ದಿನದ ಸುದ್ದಿ
ಲೋಕಸಭಾ ಚುನಾವಣಾ ಫಲಿತಾಂಶದ ನಂತರ ಸ್ಥಳೀಯ ಸಂಸ್ಥೆ ಚುನಾವಣೆಗೆ ಸರ್ಕಾರ ಸಿದ್ದ : ಸಿಎಂ ಸಿದ್ದರಾಮಯ್ಯ
ಸುದ್ದಿದಿನ ಡೆಸ್ಕ್ : ಲೋಕಸಭೆ ಚುನಾವಣೆ ಫಲಿತಾಂಶ ಹೊರಬಂದ ನಂತರ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲು ಸರ್ಕಾರ ಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಮೈಸೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕ್ಷೇತ್ರ ಪುನರ್ ವಿಂಗಡಣೆ, ಮೀಸಲಾತಿ ನಿಗದಿ ಮುಂತಾದ ಪ್ರಕ್ರಿಯೆಗಳನ್ನು ಆದಷ್ಟು ಬೇಗ ಪೂರ್ಣಗೊಳಿಸಿ, ಚುನಾವಣೆ ನಡೆಸುವುದಾಗಿ ಹೇಳಿದರು.
ಕ್ಷೇತ್ರ ಪುನರ್ ವಿಗಂಡಣೆಗೆ ಸಂಬಂಧಪಟ್ಟಂತೆ ರಾಜ್ಯದ ಅಡ್ವ್ವೆಕೇಟ್ ಜನರಲ್ ಅವರೊಂದಿಗೆ ಮಾತನಾಡಿ, ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದರು. ಅದೇ ರೀತಿ ಬಿಬಿಎಂಪಿ ಚುನಾವಣೆಯನ್ನು ನಡೆಸುವುದಾಗಿ ಹೇಳಿದರು.
ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಎದುರಿಸುತ್ತಿರುವ ಸಂಸದ ಪ್ರಜ್ವಲ್ ರೇವಣ್ಣ ಅವರ ಪಾಸ್‌ಪೋರ್ಟ್ ರದ್ದುಪಡಿಸಿ, ರಾಜ್ಯಕ್ಕೆ ಕರೆತರಲು ಸಹಕರಿಸುವಂತೆ ಕೇಂದ್ರಕ್ಕೆ ಎರಡು ಬಾರಿ ಪತ್ರ ಬರೆಯಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಮೈಸೂರಿನಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದೆ.
ಲೋಕಸಭಾ ಚುನಾವಣೆ ಫಲಿತಾಂಶದ ನಂತರ ತಾಲ್ಲೂಕು, ಜಿಲ್ಲಾ ಪಂಚಾಯತಿಗಳ ಚುನಾವಣೆ ಹಾಗೂ ಬಿಬಿಎಂಪಿ ಚುನಾವಣೆ ಕೂಡ ನಡೆಸಲಾಗುವುದು. ಸರ್ಕಾರ ಚುನಾವಣೆ ನಡೆಸಲು ಸಿದ್ಧವಿದೆ.
ಕ್ಷೇತ್ರ ಪುನರ್ವಿಗಂಡನೆಗೆ ಜನವರಿವರೆಗೆ ಗಡುವು ಇದ್ದು, ಈ ಬಗ್ಗೆ ಅಡ್ವೋಕೇಟ್ ಜನರಲ್ ಜೊತೆ ಚರ್ಚೆ ಮಾಡಿ…
— Siddaramaiah (@siddaramaiah) May 24, 2024
ಸುದ್ದಿದಿನ.ಕಾಂ|ವಾಟ್ಸಾಪ್|9980346243