ದಿನದ ಸುದ್ದಿ
ಶಿಕ್ಷಣ ಇಲಾಖೆಯಲ್ಲಿನ ಜ್ವಲಂತ ಸಮಸ್ಯೆಗಳ ಪರಿಹಾರಕ್ಕೆ ಕ್ರಮ
- /home/u584543641/domains/suddidina.com/public_html/wp-content/plugins/mvp-social-buttons/mvp-social-buttons.php on line 27
https://suddidina.com/wp-content/uploads/2020/06/teacher_suddidina-54.jpg&description=ಶಿಕ್ಷಣ ಇಲಾಖೆಯಲ್ಲಿನ ಜ್ವಲಂತ ಸಮಸ್ಯೆಗಳ ಪರಿಹಾರಕ್ಕೆ ಕ್ರಮ', 'pinterestShare', 'width=750,height=350'); return false;" title="Pin This Post">
- Share
- Tweet /home/u584543641/domains/suddidina.com/public_html/wp-content/plugins/mvp-social-buttons/mvp-social-buttons.php on line 72
https://suddidina.com/wp-content/uploads/2020/06/teacher_suddidina-54.jpg&description=ಶಿಕ್ಷಣ ಇಲಾಖೆಯಲ್ಲಿನ ಜ್ವಲಂತ ಸಮಸ್ಯೆಗಳ ಪರಿಹಾರಕ್ಕೆ ಕ್ರಮ', 'pinterestShare', 'width=750,height=350'); return false;" title="Pin This Post">
ಸುದ್ದಿದಿನ,ಶಿವಮೊಗ್ಗ : ಜಿಲ್ಲೆಯ ಪ್ರಾಥಮಿಕ, ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷಕರ ಬಹುದಿನಗಳಿಂದ ನೆನೆಗುದಿಗೆ ಬಿದ್ದಿದ್ದ, ಸ್ಥಳೀಯವಾಗಿ ಇತ್ಯರ್ಥಪಡಿಸಿಕೊಳ್ಳಬಹುದಾದ ಹಾಗೂ ಇಲಾಖೆಯಲ್ಲಿನ ಜ್ವಲಂತ ಸಮಸ್ಯೆಗಳನ್ನು ತ್ವರಿತಗತಿಯಲ್ಲಿ ಪರಿಹಾರ ಕಂಡುಕೊಳ್ಳಲು ರಾಜ್ಯದಲ್ಲಿಯೇ ಇದೇ ಮೊದಲ ಬಾರಿಗೆ ಸಭೆಯನ್ನು ಏರ್ಪಡಿಸಿ, ಹಲವು ಮಹತ್ವದ ನಿರ್ಣಯಗಳನ್ನು ಕೈಗೊಳ್ಳಲಾಯಿತು.
ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ಸಂಘ ಹಾಗೂ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರ ಕೋರಿಕೆಯ ಮೇರೆಗೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು, ಎಲ್ಲಾ ತಾಲೂಕುಗಳ ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಪ್ರೌಢ ಮತ್ತು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಉಪಸ್ಥಿತಿಯಲ್ಲಿ ಇಂದು ಜಿಲ್ಲಾ ಪಂಚಾಯಿತಿಯ ಅಬ್ದುಲ್ ನಜೀರಸಾಬ್ ಸಭಾಂಗಣದಲ್ಲಿ ಸಭೆಯನ್ನು ಏರ್ಪಡಿಸಲಾಗಿತ್ತು.
