಿ ರವಿಶಂಕರ್ ವಿಚಾರಣೆ ನಡೆಸಿದ್ದರು. ರವಿಶಂಕರ್ ವಿಚಾರಣೆ ವೇಳೆ ಆತ ನೀಡಿದ ಮಾಹಿತಿ ಆಧಾರದ ಮೇರೆಗೆ ರಾಗಿಣಿಗೆ ನೋಟಿಸ್ ನೀಡಲಾಗಿದೆ ಎನ್ನಲಾಗಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version