Connect with us

ದಿನದ ಸುದ್ದಿ

ಶಿಕ್ಷಣ ಇಲಾಖೆಯಲ್ಲಿನ ಜ್ವಲಂತ ಸಮಸ್ಯೆಗಳ ಪರಿಹಾರಕ್ಕೆ ಕ್ರಮ

Published

on

ಸುದ್ದಿದಿನ,ಶಿವಮೊಗ್ಗ : ಜಿಲ್ಲೆಯ ಪ್ರಾಥಮಿಕ, ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷಕರ ಬಹುದಿನಗಳಿಂದ ನೆನೆಗುದಿಗೆ ಬಿದ್ದಿದ್ದ, ಸ್ಥಳೀಯವಾಗಿ ಇತ್ಯರ್ಥಪಡಿಸಿಕೊಳ್ಳಬಹುದಾದ ಹಾಗೂ ಇಲಾಖೆಯಲ್ಲಿನ ಜ್ವಲಂತ ಸಮಸ್ಯೆಗಳನ್ನು ತ್ವರಿತಗತಿಯಲ್ಲಿ ಪರಿಹಾರ ಕಂಡುಕೊಳ್ಳಲು ರಾಜ್ಯದಲ್ಲಿಯೇ ಇದೇ ಮೊದಲ ಬಾರಿಗೆ ಸಭೆಯನ್ನು ಏರ್ಪಡಿಸಿ, ಹಲವು ಮಹತ್ವದ ನಿರ್ಣಯಗಳನ್ನು ಕೈಗೊಳ್ಳಲಾಯಿತು.

ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ಸಂಘ ಹಾಗೂ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರ ಕೋರಿಕೆಯ ಮೇರೆಗೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು, ಎಲ್ಲಾ ತಾಲೂಕುಗಳ ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಪ್ರೌಢ ಮತ್ತು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಉಪಸ್ಥಿತಿಯಲ್ಲಿ ಇಂದು ಜಿಲ್ಲಾ ಪಂಚಾಯಿತಿಯ ಅಬ್ದುಲ್ ನಜೀರಸಾಬ್ ಸಭಾಂಗಣದಲ್ಲಿ ಸಭೆಯನ್ನು ಏರ್ಪಡಿಸಲಾಗಿತ್ತು.

ಈ ಸಂದರ್ಭದಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಾಕ್ಷರಿ ಅವರು ಮಾತನಾಡಿ, ನೂತನವಾಗಿ ಸೇವೆಗೆ ನಿಯುಕ್ತರಾದ ಶಿಕ್ಷಕರ ಖಾಯಂ ಪೂರ್ವ ಸೇವಾವಧಿ ತೃಪ್ತಿಕರವಾಗಿರುವ ಬಗ್ಗೆ ಆದೇಶ ಹೊರಡಿಸುವ, ಶಿಕ್ಷಕರ ಮೇಲೆ ಬಹುದಿನಗಳಿಂದ ಬಾಕಿ ಇರುವ ಇಲಾಖಾ ವಿಚಾರಣೆ ಬಾಕಿ, ನಿವೃತ್ತ ಶಿಕ್ಷಕರ ಸೌಲಭ್ಯಗಳನ್ನು ನೀಡದಿರುವುದು, ವೈದ್ಯಕೀಯ ವೆಚ್ಚದ ಮರುಪಾವತಿ, ವೇತನ ವಿಳಂಬ ಮುಂತಾದ ಸಮಸ್ಯೆಗಳು ಜಿಲ್ಲೆಯ ಎಲ್ಲಾ ತಾಲೂಕು ಕೇಂದ್ರಗಳಲ್ಲಿಯೂ ಬಾಕಿ ಇರುವುದು ಬೇಸರ ಸಂಗತಿಯಾಗಿದೆ.

ಇವುಗಳನ್ನು ಅನಗತ್ಯ ವಿಳಂಬಕ್ಕೆ ಅವಕಾಶವಿಲ್ಲದಂತೆ ತ್ವರಿತಗತಿಯಲ್ಲಿ ವಿಲೇ ಮಾಡಲು ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡುವಂತೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶ್ರೀಮತಿ ಎಂ.ಎಲ್.ವೈಶಾಲಿ ಅವರಲ್ಲಿ ಮನವಿ ಮಾಡಿದರು.