ಈ ಸಂದರ್ಭದಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಾಕ್ಷರಿ ಅವರು ಮಾತನಾಡಿ, ನೂತನವಾಗಿ ಸೇವೆಗೆ ನಿಯುಕ್ತರಾದ ಶಿಕ್ಷಕರ ಖಾಯಂ ಪೂರ್ವ ಸೇವಾವಧಿ ತೃಪ್ತಿಕರವಾಗಿರುವ ಬಗ್ಗೆ ಆದೇಶ ಹೊರಡಿಸುವ, ಶಿಕ್ಷಕರ ಮೇಲೆ ಬಹುದಿನಗಳಿಂದ ಬಾಕಿ ಇರುವ ಇಲಾಖಾ ವಿಚಾರಣೆ ಬಾಕಿ, ನಿವೃತ್ತ ಶಿಕ್ಷಕರ ಸೌಲಭ್ಯಗಳನ್ನು ನೀಡದಿರುವುದು, ವೈದ್ಯಕೀಯ ವೆಚ್ಚದ ಮರುಪಾವತಿ, ವೇತನ ವಿಳಂಬ ಮುಂತಾದ ಸಮಸ್ಯೆಗಳು ಜಿಲ್ಲೆಯ ಎಲ್ಲಾ ತಾಲೂಕು ಕೇಂದ್ರಗಳಲ್ಲಿಯೂ ಬಾಕಿ ಇರುವುದು ಬೇಸರ ಸಂಗತಿಯಾಗಿದೆ.
ಇವುಗಳನ್ನು ಅನಗತ್ಯ ವಿಳಂಬಕ್ಕೆ ಅವಕಾಶವಿಲ್ಲದಂತೆ ತ್ವರಿತಗತಿಯಲ್ಲಿ ವಿಲೇ ಮಾಡಲು ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡುವಂತೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶ್ರೀಮತಿ ಎಂ.ಎಲ್.ವೈಶಾಲಿ ಅವರಲ್ಲಿ ಮನವಿ ಮಾಡಿದರು.
ಶಿಕ್ಷಕರ ಮೇಲಿನ ಆರೋಪಗಳಿಗೆ ಸಂಬಂಧಿಸಿದಂತೆ ಇಲಾಖಾ ವಿಚಾರಣೆ ಕಾಯ್ದಿರಿಸಿದ್ದಲ್ಲಿ ಕೂಡಲೆ ವಿಚಾರಣೆಯನ್ನು ಪೂರ್ಣಗೊಳಿಸಬೇಕು. ಈ ವಿಷಯದಲ್ಲಿ ಅನಗತ್ಯ ವಿಳಂಬ ಸರಿಯಲ್ಲ. ಅಧಿಕಾರ ದುರ್ಬಳಕೆಯಂತಹ ಪ್ರಕರಣಗಳಲ್ಲಿ ನಿಯಮಾನುಸಾರ ಕ್ರಮವಹಿಸುವ ಬಗ್ಗೆ ನೌಕರರ ಆಕ್ಷೇಪ ವ್ಯಕ್ತಪಡಿಸುವುದಿಲ್ಲ ಎಂದವರು ನುಡಿದರು.
ಗುರುಭವನ ನಿರ್ಮಾಣಕ್ಕೆ ಸಂಬಂಧಿಸಿದಂತೆ ಈಗಾಗಲೆ ಸರ್ಕಾರ ಅಗತ್ಯವಾಗಿರುವ ಅನುದಾನವನ್ನು ಬಿಡುಗಡೆ ಮಾಡಿದ್ದು,. ಜಿಲ್ಲಾ ಉಸ್ತುವಾರಿ ಸಚಿವರ ದಿನಾಂಕ ಪಡೆದು, ಕೂಡಲೇ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಲು ಕ್ರಮ ಕೈಗೊಳ್ಳುವಂತೆ ತಿಳಿಸಿದ ಅವರು, ಶಿಕ್ಷಕರ ಮುಂಬಡ್ತಿಗೆ ಸಂಬಂಧಿಸಿದ ಕಡತಗಳನ್ನು ಕೂಡಲೇ ವಿಲೇ ಮಾಡುವಂತೆ ಮನವಿ ಮಾಡಿದರು.
