Connect with us

ದಿನದ ಸುದ್ದಿ

ಉದ್ಯೋಗಾವಕಾಶ ಹೆಚ್ಚಿಸಲು ದಾವಣಗೆರೆಗೆ ಐಟಿ ಕಂಪನಿ ಕರೆತರಲು ಪ್ರಯತ್ನ : ಸಚಿವ ಎಸ್.ಎಸ್.ಮಲ್ಲಿಕಾರ್ಜುನ್

Published

on

ಸುದ್ದಿದಿನ,ದಾವಣಗೆರೆ:ಸ್ವಾತಂತ್ರ್ಯವು ನಮ್ಮ ಹೊಣೆಗಾರಿಕೆ, ದೇಶದ ಏಕತೆ, ಶಾಂತಿ, ಪ್ರಗತಿ ಜೊತೆಗೆ ವಿಜ್ಞಾನ, ತಂತ್ರಜ್ಞಾನ, ಶಿಕ್ಷಣ ಮತ್ತು ಕ್ರೀಡೆ ಸೇರಿದಂತೆ ಅನೇಕ ಕ್ಷೇತ್ರಗಳಲ್ಲಿ ವಿಶ್ವದ ಗಮನ ಸೆಳೆಯುತ್ತಿದ್ದೇವೆ. ಆದರೆ, ಭ್ರಷ್ಟಾಚಾರ, ಅಸಮಾನತೆ, ಪರಿಸರ ಮಾಲಿನ್ಯ, ನಿರುದ್ಯೋಗ ಮುಂತಾದ ಸವಾಲುಗಳನ್ನು ನಿವಾರಿಸಲು ಎಲ್ಲರೂ ಒಟ್ಟಾಗಿ ಶ್ರಮಿಸುವುದು ಇಂದಿನ ಅಗತ್ಯವಾಗಿದೆ ಎಂದು ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್ ತಿಳಿಸಿದರು.

ಅವರು ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾದ 79 ನೇ ಸ್ವಾತಂತ್ರ್ಯೋತ್ಸವದಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಪಥ ಸಂಚಲನದಲ್ಲಿ ಗೌರವ ವಂದನೆ ಸ್ವೀಕರಿಸಿ ತಮ್ಮ ಸ್ವಾತಂತ್ರ್ಯೋತ್ಸವ ಸಂದೇಶದಲ್ಲಿ ಮಾತನಾಡಿದರು.

ಅನೇಕ ಹೋರಾಟಗಾರರ ತ್ಯಾಗ, ಶೌರ್ಯ ಮತ್ತು ದೃಢಸಂಕಲ್ಪದ ಫಲವಾಗಿ, ನಮ್ಮ ದೇಶವು ಬ್ರಿಟೀಷರ ಆಳ್ವಿಕೆಯಿಂದ ಮುಕ್ತಿಯಾಯಿತು. ಮಹಾತ್ಮ ಗಾಂಧೀಜಿ, ನೇತಾಜಿ ಸುಭಾμï ಚಂದ್ರ ಬೋಸ್, ಭಗತ್ ಸಿಂಗ್, ಸರೋಜಿನಿ ನಾಯ್ಡು, ಲಾಲಾ ಲಜಪತ್ ರಾಯ್, ಟಿಪ್ಪು ಸುಲ್ತಾನ್, ಕಿತ್ತೂರು ರಾಣಿ ಚೆನ್ನಮ್ಮ ಸೇರಿದಂತೆ ಅನೇಕ ಹೋರಾಟಗಾರರ ಅಮರ ತ್ಯಾಗವನ್ನು ನೆನಪಿಸಿಕೊಳ್ಳಬೇಕು.

ಕ್ವಿಟ್ ಇಂಡಿಯಾ ಚಳುವಳಿಯಲ್ಲಿ ದಾವಣಗೆರೆಯ ಹಳ್ಳೂರು ನಾಗಪ್ಪ, ಅಕ್ಕಸಾಲೆ ವಿರೂಪಾಕ್ಷಪ್ಪ, ಬಿದಿರಕುಂದಿ ನಿಂಗಪ್ಪ, ಹಮಾಲಿ ತಿಮ್ಮಣ್ಣ, ಹದಡಿ ನಿಂಗಪ್ಪ, ಮಾಗಾನಹಳ್ಳಿ ಹನುಮಂತಪ್ಪ ಇವರುಗಳು ಅಂದು ಬ್ರಿಟೀಷರ ಗುಂಡಿಗೆ ಪ್ರಾಣಾರ್ಪಣೆ ಮಾಡಿ ಹುತಾತ್ಮರಾಗಿದ್ದನ್ನು ನಾವಿಂದು ನೆನಪಿಸಿಕೊಳ್ಳುತ್ತಾ, ಅವರಿಗೂ ಸಹ ನಾವೆಲ್ಲರೂ ಗೌರವ ನಮನಗಳನ್ನು ಸಲ್ಲಿಸುವ ಜೊತೆಗೆ ನಮ್ಮ ಸಂಸ್ಕøತಿ, ಭಾμÉ, ಪರಂಪರೆಗಳನ್ನು ಕಾಪಾಡಿಕೊಂಡು, ನವೀನತೆ ಮತ್ತು ಅಭಿವೃದ್ಧಿಯತ್ತ ಸಾಗೋಣ ಎಂದರು.