ಶಿಕ್ಷಕರ ಮೇಲಿನ ಆರೋಪಗಳಿಗೆ ಸಂಬಂಧಿಸಿದಂತೆ ಇಲಾಖಾ ವಿಚಾರಣೆ ಕಾಯ್ದಿರಿಸಿದ್ದಲ್ಲಿ ಕೂಡಲೆ ವಿಚಾರಣೆಯನ್ನು ಪೂರ್ಣಗೊಳಿಸಬೇಕು. ಈ ವಿಷಯದಲ್ಲಿ ಅನಗತ್ಯ ವಿಳಂಬ ಸರಿಯಲ್ಲ. ಅಧಿಕಾರ ದುರ್ಬಳಕೆಯಂತಹ ಪ್ರಕರಣಗಳಲ್ಲಿ ನಿಯಮಾನುಸಾರ ಕ್ರಮವಹಿಸುವ ಬಗ್ಗೆ ನೌಕರರ ಆಕ್ಷೇಪ ವ್ಯಕ್ತಪಡಿಸುವುದಿಲ್ಲ ಎಂದವರು ನುಡಿದರು.

ಗುರುಭವನ ನಿರ್ಮಾಣಕ್ಕೆ ಸಂಬಂಧಿಸಿದಂತೆ ಈಗಾಗಲೆ ಸರ್ಕಾರ ಅಗತ್ಯವಾಗಿರುವ ಅನುದಾನವನ್ನು ಬಿಡುಗಡೆ ಮಾಡಿದ್ದು,. ಜಿಲ್ಲಾ ಉಸ್ತುವಾರಿ ಸಚಿವರ ದಿನಾಂಕ ಪಡೆದು, ಕೂಡಲೇ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಲು ಕ್ರಮ ಕೈಗೊಳ್ಳುವಂತೆ ತಿಳಿಸಿದ ಅವರು, ಶಿಕ್ಷಕರ ಮುಂಬಡ್ತಿಗೆ ಸಂಬಂಧಿಸಿದ ಕಡತಗಳನ್ನು ಕೂಡಲೇ ವಿಲೇ ಮಾಡುವಂತೆ ಮನವಿ ಮಾಡಿದರು.

ಜಿಲ್ಲೆಯ ಶಿಕ್ಷಕರ ಸೇವಾ ವಹಿ(ಎಸ್.ಆರ್.)ಯಲ್ಲಿ ದಾಖಲೆಗಳು ಸರಿಯಾಗದಿರುವ ಬಗ್ಗೆ ಅನೇಕ ದೂರುಗಳಿವೆ. ವೇತನ, ಭತ್ಯೆಗಳ ಪಾವತಿಗೆ ಸಂಬಂಧಿಸಿದಂತೆ ಹೆಚ್.ಆರ್.ಎಂ.ಎಸ್.ನಲ್ಲಿ ತಾಂತ್ರಿಕ ದೋಷವಿರುವ ಬಗ್ಗೆ ಕಾರಣಗಳು ಅಧಿಕವಾಗಿವೆ. ಇವುಗಳನ್ನು ಸರಿಪಡಿಸಲು ತಾಂತ್ರಿಕ ಸಲಹೆಗಾರರ ಸಲಹೆಯನ್ನು ಪಡೆದುಕೊಳ್ಳಲು ಜಿಲ್ಲೆಯಲ್ಲಿ ಓರ್ವರಿಗೆ ಹೊಣೆಗಾರಿಕೆ ವಹಿಸುವಂತೆ ಅವರು ಸಲಹೆ ನೀಡಿದರು.

ಸಭೆಯಲ್ಲಿ ಉಪಸ್ಥಿತರಿದ್ದ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶ್ರೀಮತಿ ಎಂ.ಎಲ್.ವೈಶಾಲಿ ಅವರು ಮಾತನಾಡಿ, ಮುಂಬಡ್ತಿ ಮತ್ತು ಕಾಲಮಿತಿ ಬಡ್ತಿಗೆ ಸಂಬಂಧಿಸಿದ ಕಡತಗಳನ್ನು ಕೂಡಲೇ ವಿಲೇವಾರಿ ಮಾಡುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದ ಅವರು, ಆಯಾ ಶಾಲೆಗಳಲ್ಲಿನ ಬಟವಾಡೆ ಅಧಿಕಾರಿಗಳು ಅಥವಾ ಪ್ರಥಮ ದರ್ಜೆ ಸಹಾಯಕರಿಗೆ ಹೆಚ್.ಆರ್.ಎಂ.ಎಸ್.ನಿರ್ವಹಣೆ ಕುರಿತು ತರಬೇತಿ ನೀಡಲಾಗುವುದು. ಮುಂದಿನ ದಿನಗಳಲ್ಲಿ ನ್ಯೂನತೆಗಳು ಮುಂದುವರೆದಲ್ಲಿ ಶಾಲೆ/ಕಚೇರಿಯ ವ್ಯವಸ್ಥಾಪಕರನ್ನೆ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದರು.

ಕೋವಿಡ್ ನಿಯಂತ್ರಣಕ್ಕೆ ಬಂದ ನಂತರ ಸರ್ಕಾರ ಈಗಾಗಲೇ ಹೊರಡಿಸಿರುವ ಮಾರ್ಗಸೂಚಿಯಂತೆ ಶಾಲಾ-ಕಾಲೇಜುಗಳು ಆರಂಭಗೊಳ್ಳಲಿವೆ. ಜಿಲ್ಲೆಯ ಯಾವುದೇ ಶಾಲೆಯಲ್ಲಿ ಕೋವಿಡ್‍ನ ಒಂದೂ ಪ್ರಕರಣಗಳು ಗೋಚರಿಸದಂತೆ ಅಗತ್ಯ ಸುರಕ್ಷತಾ ಕ್ರಮಗಳನ್ನು ಅನುಸರಿಸಲು ಸೂಚಿಸಲಾಗಿದೆ. ಅಲ್ಲದೇ ಕಳೆದ ಗ್ರಾಮ ಪಂಚಾಯಿತಿ ಚುನಾವಣೆಯ ಸಂದರ್ಭದಲ್ಲಿ ತಾಲೂಕು ತಹಶೀಲ್ದಾರರು ಖರೀದಿಸಿದ್ದ ಥರ್ಮಲ್ ಸ್ಕ್ಯಾನರ್‍ಗಳನ್ನು ಶಾಲಾ ಮಕ್ಕಳ ದೈನಂದಿನ ತಪಾಸಣೆಗಾಗಿ ಪಡೆದುಕೊಳ್ಳುವಂತೆ, ಹೆಚ್ಚಿನ ಅಗತ್ಯವಿದ್ದಲ್ಲಿ ಮತ್ತೊಂದನ್ನು ಖರೀದಿಸುವಂತೆ ಸೂಚಿಸಿದ ಅವರು, ಈ ಬಾರಿಯ ಎಸ್.ಎಸ್.ಎಲ್.ಸಿ.ಫಲಿತಾಂಶ ಮೊದಲ ಹತ್ತು ಸ್ಥಾನದಲ್ಲಿರುವಂತೆ ನೋಡಿಕೊಳ್ಳಬೇಕು. ಅದಕ್ಕಾಗಿ ಈಗಾಗಲೇ ಇಲಾಖೆಯು ಹೊರಸಿರುವ ಪಠ್ಯಕ್ರಮವನ್ನು ಅನುಸರಿಸುವಂತೆ ಸೂಚಿಸಿಸಿರುವುದಾಗಿ ತಿಳಿಸಿದರು.