ಜಿಲ್ಲೆಯ ಶಿಕ್ಷಕರ ಸೇವಾ ವಹಿ(ಎಸ್.ಆರ್.)ಯಲ್ಲಿ ದಾಖಲೆಗಳು ಸರಿಯಾಗದಿರುವ ಬಗ್ಗೆ ಅನೇಕ ದೂರುಗಳಿವೆ. ವೇತನ, ಭತ್ಯೆಗಳ ಪಾವತಿಗೆ ಸಂಬಂಧಿಸಿದಂತೆ ಹೆಚ್.ಆರ್.ಎಂ.ಎಸ್.ನಲ್ಲಿ ತಾಂತ್ರಿಕ ದೋಷವಿರುವ ಬಗ್ಗೆ ಕಾರಣಗಳು ಅಧಿಕವಾಗಿವೆ. ಇವುಗಳನ್ನು ಸರಿಪಡಿಸಲು ತಾಂತ್ರಿಕ ಸಲಹೆಗಾರರ ಸಲಹೆಯನ್ನು ಪಡೆದುಕೊಳ್ಳಲು ಜಿಲ್ಲೆಯಲ್ಲಿ ಓರ್ವರಿಗೆ ಹೊಣೆಗಾರಿಕೆ ವಹಿಸುವಂತೆ ಅವರು ಸಲಹೆ ನೀಡಿದರು.
ಸಭೆಯಲ್ಲಿ ಉಪಸ್ಥಿತರಿದ್ದ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶ್ರೀಮತಿ ಎಂ.ಎಲ್.ವೈಶಾಲಿ ಅವರು ಮಾತನಾಡಿ, ಮುಂಬಡ್ತಿ ಮತ್ತು ಕಾಲಮಿತಿ ಬಡ್ತಿಗೆ ಸಂಬಂಧಿಸಿದ ಕಡತಗಳನ್ನು ಕೂಡಲೇ ವಿಲೇವಾರಿ ಮಾಡುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದ ಅವರು, ಆಯಾ ಶಾಲೆಗಳಲ್ಲಿನ ಬಟವಾಡೆ ಅಧಿಕಾರಿಗಳು ಅಥವಾ ಪ್ರಥಮ ದರ್ಜೆ ಸಹಾಯಕರಿಗೆ ಹೆಚ್.ಆರ್.ಎಂ.ಎಸ್.ನಿರ್ವಹಣೆ ಕುರಿತು ತರಬೇತಿ ನೀಡಲಾಗುವುದು. ಮುಂದಿನ ದಿನಗಳಲ್ಲಿ ನ್ಯೂನತೆಗಳು ಮುಂದುವರೆದಲ್ಲಿ ಶಾಲೆ/ಕಚೇರಿಯ ವ್ಯವಸ್ಥಾಪಕರನ್ನೆ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದರು.
ಕೋವಿಡ್ ನಿಯಂತ್ರಣಕ್ಕೆ ಬಂದ ನಂತರ ಸರ್ಕಾರ ಈಗಾಗಲೇ ಹೊರಡಿಸಿರುವ ಮಾರ್ಗಸೂಚಿಯಂತೆ ಶಾಲಾ-ಕಾಲೇಜುಗಳು ಆರಂಭಗೊಳ್ಳಲಿವೆ. ಜಿಲ್ಲೆಯ ಯಾವುದೇ ಶಾಲೆಯಲ್ಲಿ ಕೋವಿಡ್‍ನ ಒಂದೂ ಪ್ರಕರಣಗಳು ಗೋಚರಿಸದಂತೆ ಅಗತ್ಯ ಸುರಕ್ಷತಾ ಕ್ರಮಗಳನ್ನು ಅನುಸರಿಸಲು ಸೂಚಿಸಲಾಗಿದೆ. ಅಲ್ಲದೇ ಕಳೆದ ಗ್ರಾಮ ಪಂಚಾಯಿತಿ ಚುನಾವಣೆಯ ಸಂದರ್ಭದಲ್ಲಿ ತಾಲೂಕು ತಹಶೀಲ್ದಾರರು ಖರೀದಿಸಿದ್ದ ಥರ್ಮಲ್ ಸ್ಕ್ಯಾನರ್‍ಗಳನ್ನು ಶಾಲಾ ಮಕ್ಕಳ ದೈನಂದಿನ ತಪಾಸಣೆಗಾಗಿ ಪಡೆದುಕೊಳ್ಳುವಂತೆ, ಹೆಚ್ಚಿನ ಅಗತ್ಯವಿದ್ದಲ್ಲಿ ಮತ್ತೊಂದನ್ನು ಖರೀದಿಸುವಂತೆ ಸೂಚಿಸಿದ ಅವರು, ಈ ಬಾರಿಯ ಎಸ್.ಎಸ್.ಎಲ್.ಸಿ.ಫಲಿತಾಂಶ ಮೊದಲ ಹತ್ತು ಸ್ಥಾನದಲ್ಲಿರುವಂತೆ ನೋಡಿಕೊಳ್ಳಬೇಕು. ಅದಕ್ಕಾಗಿ ಈಗಾಗಲೇ ಇಲಾಖೆಯು ಹೊರಸಿರುವ ಪಠ್ಯಕ್ರಮವನ್ನು ಅನುಸರಿಸುವಂತೆ ಸೂಚಿಸಿಸಿರುವುದಾಗಿ ತಿಳಿಸಿದರು.