ನಮ್ಮ ಸರ್ಕಾರ ಅಧಿಕಾರವಹಿಸಿಕೊಂಡ ನಂತರ ಆರ್ಥಿಕವಾಗಿ ಬಸವಳೆದು ಹೋಗಿದ್ದ ರಾಜ್ಯದ ಜನತೆಗೆ ಆರ್ಥಿಕ ಶಕ್ತಿಯನ್ನು ತುಂಬಬೇಕೆಂಬ ಉದ್ದೇಶದಿಂದ ನುಡಿದಂತೆ ಐದು ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಜಾರಿಗೊಳಿಸಿದೆ. ಇದಕ್ಕಾಗಿ ರೂ.2346 ಕೋಟಿಯಷ್ಟು ಹಣವನ್ನು ಗ್ಯಾರಂಟಿ ಯೋಜನೆಗಳು ಜಾರಿಯಾದಾಗಿನಿಂದ ಜಿಲ್ಲೆಯ ಜನರಿಗಾಗಿ ಖರ್ಚು ಮಾಡಲಾಗಿದೆ ಎಂದರು.

ಈ ವರ್ಷ ಮುಂಗಾರು ಮಳೆ ಬಹಳ ಆಶಾದಾಯಕವಾಗಿದೆ. ರೈತರಿಗೆ ಬೇಕಾದ ಬಿತ್ತನೆ ಬೀಜ, ರಸಗೊಬ್ಬರ ವಿತರಣೆ ಮಾಡಲಾಗಿದೆ. ಈ ವರ್ಷ ತೋಟಗಾರಿಕೆ ಇಲಾಖೆಯಿಂದ ವಿವಿಧ ಯೋಜನೆಗಳ ಮೂಲಕ ಜಿಲ್ಲೆಯ ತೋಟಗಾರಿಕೆ ಅಭಿವೃದ್ದಿಗೆ ರೂ.49.98 ಕೋಟಿ ಅನುದಾನ ನೀಡಲಾಗಿದೆ.

ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಎಲ್ಲಾ ವರ್ಗದ ರೈತರಿಗೆ ಶೇ 90 ರಷ್ಟು ಸಹಾಯಧನವನ್ನು ಒದಗಿಸುವುದರ ಜೊತೆಗೆ 7 ವರ್ಷಗಳ ಹಿಂದೆ ಹನಿ ನೀರಾವರಿಗೆ ಸಹಾಯಧನ ಪಡೆದಿದ್ದಲ್ಲಿ ಅದೇ ಸರ್ವೆ ನಂಬರ್ ಗೆ ಸಹಾಯಧನ ನೀಡಲು ಅವಕಾಶ ಕಲ್ಪಿಸಲಾಗಿದೆ. ಮತ್ತು ರಾಜ್ಯದ ಜೇನುತುಪ್ಪಕ್ಕೆ “ಝೇಂಕಾರ” ಹೆಸರಿನ ಬ್ರ್ಯಾಂಡ್ ನೀಡಲಾಗಿದೆ.

ಕಂದಾಯ ಇಲಾಖೆಯಿಂದ ಕಂದಾಯ ಗ್ರಾಮವನ್ನಾಗಿ ಪರಿವರ್ತಿಸಿ 25581 ನಿವಾಸಿಗಳಿಗೆ ಹಕ್ಕುಪತ್ರ ವಿತರಿಸುವ ಸಂಕಲ್ಪ ಮಾಡಲಾಗಿದೆ. ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ 2.11 ಲಕ್ಷ ಕಡತಗಳನ್ನು ಡಿಟಿಟಲೀಕರಣ ಮಾಡಿ 32302 ಪುಟಗಳ ದಾಖಲೆ ವಿತರಿಸಿ ರಾಜ್ಯದಲ್ಲಿಯೇ ದಾವಣಗೆರೆ ಮೊದಲ ಸ್ಥಾನದಲ್ಲಿದೆ.

