ದಿನದ ಸುದ್ದಿ
ಪ್ರಚಾರದ ಕಣ ಬಿರುಸು ; ಮತದಾರರ ಓಲೈಕೆಗೆ ರಾಜಕೀಯ ಪಕ್ಷಗಳ ಕಸರತ್ತು
ಸುದ್ದಿದಿನ ಡೆಸ್ಕ್ : ರಾಜ್ಯ ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿರುವಂತೆಯೇ ಪ್ರಚಾರದ ಕಣ ದಿನದಿಂದ ದಿನಕ್ಕೆ ಬಿರುಸುಗೊಳ್ಳುತ್ತಿದೆ. ಮತದಾರರ ಒಲೈಕೆಗೆ ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಪ್ರಯತ್ನಿಸುತ್ತಿದ್ದಾರೆ. ಬೆಳಗಾವಿ ಜಿಲ್ಲೆ ಕಾಗವಾಡದಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ನಡೆಸಿದರು.
ಉತ್ತರ ಕನ್ನಡ ಜಿಲ್ಲೆ ಕಾರವಾರದಲ್ಲಿಂದು ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ನಡೆಸಿದ ಕೇಂದ್ರ ಪ್ರವಾಸೋದ್ಯಮ ಖಾತೆ ರಾಜ್ಯ ಸಚಿವ ಶ್ರೀಪಾದ ನಾಯ್ಕ, ಮೇ 3 ರಂದು ಪ್ರಧಾನಿ ನರೇಂದ್ರ ಮೋದಿ ಉತ್ತರ ಕನ್ನಡ ಜಿಲ್ಲೆಯಲ್ಲಿ ಪ್ರಚಾರ ನಡೆಸಲಿದ್ದು, ಸುಮಾರು 3 ಲಕ್ಷಕ್ಕೂ ಹೆಚ್ಚು ಕಾರ್ಯಕರ್ತರು ಪಾಲ್ಗೊಳ್ಳುವ ನಿರೀಕ್ಷೆಯಿದೆ ಎಂದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ಕೇಂದ್ರ ಸಂಪರ್ಕ ಖಾತೆ ರಾಜ್ಯ ಸಚಿವ ದೇವೂ ಸಿಂಹ ಚೌಹಾಣ ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ನಡೆಸಿದರು.
ಮಂಡ್ಯ ಮತ್ತು ವಿಜಯಪುರದಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ರೋಡ್ ಶೋ ನಡೆಸಿ, ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ನಡೆಸಿದರು. ಸಂಸದರಾದ ಪ್ರತಾಪ್ ಸಿಂಹ, ಸುಮಲತಾ ಅಂಬರೀಶ್, ಸಚಿವ ಡಾ.ಸಿ.ಎನ್.ಅಶ್ವತ್ಥ ನಾರಾಯಣ ಮತ್ತಿತರರು ರೋಡ್ ಶೋನಲ್ಲಿ ಪಾಲ್ಗೊಂಡರು.
ಬೆಳಗಾವಿ ಜಿಲ್ಲೆ ಬೈಲಹೊಂಗಲದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಿಜೆಪಿ ಅಭ್ಯರ್ಥಿ ಪರ ರೋಡ್ ಶೋ ನಡೆಸಿ, ಪ್ರಚಾರ ನಡೆಸಿದರು.ಚಿಕ್ಕಮಗಳೂರು ಜಿಲ್ಲೆಯ ಬಾಳೆಹೊನ್ನೋರು ಹಾಗೂ ಚಿತ್ರದುರ್ಗ ಜಿಲ್ಲೆ ಹಿರಿಯೂರಿನಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಪಕ್ಷದ ಅಭ್ಯರ್ಥಿ ಪರ ಮತಯಾಚಿಸಿದರು. ವಿಜಯನಗರ ಜಿಲ್ಲೆ ಹೂವಿನಹಗಡಗಲಿಯಲ್ಲಿ ಕಾಂಗ್ರೆಸ್ ಮುಖಂಡ ಸಿದ್ದರಾಮಯ್ಯ ಪಕ್ಷದ ಅಭ್ಯರ್ಥಿ ಪರ ಚುನಾವಣಾ ಪ್ರಚಾರ ನಡೆಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿ ವಾಸವಿದ್ದರೆ ಮಾಹಿತಿ ಕೊಡಿ
ಸುದ್ದಿದಿನ,ದಾವಣಗೆರೆ:ಹರಿಹರ ನಗರಸಭೆ ವ್ಯಾಪ್ತಿಯಲ್ಲಿನ ಬೀದಿ ನಾಯಿಗಳ ಉಪಟಳ ತಡೆಯಲು ಖಾಸಗಿ ಹಾಗೂ ಸರ್ಕಾರಿ ಶಿಕ್ಷಣ ಸಂಸ್ಥೆಗಳು, ಖಾಸಗಿ ಮತ್ತು ಸರ್ಕಾರಿ ಆಸ್ಪತೆಗಳು, ಕ್ರೀಡಾ ಸಂಕೀರ್ಣ, ಬಸ್ ನಿಲ್ದಾಣ, ರೈಲ್ವೇ ನಿಲ್ದಾಣಗಳಲ್ಲಿ ಯಾವುದೇ ಬೀದಿ ನಾಯಿಗಳು ವಾಸವಿದ್ದಲ್ಲಿ ಮಾಹಿತಿಯನ್ನು ಹರಿಹರ ಪೌರಾಯುಕ್ತರಿಗೆ ನೀಡಲು ತಿಳಿಸಲಾಗಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ | ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ರೇಣುಕಾ ದೇವಿ ವಿರುದ್ಧ ಲೋಕಾಗೆ ದೂರು
ಸುದ್ದಿದಿನ,ದಾವಣಗೆರೆ: ದಾವಣಗೆರೆ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ ಖರೀದಿಸಿದ ಸಾಮಾಗ್ರಿಗಳ ಬಿಲ್ಲಿನ ದಿನಾಂಕಕ್ಕೂ ಹಾಗೂ ದಾಸ್ತಾನು ವಹಿಯಲ್ಲಿ ನಮೂದಾಗಿರುವ ದಿನಾಂಕಕ್ಕೂ ಇರುವ ವ್ಯತ್ಯಾಸಕ್ಕೆ ಸ್ಪಷ್ಟನೆ ಕೋರಿ 3 ತಿಂಗಳು ಕಳೆದರೂ ಯಾವುದೇ ಸ್ಪಷ್ಟನೆ ನೀಡದೆ ಕರ್ತವ್ಯ ಲೋಪ ಎಸಗಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ರೇಣುಕಾ ದೇವಿ ವಿರುದ್ಧ ಲೋಕಾಯುಕ್ತಕ್ಕೆ ವಕೀಲ ಡಾ.ಕೆ.ಎ.ಓಬಳೇಶ್ ದೂರು ನೀಡಿದ್ದಾರೆ.
ದಾವಣಗೆರೆ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ 2020-21 ರಿಂದ 2024-25ನೇ ಸಾಲಿನ ಅವಧಿಯ ದಾಸ್ತಾನು ವಹಿಯನ್ನು ಮಾಹಿತಿಹಕ್ಕು ಅಧಿನಿಯಮ ಅಡಿಯಲ್ಲಿ ಪಡೆದು ಪರಿಶಿಲನೆ ಮಾಡಿದಾಗ ಸಾಮಾಗ್ರಿಗಳು ಖರೀದಿ ದಿನಾಂಕ ಹಾಗೂ ದಾಸ್ತಾನು ವಹಿಯಲ್ಲಿ ನಮೂದಾಗಿರುವ ದಿನಾಂಕಕ್ಕೂ ಸಾಕಷ್ಟು ವ್ಯತ್ಯಾಸ ಕಂಡು ಬಂದಿದ್ದು, ಈ ಬಗ್ಗೆ ಸ್ಪಷ್ಟತೆ ನೀಡುವಂತೆ ಹಿಂದುಳಿದ ವರ್ಗಗಳ ಇಲಾಖೆಯ ಜಿಲ್ಲಾ ಅಧಿಕಾರಿಯವರಿಗೆ ಅರ್ಜಿ ಸಲ್ಲಿಸಿರುತ್ತಾರೆ. ನಿಗದಿತ ಅವಧಿಯಲ್ಲಿ ಯಾವುದೇ ಸ್ಪಷ್ಟನೆ ನೀಡದ ಕಾರಣ ಜ್ಞಾಪನವನ್ನು ನೀಡಲಾಗಿತ್ತು. ಜ್ಞಾಪನ ಪತ್ರ ನೀಡಿ ನಿಗದಿತ ಅವಧಿ ಮುಕ್ತಾಯವಾದರೂ ಯಾವುದೇ ಸ್ಪಷ್ಟನೆ ನೀಡದೆ ನಿರ್ಲಕ್ಷö್ಯ ತೋರಿದ ರೇಣುಕಾ ದೇವಿಯವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಏಕಲವ್ಯ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ:2024 ನೇ ಸಾಲಿನ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಕ್ರೀಡಾ ಕ್ಷೇತ್ರದಲ್ಲಿ ಅಸಾಧಾರಣ ಪ್ರತಿಭೆಯನ್ನು ತೋರಿರುವ ರಾಜ್ಯದ ಕ್ರೀಡಾಪಟುಗಳಿಗೆ ಏಕಲವ್ಯ ಪ್ರಶಸ್ತಿಯನ್ನು ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಕ್ರೀಡಾಪಟುಗಳು ಅಧಿಕೃತ ಜಾಲತಾಣ http://sevasindhu.karnataka.gov.in ಆನ್‍ಲೈನ್ ಮೂಲಕ ಡಿಸೆಂಬರ್ 3 ರೊಳಗಾಗಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ದೂ.ಸಂ:08192-237480 ನ್ನು ಸಂಪರ್ಕಿಸಲು ಇಲಾಖೆಯ ಸಹಾಯಕ ನಿರ್ದೇಶಕರಾದ ಹರ್ಷ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ4 days agoಕರ್ತವ್ಯ ಲೋಪ | ಆಯುಕ್ತೆ ಮಂಜುಶ್ರೀ, ಜಂಟಿ ನಿರ್ದೇಶಕಿ ಕೆ.ಆರ್.ಕವಿತಾ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ6 days agoಕರ್ತವ್ಯ ಲೋಪ ; ಪಿ.ಮಣಿವಣ್ಣನ್, ಕ್ರೈಸ್ ಇ.ಡಿ ಕಾಂತರಾಜು ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ5 days agoಸಚಿವ ಪ್ರಿಯಾಂಕ ಖರ್ಗೆ ಪಂಚಾಯತ್ ರಾಜ್ ಇಲಾಖೆ ನಿರ್ಲಕ್ಷ್ಯ | ದೂರು ನೀಡಿ 6 ತಿಂಗಳಾದರೂ ಯಾವುದೇ ಕ್ರಮವಿಲ್ಲ ; ವಕೀಲ ಡಾ.ಕೆ.ಎ.ಓಬಳಪ್ಪ ಆರೋಪ
-
ದಿನದ ಸುದ್ದಿ5 days agoಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ನಿಧಿ | 8 ಕುಲಸಚಿವರು, 10 ಹಣಕಾಸು ಅಧಿಕಾರಿಗಳ ವಿರುದ್ಧ ಲೋಕಾಯುಕ್ತಕ್ಕೆ ದೂರು
-
ದಿನದ ಸುದ್ದಿ5 days agoಹೊಳಲ್ಕೆರೆ | ಕೆ.ಟಿ.ಪಿ.ಪಿ ನಿಯಮ ಉಲ್ಲಂಘನೆ ; ನಕಲಿ ಜಿ.ಎಸ್.ಟಿ ಬಿಲ್ಲುಗಳ ಮೂಲಕ ಖರೀದಿ ವ್ಯವಹಾರ ಪ್ರಾಂಶುಪಾಲ ಡಾ ಎಸ್.ಪಿ ರವಿ ವಿರುದ್ಧ ಲೋಕಾಯುಕ್ತಕ್ಕೆ ವಕೀಲ ಡಾ.ಓಬಳೇಶ್ ದೂರು
-
ದಿನದ ಸುದ್ದಿ2 days agoಕರ್ತವ್ಯ ಲೋಪ | ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ನಾಗರಾಜ ಕೆ ವಿರುದ್ಧ ಲೋಕಾಯುಕ್ತಕ್ಕೆ ದೂರು
-
ದಿನದ ಸುದ್ದಿ4 days agoನರೇಗಾ ಕಾರ್ಮಿಕ ಕೆಲಸದ ಸ್ಥಳದಲ್ಲಿ ನಿಧನ : ಜಿಲ್ಲಾ ಪಂಚಾಯತ್ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭೇಟಿ
-
ದಿನದ ಸುದ್ದಿ4 days agoಇದೇ 15 ರಂದು ನರೇಗಾ ಕೂಲಿಕಾರರಿಗೆ ಉಚಿತ ಆರೋಗ್ಯ ತಪಾಸಣೆ ಶಿಬಿರ

