ದಿನದ ಸುದ್ದಿ
ದಾವಣಗೆರೆ ಮಳೆ | ಬೆಳೆಹಾನಿ ; ಅಂದಾಜು ಪರಿಶೀಲನೆ
ಸುದ್ದಿದಿನ,ದಾವಣಗೆರೆ:ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಬಿಡುವು ನೀಡಿದ್ದ ಮಳೆ ಮತ್ತೆ ಆರಂಭಗೊಂಡಿದ್ದು, ಸಾಮಾನ್ಯ ಜನಜೀವನ ಭಾದಿತಗೊಂಡಿದೆ.
ಮಳೆಯಿಂದಾಗಿ ಮಾಯಕೊಂಡ, ಆನಗೋಡು, ಬಾಡ, ತ್ಯಾವಣಿಗೆ ಬಸವಾಪಟ್ಟಣ ಹೋಬಳಿಗಳಲ್ಲಿ ಕೊಯಿಲಿಗೆ ಬಂದಿದ್ದ ಭತ್ತ ಮೆಕ್ಕೆಜೋಳ ಮತ್ತು ತರಕಾರಿ ಬೆಳೆಗಳಿಗೆ ಹಾನಿಯಾಗಿದೆ.
ಬೆಳೆಹಾನಿ ಪ್ರದೇಶಗಳಿಗೆ ಕೃಷಿ ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ನಷ್ಟದ ಅಂದಾಜು ಪರಿಶೀಲನೆ ನಡೆಸಿದ್ದಾರೆ.
ಜಿಲ್ಲಾದ್ಯಂತ ವಾಡಿಕೆಗಿಂತ ಅಧಿಕ ಪ್ರಮಾಣದಲ್ಲಿ ಮಳೆ ಸುರಿದ ಹಿನ್ನೆಲೆಯಲ್ಲಿ ಮೂವತ್ತಕ್ಕೂ ಅಧಿಕ ಕೆರೆಗಳು ಸಂಪೂರ್ಣ ಭರ್ತಿಯಾಗಿವೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243