ಗ್ರಾಮೀಣ ಕುಡಿಯುವ ನೀರು ಸರಬರಾಜು ಯೋಜನೆಯಡಿ 100 ಗ್ರಾಮಗಳಲ್ಲಿ 24 ಗಂಟೆ ನೀರು ಪೂರೈಕೆ ಮಾಡಲು ಉದ್ದೇಶಿಸಿ ಈಗಾಗಲೇ 50 ಗ್ರಾಮಗಳಲ್ಲಿ 24*7 ನೀರು ಪೂರೈಸಲಾಗುತ್ತಿದೆ. ಜಿಲ್ಲೆಯಲ್ಲಿ 1771 ಅಂಗನವಾಡಿ ಕೇಂದ್ರಗಳು ಕಾರ್ಯನಿರ್ವಹಿಸುತ್ತಿದ್ದು, ಬಾಡಿಗೆ ಕಟ್ಟಡದಲ್ಲಿ ನಡೆಯುತ್ತಿದ್ದ 407 ಕೇಂದ್ರಗಳಿಗೆ ನಿವೇಶನ ಒದಗಿಸಿ ಮುಂದಿನ ದಿನಗಳಲ್ಲಿ ಬಾಡಿಗೆ ಮುಕ್ತ ಅಂಗನವಾಡಿ ಕೇಂದ್ರಗಳ ಜಿಲ್ಲೆ ಎಂದು ಘೋಷಣೆ ಮಾಡಲಾಗುತ್ತದೆ.

ಶಿಕ್ಷಣ, ಆರೋಗ್ಯ, ಮೂಲಭೂತ ಸೌಕರ್ಯ

ಚಿಗಟೇರಿ ಆಸ್ಪತ್ರೆಯಲ್ಲಿ 400 ಹಾಸಿಗೆಯ ಕಟ್ಟಡ ನಿರ್ಮಿಸಲು ರೂ.260 ಕೋಟಿಗಳನ್ನು ಸರ್ಕಾರದಿಂದ ಮಂಜೂರು ಮಾಡಿಸಿ ಶಂಕುಸ್ಥಾಪನೆ ನೆರವೇರಿಸಲಾಗಿದೆ. ಮತ್ತು ಎಸ್.ಎಸ್.ಎಲ್.ಸಿ. ಫಲಿತಾಂಶ ಮತ್ತು ಪಿಯುಸಿ ಫಲಿತಾಂಶ ಸುಧಾರಣೆಗೆ ಕಲಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಮತ್ತು ಸ್ಪರ್ಧಾತ್ಮಕ ಪರೀಕ್ಷೆ ತೆಗೆದುಕೊಳ್ಳುವ ಬಡವರಿಗೆ ಅನುಕೂಲ ಕಲ್ಪಿಸಲು ಸಂಕಲ್ಪ ಕೇಂದ್ರವನ್ನು ತೆರೆಯಲಾಗಿದೆ. ಮುಂದಿನ ದಿನಗಳಲ್ಲಿ ದಾವಣಗೆರೆಗೆ ಸಾಫ್ಟ್‍ವೇರ್ ಕಂಪನಿಗಳನ್ನು ಆಹ್ವಾನಿಸಿ ಉದ್ಯೋಗ ನೀಡಲು ವಿಷನ್ ಗ್ರೂಪ್ ರಚಿಸಿ ಈ ನಿಟ್ಟಿನಲ್ಲಿ ಕೆಲಸ ಮಾಡಲಾಗುತ್ತಿದೆ ಎಂದರು.

ಮಹಾನಗರ ಪಾಲಿಕೆಯಿಂದ ಪಿ.ಬಿ.ರಸ್ತೆಯಿಂದ ಬಸಾಪುರ ರಸ್ತೆವರೆಗೆ ರಾಜಕಾಲುವೆ ಎತ್ತರಿಸುವುದು ಮತ್ತು ರಿಂಗ್ ರಸ್ತೆ ಕಾಮಗಾರಿಯನ್ನು ರೂ.129 ಕೋಟಿ ಮೊತ್ತದಲ್ಲಿ ನಿರ್ಮಿಸಲು ಟೆಂಡರ್ ಹಂತದಲ್ಲಿದೆ. ಜಲಸಿರಿ ಯೋಜನೆಯಡಿ 24*7 ನೀರು ಪೂರೈಕೆಯನ್ನು ಈಗಾಗಲೇ 32 ವಲಯಗಳಲ್ಲಿ ಮಾಡಲಾಗುತ್ತಿದೆ. ತಿಂಗಳಾಂತ್ಯಕ್ಕೆ ಉಳಿದ 18 ವಲಯಗಳಲ್ಲಿ ನಿರಂತರ ಕುಡಿಯುವ ನೀರು ಪೂರೈಕೆ ಮಾಡಲಾಗುತ್ತದೆ ಎಂದರು.

