ಕ್ರೀಡೆ
ದಾವಣಗೆರೆ | ಕ್ರೀಡಾ ಕ್ಷೇತ್ರದಲ್ಲಿ ಸಾಧನೆ : ಏಕಲವ್ಯ ಮತ್ತು ಜೀವಮಾನ ಸಾಧನೆ ಪ್ರಶಸ್ತಿಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಕ್ರೀಡಾ ಕ್ಷೇತ್ರದಲ್ಲಿ ಅಸಾಧಾರಣ ಪ್ರತಿಭೆಯನ್ನು ತೋರಿರುವ ರಾಜ್ಯದ ಕ್ರೀಡಾಪಟುಗಳಿಗೆ ಏಕಲವ್ಯ ಹಾಗೂ ಜೀವಮಾನ ಸಾಧನೆ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುವುದು.
ಅದರಂತೆ ಕ್ರೀಡಾ ಕ್ಷೇತ್ರದಲ್ಲಿ ಅಸಾಧಾರಣ ಪ್ರತಿಭೆಯನ್ನು ತೋರಿರುವ ರಾಜ್ಯದ ಪ್ರತಿಭಾನ್ವಿತ ಕ್ರೀಡಾಪಟುಗಳಿಂದ 2019ನೇ ಸಾಲಿನ ಏಕಲವ್ಯ ಪ್ರಶಸ್ತಿಗಾಗಿ ಆನ್‍ಲೈನ್ ಮೂಲಕ ಅರ್ಜಿಗಳನ್ನು ಈ ವೆಬ್‍ಸೈಟ್ ನಲ್ಲಿ https://karunadu.karnataka.gov.in/dyesಆಹ್ವಾನಿಸಲಾಗಿದೆ. ಪ್ರಯುಕ್ತ ಅರ್ಹ ಕ್ರೀಡಾಪಟುಗಳು ಆನ್‍ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ 08192-237480 ಸಂಪರ್ಕಿಸಬಹುದಾಗಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243