ದಿನದ ಸುದ್ದಿ

ಮಹಿಳಾ ಸಬಲೀಕರಣಕ್ಕೆ ಹೆಣ್ಣು ಮಕ್ಕಳಿಗೆ ಶಿಕ್ಷಣ ಅತ್ಯಗತ್ಯ : ರಾಷ್ಟ್ರಪತಿ ರಾಮನಾಥ್ ಕೋವಿಂದ್

Published

on

ಸುದ್ದಿದಿನ ಡೆಸ್ಕ್ : ಮಹಿಳಾ ಸಬಲೀಕರಣಕ್ಕಾಗಿ ಹೆಣ್ಣು ಮಕ್ಕಳಿಗೆ ಶಿಕ್ಷಣ ನೀಡುವುದು ಅತ್ಯಗತ್ಯ ಎಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ತಿಳಿಸಿದ್ದಾರೆ.

ಐಜ್ವಾಲ್‌ನಲ್ಲಿ ಗುರುವಾರ ಮಿಜೋರಾಂ ವಿಶ್ವವಿದ್ಯಾಲಯದ 16ನೇ ಘಟಿಕೋತ್ಸವದಲ್ಲಿ ಭಾಷಣ ಮಾಡಿದ ರಾಷ್ಟ್ರಪತಿ ದೇಶದಲ್ಲೇ ಮಿಜೋರಾಂ 2 ನೇ ಅತಿಹೆಚ್ಚು ಸಾಕ್ಷರತಾ ಪ್ರಮಾಣ ಹೊಂದಿದ್ದು, ವಿವಿಧ ವಲಯಗಳಲ್ಲಿ ಉತ್ತಮ ಸಾಧನೆ ಮಾಡಿದೆ ಎಂದು ಶ್ಲಾಘಿಸಿದರು.

ವಿಶ್ವವಿದ್ಯಾಲಯ ಪ್ರದಾನ ಮಾಡಿರುವ 38ಚಿನ್ನದ ಪದಕಗಳ ಪೈಕಿ23 ಅನ್ನು ವಿದ್ಯಾರ್ಥಿನಿಯರೇ ಪಡೆದಿದ್ದು, ಮಹಿಳೆಯರಿಗೆ ಅವಕಾಶ ನೀಡಿದಲ್ಲಿ ಉತ್ತಮ ಸಾಧನೆ ಮಾಡುತ್ತಾರೆ ಎಂಬುದಕ್ಕೆ ಉದಾಹರಣೆಯಾಗಿದೆ ಎಂದು ರಾಷ್ಟ್ರಪತಿ ತಿಳಿಸಿದರು.

ವಿಶ್ವವಿದ್ಯಾಲಯಗಳಲ್ಲಿ ಉದ್ಯಮಶೀಲತಾ ಅಭಿವೃದ್ಧಿ ಚಟುವಟಿಕೆ ಅಳವಡಿಸಲಾಗುತ್ತಿದ್ದು, ಮಿಜೋರಾಂ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳ ನಾವಿನ್ಯತಾ ಮತ್ತು ಸೃಜನಶೀಲ ಪರಿಕಲ್ಪನೆಗಳಿಗೆ ಉತ್ತೇಜನ ನೀಡಲು ತಂತ್ರಜ್ಞಾನ ಇನ್‌ಕ್ಯುಬೇಶನ್ ಕೇಂದ್ರ ಸ್ಥಾಪಿಸಿರುವುದು ಸ್ವಾಗತಾರ್ಹ ಎಂದು ರಾಷ್ಟ್ರಪತಿ ತಿಳಿಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version