ದಿನದ ಸುದ್ದಿ
ಅರಿವು ಸಾಲ ಯೋಜನೆ ; ವಿದ್ಯಾರ್ಥಿಗಳಿಂದ ಎಜುಕೇಶನ್ ಲೋನ್ ಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ: ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಆಯ್ಕೆಯಾಗುವ ಸಿಇಟಿ, ನೀಟ್ ಮುಖಾಂತರ ಎಂ.ಬಿ.ಬಿ.ಎಸ್, ಬಿ.ಡಿ.ಎಸ್, ಬಿ.ಇ, ಬಿ.ಟೆಕ್, ಮತ್ತು ಆಯುಷ್ ವಿದ್ಯಾರ್ಥಿಗಳಿಗೆ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃಧ್ಧಿ ನಿಗಮದಿಂದ ಅರಿವು ಯೋಜನೆಯಡಿಯಲ್ಲಿ ವಿಧ್ಯಾಭ್ಯಾಸ ಸಾಲ ಪಡೆಯಲು ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ನಿಗಮದ ವೆಬ್‌ಸೈಟ್ kmdconline.karnataka.gov.in ಮೂಲಕ ಆನ್‌ಲೈನ್ ರ‍್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಜೂ.21 ರಿಂದ ಪ್ರಾಂಭವಾಗಿರುತ್ತದೆ ಹಾಗೂ ಸಲ್ಲಿಸಿದ ಹಾರ್ಡ್ ಕಾಪಿಗಳನ್ನು ಸಂಬಂಧ ಪಟ್ಟ ಜಿಲ್ಲಾ ವ್ಯವಸ್ಥಾಪಕರ ಕಛೇರಿಗೆ ಜುಲೈ 7 ರೊಳಗಾಗಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರ ಕಛೇರಿ ರ‍್ನಾಟಕ ಅಲ್ಪಸಂಖ್ಯಾತರ ಅಭಿವೃಧ್ಧಿ ನಿಗಮ(ನಿ),ಕುರುಬರ ಹಾಸ್ಟೆಲ್ ಕಟ್ಟಡ, ಹದಡಿರಸ್ತೆ, ಜಯದೇವ ರ‍್ಕಲ್ ಹತ್ತಿರ, ದೂ.ಸಂ. 08192-232349, ಸಂಪರ್ಕಿಸಬಹುದೆಂದು ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243