ಆಕರ್ಷಕ ಪಥ ಸಂಚಲನ

ಸ್ವಾತಂತ್ರ್ಯ ದಿನಾಚರಣೆಯ ಪಥ ಸಂಚಲನದಲ್ಲಿ ಪ್ರಶಾಂತ್ ಅವರು ಕವಾಯತು ಪಥ ಸಂಚಾಲಕರಾಗಿ ಕಾರ್ಯನಿರ್ವಹಿಸಿದರು. 30 ವಿವಿಧ ಘಟಕಗಳು ಭಾಗವಹಿಸಿದ್ದವು ಅದರಲ್ಲಿ ಸಶಸ್ತ್ರ ಮೀಸಲು ಪಡೆ, ನಗರ ಉಪವಿಭಾಗ ಪೊಲೀಸ್ ತಂಡ, ಸಿವಿಲ್ ಪೆÇಲೀಸ್, ಗೃಹ ರಕ್ಷಕದಳ, ಅರಣ್ಯ ಇಲಾಖೆ ತಂಡ, ಅಗ್ನಿ ಶಾಮಕ ದಳ, ಗೃಹರಕ್ಷಕ ಮಹಿಳಾ ದಳ, ಕಂದಾಯ ಇಲಾಖೆ, ಮಹಾನಗರ ಪಾಲಿಕೆ, ಕಂದಾಯ, ಡಿಆರ್‍ಎಮ್, ಜಿಎಫ್‍ಜಿ ಕಾಲೇಜ್, ಎವಿಕೆ, ಸಿದ್ದಗಂಗಾ ಶಾಲೆ ಸೇರಿದಂತೆ ವಿವಿಧ ಶಾಲಾ-ಕಾಲೇಜು ವಿದ್ಯಾರ್ಥಿಗಳ ತಂಡ, ಪೊಲೀಸ್ ಬ್ಯಾಂಡ್ ತಂಡದಿಂದ ಆಕರ್ಷಕ ಪಥ ಸಂಚಲನ ನಡೆಸಲಾಯಿತು.

ಪಥ ಸಂಚಲನದಲ್ಲಿ ಭಾಗವಹಿಸಿದ ಎಸ್.ಎಸ್.ಎನ್‍ಪಿಎಸ್ ಶಾಲೆ ಉತ್ತಮ ಸಮವಸ್ತ್ರ ವಿಜೇತ ಶಾಲೆಯಾಗಿ ಗುರುತಿಸಿಲಾಯಿತು. ಈ ಬಾರಿಯ ಪಥ ಸಂಚಲನದಲ್ಲಿ ಮಹಾನಗರ ಪಾಲಿಕೆ, ಕಂದಾಯ ಇಲಾಖೆ ಮತ್ತು ಪಿ.ಎಸ್.ಇ.ಎಂ.ಆರ್ ತೋಳಹುಣಸೆ ಪೈಪ್ ಬ್ಯಾಂಡ್ ಜೂನಿಯರ್ ತಂಡಗಳು ವಿಶೇಷ ತಂಡಗಳಾಗಿ ಭಾಗವಹಿಸಿದ್ದವು.

ವಿದ್ಯಾರ್ಥಿಗಳಿಂದ ಆಕರ್ಷಕ ದೇಶಭಕ್ತಿ ಗೀತೆಗಳ ನೃತ್ಯ ರೂಪಕ

ವಿಶ್ವಚೇತನ ಶಾಲೆಯಿಂದ ಹಿಂದೂಸ್ತಾನ್ ನೃತ್ಯವನ್ನು, ಲಲಿತಾ ಇಂಟರ್ ನ್ಯಾಷನಲ್ ಶಾಲೆಯಿಂದ ಇವರಿಂದ ಗಾಂಧಿ ಗೋಖಲೆ ಶಾಂತಿ ಇಂಡಿಯಾ, ಗೋಲ್ಡನ್ ಪಬ್ಲಿಕ್ ಶಾಲೆಯಿಂದ ಸಂಕೋಲೆಯಿಂದ ಸ್ವಾತಂತ್ರ್ಯದೆಡೆಗೆ ರೂಪಕ ಪ್ರದರ್ಶನವನ್ನು ಸಾವಿರಾರು ವಿದ್ಯಾರ್ಥಿಗಳಿಂದ ಪ್ರದರ್ಶನ ಮಾಡಲ್ಪಟ್ಟಿತು.ಹಾಗೂ ಪಿಎಸ್‍ಎಸ್‍ಎಂಆರ್ ಶಾಲೆಯ ಮಕ್ಕಳು ವಿಶೇಷ ಬ್ಯಾಂಡ್ ವಾದ್ಯವನ್ನು ಪ್ರಸ್ತುತಪಡಿಸಿದರು.

ಬಹುಮಾನ ಪಡೆದಂತಹ ಶಾಲೆಗಳ ವಿವರ

ಗೋಲ್ಡನ್ ಪಬ್ಲಿಕ್ ಶಾಲೆ ಪ್ರಥಮ ಬಹುಮಾನ, ವಿಶ್ವಚೇತನ ಶಾಲೆ ದ್ವಿತೀಯ ಬಹುಮಾನ, ಲಲಿತಾ ಇಂಟರ್ ನ್ಯಾಷನಲ್ ಶಾಲೆ ತೃತೀಯ ಬಹುಮಾನ ಪಡೆಯಲಾಯಿತು. ಹಾಗೂ ಪಿಎಸ್‍ಎಸ್‍ಎಂಆರ್ ಶಾಲೆಯ ಮಕ್ಕಳು ವಿಶೇಷ ಬ್ಯಾಂಡ್ ವಾದ್ಯವನ್ನು ನುಡಿಸಿದ ಪುಟಾಣಿಗಳಿಗೆ ವಿಶೇಷ ಬಹುಮಾನ ನೀಡಲಾಯಿತು.

ಡ್ರೋನ್ ಮೂಲಕ ರೈತರು ತಮ್ಮ ವಿವಿಧ ಬೆಳೆಗಳಿಗೆ ನ್ಯಾನೋ ಗೊಬ್ಬರ, ಔಷಧಿ ಸಿಂಪಡಿಸಲು ಸರಳ ಮತ್ತು ಕಡಿಮೆ ವೆಚ್ಚದಲ್ಲಿ ಬಳಕೆ ಮಾಡುವ ಬಗ್ಗೆ ಇಂಜಿನಿಯರ್ ಹೇಮಂತ್ ಡ್ರೋನ್ ಪ್ರದರ್ಶನ ಮಾಡಿದರು.

ದಾವಣಗೆರೆ ಲೋಕಸಭಾ ಸದಸ್ಯರಾದ ಡಾ.ಪ್ರಭಾ ಮಲ್ಲಿಕಾರ್ಜುನ್, ಪೊಲೀಸ್ ಮಹಾನಿರೀಕ್ಷಕರಾದ ಡಾ; ರವಿಕಾಂತೇಗೌಡ, ಜಿಲ್ಲಾಧಿಕಾರಿ ಗಂಗಾಧರಸ್ವಾಮಿ.ಜಿ.ಎಂ, ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗಿತ್ತೆ ಮಾಧವ್ ವಿಠ್ಠಲ್ ರಾವ್, ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್, ದೂಡಾ ಅಧ್ಯಕ್ಷ ದಿನೇಶ್ ಕೆ ಶೆಟ್ಟಿ, ಗ್ಯಾರಂಟಿ ಯೋಜನೆಗಳ ಜಿಲ್ಲಾ ಅನುಷ್ಟಾನ ಸಮಿತಿ ಅಧ್ಯಕ್ಷರಾದ ಶಾಮನೂರು ಟಿ.ಬಸವರಾಜ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು, ಸಾರ್ವಜನಿಕರು ಭಾಗವಹಿಸಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಕೆ.ಆರ್.ಐ.ಡಿ.ಎಲ್, ಮಾಯಕೊಂಡ ವ್ಯಾಪ್ತಿ ; 20 ಕೋಟಿ ಅನುದಾನ : ತನಿಖೆಗೆ ಒಳಪಡಿಸಲು ಲೋಕಾಗೆ ದೂರು