ಈ ಪಠ್ಯ ಬೋದನೆಯನ್ನು ಪರಿಣಾಮಕಾರಿ ತಂತ್ರಗಳನ್ನು ಬಳಸಬೇಕು. ಅಗತ್ಯವೆನಿಸಿದಲ್ಲಿ ಶಿಕ್ಷಕರಿಗೆ ತರಬೇತಿಗಳನ್ನು ನೀಡಲಾಗುವುದು. ಬೋದನಾ ಕ್ರಮದಲ್ಲಿ ನಿರ್ಲಕ್ಷ ಬೇಡ. ನಡೆಯುವ ತರಗತಿಗಳು ಸಕಾಲಿಕವೂ, ವ್ಯವಸ್ಥಿತವೂ ಆಗಿರಲಿ ಎಂದ ಅವರು ಪ್ರಾಥಮಿಕ ಶಾಲೆಗಳಲ್ಲಿನ ಮಕ್ಕಳಿಗೆ ಶ್ರವಣ, ಪಠಣ, ಓದು ಮತ್ತು ಬರಹ ಕೌಶಲ್ಯಗಳನ್ನು ತಿಳಿಸುವುದರ ಜೊತೆಗೆ ಪೂರಕ ಪಠ್ಯವನ್ನು ಬೋದಿಸುವಂತೆ ಸೂಚಿಸಿದರು.

ಸಭೆಯಲ್ಲಿ ಉಪಸ್ಥಿತರಿದ್ದ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎನ್.ಎಂ.ರಮೇಶ್ ಅವರು ಮಾತನಾಡಿ, ಮಕ್ಕಳ ಸಂಖ್ಯೆ ಕಡಿಮೆ ಇದ್ದು, ಕೊಠಡಿಗಳ ಸಂಖ್ಯೆ ಸಾಕಷ್ಟಿದ್ದರೆ, ಅಂತಹ ಶಾಲೆಗಳಲ್ಲಿ ಕೋವಿಡ್ ಸುರಕ್ಷತಾಕ್ರಮಗಳನ್ನು ಅನುಸರಿಸಿ, ನಿರಂತರವಾಗಿ ತರಗತಿಗಳನ್ನು ನಡೆಸುವಂತೆ ಸೂಚಿಸಲಾಗಿದೆ ಎಂದರು.

ಸಭೆಯಲ್ಲಿ ಡಯಟ್ ಪ್ರಾಂಶುಪಾಲ ಬಿ.ಆರ್.ಬಸವರಾಜು, ನೌಕರರ ಸಂಘದ ಬೆಂಗಳೂರು ವಿಭಾಗದ ವಿಭಾಗೀಯ ಉಪಾಧ್ಯಕ್ಷ ಆರ್.ಮೋಹನ್‍ಕುಮಾರ್ ಸೇರಿದಂತೆ ಶಿಕ್ಷಣ ಇಲಾಖೆಯ ಕ್ಷೇತ್ರ ಶಿಕ್ಷಣಾಧಿಕಾರಿಗಳು, ವಿಷಯ ಪರಿವೀಕ್ಷಕರು, ಶಿಕ್ಷಕರ ಸಂಘದ ಎಲ್ಲಾ ತಾಲೂಕುಗಳ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಬಾಷಾ ಒತ್ತಾಯ

Published

on

ಸುದ್ದಿದಿನ,ದಾವಣಗೆರೆ:ವಿದ್ಯಾರ್ಥಿಗಳ ಭವಿಷ್ಯದ ಜೊತೆಗೆ ಕೇಂದ್ರ ಸರ್ಕಾರ ಚೆಲ್ಲಾಟವಾಡುತ್ತಿದ್ದು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಕಗ್ಗೊಲೆ ಮಾಡುತ್ತಿದ್ದೆ ಎಂದು ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಭಾಷಾ ಆಕ್ರೋಶ ವ್ಯಕ್ತಪಡಿಸಿದ್ದಾರೆ,

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ನಂತರ 23ಕ್ಕೆ ಹೆಚ್ಚು ವಿದ್ಯಾರ್ಥಿನಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ, ದೆಹಲಿಯಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಹೋರಾಟ ನಡೆಸುತ್ತಿದ್ದಾರೆ ವಿದ್ಯಾರ್ಥಿಗಳನ್ನು ಕೊಲ್ಲುವ ಭ್ರಷ್ಟ ಆಡಳಿತ ವ್ಯವಸ್ಥೆ ಕೊನೆಯಾಗಬೇಕು ಮತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಕೂಡಲೇ ರಾಜೀನಾಮೆ ನೀಡಬೇಕು ಎಂದು ಯುವ ಕಾಂಗ್ರೆಸ್ ಪ್ರದಾನ ಕಾರ್ಯದರ್ಶಿ *ಮಹಬೂಬ್ ಭಾಷಾ* ಆಗ್ರಹಿಸಿದ್ದಾರೆ ಸಂವಿಧಾನ ವಿರೋಧಿ ಆಡಳಿತಕ್ಕೆ ಕಡಿವಾಣ ಹಾಕಲು ದೇಶದ ಯುವಜನರು ಹಾಗೂ ವಿದ್ಯಾರ್ಥಿಗಳು ಎಚ್ಚೆತ್ತುಕೊಳ್ಳಬೇಕು, ಸಂವಿಧಾನ ವಿರೋಧಿ ನಡೆ ಹಾಗೂ ಹೋರಾಟವನ್ನು ಹತ್ತಿಕ್ಕು ಹೊನ್ನಾರವಾಗಿದೆ.

ನೀಟ್ ಹಗರಣ ಮತ್ತು ವಿದ್ಯಾರ್ಥಿಗಳ ಆತ್ಮಹತ್ಯೆ ಕಾರ್ಪೊರೇಟರ್ ಶಿಕ್ಷಣ ನೀತಿಗಳ ಕಾರಣ, ಪರೀಕ್ಷೆಯ ಅಕ್ರಮ ವಿರುದ್ಧ ಹೋರಾಟ ಎರಡನೇ ಸ್ವತಂತ್ರ ಸಂಗ್ರಾಯದ ರೀತಿಯಲ್ಲಿ ದೇಶದಿಂದ ವ್ಯಾಪಿಸುತ್ತಿದ್ದು, ಆಳುವ ಸರ್ಕಾರ ರಾಷ್ಟ್ರದ ಭವಿಷ್ಯ ವಾಗಿರುವ ಯುವ ಸಮೂಹದ ಕನಸುಗಳನ್ನು ಹೊಸಕಿ ಹಾಕಬಾರದೆಂದು ಹೇಳಿದ್ದಾರೆ.

ಪರೀಕ್ಷಾ ವ್ಯವಸ್ಥೆಯ ಲೋಪದೋಷಗಳನ್ನು ತಕ್ಷಣವೇ ಸರಿಪಡಿಸಬೇಕು ಹಾಗೂ ಭವಿಷ್ಯದಲ್ಲಿ ಇಂತಹ ಅಕ್ರಮಗಳು ಮರುಕಳಿಸುದಂತೆ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕೆಂದು ಒತ್ತಾಯಿಸುತ್ತಿದ್ದೇನೆ ಎಂದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ; ವಿದ್ಯಾರ್ಥಿಗಳ ಆತ್ಮಹತ್ಯೆ: ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ವಿನಾಯಕ ಬಿ. ಎನ್ ಆಗ್ರಹ

Published

on

ಸುದ್ದಿದಿನ,ದಾವಣಗೆರೆ :ವಿದ್ಯಾರ್ಥಿಗಳ ಭವಿಷ್ಯದ ಜತೆಗೆ ಕೇಂದ್ರ ಸರ್ಕಾರ ಚೆಲ್ಲಾಟವಾಡುತ್ತಿದೆ. ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ನಂತರ20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದೆಹಲಿಯಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಹೋರಾಟ ನಡೆಸುತ್ತಿದ್ದಾರೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಕೂಡಲೇ

ರಾಜಿನಾಮೆ ನೀಡಬೇಕು. ವಿದ್ಯಾರ್ಥಿಗಳನ್ನು ಕೊಲ್ಲುವ ಭ್ರಷ್ಟ ಆಡಳಿತ ವ್ಯವಸ್ಥೆ ಕೊನೆಯಾಗಬೇಕು’ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ನೀತಿ ,ಸಂಶೋಧನೆ ಮತ್ತು ತರಬೇತಿ ವಿಭಾಗದ ರಾಜ್ಯ ಸಂಚಾಲಕರಾದ ವಿನಾಯಕ ಬಿ.ಎನ್ ಪತ್ರಿಕಾ ಪ್ರಕಟಣೆಯಲ್ಲಿ ಆಗ್ರಹ ಮಾಡಿದ್ದಾರೆ.

