ದಿನದ ಸುದ್ದಿ
ಕಾಲೇಜು ಮುಂದೆಯೇ ಅಮಲಿನಲ್ಲಿ ತೇಲಾಡಿದ ವಿದ್ಯಾರ್ಥಿಗಳು: ವೈರಲ್ ಆಯ್ತು ವಿಡಿಯೋ
ಸುದ್ದಿದಿನ,ಶಿವಮೊಗ್ಗ: ಇಲ್ಲಿನ ಖಾಸಗಿ ಕಾಲೇಜು ಮುಂಭಾಗ ವಿದ್ಯಾರ್ಥಿಗಳು ಅಮಲಿನಲ್ಲಿ ತೂರಾಡುತ್ತಾ ಓಡಾಡುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವಾಟ್ಸಪ್ ಗ್ರೂಪ್ ಗಳಲ್ಲಿಯು ವಿಡಿಯೋ ಶೇರ್ ಆಗುತ್ತಿದೆ.
ಬ್ಯಾಗು, ಯುನಿಫಾರಂ ಧರಿಸಿಕೊಂಡು ಎಲ್ಲೆಂದರಲ್ಲಿ ಬೀಳುತ್ತಿದ್ದ ವಿದ್ಯಾರ್ಥಿಗಳನ್ನು ಜನರು ಗಾಬರಿಯಿಂದ ನೋಡುತ್ತಿದ್ದರು. ಕಾಲೇಜು ಸಮೀಪ ನಿಂತಿದ್ದ ಸಾರ್ವಜನಿಕರು ವಿದ್ಯಾರ್ಥಿಗಳು ಅಮಲಿನಲ್ಲಿ ತೇಲಾಡುತ್ತಿರುವುದನ್ನು ಗಮನಿಸಿ ಚಕಿತಗೊಂಡಿದ್ದಾರೆ.
ಆಗ ಅಲ್ಲಿಗೆ ಬಂದ ಕಾಲೇಜು ಸಿಬ್ಬಂದಿ, ವಿದ್ಯಾರ್ಥಿಗಳನ್ನು ತಡೆದು ನಿಲ್ಲಿಸಲು ಯತ್ನಿಸುತ್ತಾರೆ. ಅದರೆ ಅವರ ಮಾತು ಕೇಳದೆ ತೂರಾಡುತ್ತಲೆ ವಿದ್ಯಾರ್ಥಿ ಓಡಲು ಯತ್ನಿಸುತ್ತಾನೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243