Published

on

ಸುದ್ದಿದಿನ,ದಾವಣಗೆರೆ: ದಾವಣಗೆರೆ ಜಿಲ್ಲಾ ಕೆ‌ಆರ್.ಐ.ಡಿ.ಎಲ್  ವಿಭಾಗ-2ರ ವ್ಯಾಪ್ತಿಗೆ 2023-24ನೇ ಸಾಲಿನಲ್ಲಿ ಮಾನ್ಯ ಮುಖ್ಯಮಂತ್ರಿಗಳ ವಿಶೇಷ ಮಂಜೂರಾತಿ ಕಾರ್ಯಕ್ರಮದಡಿ ದಾವಣಗೆರೆ ಜಿಲ್ಲೆ ಮಾಯಕೊಂಡ ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ಬಿಡುಗಡೆಯಾದ ರೂ. 20 ಕೋಟಿ ಮೊತ್ತದ 51 ಕಾಮಗಾರಿಗಳನ್ನು ಸೂಕ್ತ ತನಿಖೆಗೆ ಒಳಪಡಿಸುವಂತೆ ದೂರು ನೀಡಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ಮಾಯಕೊಂಡ  ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ 2023-24ನೇ ಸಾಲಿನಲ್ಲಿ ಬಿಡುಗಡೆಯಾಗಿರುವ ರೂ. 20 ಕೋಟಿ ಅನುದಾನದಲ್ಲಿ ನಡೆದಿರುವ 51 ಕಾಮಗಾರಿಗಳ ಬಗ್ಗೆ ಅನುಮಾನ ಕಂಡುಬಂದಿದ್ದು, ಮಾಹಿತಿಹಕ್ಕು ಅಡಿಯಲ್ಲಿ ದಾಖಲೆ ಕೋರಿದಾಗ ಬಹುತೇಕ ಕಾಮಗಾರಿಗಳು ನಡೆದಿರುವುದಿಲ್ಲ ಎಂಬುದಾಗಿ ಹಿಂಬರಹ ನೀಡಿರುತ್ತಾರೆ. ಹೀಗಾಗಿ 51 ಕಾಮಗಾರಿಗೆ ಸಂಬಂಧಿಸಿದಂತೆ ನಿತೀನ್ ಎಸ್. ಜಾಧವ್, ಸಹಾಯಕ ಕಾರ್ಯಪಾಲಕ ಅಭಿಯಂತರು, ಕೆ.ಆರ್.ಐ.ಡಿ.ಎಲ್, ಮಾಯಕೊಂಡ ಇವರ ವಿರುದ್ಧ ಪ್ರಕರಣ ದಾಖಲಿಸಿ ರೂ. 20 ಕೋಟಿ ಮೊತ್ತದಲ್ಲಿ ನಡೆದಿರುವ 51 ಕಾಮಗಾರಿಗಳನ್ನು ನಿಯಮಾನುಸಾರ ತನಿಖೆಗೆ ಒಳಪಡಿಸುವಂತೆ ದೂರು ನೀಡಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

Continue Reading

ದಿನದ ಸುದ್ದಿ

ಕಾಲೇಜು ಶಿಕ್ಷಣ ಇಲಾಖೆ ಆಯುಕ್ತೆ ಮಂಜುಶ್ರೀ, ಉನ್ನತ ಶಿಕ್ಷಣ ಇಲಾಖೆ ಕಾರ್ಯದರ್ಶಿ ಖುಷ್ಬೂ ಗೋಯಲ್ ಚೌದರಿ ವಿರುದ್ಧ ಲೋಕಾಗೆ ದೂರು

Published

on

ಸುದ್ದಿದಿನ,ದಾವಣಗೆರೆ:ಕಾಲೇಜು ಶಿಕ್ಷಣ ಇಲಾಖೆಯ ವ್ಯಾಪ್ತಿಯಲ್ಲಿ ದ್ವಿತೀಯ ದರ್ಜೆ ಸಹಾಯಕರಿಂದ ಪ್ರಥಮ ದರ್ಜೆ ಸಹಾಯಕ ಹುದ್ದೆಗೆ ನೀಡಿರುವ ಮುಂಬಡ್ತಿಯ ಸ್ಥಳ ನಿಯುಕ್ತಿಗೆ ಸಂಬAಧಿಸಿದ ಆನ್‌ಲೈನ್ ಕೌನ್ಸಿಲಿಂಗ್‌ನಲ್ಲಿ ಪಾರದರ್ಶಕತೆಯನ್ನು ಉಲ್ಲಂಘಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯ ಲೋಪದ ಅಡಿಯಲ್ಲಿ ಕಾಲೇಜು ಶಿಕ್ಷಣ ಇಲಾಖೆಯ ಹಿಂದಿನ ಆಯುಕ್ತೆ ಮಂಜುಶ್ರೀ, ಉನ್ನತ ಶಿಕ್ಷಣ ಇಲಾಖೆ ಕಾರ್ಯದರ್ಶಿ ಖುಷ್ಬೂ ಗೋಯಲ್ ಚೌದರಿ ವಿರುದ್ಧ ಲೋಕಾಯುಕ್ತಗೆ ದೂರು ನೀಡಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ಕಾಲೇಜು ಶಿಕ್ಷಣ ಇಲಾಖೆಯಲ್ಲಿ ಖಾಲಿ ಇರುವ ಪ್ರಥಮ ದರ್ಜೆ ಸಹಾಯಕರ ಹುದ್ದೆಗಳನ್ನು ಸೇವಾ ಜೇಷ್ಠತೆ ಹಾಗೂ ಅರ್ಹತೆ ಆಧಾರದ ಮೇಲೆ ಅರ್ಹ ದ್ವಿತೀಯ ದರ್ಜೆ ಸಹಾಯಕರ ವೃಂದದಿAದ ಮುಂಬಡ್ತಿ ಮೂಲಕ ಭರ್ತಿ ಮಾಡಲು ಮುಂದಾಗಿದ್ದು, ಖಾಲಿ ಇರುವ ಪ್ರಥಮ ದರ್ಜೆ ಸಹಾಯಕರ ಹುದ್ದೆಗಳ ಸಂಖ್ಯೆಗೆ ಅನುಗುಣವಾಗಿ ದಿನಾಂಕ: 12-11-2025 ರಂದು ಆನ್‌ಲೈನ್ ಕೌನ್ಸಿಲಿಂಗ್ ನಡೆಸಿ, ಸ್ಥಳ ನಿಯುಕ್ತಿ ಮಾಡಿ, ಕೌನ್ಸಿಲಿಂಗ್ ಮೂಲಕ ಸ್ಥಳ ಆಯ್ಕೆ ಮಾಡಿಕೊಂಡ ಪ್ರಥಮ ದರ್ಜೆ ಸಹಾಯಕರ ಪಟ್ಟಿಯನ್ನು ಬಿಡುಗಡೆಗೊಸಲಾಗಿರುತ್ತದೆ.

ಆದರೆ ಕಾಲೇಜು ಶಿಕ್ಷಣ ಇಲಾಖೆಯಿಂದ ಹೊರಡಿಸಿರುವ ಪಟ್ಟಿಯಲ್ಲಿ ಆಯುಕ್ತರ ಕಛೇರಿ, ಬೆಂಗಳೂರು ಇಲ್ಲಿ 03 ಖಾಲಿ ಇರುವ ಪ್ರಥಮ ದರ್ಜೆ ಸಹಾಯಕರ ಹುದ್ದೆಯನ್ನು ಗುರುತಿಸಲಾಗಿರುತ್ತದೆ. ಆದರೆ ಆದೇಶ ಪ್ರತಿಯಲ್ಲಿ ದ್ವಿತೀಯ ದರ್ಜೆ ಸಹಾಯಕರಿಂದ ಪ್ರಥಮ ದರ್ಜೆ ಸಹಾಯಕರ ಮುಂಬಡ್ತಿಯಲ್ಲಿ 10 ಪ್ರಥಮ ದರ್ಜೆ ಸಹಾಯಕರ ಹುದ್ದೆಗೆ ಅವಕಾಶ ಕಲ್ಪಿಸಲಾಗಿದೆ. ಕೇಂದ್ರ ಕಛೇರಿ, ಬೆಂಗಳೂರು ಇಲ್ಲಿಗೆ ಆಯ್ಕೆ ಮಾಡಿಕೊಂಡಿರುವ 10 ಅಭ್ಯರ್ಥಿಗಳಲ್ಲಿ 05 ಅಭ್ಯರ್ಥಿಗಳನ್ನು ದ್ವಿತೀಯ ದರ್ಜೆ ಸಹಾಯಕರಿಂದ ಪ್ರಥಮ ದರ್ಜೆ ಸಹಾಯಕರ ಹುದ್ದೆಗೆ ಮುಂಬಡ್ತಿ ನೀಡಿ ಯಥಾ ಪ್ರಕಾರ ಮುಂದುವರೆಸಲಾಗಿರುತ್ತದೆ.

ಹೀಗಾಗಿ ಸದರಿ ಮುಂಬಡ್ತಿ ಪ್ರಕ್ರಿಯೆಯು ನಿಯಮಬಾಹಿರವಾಗಿದ್ದು ಸೂಕ್ತ ಕ್ರಮ ಕೈಗೊಳ್ಳುವಂತೆ ದೂರು ನೀಡಿ 10 ತಿಂಗಳು ಕಳೆಯುತ್ತ ಬಂದರೂ ಯಾವುದೇ ಕ್ರಮ ಕೈಗೊಳ್ಳದ ಕಾಲೇಜು ಶಿಕ್ಷಣ ಇಲಾಖೆಯ ಹಿಂದಿನ ಆಯುಕ್ತೆ ಮಂಜುಶ್ರೀ, ಉನ್ನತ ಶಿಕ್ಷಣ ಇಲಾಖೆ ಕಾರ್ಯದರ್ಶಿ ಖುಷ್ಬೂ ಗೋಯಲ್ ಚೌದರಿ ವಿರುದ್ಧ ದೂರು ನೀಡಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ಮಾಹಿತಿ ನೀಡಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂತರಂಗ

ದೇವನಗರಿ ಸುದ್ದಿದಿನ – ದೀಪಾವಳಿ ವಿಶೇಷ ಸಂಚಿಕೆ 2026 : ಕತಾ ಸ್ಪರ್ಧೆ ; ಅನಂತ ಕುಣಿಗಲ್ ಅವರ ಸಂಸ‌ ಕತೆ ಪಡೆದ ಪ್ರಥಮ ಸ್ಥಾನ ಅಮಾನ್ಯ ; ಪರಿಷ್ಕೃತ ಫಲಿತಾಂಶ ‌ಪ್ರಕಟ

Published

on

ಸುದ್ದಿದಿನ,ದಾವಣಗೆರೆ:ದೇವನಗರಿ ಸುದ್ದಿದಿನ – ದೀಪಾವಳಿ ವಿಶೇಷ ಸಂಚಿಕೆ 2026ರ ಕತಾ ಸ್ಪರ್ಧೆಯ ನಿಯಮಾವಳಿಯನ್ನು ಉಲಂಘಿಸಿರುವ ಕಾರಣ ಅನಂತ ಕುಣಿಗಲ್ ಅವರ ಸಂಸ‌ ಕತೆ ಪಡೆದ ಪ್ರಥಮ ಸ್ಥಾನವನ್ನು ಅಮಾನ್ಯ ಮಾಡಲಾಗಿದೆ ಎಂದು ಪತ್ರಿಕೆಯ ಸಂಪಾದಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕತೆ-ಕವಿತೆ ಸ್ಪರ್ಧೆಯ ನಿಯಮಾವಳಿಗಳ ಪ್ರಕಾರ ‘ “ಸ್ವತಂತ್ರ ರಚನೆಯಾಗಿರ ಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು” ಎನ್ನುವ ನಿಯಮಾವಳಿಗಳನ್ನು ಉಲಂಘಿಸಿರುವುದರಿಂದ ಪ್ರಥಮ ಸ್ಥಾನ ಪಡೆದ ” ಸಂಸ” ಕತೆಯನ್ನು ಅಮಾನ್ಯಗೊಳಿಸಲಾಗಿದೆ.

‘ಸಂಸ’ ಕತೆಯ ಕತೆಗಾರರಾದ ಅನಂತ ಕುಣಿಗಲ್ ಅವರು
ಸ್ವತಃ ತಮ್ಮ ಫೇಸ್ ಬುಕ್ ವಾಲ್ ನಲ್ಲಿ ‘ ಸಂಸ’ ಕತೆಯು ಈ ಹಿಂದೆ ಯಾವುದೋ ಕತಾ ಸ್ಪರ್ಧೆಯಲ್ಲಿ ಸಮಾಧಾನಕರ ಬಹುಮಾನ ಪಡೆದಿತ್ತು. ಮತ್ತೊಂದೆಡೆ ತೃತೀಯ, ಮಗದೊಂದೆಡೆ ದ್ವಿತೀಯ ಬಹುಮಾನ ಲಭಿಸಿತ್ತು, ಅಲ್ಲದೆ ‘ಟೋಟೋ’ ಅವಾರ್ಡ್ ನ ಅಂತಿಮ ಸುತ್ತಿಗೆ ಎರಡು ಬಾರಿ ಶಾರ್ಟ್ ಲಿಸ್ಟ್ ಆಗಿತ್ತು ಎಂದು ಬರೆದು ಕೊಂಡಿರುತ್ತಾರೆ. ಆದಕಾರಣ ಈ ಕ್ರಮವನ್ನು ಕೈಗೊಳ್ಳಲಾಗಿದೆ.

ಕತಾ ಸ್ಪರ್ಧೆಯ ಪರಿಷ್ಕೃತ ಫಲಿತಾಂಶ

ಕತಾ ಸ್ಪರ್ಧೆಯಲ್ಲಿ ರವಿಮುಡೋಡಿ ಅವರ ʼಅರ್ಧ ರೇಖೆಯ ಚಿತ್ರʼ  ಕತೆಗೆ ಪ್ರಥಮ ಬಹುಮಾನ, ವಿಜಯ ಶ್ರೀ ಹಾಲಾಡಿ ಅವರ ʼಮಳೆಹಾಡುʼ ಕತೆಗೆ ದ್ವಿತೀಯ ಬಹುಮಾನ ಹಾಗೂ ಅಜೇಯ ಸಿಂಹ ಕೆ.ವಿ ಅವರ ‘ ಮಾರ್ಜಕದ ಶ್ರೀಮುಡಿ’ ಕತೆಗೆ  ತೃತೀಯ ಬಹುಮಾನ ದೊರೆತಿದೆ ಎಂದು ಸುದ್ದಿದಿನ ಪತ್ರಿಕೆ ಸಂಪಾದಕ ಮಾಹಿತಿ ನೀಡಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending