ದಿನದ ಸುದ್ದಿ

ದಾವಣಗೆರೆ | ಹುಲಿಕಟ್ಟೆ ಗ್ರಾಮ ಪಂಚಾಯಿತಿಯಲ್ಲಿ ‘ದುಡಿಯೋಣ ಬಾ’ ಅಭಿಯಾನಕ್ಕೆ ಚಾಲನೆ

Published

on

ಸುದ್ದಿದಿನ,ದಾವಣಗೆರೆ : ದಾವಣಗೆರೆ ತಾಲ್ಲೂಕು ಪಂಚಾಯಿತಿ ವ್ಯಾಪ್ತಿಯ ಹುಲಿಕಟ್ಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ‘ದುಡಿಯೋಣ ಬಾ’ ಅಭಿಯಾನಕ್ಕೆ ಚಾಲನೆ ನೀಡಲಾಯಿತು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಎ. ಚನ್ನಪ್ಪ ಅಭಿಯಾನಕ್ಕೆ ಚಾಲನೆ ನೀಡಿ ಇನ್ನು ಹೆಚ್ಚಿನ ಸಂಖ್ಯೆಯಲ್ಲಿ ಜನರು ಈ ಯೋಜನೆಯಲ್ಲಿ ಭಾಗವಹಿಸುವಂತೆ ಮಾಡಬೇಕು, ಪ್ರಸ್ತುತ ವರ್ಷದಲ್ಲಿ ಕೂಲಿ ಮೊತ್ತ ರೂ. 309 ಗೆ ಹೆಚ್ಚಿಸಿದ್ದು, ದುಡಿಯುವ ಕೈಗಳಿಗೆ ಬೇಸಿಗೆ ಸವiಯದಲ್ಲಿ ನರೇಗ ಯೋಜನೆಯಲ್ಲಿ ಕೆಲಸವನ್ನು ನೀಡಬೇಕು ಎಂದು ತಿಳಿಸಿದರು,

ಹುಲಿಕಟ್ಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ದೋಣ್ಣೆಕೆಂಚಮ್ಮ ಹಳ್ಳದ ಹೂಳೆತ್ತುವ ಕಾಮಗಾರಿಯಲ್ಲಿ 72 ಜನ ಕೂಲಿಗಾರರು ಭಾಗವಹಿಸಿದ್ದರು.

ಅಭಿಯಾನದಲ್ಲಿ ಜಿಲ್ಲಾ ಪಂಚಾಯತ್ ಸಹಾಯಕ ಯೋಜನಾಧಿಕಾರಿ ಆನಂದ್ ಎನ್.ಜೆ, ದಾವಣಗೆರೆ ತಾಲ್ಲೂಕು ಪಂಚಾಯಿತಿ ಸಹಾಯಕ ನಿರ್ದೇಶಕರಾದ ವಿದ್ಯಾವತಿ.ಐ.ಸಿ, ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಆಶಾ ಅರುಣನಾಯ್ಕ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಲೋಹಿತ್ ಕುಮಾರ್ ಹಾಗೂ ಗ್ರಾಮ ಪಂಚಾಯಿತಿ ಸದಸ್ಯರು ಭಾಗವಹಿಸಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version