ಈ ಪಠ್ಯ ಬೋದನೆಯನ್ನು ಪರಿಣಾಮಕಾರಿ ತಂತ್ರಗಳನ್ನು ಬಳಸಬೇಕು. ಅಗತ್ಯವೆನಿಸಿದಲ್ಲಿ ಶಿಕ್ಷಕರಿಗೆ ತರಬೇತಿಗಳನ್ನು ನೀಡಲಾಗುವುದು. ಬೋದನಾ ಕ್ರಮದಲ್ಲಿ ನಿರ್ಲಕ್ಷ ಬೇಡ. ನಡೆಯುವ ತರಗತಿಗಳು ಸಕಾಲಿಕವೂ, ವ್ಯವಸ್ಥಿತವೂ ಆಗಿರಲಿ ಎಂದ ಅವರು ಪ್ರಾಥಮಿಕ ಶಾಲೆಗಳಲ್ಲಿನ ಮಕ್ಕಳಿಗೆ ಶ್ರವಣ, ಪಠಣ, ಓದು ಮತ್ತು ಬರಹ ಕೌಶಲ್ಯಗಳನ್ನು ತಿಳಿಸುವುದರ ಜೊತೆಗೆ ಪೂರಕ ಪಠ್ಯವನ್ನು ಬೋದಿಸುವಂತೆ ಸೂಚಿಸಿದರು.
ಸಭೆಯಲ್ಲಿ ಉಪಸ್ಥಿತರಿದ್ದ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎನ್.ಎಂ.ರಮೇಶ್ ಅವರು ಮಾತನಾಡಿ, ಮಕ್ಕಳ ಸಂಖ್ಯೆ ಕಡಿಮೆ ಇದ್ದು, ಕೊಠಡಿಗಳ ಸಂಖ್ಯೆ ಸಾಕಷ್ಟಿದ್ದರೆ, ಅಂತಹ ಶಾಲೆಗಳಲ್ಲಿ ಕೋವಿಡ್ ಸುರಕ್ಷತಾಕ್ರಮಗಳನ್ನು ಅನುಸರಿಸಿ, ನಿರಂತರವಾಗಿ ತರಗತಿಗಳನ್ನು ನಡೆಸುವಂತೆ ಸೂಚಿಸಲಾಗಿದೆ ಎಂದರು.
ಸಭೆಯಲ್ಲಿ ಡಯಟ್ ಪ್ರಾಂಶುಪಾಲ ಬಿ.ಆರ್.ಬಸವರಾಜು, ನೌಕರರ ಸಂಘದ ಬೆಂಗಳೂರು ವಿಭಾಗದ ವಿಭಾಗೀಯ ಉಪಾಧ್ಯಕ್ಷ ಆರ್.ಮೋಹನ್‍ಕುಮಾರ್ ಸೇರಿದಂತೆ ಶಿಕ್ಷಣ ಇಲಾಖೆಯ ಕ್ಷೇತ್ರ ಶಿಕ್ಷಣಾಧಿಕಾರಿಗಳು, ವಿಷಯ ಪರಿವೀಕ್ಷಕರು, ಶಿಕ್ಷಕರ ಸಂಘದ ಎಲ್ಲಾ ತಾಲೂಕುಗಳ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಅಂಧ ಮಕ್ಕಳ ವಸತಿ ಶಾಲೆಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿಗೆ ಅಂಧ ಮಕ್ಕಳ ಸರ್ಕಾರಿ ಪಾಠಶಾಲೆ 1 ನೇ ತರಗತಿ (6ವರ್ಷ) ಯಿಂದ 10ನೇ ತರಗತಿ (16ವರ್ಷ) ವರೆಗೆ ಅಂಧ ಹೆಣ್ಣು ಮತ್ತು ಗಂಡು ಮಕ್ಕಳಿಗೆ ದಾಖಲಾತಿಯು ಪ್ರಾರಂಭವಾಗಿದೆ.
ಈ ಶಾಲೆಯಲ್ಲಿ ಅಂಧ ಹೆಣ್ಣು ಮಕ್ಕಳಿಗೆ ಉಚಿತ ಶಿಕ್ಷಣದ ಜೊತೆಗೆ ವಸತಿಯುತ ಶಾಲೆಯಾಗಿರುತ್ತದೆ. ಸಾರ್ವಜನಿಕ ಶಿಕ್ಷಣ ಇಲಾಖೆಯವರು ನಿಗದಿಪಡಿಸಿರುವ ಸಾಮಾನ್ಯ ಮಕ್ಕಳಿಗೆ ನೀಡುತ್ತಿರುವ ಶಿಕ್ಷಣವನ್ನೇ ಇಲ್ಲಿಯೂ ಭೋದಿಸುವುದರ ಜೊತೆಗೆ ಬೈಲ್ ಲಿಪಿಯನ್ನು ಅಳವಡಿಸಿಲಾಗಿದೆ.
ಶೈಕ್ಷಣಿಕ ಅವಧಿಯಲ್ಲಿ ಅಂಧ ಮಕ್ಕಳಿಗೆ ಪಠ್ಯೇತರ ಚಟುವಟಿಕೆಗಳಾದ Daily Living Skills(DLS), ಯೋಗ, ದೈಹಿಕ ಶಿಕ್ಷಣ, ಸಂಗೀತ, ಡ್ಯಾನ್ಸ್ ಚಲನ-ವಲನ ತರಬೇತಿ, ಕಂಪ್ಯೂಟರ್ ತರಬೇತಿ, ಒಳಾಂಗಣ ಹಾಗೂ ಹೊರಾಂಗಣ ಆಟಗಳು, ಬ್ರೈಲ್ ಪುಸ್ತಕಗಳು, ಶಾಲಾ ಸಮವಸ್ತ್ರ, ಕಲಿಕಾ ಉಪಕರಣಗಳು, ವೈದ್ಯಕೀಯ ತಪಾಸಣೆಗಳು, ಕರಕುಶಲ ಕಾರ್ಯ ಚಟುವಟಿಕೆಗಳನ್ನು ಕಳಿಸಲಾಗುವುದು.
ಸಾರ್ವಜನಿಕರು ತಮ್ಮ ವ್ಯಾಪ್ತಿಯಲ್ಲಿರುವ ದೃಷ್ಟಿ ವಿಕಲಚೇತನ ಮಕ್ಕಳು ಕಂಡು ಬಂದಲ್ಲಿ ಅವರ ಪೋಷಕರಿಗೆ ನಮ್ಮ ಶಾಲೆಯ ಬಗ್ಗೆ ಮಾಹಿತಿ ನೀಡಿ ಶೇ.40 ಕ್ಕಿಂತ ಹೆಚ್ಚಿನ ದೃಷ್ಟಿದೋಷ ಹೊಂದಿರುವ ಮಕ್ಕಳು ನಮ್ಮ ಸರ್ಕಾರಿ ಶಾಲೆಗೆ ದಾಖಲಾಗುವಂತೆ ಮಾಡಿ ವಿಕಲಚೇತನ ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗೆ ಸಹಕರಿಸುವಂತೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಶಾಲೆಯ ಮುಖ್ಯೋಪಾಧ್ಯಾಯರು, ಅಧೀಕ್ಷರಾದ ಗಂಗಾಧರಪ್ಪ.ಹೆಚ್.ಎನ್ ಮೊ.ಸಂ: 9984534883, 08182-250442 ಸಂಪರ್ಕಿಸಬಹುದೆAದು ಇಲಾಖೆಯ ಅಧೀಕ್ಷಕರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ನಾಳೆ ಡಾ. ಬಿ.ಆರ್. ಅಂಬೇಡ್ಕರ್ ಅವರ 135 ನೇ ಜನ್ಮ ದಿನಾಚರಣೆ
ಸುದ್ದಿದಿನ,ದಾವಣಗೆರೆ:ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ, ಈ ವರ್ಷದ ಡಾ|| ಬಿ.ಆರ್. ಅಂಬೇಡ್ಕರ್ ಅವರ 135 ನೇ ಜನ್ಮ ದಿನಾಚರಣೆಯನ್ನು ಅತ್ಯಂತ ಸರಳವಾಗಿ ಆಚರಿಸಲು ಜಿಲ್ಲಾಡಳಿತ ನಿರ್ಧರಿಸಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ಎಪ್ರಿಲ್ 14 ರಂದು ಮಂಗಳವಾರ ಬೆಳಿಗ್ಗೆ 9:00 ಗಂಟೆಗೆ ಡಾ|| ಬಿ.ಆರ್ ಅಂಬೇಡ್ಕರ್ ವೃತ್ತದಲ್ಲಿರುವ ಅಂಬೇಡ್ಕರ್ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಲಾಗುವುದು. ನಂತರ ಬೆಳಿಗ್ಗೆ 11:00 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿಯ “ತುಂಗಭದ್ರಾ” ಸಭಾಂಗಣದಲ್ಲಿ ಬಾಬಾಸಾಹೇಬ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಮೆರವಣಿಗೆ ಮಾರ್ಗ
ಬೆಳಿಗ್ಗೆ 9:00 ಗಂಟೆಗೆ ಅಂಬೇಡ್ಕರ್ ವೃತ್ತದಿಂದ ಭಾವಚಿತ್ರದ ಮೆರವಣಿಗೆ ಆರಂಭವಾಗಲಿದ್ದು, ಹೈಸ್ಕೂಲ್ ಮೈದಾನ ಮಾರ್ಗವಾಗಿ ಮಹಾನಗರ ಪಾಲಿಕೆ, ಗಾಂಧಿ ವೃತ್ತ ಹಾಗೂ ಜಯದೇವ ವೃತ್ತದ ಮೂಲಕ ಸಾಗಿ ಪುನಃ ಅಂಬೇಡ್ಕರ್ ವೃತ್ತಕ್ಕೆ ತಲುಪಲಿದೆ.
ಈ ಕಾರ್ಯಕ್ರಮದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು, ದಾವಣಗೆರೆ ತಾಲ್ಲೂಕು ಮಟ್ಟದ ಅಧಿಕಾರಿಗಳು, ದಲಿತಪರ ಸಂಘಟನೆಯ ಮುಖಂಡರು, ಪ್ರಗತಿಪರ ಚಿಂತಕರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ ರವರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಚಿಕ್ಕಮಗಳೂರು | ನೂತನ ಭದ್ರಾ ಸೇತುವೆ ಲೋಕಾರ್ಪಣೆಗೊಳಿಸಿ
ಸುದ್ದಿದಿನ,ಚಿಕ್ಕಮಗಳೂರು:ಜಿಲ್ಲೆಯ ಎನ್‌ಆರ್ ಪುರದಲ್ಲಿ ಇಂದುಆಯೋಜಿಸಿದ್ದ ಕಾರ್ಯಕ್ರಮದಲ್ಲಿ “ಹಂದೂರು ಗ್ರಾಮದಿಂದ ಎನ್.ಆರ್.ಪುರಕ್ಕೆ ಸಂಪರ್ಕಿಸುವ ನೂತನ ಭದ್ರಾ ಸೇತುವೆಯನ್ನು ಲೋಕಾರ್ಪಣೆಗೊಳಿಸಿ, ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿ, ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಸರ್ಕಾರದ ಸವಲತ್ತುಗಳನ್ನು ವಿತರಿಸಿದೆ.
ಸಚಿವರಾದ ಸತೀಶ್ ಜಾರಕಿಹೊಳಿ, ಕೆ.ಜೆ.ಜಾರ್ಜ್, ಶೃಂಗೇರಿ ಶಾಸಕರಾದ ಟಿ.ಡಿ.ರಾಜೇಗೌಡ, ಕಡೂರು ಶಾಸಕರಾದ ಆನಂದ್, ತರೀಕೆರೆ ಶಾಸಕರಾದ ಶ್ರೀನಿವಾಸ್, ಮಾಗಡಿ ಶಾಸಕ ಬಾಲಕೃಷ್ಣ ಸೇರಿ ಜಿಲ್ಲೆಯ ಶಾಸಕರುಗಳು, ವಿಧಾನ ಪರಿಷತ್ ಸದಸ್ಯರು, ಮುಖಂಡರು ಹಾಗೂ ಸಂಪಾದಕರಾದ ವಿಶ್ವೇಶ್ವರ ಭಟ್, ಕೆಎಸ್‌ಟಿಡಿಸಿ ಅಧ್ಯಕ್ಷರಾದ ಸರೋವರ್ ಶ್ರೀನಿವಾಸ್ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ಅಂತರಂಗ6 days agoಸಂಪಾದಕೀಯ | ದಾವಣಗೆರೆ ದಕ್ಷಿಣ ಉಪಚುನಾವಣೆ: ಪ್ರತಿಷ್ಠೆಯ ಹೋರಾಟದಲ್ಲಿ ಜನರ ಧ್ವನಿ ಪ್ರಬಲವಾಗಲಿ
-
ದಿನದ ಸುದ್ದಿ5 days agoಸಮಾನತೆಯ ಸಂಭ್ರಮ | ಹದಡಿಯಲ್ಲಿ ತೃತೀಯ ಲಿಂಗತ್ವ ಮದಾರರಿಂದ ಮತಚಲಾವಣೆ
-
ದಿನದ ಸುದ್ದಿ6 days agoಸುಸೂತ್ರ ಮತದಾನಕ್ಕೆ ಜಿಲ್ಲಾಡಳಿತದ ಸಕಲ ಸಿದ್ಧತೆ
-
ದಿನದ ಸುದ್ದಿ3 days agoದಾವಣಗೆರೆ ದಕ್ಷಿಣ ವಿಧಾನಸಭಾ ಉಪ ಚುನಾವಣೆ: ಶೇ. 68.55ರಷ್ಟು ಮತದಾನ
-
ದಿನದ ಸುದ್ದಿ3 days agoದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ವಿಜ್ಞಾನ ವಿಭಾಗಕ್ಕೆ ಅಗ್ರಸ್ಥಾನ
-
ದಿನದ ಸುದ್ದಿ5 days agoಅಗ್ನಿವೀರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ5 days agoಪರಿಶಿಷ್ಟ ಪಂಗಡದ ಮಕ್ಕಳಿಗೆ ಪ್ರತಿಷ್ಠಿತ ಶಾಲೆಗಳಲ್ಲಿ ಪ್ರವೇಶ: ಅರ್ಜಿ ಆಹ್ವಾನ
-
ದಿನದ ಸುದ್ದಿ2 days agoಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ಪ್ರಶ್ನಿಸಿಕೊಳ್ಳಬೇಕು : ಸಿಎಂ ಸಿದ್ದರಾಮಯ್ಯ