ಸಂವಿಧಾನ ವಿರೋಧಿ ಆಡಳಿತಕ್ಕೆ ಕಡಿವಾಣ ಹಾಕಲು ದೇಶದ
ಯುವಜನರು, ವಿದ್ಯಾರ್ಥಿಗಳು ಎಚ್ಚೆತ್ತುಕೊಳ್ಳಬೇಕು. ಸೊನಮ್ ವಾಂಗ್ಟಕ್ ಅವರನ್ನು ಏಕಾಏಕಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದು ಸಂವಿಧಾನವಿರೋಧಿ ನಡೆ, ಹೋರಾಟ ಹತ್ತಿಕ್ಕುವ ಹುನ್ನಾರ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ನೀಟ್ ಹಗರಣ, ವಿದ್ಯಾರ್ಥಿಗಳ ಆತ್ಮ ಹತ್ಯೆಗೆ ಕಾರ್ಪೊರೇಟ್ ಶಿಕ್ಷಣ ನೀತಿಗಳು ಕಾರಣ. ನೀಟ್ ಪರೀಕ್ಷೆ ಅಕ್ರಮದ ವಿರುದ್ಧದ ಹೋರಾಟ ಎರಡನೇ ಸ್ವಾತಂತ್ರ್ಯ ಸಂಗ್ರಾಮದ ರೀತಿಯಲ್ಲಿ ದೇಶದಾದ್ಯಂತ ವ್ಯಾಪಿಸುತ್ತಿದೆ. ಆಳುವ ಸರ್ಕಾರ ರಾಷ್ಟ್ರದ ಭವಿಷ್ಯವಾಗಿರುವ ಯುವ ಸಮೂಹದ ಕನಸುಗಳನ್ನು ಹೊಸಕಿ ಹಾಕಬಾರದು’.ಎಂದು ತಿಳಿಸಿದ್ದಾರೆ.

ಪರೀಕ್ಷಾ ವ್ಯವಸ್ಥೆಯ ಲೋಪದೋಷಗಳನ್ನು ಸರಿಪಡಿಸಬೇಕು ಮತ್ತು ಭವಿಷ್ಯದಲ್ಲಿ ಇಂತಹ ಅಕ್ರಮಗಳು ಮರುಕಳಿಸದಂತೆ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ವಂದನೆಗಳೊಂದಿಗೆ

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಎಸ್ ಐ ಆರ್ | ರಾಜ್ಯದಲ್ಲೇ ಮಾಯಾಕೊಂಡ ಕ್ಷೇತ್ರಕ್ಕೆ ಪ್ರಥಮ ಸ್ಥಾನ

Published

on

ಸುದ್ದಿದಿನ,ದಾವಣಗೆರೆ‌ : ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕಾರ್ಯದಲ್ಲಿ ಮಾಯಾಕೊಂಡ ಕ್ಷೇತ್ರವು ನಿಗದಿತ ಅವಧಿಗಿಂತ ಮೊದಲೇ ಗಣತಿ ನಮೂನೆಗಳ ಹಂಚಿಕೆಯನ್ನು ಪೂರ್ಣಗೊಳಿಸಿರುವುದರಿಂದ ಮತ್ತು ಶೇ. 92.31 ರಷ್ಟು ಡಿಜಿಟಲೀಕರಣ ಸಾಧನೆ ಮಾಡಲಾಗಿರುವುದರಿಂದ, ಪ್ರಗತಿಯಲ್ಲಿ ರಾಜ್ಯದಲ್ಲೇ ಪ್ರಥಮ ಸ್ಥಾನ ಪಡೆದುಕೊಂಡಿದೆ ಎಂದು 108-ಮಾಯಾಕೊಂಡ ವಿಧಾನಸಭಾ ಕ್ಷೇತ್ರದ ಮತದಾರರ ನೋಂದಣಾಧಿಕಾರಿ ಹಾಗೂ ದಾವಣಗೆರೆ ಉಪವಿಭಾಗಾಧಿಕಾರಿ ಸಂತೋಷ್ ಕುಮಾರ್ ಅವರು ತಿಳಿಸಿದರು.

