ದಿನದ ಸುದ್ದಿ

ದಾವಣಗೆರೆ | ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ : ಜಿಲ್ಲಾ ಮೀನುಗಾರಿಕೆ ಇಲಾಖೆ ವತಿಯಿಂದ 2020-21 ನೇ ಸಾಲಿನ ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ಸಹಾಯಧನ ಸೌಲಭ್ಯ ನೀಡಲು ಜಿಲ್ಲೆಯ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಮೀನು ಕೃಷಿಕೊಳಗಳ ನಿರ್ಮಾಣ, ಬಯೋ ಫ್ಲಾಕ್ಸ್ ಕೊಳ ನಿರ್ಮಾಣ, ಮೀನುಮರಿ ಉತ್ಪಾದನೆ ಹಾಗೂ ಪಾಲನಾ ಕೇಂದ್ರಗಳ ಸ್ಥಾಪನೆ, ಕ್ರೀಡಾ ಮೀನುಗಾರಿಕೆ, ಶೈತ್ಯೀಕರಿಸಿದ ವಾಹನಗಳು, ಆರ್‍ಎಎಸ್ ಘಟಕ ಸ್ಥಾಪನೆ, ಶೈತ್ಯಾಗಾರ/ಮಂಜುಗಡ್ಡೆ ಸ್ಥಾವರ ನಿರ್ಮಿಸುವುದು, ಅಲಂಕಾರಿಕ ಮೀನು ಉತ್ಪಾದಕ ಘಟಕ ಉಪಯೋಜನೆಗಳನ್ನು ಪ್ರಾರಂಭಿಸಲು ಸಾಮಾನ್ಯ ಫಲಾನುಭವಿಗಳಿಗೆ ಶೇ.40, ಪ.ಜಾತಿ/ಪ.ಪಂಗಡ/ ಮಹಿಳಾ ಫಲಾನುಭವಿಗಳಿಗೆ ಶೇ.60 ರಷ್ಟು ಸಹಾಯಧನ ನೀಡಲಾಗುವುದು.

ಆಸಕ್ತ ಫಲಾನುಭವಿಗಳು ಆಯಾ ತಾಲ್ಲೂಕಿನ ಮೀನುಗಾರಿಕೆ ಸಹಾಯಕ ನಿರ್ದೇಶಕರು(ಶ್ರೇಣಿ-2) ಈ ಕಚೇರಿಯಲ್ಲಿ ಅರ್ಜಿ ಪಡೆದು ಸಲ್ಲಿಸಬಹುದು. ಅರ್ಹ ಮೀನುಗಾರರೆಲ್ಲ ಈ ಯೋಜನೆಗಳ ಸದುಪಯೋಗ ಪಡೆದುಕೊಳ್ಳಬೇಕೆಂದು ಮೀನುಗಾರಿಕೆ ಹಿರಿಯ ಸಹಾಯಕ ನಿರ್ದೇಶಕರು(ಶ್ರೇಣಿ-2) ಗಣೇಶ್.ಆರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version