ಕ್ರೀಡೆ
ಈ ಕ್ಷಣದ ಪ್ರಮುಖ ಸುದ್ದಿಗಳು
ರಾಜ್ಯದಲ್ಲಿ ಜರುಗಿದ ಈ ಕ್ಷಣದ ಕೆಲವು ಸುದ್ದಿಗಳ ಪ್ರಮುಖಾಂಶಗಳು ( ಕನ್ನಡ ನ್ಯೂಸ್; ಕನ್ನಡ ಸುದ್ದಿ)
- ರಾಜ್ಯಾದ್ಯಂತ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತೆ ವಹಿಸದಿದ್ದರೆ ಕುಡಿಯುವ ನೀರು ಕಲುಷಿತಗೊಳ್ಳುವ ಪ್ರಕರಣ ಹೆಚ್ಚಾಗುವ ಸಾಧ್ಯತೆಯಿದೆ. ಹಾಗಾಗಿ ಗ್ರಾಮೀಣ ನೀರು ಸರಬರಾಜು ಇಲಾಖೆಯ ಇಂಜಿನಿಯರ್‌ಗಳು ಕಟ್ಟೆಚ್ಚರ ವಹಿಸಬೇಕು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಸೂಚಿಸಿದ್ದಾರೆ.
- ಪೆಟ್ರೋಲ್ ಹಾಗೂ ಡೀಸೆಲ್ ಮಾರಾಟ ತೆರಿಗೆ ಏರಿಕೆ ಹಾಗೂ ಇತರ ಬೆಲೆ ಏರಿಕೆ ನೀತಿ ವಿರೋಧಿಸಿ ಬಿಜೆಪಿ ಬೆಂಗಳೂರಿನಲ್ಲಿಂದು ವಿಧಾನಸೌಧದವರೆಗೆ ಸೈಕಲ್ ಜಾಥಾ ನಡೆಸಿತು. ಪಕ್ಷದ ಕಚೇರಿಯಿಂದ ವಿಧಾನಸೌಧದವರೆಗೆ ಜಾಥಾದಲ್ಲಿ ಹೊರಟ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಸೇರಿದಂತೆ ಹಲವು ನಾಯಕರನ್ನು ಪೊಲೀಸರು ವಶಕ್ಕೆ ಪಡೆದು ನಂತರ ಬಿಡುಗಡೆಗೊಳಿಸಿದರು.
- ಪ್ರತಿಯೊಂದು ವಾಹನಗಳಿಗೆ ಕೇಂದ್ರ ಮೋಟಾರು ವಾಹನ ಕಾಯ್ದೆಯಡಿ ನಮೂದಿಸಿರುವ ಮಾನದಂಡದಂತೆ ಎಲ್‌ಇಡಿ ದೀಪಗಳನ್ನು ಅಳವಡಿಸದಿದ್ದರೆ ವಾಹನಗಳ ಸವಾರರುಗಳ ಮೇಲೆ ಪ್ರಕರಣ ದಾಖಲಿಸಲಾಗುವುದು ಎಂದು ಸಂಚಾರ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಅಲೋಕ್ ಕುಮಾರ್ ತಿಳಿಸಿದ್ದಾರೆ.
- ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಶುಭ ಕೋರಿದ್ದಾರೆ. ಪ್ರಧಾನಿ ತಮ್ಮ ಸಾಮಾಜಿಕ ಮಾಧ್ಯಮ ಪೋಸ್ಟ್ನಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು, ದೇಶಕ್ಕಾಗಿ ಅಪ್ರತಿಮ ಸೇವೆಯನ್ನು ಸಲ್ಲಿಸುತ್ತಿದ್ದು, ನಮಗೆಲ್ಲರಿಗೂ ಸ್ಫೂರ್ತಿಯಾಗಿದ್ದಾರೆ ಎಂದು ಹೇಳಿದ್ದಾರೆ.
- ತಮಿಳುನಾಡಿನ ಕಲ್ಲಕುರಿಚಿಯಲ್ಲಿ ನಡೆದ ಕಳ್ಳಬಟ್ಟಿ ಸರಾಯಿ ದುರಂತದಲ್ಲಿ 33 ಮಂದಿ ಮೃತಪಟ್ಟಿದ್ದು, 60ಕ್ಕೂ ಅಧಿಕ ಮಂದಿ ನಾನಾ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಳ್ಳಬಟ್ಟಿ ಸರಾಯಿ ಸೇವಿಸಿ ಅಸ್ವಸ್ಥರಾಗಿದ್ದ ಜನರನ್ನು ಕಲ್ಲಕುರಿಚಿ, ಸೆಲಂ ಮತ್ತು ಪುದುಚೇರಿಯ ಜೆಐಪಿಎಂಇಆರ್ ಆಸ್ಪತ್ರೆಗೆ ದಾಖಲಿಸಲಾಗಿದೆ.
- ಕೇಂದ್ರ ಸರ್ಕಾರದ ಆದೇಶದಂತೆ 2019ರ ಏಪ್ರಿಲ್‌ಗಿಂತ ಮುಂಚಿತವಾಗಿ ನೋಂದಣಿಯಾಗಿರುವ ವಾಹನಗಳಿಗೆ ಹೈಸೆಕ್ಯೂರಿಟಿ ನೋಂದಣಿ ಫಲಕ ಅಳವಡಿಕೆ ಗಡುವನ್ನು ರಾಜ್ಯ ಸರ್ಕಾರ ಸೆಪ್ಟೆಂಬರ್ 15ರವರೆಗೆ ವಿಸ್ತರಿಸಿ ಆದೇಶ ಹೊರಡಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243