ಅವರು ಮಂಗಳವಾರ ದಾವಣಗೆರೆ ತಾಲ್ಲೂಕು ಕಚೇರಿಯಲ್ಲಿ ದಾವಣಗೆರೆ ಜಿಲ್ಲೆಯ 108-ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕುರಿತು ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

108-ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕಾರ್ಯದಲ್ಲಿ ಒಟ್ಟು 1,97,048 ಮತದಾರರನ್ನು ಹೊಂದಿದ್ದು ಎಲ್ಲಾ 1,97,048 ಗಣತಿ ನಮೂನೆಗಳನ್ನು ಹಂಚಿಕೆ ಮಾಡಲಾಗಿದೆ ಇದುವರೆಗೆ ಒಟ್ಟು 1,81,890 ಗಣತಿ ನಮೂನೆಗಳನ್ನು ಡಿಜಿಟಲೀಕರಿಸಲಾಗಿದ್ದು, ಶೇಕಡಾ 92.31 ರಷ್ಟು ಗುರಿಯನ್ನು ತಲುಪಲಾಗಿದೆ ಎಂದು ತಿಳಿಸಿದರು.

ದಾವಣಗೆರೆ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (SIR) ಪ್ರಕ್ರಿಯೆಯಲ್ಲಿ ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ ಗಣತಿ ನಮೂನೆಗಳ ಹಂಚಿಕೆ ಹಾಗೂ ಡಿಜಿಟಲೀಕರಣ ಪ್ರಕ್ರಿಯೆಯು ಬಿರುಸಿನಿಂದ ಸಾಗಿದ್ದು, ಇನ್ನು ಕೇವಲ 4,165 ಫಾರ್ಮ್‌ಗಳು (ಶೇಕಡಾ 2.11) ಮಾತ್ರ ಡಿಜಿಟಲೀಕರಣಕ್ಕೆ ಬಾಕಿ ಇವೆ ಕ್ಷೇತ್ರದಲ್ಲಿ ಯಾವುದೇ ಹಂಚಿಕೆಯಾಗದ ಫಾರ್ಮ್‌ಗಳು ಬಾಕಿ ಉಳಿದಿಲ್ಲ, ಬಾಕಿ ಉಳಿದಿರುವ ಗಣತಿ ನಮೂನೆಗಳ ಗಣಕೀಕರಣ ಶೀಘ್ರವಾಗಿ ಪೂರ್ಣಗೊಳಿಸಲಾಗುವುದು ಎಂದರು.

ಮನೆ ಮನೆ ಭೇಟಿ ಸಂದರ್ಭದಲ್ಲಿ ಇಂದಿನವರೆಗೆ ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 10,993 ಮತದಾರರನ್ನು ಸ್ಥಳಾಂತರ, ವಲಸೆ, ಮರಣ, ದ್ವಿಪತಿ (ಡೂಪ್ಲಿಕೇಟ್) ಸೇರಿದಂತೆ ಇತರೆ ಕಾರಣಗಳಿಗಾಗಿ ಗುರುತಿಸಲಾಗಿದೆ. ಒಟ್ಟಾರೆಯಾಗಿ ಜಿಲ್ಲೆಯಲ್ಲಿ 193 ನಮೂನೆಗಳು ಸಂಗ್ರಹವಾಗದೆ ಉಳಿದಿದ್ದು, 5059 ಶಾಶ್ವತ ವಲಸೆ, 3951 ಮರಣ ಪ್ರಕರಣ, 1760 ದ್ವಿಪ್ರತಿ ನಮೂನೆಗಳು ಹಾಗೂ 30 ಇತರೆ ಪ್ರಕರಣಗಳನ್ನು ಪತ್ತೆ ಹಚ್ಚಲಾಗಿದೆ ಎಂದು ತಿಳಿಸಿದರು.

ದಾವಣಗೆರೆ ತಾಲ್ಲೂಕು ತಹಶೀಲ್ದಾರ್‌ ರಾಜೇಶ್‌ ಕುಮಾರ್‌ ಸಿ ಅವರು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending